• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್

cknewsnow desk by cknewsnow desk
July 27, 2020
in STATE
Reading Time: 1 min read
0
ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್
914
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್ ನಡುವೆಯೂ ಉನ್ನತ ಶಿಕ್ಷಣ ಇಲಾಖೆಯಲ್ಲಿ ಸುಧಾರಣೆಗಳ ಪರ್ವ ಆರಂಭವಾಗಿದೆ. ಸಾಂಪ್ರದಾಯಿಕ ಶೈಲಿಯ ಆಡಳಿತಕ್ಕೆ ಮಂಗಳ ಹಾಡಿ ತಂತ್ರಜ್ಞಾನದ ನೆರವಿನಿಂದ ಇ-ಆಫೀಸ್ ಆರಂಭಿಸಿದೆ. ಇದರೊಂದಿಗೆ ಇಡೀ ಇಲಾಖೆಯಲ್ಲಿ ’ಕಡತ’ ಎಂಬ ಪದಕ್ಕೆ ಶಾಶ್ವತವಾಗಿ ಗೇಟ್’ಪಾಸ್ ನೀಡಲಾಗಿದೆ.  

ಉನ್ನತ ಶಿಕ್ಷಣದ ಗುಣಮಟ್ಟ ಸುಧಾರಿಸಲು, ಸಂಪೂರ್ಣ ಡಿಜಿಟಲೀಕರಣದತ್ತ ಹೆಜ್ಜೆ ಇಟ್ಟಿರುವ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೆಜ್ಜೆ ಇಟ್ಟಿದ್ದು, 2020ರ ಜುಲೈ 15ರಿಂದಲೇ ಎಲ್ಲ ವಿಶ್ವವಿದ್ಯಾಲಯಗಳೂ ಸರಕಾರದ ಜತೆ ಇ-ಆಫೀಸ್‌ (ಆನ್‌ಲೈನ್‌) ಮೂಲಕವೇ ವ್ಯವಹರಿಸಬೇಕು ಎನ್ನುವ ಕಟ್ಟಾಜ್ಞೆ ಹೊರಡಿಸಿಸಲಾಗಿದೆ.

ಉನ್ನತ ಶಿಕ್ಷಣ ಇಲಾಖೆ, ಎನ್‌ಐಸಿ ಸಹಯೋಗದಲ್ಲಿ ರೂಪಿಸಿರುವ ಶಿಕ್ಷಣ ಸಂಸ್ಥೆಗಳ ಆನ್‌ಲೈನ್‌ ಸಂಯೋಜನೆ (ಅಫಿಲಿಯೇಷನ್‌)ಯ ಪೋರ್ಟಲ್‌ ಆರಂಭವಾಗಿದ್ದು, ಇನ್ನು ಮುಂದೆ ವಿಶ್ವವಿದ್ಯಾಲಯ, ಸರಕಾರದ ನಡುವೆ ಕಡತ ವ್ಯವಹಾರ ಇರುವುದಿಲ್ಲ. ಇ-ಅಫೀಸ್‌ ಯಶಸ್ವಿ ಪ್ರಯೋಗವಾಗಿದ್ದು, ಅದರ ಮೂಲಕವೇ ಕಡತಗಳು ರವಾನೆ ಆಗುತ್ತಿವೆ. ಎಲ್ಲಿ ಯಾವ ಕಡತ ಇದೆ? ಅದಕ್ಕೆ ಕಾರಣ ಏನು ಎನ್ನುವುದನ್ನು ತಿಳಿಯಬಹುದು. ಅನಗತ್ಯವಾಗಿ ಕಡತಗಳನ್ನು ಹಿಡಿದಿಟ್ಟುಕೊಳ್ಳುವ ವ್ಯವಸ್ಥೆಗೆ ತಿಲಾಂಜಲಿ ನೀಡಲಾಗಿದೆ.

