• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಚಿಕಿತ್ಸೆಗೆ ಸಡಗೋಪನ್ ಸಮಿತಿ ಕೊಟ್ಟ ಶಿಫಾರಸು

cknewsnow desk by cknewsnow desk
December 15, 2020
in STATE
Reading Time: 1 min read
1
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಚಿಕಿತ್ಸೆಗೆ ಸಡಗೋಪನ್ ಸಮಿತಿ ಕೊಟ್ಟ ಶಿಫಾರಸು

ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್

917
VIEWS
FacebookTwitterWhatsuplinkedinEmail

ಬೆಂಗಳೂರು: ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ (Uvc) ವನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದು ಹಾಗೂ ಅದಕ್ಕೆ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ಸ್ವಾಯತ್ತತೆಯನ್ನು ನೀಡುವಂತೆ ಉನ್ನತ ಮಟ್ಟದ ತಜ್ಞರ ಸಮಿತಿ ರಾಜ್ಯ ಸರಕಾರಕ್ಕೆ ಮಹತ್ವದ ಶಿಫಾರಸುಗಳನ್ನು ಮಾಡಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಸಮಿತಿ ಪರವಾಗಿ ಡಾ. ಪ್ರಶಾಂತ ಪ್ರಕಾಶ, ಡಾ.ವೇಣುಗೋಪಾಲ್ ಅವರು 112 ಪುಟಗಳ ಸಮಗ್ರ ವರದಿಯನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಸಲ್ಲಿಸಿದರು.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವನ್ನು ಐಐಟಿ ಮಾದರಿಯ ಉತ್ಕೃಷ್ಟ ಸ್ವಾಯತ್ತ ಸಂಸ್ಥೆಯಾಗಿ ಅಭಿವೃದ್ಧಿ ‌ಮಾಡುವ ಸಂಬಂಧ ಐಐಐಟಿಬಿ ನಿರ್ದೇಶಕ ಡಾ. ಎಸ್. ಸಡಗೋಪನ್ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯಲ್ಲಿ ಬೆಂಗಳೂರು ವಿವಿ ಕುಲಪತಿ ಪ್ರೊ. ವೇಣುಗೋಪಾಲ್, ಬಿ. ಮುತ್ತುರಾಮನ್, ಪ್ರಶಾಂತ್ ಪ್ರಕಾಶ್, ಬಿ.ವಿ. ಜಗದೀಶ್, ನಾಗಾನಂದ ದೊರೆಸ್ವಾಮಿ ಇದ್ದರು. ಒಂದು ತಿಂಗಳ ನಿರಂತರ ಅಧ್ಯಯನದ ನಂತರ ಸಮಿತಿಯೂ ಸರಕಾರಕ್ಕೆ ವರದಿ ಸಲ್ಲಿಸಿದೆ.



ಡಾ. ಎಸ್. ಸಡಗೋಪನ್ / photo:@twitter

ಶಿಫಾರಸುಗಳು ಏನೇನಿವೆ?

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಸಂಪೂರ್ಣ ಸ್ವಾಯತ್ತತೆ ನೀಡಬೇಕು. ವ್ಯವಸ್ಥೆಯಲ್ಲಿ ಆಮೂಲಾಗ್ರವಾಗಿ ಬದಲಾವಣೆ ತರಬೇಕು ಎಂದು ಸಮಿತಿ ಶಿಫಾರಸು ಮಾಡಿದೆ.

ಆರ್ಥಿಕ, ಶೈಕ್ಷಣಿಕ ಮತ್ತು ಆಡಳಿತಾತ್ಮಕ ವಿಷಯದಲ್ಲಿ ಸಂಪೂರ್ಣ ಸ್ವಾಯತ್ತತೆ:

