• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಜಾಕ್ಪಾಟ್; ಪರೀಕ್ಷೆ ಇಲ್ಲದೆ ಪಾಸ್‌: ಫೈನಲ್ ಸೆಮಿಸ್ಟರಿಗೆ ಎಕ್ಸಾಮ್

cknewsnow desk by cknewsnow desk
July 17, 2020
in NEWS IN USE
Reading Time: 2 mins read
0
ಮಧ್ಯಂತರ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಜಾಕ್ಪಾಟ್;  ಪರೀಕ್ಷೆ ಇಲ್ಲದೆ ಪಾಸ್‌: ಫೈನಲ್ ಸೆಮಿಸ್ಟರಿಗೆ ಎಕ್ಸಾಮ್
918
VIEWS
FacebookTwitterWhatsuplinkedinEmail

ಬೆಂಗಳೂರು: ಮಾರಕ ಕೋವಿಡ್- 19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಕೊಂಡಿರುವ ರಾಜ್ಯ ಸರಕಾರವು, 2019-20ನೇ ಸಾಲಿನಲ್ಲಿ ಎಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಧ್ಯಂತರ ಸೆಮಿಸ್ಟರ್ (intermediate Semester) ವಿದ್ಯಾರ್ಥಿಗಳನ್ನು ಅಂತಿಮ ಪರೀಕ್ಷೆ ಇಲ್ಲದೆಯೇ ಮುಂದಿನ ಹಂತಕ್ಕೆ ಉತ್ತೀರ್ಣಗೊಳಿಸುವುದಾಗಿ ಪ್ರಕಟಿಸಿದೆ. ಜತೆಗೆ, ಪ್ರಸಕ್ತ ಶೈಕ್ಷಣಿಕ ವರ್ಷದ ಅಂತಿಮ ಸೆಮಿಸ್ಟರ್‌ ಅಥವಾ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಯುಜಿಸಿ ಮಾರ್ಗಸೂಚಿ ಅನ್ವಯ ಸೆಪ್ಟೆಂಬರ್ ಅಂತ್ಯದೊಳಗೆ ಪರೀಕ್ಷೆ ನಡೆಯಲಿದೆ.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಂಡಿದೆ ಸರಕಾರ. ಈ ತೀರ್ಮಾನವನ್ನು ಕೈಗೊಳ್ಳುವ ಮುನ್ನ ಉನ್ನತ ಶಿಕ್ಷಣ ಇಲಾಖೆಯು ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಂಡಿದೆ. ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತ. ಸರಕಾರದ ಈ ನಿರ್ಧಾರಕ್ಕೆ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ.

ಬೆಂಗಳೂರನಲ್ಲಿ ಶುಕ್ರವಾರ (ಜುಲೈ 10) ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ಪ್ರಕಟಿಸಿದ್ದಾರೆ.