ಯಾವುದೇ ಕಾಲೇಜು ಅಥವಾ ಕೋರ್ಸ್‌ಗಳಿಗೆ ಮಾನ್ಯತೆ ನೀಡಬೇಕಾದರೂ ಆದಕ್ಕೆ ಸಂಬಂಧಿಸಿದ ಕಡತ ಅಥವಾ ಪತ್ರ ವ್ಯವಹಾರಗಳು ಆನ್‌ಲೈನ್‌ ಮೂಲಕವೇ ಆಗಬೇಕು. ಇದರಿಂದ ವಿಳಂಬ ಆಗುವುದು ತಪ್ಪುತ್ತದೆ; ವ್ಯವಸ್ಥೆಯಲ್ಲಿ ಸುಧಾರಣೆ ಕೂಡ ಕಾಣಬಹುದು. ಈ ಪ್ರಯತ್ನದಲ್ಲಿ ಇಲಾಖೆಗೆ ಉತ್ತಮ ಓಪೆನಿಂಗ್ ಸಿಕ್ಕಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಡಾ.ಸಿ.ಎನ್‌.ಅಶ್ವತ್ಥನಾರಾಯಣ

ಮಾನ್ಯತೆ ನೀಡುವುದಕ್ಕೂ ಮುನ್ನ ಎಲ್ಲ ರೀತಿಯ ಮಾನದಂಡಗಳನ್ನು ಸರಿಯಾಗಿ ವಿಶ್ವವಿದ್ಯಾಲಯಗಳು ಪರಿಶೀಲಿಸಿರಬೇಕು. ಸರ್ಕಾರಕ್ಕೆ ಕಳುಹಿಸುವ ಎಲ್ಲ ಪ್ರಸ್ತಾವನೆಗಳು ಕಾನೂನುಬದ್ಧವಾಗಿಯೇ ಇರಬೇಕು. ಮೂಲಸೌಲಭ್ಯ ಇರುವ ಶಿಕ್ಷಣ ಸಂಸ್ಥೆಗಳಿಗೇ ವಿಶ್ವವಿದ್ಯಾಲಯಗಳು ಮಾನ್ಯತೆ ನೀಡಬೇಕು. ಒಟ್ಟಾರೆ ಸರ್ಕಾರಕ್ಕೆ ಕಳಹಿಸುವ ಕಡತಗಳು ದೋಷರಹಿತವಾಗಿರಬೇಕು. ಒಂದು ವೇಳೆ ಲೋಪಗಳು ಕಂಡುಬಂದಲ್ಲಿ, ಅದಕ್ಕೆ ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಕುಲಪತಿ ಹಾಗೂ ಕುಲಸಚಿವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರ ಸರಕಾರ ಎಚ್ಚರಿಕೆ ನೀಡಿದೆ. ಅದರಂತೆ ಎಲ್ಲ ಕುಲಪತಿಗಳು ಈಗ ತಮ್ಮ ವ್ಯವಹಾರಗಳನ್ನು ಇ-ಆಫೀಸ್ ಮೂಲಕವೇ ನಡೆಸುತ್ತಿದ್ದಾರೆ.

ಸಂಯೋಜನೆ ವಿಷಯದಲ್ಲಿ ಅಕ್ರಮಗಳಿಗೆ ಅವಕಾಶ ಇಲ್ಲ. ಮೂಲಸೌಲಭ್ಯ ಇರುವ ಸಂಸ್ಥೆಗೆ ಸಂಯೋಜನೆ ನೀಡಿದರೆ ಗುಣಮಟ್ಟದ ಶಿಕ್ಷಣ ತನ್ನಿಂತಾನೆ ಬರುತ್ತದೆ. ಈ ವಿಚಾರದಲ್ಲಿ ಸರ್ಕಾರ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಈಗಾಗಲೇ ಡಿಸಿಎಂ ಸ್ಪಷ್ಟಪಡಿಸಿದ್ದಾರೆ. ಇದುವರೆಗೂ ಸಂಯೋಜನೆ ಹೆಸರಲ್ಲಿ ಬರೀ ಕಾಲಹರಣವಾಗುತ್ತಿತ್ತು. ಇದರಿಂದ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದರಲ್ಲದೆ, ಸರ್ಕಾರಕ್ಕೂ ಕೆಟ್ಟ ಹೆಸರು ಬರುತ್ತಿತ್ತು. ಹೊಸ ವ್ಯವಸ್ಥೆಯಿಂದ ಎಲ್ಲವೂ ಪಾರದರ್ಶಕ. ಶಿಕ್ಷಕರ ಸಂಖ್ಯೆ, ಅವರ ಕಾರ್ಯದಕ್ಷತೆ, ವಿದ್ಯಾರ್ಥಿಗಳ ಪ್ರಮಾಣ, ಸೌಲಭ್ಯಗಳು ಸೇರಿ ಎಲ್ಲ ವಿಷಯಗಳ ಬಗ್ಗೆ ಪರಿಪೂರ್ಣ ಮಾಹಿತಿ ಸರ್ಕಾರಕ್ಕೆ ಇರುತ್ತದೆ.

