• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಗ್ಲೋಬಲ್ ಬಿಟಿ ಹಬ್; ಕನಸು ಬಿಚ್ಚಿಟ್ಟ ಸಿಎಂ

cknewsnow desk by cknewsnow desk
July 30, 2020
in NEWS IN USE, STATE
Reading Time: 1 min read
0
ಗ್ಲೋಬಲ್ ಬಿಟಿ ಹಬ್; ಕನಸು ಬಿಚ್ಚಿಟ್ಟ ಸಿಎಂ

’ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಭೂಮಿಪೂಜೆ

913
VIEWS
FacebookTwitterWhatsuplinkedinEmail

ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಭೂಮಿಪೂಜೆ 

ಬೆಂಗಳೂರು: ಈಗಾಗಲೇ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಭಾರತದ ಸಿಲಿಕಾನ್ ವ್ಯಾಲಿ ಕೂಡ. ಇನ್ನು ಜೈವಿಕ ತಂತ್ರಜ್ಞಾನದ ವ್ಯಾಲಿಯೂ ಆಗಲಿದೆ. ಹೀಗೆಂದು ರಾಜ್ಯ ಸರಕಾರ ಕನಸು ಕಾಣುತ್ತಿದೆ.

ಈ ಕನಸನ್ನು ಸಾಕಾರಗೊಳಿಸುವಂಥ ಕೆಲಸಕ್ಕೆ ಸರಕಾರ ಹಸಿರು ನಿಶಾನೆ ತೋರಿದೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬುಧವಾರ ’ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್’ಗೆ ಭೂಮಿಪೂಜೆ ನೆರವೇರಿಸಲಾಗಿದೆ. ಈ ಪಾರ್ಕ್’ ರಾಜ್ಯದ ಜೈವಿಕ ತಂತ್ರಜ್ಞಾನ ಕ್ಷೇತ್ರದ ಪರಿಧಿಯನ್ನು ಮತ್ತಷ್ಟು ವಿಸ್ತಾರಗೊಳಿಸಲಿದೆ. ದೇಶದ ಬಿಟಿ ರಾಜಧಾನಿ ಆಗಿರುವ ಬೆಂಗಳೂರು ನಗರಕ್ಕೆ ಈ ಪಾರ್ಕ್ ಅನನ್ಯ ಕೊಡುಗೆ ನೀಡುವ ವಿಶ್ವಾಸವಿದೆ. ಸರಕಾರವೂ ಈ ಯೋಜನೆಗೆ 150 ಕೋಟಿ ರೂ. ಅನುದಾನ ನೀಡಿದೆ.  ಇದೂ ಸೇರಿ ಇಟ್ಟು 5,000 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಸುಮಾರು 150ಕ್ಕೂ ಹೆಚ್ಚು ಕಂಪನಿಗಳು ಈ ಪಾರ್ಕ್’ನಲ್ಲಿ ನೆಲೆಗೊಳ್ಳಲಿವೆ. 100ಕ್ಕೂ ಹೆಚ್ಚು ನವೋದ್ಯಮ ಗಳು ಸ್ಥಾಪನೆಯಾಗಲಿದ್ದು, 50,000ಕ್ಕೂ ಹೆಚ್ಚು ಜನರಿಗೆ ಪ್ರತ್ಯಕ್ಷ, ಪರೋಕ್ಷವಾಗಿ ಕೆಲಸ ಸಿಗಲಿದೆ. ರಾಜ್ಯದ ಅರ್ಥವ್ಯವಸ್ಥೆಗೆ ಈ ಯೋಜನೆ ಮಹತ್ವದ ಕಾಣಿಕೆ ನೀಡುವ ನಿರೀಕ್ಷೆ ಇದೆ.

ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರಗಳೆರಡೂ ಬಹಳ ಮುಖ್ಯವಾದವು. ಆರ್ಥಿಕತೆ, ಉದ್ಯೋಗ ಸೃಷ್ಟಿಯಲ್ಲಿ ಇವೆರಡೂ ನಿರ್ಣಾಯಕ ಪಾತ್ರ ವಹಿಸುತ್ತಿವೆ. ಹೀಗಾಗಿ ಈ ಎರಡೂ ಕ್ಷೇತ್ರಗಳಿಗೆ ಸರಕಾರ ಮಹತ್ವ ನೀಡಲಿದೆ. ಈಗಾಗಲೇ ಅನೇಕ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದು ಕೈಗಾರಿಕೆ ಪೂರಕ ವಾತಾವರಣವನ್ನು ಸೃಷ್ಟಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ವಾಣಿಜ್ಯ, ಕೈಗಾರಿಕೆ ಕ್ಷೇತ್ರಗಳಿಗೆ ಹೆಚ್ಚು ಮನ್ನಣೆ ನೀಡಲಾಗುವುದು ಎಂದೂ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಬಿಟಿ ಕ್ಷೇತ್ರದಲ್ಲಿ ಕರ್ನಾಟಕ ದೊಡ್ಡ ಸಾಧನೆಯನ್ನೇ ಮಾಡಿದೆ. ಸದ್ಯಕ್ಕೆ ರಾಜ್ಯದಲ್ಲಿ 380 ಕಂಪನಿಗಳು, 200ಕ್ಕೂ ಹೆಚ್ಚು ನವೋದ್ಯಮಗಳು ಇದರಲ್ಲಿ ತೊಡಗಿಕೊಂಡಿವೆ. ಏಷ್ಯಾದಲ್ಲಿ ಶೇ.9ರಷ್ಟು, ಭಾರತದಲ್ಲಿ ಶೇ.35ರಷ್ಟು ಮಾರುಕಟ್ಟೆ ಪಾಲನ್ನು ನಾವು ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಇದರ ಪ್ರಮಾಣ ಗಣನೀಯವಾಗಿ ಹೆಚ್ಚಾಗಬೇಕು. ಅದಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಸರಕಾರ ಸಿದ್ಧವಿದೆ ಎಂದು ಅವರು ಪ್ರಕಟಿಸಿದ್ದಾರೆ.

ಎರಡು ದಶಕಗಳ ಕನಸು:

ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿ, ’ಎರಡು ದಶಕಗಳಿಂದ ನೆನೆಗುದಿಗೆ ಬಿದ್ದಿದ್ದ ಯೋಜನೆ ಸಾಕಾರವಾಗುವ ಸಮಯ ಬಂದಿದೆ. ಈಗಾಗಲೇ ಪ್ರಬಲವಾಗಿ ಹೊರಹೊಮ್ಮಿರುವ ರಾಜ್ಯ ಬಿಟಿ ಕ್ಷೇತ್ರಕ್ಕೆ ಈ ಪಾರ್ಕ್ ಮೂಲಕ ಮತ್ತಷ್ಟು ಬಲ ಬರಲಿದೆ. ಸರಕಾರದ ಇಚ್ಚಾಶಕ್ತಿಯಿಂದ ಇದು ಸಾಧ್ಯವಾಗುತ್ತಿದೆ. ಸಂಶೋಧನೆ, ಅಭಿವೃದ್ಧಿ ಎಲ್ಲವೂ ಒಂದೇ ಸೂರಿನ ಅಡಿಯಲ್ಲಿ ಆಗಲಿದೆ. ಈ ಯೋಜನೆ ಸಾಕಾರಗೊಂಡ ಮೇಲೆ ಜಾಗತಿಕ ಭೂಪಟದಲ್ಲಿ ಬೆಂಗಳೂರಿನ ಪ್ರತಿಷ್ಠೆ ಮತ್ತಷ್ಟು ಹೆಚ್ಚಲಿದೆ ಎಂದರು. 

ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಪುಲ ಅವಕಾಶಗಳಿವೆ. ಈ ಕ್ಷೇತ್ರವಿಲ್ಲದೆ ಈಗ ಮನುಕುಲವನ್ನು ಊಹಿಸಿಕೊಳ್ಳುವುದೇ ಕಷ್ಟ. ಕೃಷಿ, ಕೈಗಾರಿಕೆ, ಆರೋಗ್ಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಇದರ ಪ್ರಭಾವ ಇದೆ. ಇದನ್ನು ಮನಸ್ಸಿನಲ್ಲಿ ಇಟ್ಟುಕೊಂಡೇ ಸರಕಾರ ಅನೇಕ ಸುಧಾರಣಾ ಕ್ರಮಗಳನ್ನು ಜಾರಿ ಮಾಡಿದೆ. ‌ಉದ್ಯಮಸ್ನೇಹಿಯಾದ ಹತ್ತಾರು ಕ್ರಮಗಳನ್ನು ದಿಟ್ಟತನದಿಂದ ಕೈಗೊಂಡಿದೆ. ಭೂ ಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ಸೇರಿದಂತೆ ಹತ್ತುಹಲವು ಕಾನೂನುಗಳನ್ನು ಸರಳಗೊಳಿಸಿ ಹೂಡಿಕೆಗೆ ಪೂರಕವಾದ ವಾತಾವರಣವನ್ನು ಸೃಷ್ಟಿ ಮಾಡಲಾಗಿದೆ ಎಂದು ಡಿಸಿಎಂ ಹೇಳಿದರು.

ಸಂಶೋಧನೆ ಮತ್ತು ಹೊಸ ಅವಿಷ್ಕಾರಗಳಿಗಿದ್ದ ಕಾನೂನು ತೊಡಕನ್ನು ನಿವಾರಿಸಲಾಗಿದೆ. ’ಕರ್ನಾಟಕ ಇನೋವೆಷನ್ ಅಥಾರಿಟಿ”ಯನ್ನು ಸ್ಥಾಪಿಸಲಾಗಿದೆ. ’ಇನ್’ವೆಸ್ಟ್ ಕರ್ನಾಟಕ ಮೂಲಕ ಹೂಡಿಕೆಗೆ ಮುಕ್ತ ಅವಕಾಶ ಕಲ್ಪಿ ಸಲಾಗಿದೆ. ದೇಶದ ಯಾವುದೇ ರಾಜ್ಯವೂ ಕೈಕೊಳ್ಳದಂತಹ ಪರಿಣಾಮಕಾರಿ ಕ್ರಮಗಳನ್ನು ಯಡಿಯೂರಪ್ಪ ನೇತೃತ್ವದ ಸರಕಾರ ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ನುಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್.ಆರ್. ವಿಶ್ವನಾಥ್, ಶಾಸಕ ಎಂ. ಕೃಷ್ಣಪ್ಪ ಮಾತನಾಡಿದರು. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ. ರಮಣ ರೆಡ್ಡಿ, ಬೆಂಗಳೂರು ಲೈಫ್ ಸೈನ್ಸೆಸ್ ಪಾರ್ಕ್ ಸಿಇಒ ಚಿರಾಗ್ ಪುರುಷೋತ್ತಮ್ ಯೋಜನೆಯ ಮಾಹಿತಿ ನೀಡಿದರು. ಕರ್ನಾಟಕ ಕೈಗಾರಿಕಾ ತಾಂತ್ರಿಕ ಸಂಸ್ಥೆಯ ನಿರ್ದೇಶಕಿ ಮೀನಾ ನಾಗರಾಜ್  ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Tags: Bangalore life sciences parkbs yediyurappadr cn ashwath narayanit bt karnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವಾಯುಪಡೆಗೆ ರಫೆಲ್; ಭಾರತಕ್ಕೆ ಭೀಮಬಲ

ವಾಯುಪಡೆಗೆ ರಫೆಲ್; ಭಾರತಕ್ಕೆ ಭೀಮಬಲ

Leave a Reply Cancel reply

Your email address will not be published. Required fields are marked *

Recommended

ತಾಲಿಬಾನ್ ಉಪಟಳ; ಮೈಸೂರಿನಲ್ಲಿ ಆಫ್ಘಾನ್ ವಿದ್ಯಾರ್ಥಿಗಳ ಆತಂಕ

ತಾಲಿಬಾನ್ ಉಪಟಳ; ಮೈಸೂರಿನಲ್ಲಿ ಆಫ್ಘಾನ್ ವಿದ್ಯಾರ್ಥಿಗಳ ಆತಂಕ

5 years ago
ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