ಕೋವಿಡ್ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನು ಬುಡಮೇಲು ಮಾಡಿದೆ. ಸಕಾಲಕ್ಕೆ ತರಗತಿಗಳು ನಡೆಸಲು ಸಾಧ್ಯವಾಗಲಿಲ್ಲ. ಲಾಕ್‌ಡೌನ್‌ ಸಂದರ್ಭದಲ್ಲಿ ಆನ್‌ಲೈನ್‌ ಮೂಲಕ ಶಿಕ್ಷಣ ನೀಡಿದ್ದು, ಒಳ್ಳೆಯ ಪ್ರತಿಕ್ರಿಯೆ ಕೂಡ ಬಂದಿದೆ. ಸಾಧ್ಯವಾದಷ್ಟು ಎಲ್ಲರನ್ನೂ ತಲುಪಲು ಪ್ರಾಮಾಣಿಕ ಪ್ರಯತ್ನ ನಡೆಸಲಾಯಿತು. ಇದರ ನಡುವೆ ಕೆಲವು ದಿನಗಳು ತರಗತಿಗಳನ್ನು ನಡೆಸಿ, ಪರೀಕ್ಷೆ ಮಾಡುವ ಚಿಂತನೆಯೂ ಇತ್ತು. ಆದರೆ, ಕೋವಿಡ್‌ ವ್ಯಾಪಕವಾಗಿ ಹಬ್ಬುತ್ತಿರುವ ಕಾರಣಕ್ಕೆ ಅವೆಲ್ಲವನ್ನೂ ಕೈಬಿಟ್ಟು ಮಧ್ಯಂತರ ಸೆಮಿಸ್ಟರ್‌/ವರ್ಷದ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲು ನಿರ್ಧರಿಸಲಾಯಿತು. ಅಂತಿಮ ವರ್ಷ/ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, ಸೆಪ್ಟೆಂಬರ್‌ ತಿಂಗಳ ಅಂತ್ಯದೊಳಗೆ ಪರೀಕ್ಷೆಗಳನ್ನು (ಆನ್‌ಲೈನ್‌/ಆಪ್‌ಲೈನ್‌) ನಡೆಸಲು ಆಯಾ ವಿಶ್ವವಿದ್ಯಾಲಯಗಳಿಗೇ ಸೂಚಿಸಲಾಗಿದೆ ಎಂಬುದು ಇದಕ್ಕೆ ಸರಕಾರ ನೀಡಿರುವ ಕಾರಣ.

ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡುವುದು ಹೇಗೆ?:
ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಆಂತರಿಕ ಮೌಲ್ಯಮಾಪನ (internal marks) ಮತ್ತು ಹಿಂದಿನ ಸೆಮಿಸ್ಟರ್‌/ವರ್ಷದ ಅಂಕಗಳ (50:50) ಸಮಗ್ರ ಮೌಲ್ಯಮಾಪನದ (comprehensive evaluation) ಆಧಾರದ ಮೇಲೆ ತೇರ್ಗಡೆ ಮಾಡಲಾಗುತ್ತದೆ. ಹಿಂದಿನ ವರ್ಷದ ಅಂಕಗಳು ಇಲ್ಲದ ವಿದ್ಯಾರ್ಥಿಗಳನ್ನು (ಉದಾ: ಮೊದಲ ಸೆಮಿಸ್ಟರ್‌ ವಿದ್ಯಾರ್ಥಿಗಳು) ಪೂರ್ಣ ಅಂತರಿಕ ಮೌಲ್ಯಮಾಪನದ ಮೂಲಕವೇ ಉತ್ತೀರ್ಣಗೊಳಿಸಲಾಗುವುದು.

ಆಕಸ್ಮಾತ್ ಈ ತೇರ್ಗಡೆ ಇಷ್ಟವಾಗದಿದ್ದರೆ..:
ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ಎಲ್ಲರನ್ನು ಪಾಸ್ ಮಾಡುವ ಸರಕಾರದ ನಿರ್ಧಾರವೇನೋ ಸರಿ. ಆದರೆ ಪ್ರತಿ ವಿದ್ಯಾರ್ಥಿಗೆ ಅಥವಾ ಉತ್ತಮವಾಗಿ ಸ್ಕೋರ್ ಮಾಡುವ ವಿದ್ಯಾರ್ಥಿಗಳಿಗೆ ಈ ಕ್ರಮ ಸರಿ ಅನಿಸಲಿಲ್ಲವಾದರೆ, ಅದಕ್ಕೂ ಸರಕಾರ ಪರಿಹಾರ ಸೂಚಿಸಿದೆ. ತಮ್ಮ ಅಂಕಗಳನ್ನು ಉತ್ತಮಗೊಳಿಸಿಕೊಳ್ಳಬೇಕೆನ್ನುವ ವಿದ್ಯಾರ್ಥಿಗಳು ಸೆಮಿಸ್ಟರ್‌ನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಲು ಅವಕಾಶ ನೀಡಲಾಗುತ್ತಿದೆ, ಹಾಗೂ ಸಮಗ್ರ ಮೌಲ್ಯಮಾಪನದಲ್ಲಿಯೂ (comprehensive evaluation) ಉತ್ತೀರ್ಣರಾಗದ ವಿದ್ಯಾರ್ಥಿಗಳು, ಫೇಲ್‌ ಆದ ವಿಷಯಗಳ ಪರೀಕ್ಷೆಗಳನ್ನು ಮುಂದಿನ ಸೆಮಿಸ್ಟರ್‌ಗಳಲ್ಲಿ ಬರೆಯಲು ಅವಕಾಶ ನೀಡಲಾಗುತ್ತದೆ. ಬ್ಯಾಕ್‌ಲಾಗ್‌ ವಿಷಯಗಳ ಕ್ಯಾರಿ ಓವರ್‌ಗೂ ಅವಕಾಶ ಇರುತ್ತದೆ ಎಂದು ಡಿಸಿಎಂ ಹೇಳಿರುವುದು ಅನೇಕ ವಿದ್ಯಾರ್ಥಿಗಳಿಗೆ ಖುಷಿ ತಂದಿದೆ.