“ಇದು ಉತ್ತಮ ಪ್ರಯೋಗ. ಟೆಕ್ನಾಲಜಿಯಿಂದ ಆಡಳಿತಕ್ಕೆ ವೇಗ ಸಿಗುತ್ತಿದೆ” ಎಂದು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಹೇಳಿದ್ದಾರೆ. ಪದವಿ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್ ಈ ಮಾತಿಗೆ ದನಿಗೂಡಿಸಿದ್ದಾರೆ.

ಏನಿದು ಆನ್‌ಲೈನ್ ಸಂಯೋಜನೆ?:

  • ಇದುವರೆಗೂ ವಿವಿಗಳು ಮತ್ತು ಸರಕಾರದ ನಡುವೆ ಎಲ್ಲ ವ್ಯವಹಾರಗಳು ಕಡತ, ಟಪಾಲು ಇಲ್ಲವೇ ಪತ್ರ ಮುಕೇನ ನಡೆಯುತ್ತಿದ್ದವು. ಇನ್ನು ಮುಂದೆ ಇವೆಲ್ಲವೂ ಆನ್‌ಲೈನ್ ವ್ಯವಸ್ಥೆಯ ಮೂಲಕವೇ ನಡೆಯಲಿವೆ.
  • ಮ್ಯೂನುವಲ್ ಮಾಡುತ್ತಿದ್ದ ಪ್ರಕ್ರಿಯೆಯಲ್ಲಿ ಬಹಳಷ್ಟು ಲೋಪಗಳಿದ್ದವು. ಯುಜಿಸಿ ನಿಯಮಗಳಿಗೆ ವಿರುದ್ಧವಾಗಿದ್ದವು. ಇದೆಲ್ಲವನ್ನೂ ಆನ್‌ಲೈನ್ ಸಂಯೋಜನೆ ನಿವಾರಿಸಲಿದೆ.
  • ಇದನ್ನು “ವಿಶ್ವವಿದ್ಯಾಲಯ ನಿರ್ವಹಣಾ ವ್ಯವಸ್ಥೆ” ಎಂದು ಕರೆಯಲಾಗುತ್ತದೆ. ಈ ವ್ಯವಸ್ಥೆ ತುಂಬಾ ಆಧುನಿಕವಾಗಿದೆ. ಇದನ್ನು ರಾಷ್ಟ್ರೀಯ ಮಾಹಿತಿ ಕೇಂದ್ರದ (ಎನ್.ಐ.ಸಿ) ನೆರವಿನೊಂದಿಗೆ ಅಭಿವೃದ್ಧಿಪಡಿಸಲಾಗಿದ್ದು, ಏಕಗವಾಕ್ಷಿ ವ್ಯವಸ್ಥೆಯಂತೆ ಕೆಲಸ ಮಾಡುತ್ತದೆ. ಸಂಪೂರ್ಣ ದೋಷರಹಿತವಾಗಿದೆ.
  • ವಿವಿಗಳು ಹೊಸ ಕಾಲೇಜುಗಳಿಗೆ ಅನುಮತಿ, ಕೋರ್ಸುಗಳಿಗೆ ಒಪ್ಪಿಗೆಯೂ ಸೇರಿದಂತೆ ಮಾನ್ಯತೆ ನೀಡುವ ಹಾಗೂ ಆಡಳಿತಾತ್ಮಕ ವಿಚಾರಗಳನ್ನು ಇದರ ಮೂಲಕವೇ ಮಾಡಬೇಕು.
  • ಈ ವ್ಯವಸ್ಥೆಯಿಂದ ವಿವಿ ಮತ್ತು ಕಾಲೇಜುಗಳ ನಡುವಿನ ವ್ಯವಹಾರ ಸುಲಭ, ಸರಳವಾಗಿರುತ್ತದೆ.
  • ಈ ವ್ಯವಸ್ಥೆಯು ಕಾಲೇಜುಗಳಿಗೆ ಡೇಟಾ ಮತ್ತು ಡಾಕ್ಯುಮೆಂಟ್‌ಗಳನ್ನು ಅಫಿಲಿಯೇಶನ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲು ಅವಕಾಶ ಮಾಡಿಕೊಟ್ಟಿದೆ. ಈ ಎಲ್ಲ ಮಾಹಿತಿ ಪಾರದರ್ಶಕ. ಪೋರ್ಟಲ್‌ನಲ್ಲಿ ವಿವಿಗಳು ಕಳುಹಿಸಿದ ಅಧಿಸೂಚನೆಗಳನ್ನು ಕಾಲೇಜುಗಳು ವೀಕ್ಷಿಸಬಹುದು.