  1. ಆರ್ಥಿಕ ಸ್ವಾಯತ್ತತೆ
    ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸರಕಾರದ ಮೇಲೆ ಅವಲಂಬನೆಯನ್ನು ಗಣನೀಯವಾಗಿ ತಗ್ಗಿಸಲು ಸೂಕ್ತವಾದ ಆರ್ಥಿಕ ಮಾದರಿಯೊಂದನ್ನು ಸಿದ್ಧಪಡಿಸಬೇಕು. ಆಂತರಿಕವಾಗಿ ಹಾಗೂ ಬಾಹ್ಯ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣಕ್ಕೆ ಅವಕಾಶ ನೀಡಬೇಕು. ದೇಣಿಗೆಗಳ ಸ್ವೀಕಾರ, ಹಳೆಯ ವಿದ್ಯಾರ್ಥಿಗಳಿಂದ ಹಣಕಾಸು ನೆರವು ಪಡೆಯಲು ಅವಕಾಶ ಕಲ್ಪಿಸಬೇಕು ಹಾಗೂ ಬೋಧಕ ಸಿಬ್ಬಂದಿಗೆ ಉತ್ತಮ ವೇತನ, ಟ್ಯೂಷನ್ ಫೀ ನಿಗದಿ ಮಾಡುವ ಅಧಿಕಾರವನ್ನು ಯುವಿಸಿಗೇ ನೀಡಬೇಕು. ಜತೆಗೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಗಳಿಗೆ ನೆರವು ನೀಡಬೇಕು. ಈ ನಿಟ್ಟಿನಲ್ಲಿ ಆರ್ಥಿಕ ಸ್ವಾಯತ್ತತೆ ಅತ್ಯಂತ ಅಗತ್ಯವೆಂದು ಸಮಿತಿ ಪ್ರತಿಪಾದಿಸಿದೆ.
  2. ಶೈಕ್ಷಣಿಕ ಸ್ವಾಯತ್ತತೆ
    ಉತ್ಕೃಷ್ಟ ಶೈಕ್ಷಣಿಕ ಹಿನ್ನೆಲೆಯ ಬೋಧಕರ‌ ನೇಮಕ, ಸಂಶೋಧನೆ ಹಾಗೂ ಮೂಲಸೌಕರ್ಯಕ್ಕೆ ಆದ್ಯತೆ ನೀಡುವುದು, ಹೊಸ ರೀತಿಯ ಪಠ್ಯವನ್ನು ಸೇರ್ಪಡೆಗೊಳಿಸುವ ಹಾಗೂ ಹೊಸ ಕೋರ್ಸುಗಳನ್ನು ಆರಂಭಿಸಲು ಯುವಿಸಿಗೆ ಪೂರ್ಣ ಸ್ವಾಯತ್ತತೆ ಕೊಡಬೇಕು. ಇದರಿಂದ ತಾಂತ್ರಿಕ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದಲ್ಲದೆ, ಉತ್ತಮ ಪ್ರತಿಭಾವಂತರನ್ನು ನಾವು ಪಡೆಯಬಹುದು ಎಂದು ಸಮಿತಿ ಒತ್ತಿ ಹೇಳಿದೆ.
  3. ಆಡಳಿತಾತ್ಮಕ ಸ್ವಾಯತ್ತತೆ
    ಆಡಳಿತದಲ್ಲಿ ಯುವಿಸಿಗೆ ಪೂರ್ಣ ಅಧಿಕಾರ ನೀಡುವುದರ ಜತೆಗೆ ಸ್ವತಂತ್ರ ಅಸ್ತಿತ್ವ ನೀಡಬೇಕು. ಒಟ್ಟಾರೆ ಮಾಲೀಕತ್ವ ಸರಕಾರದ್ದೇ ಆಗಿದ್ದರೂ ಆಡಳಿತದಲ್ಲಿವಿವಿಯದ್ದೇ ಅಂತಿಮ ನಿರ್ಧಾರವಾಗಬೇಕು. ರಾಜ್ಯಪಾಲರೇ ಕುಲಾಧಿಪತಿಯಾಗಿ ವಿವಿಯ ಕುಲಪತಿಯನ್ನು ಅವರೇ ನೇಮಕ ಮಾಡುವ ಪ್ರಕ್ರಿಯೆ ಮುಂದುವರೆಯಲಿ. ಜತೆಗೆ 11 ಸದಸ್ಯರ ಆಡಳಿತ ಮಂಡಳಿಯಲ್ಲಿ ಸರಕಾರಕ್ಕೂ ಸಮಾನ ಪ್ರಾತಿನಿಧ್ಯ ಇರಬೇಕು. ಸರಕಾರ, ಕೈಗಾರಿಕೆ, ಶೈಕ್ಷಣಿಕ ವಲಯದಿಂದ ತಲಾ ಮೂವರು ಹಾಗೂ ಹಳೆಯ ವಿದ್ಯಾರ್ಥಿಗಳಿಂದ ಇಬ್ಬರು ಸದಸ್ಯರು ಇರಬೇಕು ಎಂದು ಶಿಫಾರಸು ಮಾಡಲಾಗಿದೆ.