ಅಂತಿಮ ಸೆಮಿಸ್ಟರ್ ಪರೀಕ್ಷೆ ಕಡ್ಡಾಯ ಏಕೆ?:
ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ಮತ್ತು ಅವರ ಉದ್ಯೋಗ- ಮತ್ತಿತರ ಭವಿಷ್ಯಕ್ಕೆ ಧಕ್ಕೆಯಾಗದಂತೆ ಅಂತಿಮ ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಉನ್ನತ ಶಿಕ್ಷಣ ಪದ್ಧತಿಯಲ್ಲಿ ಶೈಕ್ಷಣಿಕ ಮೌಲ್ಯಮಾಪನ ಅಗತ್ಯ. ಆದ್ದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆಯನ್ನು ಗಣನೆಗೆ ತೆಗೆದುಕೊಳ್ಳಲೇಬೇಕಾಗುತ್ತದೆ. ಉದ್ಯೋಗದಾತ ಕಂಪನಿಗಳು ಕೂಡ ಉದ್ಯೋಗಾಕಾಂಕ್ಷಿಗಳ ಶೈಕ್ಷಣಿಕ ಗುಣಮಟ್ಟ ಹಾಗೂ ಅವರು ಗಳಿಸಿರುವ ಶ್ರೇಣಿಯನ್ನು ಗುರುತಿಸುತ್ತವೆ. ಇವರಿಗೆ ಪರೀಕ್ಷೆ ನಡೆಸದಿದ್ದರೆ ಭವಿಷ್ಯದಲ್ಲಿ ತೊಂದರೆಯಾಗುವುದು ಖಚಿತ. ಹೀಗಾಗಿ ಈ ಪರೀಕ್ಷೆಗೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಎಲ್ಲ ವಿವಿಗಳಿಗೆ ಸೂಚಿಸಲಾಗಿದೆ.

ಸೆಪ್ಟೆಂಬರ್ 1ರಿಂದ ಆನ್‌ಲೈನ್‌ ತರಗತಿ:
2020-21ರ ಶೈಕ್ಷಣಿಕ ಸಾಲಿನ ಮೊದಲ ಸೆಮಿಸ್ಟರ್’ಗೆ ಸೆಪ್ಟೆಂಬರ್ 1 ರಿಂದಲೇ ಆನ್‌ಲೈನ್ ತರಗತಿಗಳು ಹಾಗೂ ಅಕ್ಟೋಬರ್ 1 ರಿಂದ ಆಫ್‌ಲೈನ್ ತರಗತಿಗಳು ಆರಂಭವಾಗುತ್ತವೆ. ಅದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ವಿವಿಗಳು, ಕಾಲೇಜುಗಳಿಗೆ ಸೂಚಿಸಲಾಗಿದೆ.
**

