• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ವಿದ್ಯಾರ್ಥಿಗಳೇ, ಅಂತಿಮ ಸೆಮಿಸ್ಟರ್ ಪರೀಕ್ಷೆಗೆ ಸಿದ್ಧರಾಗಿ; ಬ್ಯಾಕ್ಲಾಗ್ ವಿಷಯಗಳಿಗೂ ಎಕ್ಸಾಮ್

cknewsnow desk by cknewsnow desk
August 4, 2020
in NEWS IN USE, STATE
Reading Time: 1 min read
1
919
VIEWS
FacebookTwitterWhatsuplinkedinEmail

ಬೆಂಗಳೂರು: ಅಂತಿಮ ಸೆಮಿಸ್ಟರ್‌/ವರ್ಷದ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಎಲ್ಲ ರೀತಿಯ ತಯಾರಿ ನಡೆದಿದ್ದು, ಇದರ ಜತೆಗೆ ಅವರ ಬ್ಯಾಕ್‌ಲಾಗ್‌ ವಿಷಯಗಳ ಪರೀಕ್ಷೆಗಳನ್ನೂ ನಡೆಸಲು ಸರಕಾರ ನಿರ್ಧರಿಸಿದೆ. ಹೀಗಾಗಿ ಪರೀಕ್ಷೆಗೆ ವಿದ್ಯಾರ್ಥಿಗಳು ಸಿದ್ಧರಾಗಬೇಕಿದೆ.

ಈ ಬಗ್ಗೆ ಎಲ್ಲ ವಿಶ್ವವಿದ್ಯಾಲಯಗಳಿಗೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಸೋಮವಾರ ಸೂಚಿಸಿದ್ದಾರೆ.

ಸಿಇಟಿ ಪರೀಕ್ಷೆ ಸುಗಮವಾಗಿ ಪೂರ್ಣಗೊಂಡಿರುವುದರ ಪ್ರಯುಕ್ತ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ರಸ್ತೆ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜತೆ ವಿಡಿಯೊ ಸಂವಾದ ನಡೆಸಿ, ಕೃತಜ್ಞತೆ ಸಲ್ಲಿಸಿದ ನಂತರ ಅವರು ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಕೋವಿಡ್‌ ಕಾರಣದಿಂದಾಗಿ ಅಂತಿಮ ವರ್ಷ/ಸೆಮಿಸ್ಟರ್‌ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ನಡೆಸಲು ತೀರ್ಮಾನಿಸ ಲಾಗಿದೆ. ಈ ನಡುವೆ ಕೆಲವು ವಿ‍ಶ್ವವಿದ್ಯಾಲಯಗಳು ಅಂತಿಮ ವರ್ಷದ ವಿದ್ಯಾರ್ಥಿಗಳು ಬಾಕಿ ಉಳಿಸಿಕೊಂಡಿರುವ (ಅನುತ್ತೀರ್ಣರಾಗಿರುವ) ಹಿಂದಿನ ಸೆಮಿಸ್ಟರ್‌ಗಳ ವಿಷಯಗಳ ಪರೀಕ್ಷೆ ನಡೆಸುವುದಿಲ್ಲ ಎನ್ನುವ ನಿರ್ಧಾರಕ್ಕೆ ಬಂದಿರುವ ಮಾಹಿತಿ ಸಿಕ್ಕಿದ್ದು, ಇದು ಅಕ್ಷಮ್ಯ ಅಪರಾಧ ಎಂದು ಅವರು ಹೇಳಿದರು.

ʼನಮ್ಮ ಉದ್ದೇಶ ಇರುವುದು ಅಂತಿಮ ವರ್ಷದಲ್ಲಿ ಇರುವ ವಿದ್ಯಾರ್ಥಿಗಳು ಪದವಿಯನ್ನು ಮುಗಿಸಿಕೊಂಡು ಹೊರಹೋಗಬೇಕು ಎನ್ನುವುದು. ಇಂತಹ ಸನ್ನಿವೇಶದಲ್ಲಿ ಕೇವಲ ಅಂತಿಮ ವರ್ಷ/ಸೆಮಿಸ್ಟರ್‌ ಪರೀಕ್ಷೆ ನಡೆಸಿದರೆ ಸಮಸ್ಯೆ ಬಗೆಹರಿಯುವುದಿಲ್ಲ. ಬದಲಿಗೆ, ಹಿಂದಿನ ವರ್ಷಗಳ, ಅನುತ್ತೀರ್ಣಗೊಂಡಿರುವ ವಿಷಯಗಳ ಪರೀಕ್ಷೆಗಳಿಗೂ ಅವಕಾಶ ಮಾಡಿಕೊಡಬೇಕಾಗುತ್ತದೆ. ಈ ಕೆಲಸವನ್ನು ಎಲ್ಲ ವಿಶ್ವವಿದ್ಯಾಲಯಗಳು ಕಡ್ಡಾಯವಾಗಿ ಮಾಡಬೇಕು’ ಎಂದು ಸೂಚಿಸಿದರು.