ಆನ್‌ಲೈನ್ ಸಂಯೋಜನೆ ಉದ್ದೇಶ:

  • ಆಡಳಿತ ವ್ಯವಸ್ಥೆಯಲ್ಲಿ ಪಾರದರ್ಶಕತೆ
  • ಶಿಕ್ಷಣ ಸಂಸ್ಥೆಗಳ ಗುಣಮಟ್ಟವನ್ನು ಸುಧಾರಣೆ
  • ಆಡಳಿತಕ್ಕೆ ತ್ವರಿತ ನಿರ್ಧಾರ ಬೆಂಬಲದ ವ್ಯವಸ್ಥೆ

Lead photo: ಮೈಸೂರು ವಿವಿ ಶತಮಾನೋತ್ಸವ ಗಡಿಯಾರ ಗೋಪುರ, ಕೃಪೆ:ಮೈಸೂರು ವಿವಿ

Tags: dr cn ashwath narayankarnatakakarnataka higher education
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ವಿಂಡ್ಸರ್ ಮ್ಯಾನರ್ ಹೊಟೇಲ್ ಹೆಬ್ಬಾಗಿಲಲ್ಲಿ ತಡೆದು ನಿಲ್ಲಿಸಿದಾಗ ಸಣ್ಣಗೆ ನಗೆ ಬೀರಿದ್ದರು ಅನಂತ ಕುಮಾರ್!!

ವಿಂಡ್ಸರ್ ಮ್ಯಾನರ್ ಹೊಟೇಲ್ ಹೆಬ್ಬಾಗಿಲಲ್ಲಿ ತಡೆದು ನಿಲ್ಲಿಸಿದಾಗ ಸಣ್ಣಗೆ ನಗೆ ಬೀರಿದ್ದರು ಅನಂತ ಕುಮಾರ್!!

Leave a Reply Cancel reply

Your email address will not be published. Required fields are marked *

Recommended

ದೀಪಾವಳಿ ಹಬ್ಬಕ್ಕೆ ದೀಪದಾನ; ಹಾಗೆಂದರೇನು?

ದೀಪಾವಳಿ ಹಬ್ಬಕ್ಕೆ ದೀಪದಾನ; ಹಾಗೆಂದರೇನು?

5 years ago
ಜಾರ್ಜ್‌ ಫೆರ್ನಾಂಡೀಸ್‌: ಪಾದ್ರಿ ಬದಲು ಅಪ್ರತಿಮ ನಾಯಕನಾಗಿ ಬೆಳೆದ ವೀರ ಕನ್ನಡಿಗ! ಕರ್ನಾಟಕ ಮರೆಯಲೇಬಾರದ ನೇತಾರ

ಜಾರ್ಜ್‌ ಫೆರ್ನಾಂಡೀಸ್‌: ಪಾದ್ರಿ ಬದಲು ಅಪ್ರತಿಮ ನಾಯಕನಾಗಿ ಬೆಳೆದ ವೀರ ಕನ್ನಡಿಗ! ಕರ್ನಾಟಕ ಮರೆಯಲೇಬಾರದ ನೇತಾರ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