-ಡಾ.ಸಿ.ಎನ್. ಅಶ್ವತ್ಥನಾರಾಯಣ

ಡಿಸಿಎಂ ಏನಂತಾರೆ?:
ಕೋವಿಡ್- 19 ಇಡೀ ಶೈಕ್ಷಣಿಕ ವ್ಯವಸ್ಥೆಗೆ ದೊಡ್ಡ ಪೆಟ್ಟು ನೀಡಿದೆ. ವಿದ್ಯಾರ್ಥಿಗಳ ಆರೋಗ್ಯವನ್ನು ಕಾಪಾಡಿಕೊಳ್ಳುವುದರ ಜತೆಗೆ ಅವರ ಭವಿಷ್ಯದ ಬಗ್ಗೆಯೂ ನಿರ್ಧರಿಸುವ ಸವಾಲು ಸರಕಾರದ ಮುಂದಿತ್ತು. ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.
-ಡಾ.ಸಿ.ಎನ್. ಅಶ್ವತ್ಥನಾರಾಯಣ, ಉಪ ಮುಖ್ಯಮಂತ್ರಿ

ತಜ್ಞರು ಶಿಫಾರಸು ಮಾಡಿದ್ದರು:
ಮಧ್ಯಂತರ ಸೆಮಿಸ್ಟರ್‌/ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡುವ ಬಗ್ಗೆ ಶಿಕ್ಷಣ ತಜ್ಞರು ಸರಕಾರಕ್ಕೆ ಶಿಫಾರಸು ಮಾಡಿದ್ದರು. ಈ ಪೈಕಿ ರಾಜ್ಯ ಸರಕಾರದ ಶಿಕ್ಷಣ ಸುಧಾರಣೆಯ ಸಲಹೆಗಾರರಾದ ಡಾ. ಎಂ.ಆರ್. ದೊರೆಸ್ವಾಮಿ ಅವರು, ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಲೇಬೇಕೆಂದು ಸಲಹೆ ನೀಡಿದ್ದರು.


-ಡಾ. ಎಂ.ಆರ್. ದೊರೆಸ್ವಾಮಿ

ಶಿಕ್ಷಣ ತಜ್ಷರು ಹೇಳಿದ್ದೇನು?:
ಎಂಜಿನೀಯರಿಂಗ್ ವ್ಯಾಸಂಗ ಮಾಡುತ್ತಿರುವ ಅಂತಿಮ ಸೆಮಿಸ್ಟರ್ ಪರೀಕ್ಷೆಗಳನ್ನು ಆದಷ್ಟು ಬೇಗ ಮಾಡಬೇಕು. ವಿದ್ಯಾರ್ಥಿಗಳ ಪಾಲಿಗೆ ಅಂತಿಮ ಸೆಮಿಸ್ಟರ್ ಬಹಳ ಮುಖ್ಯ. ಈಗಾಗಲೇ ಬಹುತೇಕ ವಿದ್ಯಾರ್ಥಿಗಳು ವಿವಿಧೆಡೆಯಲ್ಲಿ ಉದ್ಯೋಗಾವಕಾಶಕ್ಕೆ ಆಯ್ಕೆಯಾಗಿದ್ದು, ಅವರಿಗೀಗ ಉತ್ತೀರ್ಣತೆಯ ಪ್ರಮಾಣ ಪತ್ರ ಬೇಕು. ಹೀಗಾಗಿ ಆದಷ್ಟು ಬೇಗ ಪರೀಕ್ಷೆಯನ್ನು ಮುಗಿಸಬೇಕು. ಸೆಪ್ಟೆಂಬರ್’ನಲ್ಲಿ ಈ ಪರೀಕ್ಷೆಗಳನ್ನು ನಡೆಸುವುದಾಗಿ ಈಗ ಸರಕಾರ ಪ್ರಕಟಿಸಿದೆ.
-ಡಾ. ಎಂ.ಆರ್. ದೊರೆಸ್ವಾಮಿ, ಶಿಕ್ಷಣ ತಜ್ಷರು