ಅತ್ತ್ಯುತ್ತಮ ಬೋಧನಾ ವರ್ಗ ಮತ್ತು ಅರ್ಹತೆ

ದೇಶಿಯ ಹಾಗೂ ವಿದೇಶಗಳಿಂದ ಅತ್ತ್ಯುತ್ತಮ ಗುಣಮಟ್ಟದ ಬೋಧನಾ ವರ್ಗವನ್ನು ಹೊಂದುವುದು, ಸಂಶೋಧನೆಗೆ ಒತ್ತು ನೀಡುವುದರ ಜತೆಗೆ ಹಳೆಯ ವಿದ್ಯಾರ್ಥಿಗಳು ಮತ್ತು ಕೈಗಾರಿಕಾ ವಲಯದ ನಿಪುಣರಿಂದ ಬೋಧನಾ ವ್ಯವಸ್ಥೆ ಮಾಡುವುದು. ಇದರ ಜತೆಗೆ, ಹೊಸ ಪಠ್ಯಗಳನ್ನು ಸೇರ್ಪಡೆ ಮಾಡುವುದೂ ಹಾಗೂ ಹೊಸ ಹೊಸ ಶಾಖೆಗಳನ್ನು ತೆರೆಯುವುದಕ್ಕೂ ವಿವಿಗೆ ಸ್ವಾಯತ್ತತೆ ನೀಡಬೇಕು. ಮೂಲಸೌಕರ್ಯ ಅಭಿವೃದ್ಧಿಗೂ ಸಮಿತಿ ಶಿಫಾರಸು ಮಾಡಿದೆ.

ಇದರ ಜತೆಗೆ ಆರ್ಥಿಕವಾಗಿ ಯುವಿಸಿಯನ್ನು ಸದೃಢಗೊಳಿಸುವುದು, ಮುಂದಿನ 10 ವರ್ಷಗಳಲ್ಲಿ ಅದರ ಬಜೆಟ್ ಗಾತ್ರವನ್ನು 700 ಕೋಟಿ ರೂ.ಗಳಿಗೆ ಹಿಗ್ಗಿಸುವುದು ಶಿಫಾರಸುಗಳಲ್ಲಿ ಇರುವ ಪ್ರಮುಖ ಅಂಶ. ಜತೆಗೆ, ಕಾಲಕ್ರಮೇಣ ಶುಲ್ಕದಲ್ಲಿ ಪರಿಷ್ಕರಣೆ ಮಾಡಿ, ಅಂತಿಮವಾಗಿ ಐಐಟಿಗಳಲ್ಲಿ ಸಂಗ್ರಹ ಮಾಡಲಾಗುವಷ್ಟು ಶುಲ್ಕವನ್ನು ವಿದ್ಯಾರ್ಥಿಗಳಿಂದ ಸಂಗ್ರಹಿಸೇಕು ಎಂದು ಸಮಿತಿ ಹೇಳಿದೆ.

ವರದಿ ಸ್ವೀಕರಿಸಿದ ಡಿಸಿಎಂ.

ಸಂಪುಟದಲ್ಲಿ ಚರ್ಚೆ

ಸಮಿತಿಯ ವರದಿಯನ್ನು ಸಂಪುಟದ ಮುಂದೆ ಇಟ್ಟು ಚರ್ಚೆ ಮಾಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಸಮಿತಿಯ ಸದಸ್ಯರಿಗೆ ಭರವಸೆ ನೀಡಿದರಲ್ಲದೆ, ಉನ್ನತ ಶಿಕ್ಷಣದಲ್ಲಿ ಆಮೂಲಾಗ್ರ ಹಾಗೂ ಗುಣಮಟ್ಟದ ಬದಲಾವಣೆ ತರಲು ಈಗಾಗಲೇ ಸರಕಾರ ಸಾಕಷ್ಟು ಕೆಲಸ ಮಾಡಿದೆ. ಆ ನಿಟ್ಟಿನಲ್ಲಿ ಸಡಗೋಪನ್ ಅವರ ನೇತೃತ್ವದ ಸಮಿತಿ ನೀಡಿರುವ ವರದಿ ಮಹತ್ವದ್ದು ಎಂಬ ಅಭಿಪ್ರಾಯ ನನ್ನದು ಎಂದರು.

Lead photo courtesy: UVCE

Tags: dr cn ashwath narayanUniversity Visvesvaraya College of EngineeringUVC
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಾವಿಗೂ ಗೌರವ, ಮರ್ಯಾದೆ ಬೇಡವೇ? ನಾವು ಎಂಥವರು ಆಗಬೇಕೆಂದು ನಾವೇ ನಿರ್ಧರಿಸೋಣ..

ಸಾವಿಗೂ ಗೌರವ, ಮರ್ಯಾದೆ ಬೇಡವೇ? ನಾವು ಎಂಥವರು ಆಗಬೇಕೆಂದು ನಾವೇ ನಿರ್ಧರಿಸೋಣ..

Comments 1

  1. Pingback: ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್ʼಗೆ ಸ್ವಾಯತ್ತತೆ - cknewsnow

Leave a Reply Cancel reply

Your email address will not be published. Required fields are marked *

Recommended

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

2 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