-ಕೆ.ಟಿ. ವೀರಾಂಜನೇಯ

ಪ್ರಾಧ್ಯಾಪಕರು ಹೇಳೋದೇನು?:
ಇದು ಉತ್ತಮ ನಿರ್ಧಾರ. ಕೋವಿಡ್-19 ಹಿನ್ನೆಲೆಯಲ್ಲಿ ತರಗತಿಗಳು ಆಗಿರಲಿಲ್ಲ. ನನಗೆ ತಿಳಿದಮಟ್ಟಿಗೆ ಅನ್ಲೈನ್ ತರಗತಿಗಳು ವಿದ್ಯಾರ್ಥಿಗಳಿಗೆ ಸರಿಯಾಗಿ ಅರ್ಥ ಆಗಿರಲಿಲ್ಲ. ಅದರಲ್ಲೂ ವಿಜ್ಞಾನವನ್ನು ಆನ್ಲೈನ್ ಕ್ಲಾಸಿನಲ್ಲಿ ಬೋಧಿಸುವುದು ಕಷ್ಟ. ಹೀಗಾಗಿ ಸರಕಾರ ಸಮಚೋಚಿತ ನಿರ್ಧಾರ ತೆಗೆದುಕೊಂಡಿದೆ. ಆದರೆ, ಗ್ರಾಮೀಣ ಮಕ್ಕಳಿಗೆ ಕೃಪಾಂಕ ನೀಡದರೆ ಸ್ವಲ್ಪ ಅನಕೂಲ. ಈ ಬಗ್ಗೆ ಉನ್ನತ ಶಿಕ್ಷಣ ಇಲಾಖೆ ಯೋಚಿಸಲಿ.
-ಕೆ.ಟಿ. ವೀರಾಂಜನೇಯ,
ಭೌತಶಾಸ್ತ್ರ ಪ್ರಾಧ್ಯಾಪಕರು, ನ್ಯಾಷನಲ್ ಕಾಲೇಜು, ಬಾಗೇಪಲ್ಲಿ

ಮುಖ್ಯಾಂಶಗಳು
ಪದವಿ, ಸ್ನಾತಕೋತ್ತರ, ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಈ ಅವಕಾಶ
‍2019-20ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯವಿದ್ಯಾರ್ಥಿಗಳ ಶೈಕ್ಷಣಿಕ ಕ್ಷಮತೆ ಆಧರಿಸಿ ತೇರ್ಗಡೆ
ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ನಲ್ಲಿ ಪರೀಕ್ಷೆ

Tags: covid-19 effectcovid-19 karnatakadr cn ashwath narayanaintermediate-semesterkarnataka education
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಮಂಜುನಾಥನೇ, ಕೋವಿಡ್ ಮಾರಿಯನ್ನು ಕೊನೆಗಾಣಿಸು..

ಮಂಜುನಾಥನೇ, ಕೋವಿಡ್ ಮಾರಿಯನ್ನು ಕೊನೆಗಾಣಿಸು..

Leave a Reply Cancel reply

Your email address will not be published. Required fields are marked *

Recommended

ಮೈಸೂರಿನಲ್ಲಿ ಮೋದಿ ಮೋಡಿ

ಮೈಸೂರಿನಲ್ಲಿ ಮೋದಿ ಮೋಡಿ

4 years ago
ಕೋವಿಡ್ ಕಂಟ್ರೋಲ್: 7 ಜಿಲ್ಲೆಗಳ DCಗಳಿಗೆ ಕಠಿಣ ಆದೇಶ ನೀಡಿದ ಸಿಎಂ ಬೊಮ್ಮಾಯಿ

ಕೋವಿಡ್ ಕಂಟ್ರೋಲ್: 7 ಜಿಲ್ಲೆಗಳ DCಗಳಿಗೆ ಕಠಿಣ ಆದೇಶ ನೀಡಿದ ಸಿಎಂ ಬೊಮ್ಮಾಯಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