ಜಾಗ ಕೊಡಲು ಸೂಚನೆ:

ರಾಜ್ಯದ ವಿವಿಧ ಜಿಲ್ಲೆಗಳ 33 ಪದವಿ ಕಾಲೇಜುಗಳಿಗೆ ಜಾಗದ ಸಮಸ್ಯೆ ಇದೆ. ಇಷ್ಟೂ ಕಾಲೇಜುಗಳಿಗೆ ಜಾಗ ಕೊಡಿಸುವ ಜವಾಬ್ದಾರಿ ಜಿಲ್ಲಾಧಿಕಾರಿಗಳಿಗೆ ಸಂಬಂಧಿಸಿದ್ದು. ಬಾಗಲಕೋಟೆ ಜಿಲ್ಲೆಯೊಂದರಲ್ಲೇ ಆರು ಪದವಿ ಕಾಲೇಜುಗಳಿಗೆ ನಿವೇಶನವೇ ಕೊಟ್ಟಿಲ್ಲ ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟರ್‌ ರಾಜೇಂದ್ರ ಅವರು, ಇಲಾಖೆಯ ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದರೆ ತಕ್ಷಣವೇ ಜಾಗ ಕೊಡಿಸುವ ಭರವಸೆ ನೀಡಿದರು. ಇದಕ್ಕೆ ಉಪ ಮುಖ್ಯಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿ, ತಕ್ಷಣ ಪ್ರಸ್ತಾವನೆ ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಇದೇ ರೀತಿ ಐದು ಡಿಪ್ಲೊಮಾ ಕಾಲೇಜು ಮತ್ತು 28 ಐಟಿಐ ಕಾಲೇಜುಗಳಿಗೆ ರಾಜ್ಯದ ವಿವಿಧೆಡೆ ಜಾಗದ ಕೊರತೆ ಇದ್ದು, ತಕ್ಷಣ ಜಿಲ್ಲಾಧಿಕಾರಿಗಳು ಇತ್ತ ಗಮನ ನೀಡಬೇಕು. ಜಾಗ ಕೊಟ್ಟ ತಕ್ಷಣ ಹೊಸ ಕಟ್ಟಡಗಳು ತಲೆಎತ್ತಲಿವೆ ಎಂದು ಅವರು ಹೇಳಿದರು.

ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಡಾ.ರಮಣರೆಡ್ಡಿ, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ವೆಂಕಟರಾಜಾ, ಪದವಿ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್‌ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಿಇಟಿ ಯಶಸ್ಸಿಗೆ ಕೃತಜ್ಞತೆ:

ಬೆಂಗಳೂರು: ಕೋವಿಡ್‌ ಕಾರಣದಿಂದಾಗಿ ಎದುರಾಗಿದ್ದ ಸಂಕಷ್ಟದ ಸಂದರ್ಭದಲ್ಲಿಯೂ ಸಿಇಟಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಕಾರಣರಾದ ಸರ್ಕಾರದ ಎಲ್ಲ ಹಂತದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಕೃತಜ್ಞತೆ ಸಲ್ಲಿಸಿದರು.

ಎಲ್ಲ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಜಿಲ್ಲಾ ಮಟ್ಟದ ಎಲ್ಲ ಅಧಿಕಾರಿಗಳ ಜತೆ ವಿಡಿಯೊ ಸಂವಾದ ನಡೆಸಿ, ಧನ್ಯವಾದ ಅರ್ಪಿಸಿದ ಉಪ ಮುಖ್ಯಮಂತ್ರಿಯವರು, ಪರೀಕ್ಷೆ ಯಶಸ್ವಿಯಾಗಿ ನಡೆಸಲು ಕಾರಣರಾದ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೂ ಕೃತಜ್ಞತೆ ಸಲ್ಲಿಸಿದರು.

ಒಟ್ಟು 1,94,419 ಮಂದಿ ಸಿಇಟಿಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 1,75,428 ಮಂದಿ ಪರೀಕ್ಷೆ ತೆಗೆದುಕೊಂಡಿದ್ದು, ಸಾಮಾನ್ಯ ವರ್ಷಗಳಲ್ಲಿ ಇದ್ದಷ್ಟೇ ಹಾಜರಾತಿ ಈ ಸಂದರ್ಭದಲ್ಲಿಯೂ ಇತ್ತು. ಇಷ್ಟಕ್ಕೂ ಈ ಬಾರಿ ಸಿಇಟಿ ನಡೆಯುವ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಕೂಡ ಬಂದಿತ್ತು. ಈ ಕಾರಣಕ್ಕೆ ಅರ್ಹರಾಗಿಲ್ಲದ ಕೆಲವರು ಸಿಇಟಿಯಿಂದ ಹಿಂದೆ ಸರಿದಿರಬಹುದು. ಒಟ್ಟಿನಲ್ಲಿ ಸಿಇಟಿ ಪರೀಕ್ಷೆ ನಡೆಸಿದ್ದು ಒಂದು ರೀತಿಯ ದೊಡ್ಡ ಯಶಸ್ಸು ಎಂದು ಬಣ್ಣಿಸಿದರು.

ʼನಾವು ಪರೀಕ್ಷೆ ನಡೆಸಿದ ನಂತರ ನಮ್ಮದೇ ನಿಯಮಗಳನ್ನು ಮುಂದಿಟ್ಟುಕೊಂಡು ಅರುಣಾಚಲ ಪ್ರದೇಶದಲ್ಲಿ ಲೋಕಸೇವಾ ಆಯೋಗದ ಪರೀಕ್ಷೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಹಾಗೆಯೇ ನಮ್ಮದೇ ಕೆಪಿಎಸ್‌ಸಿ ಕೂಡ ಪರೀಕ್ಷೆ ನಡೆಸುವುದಾಗಿ ಹೇಳಿದೆ. ಹೀಗೆ ಅನೇಕರಿಗೆ ಮಾದರಿಯಾದಂತಹ ಕೆಲಸವನ್ನು ಇಂತಹ ಕ್ಲಿಷ್ಟ ಸನ್ನಿವೇಶದಲ್ಲಿಯೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮಾಡಿರುವುದು ನಿಜಕ್ಕೂ ಮೆಚ್ಚುವಂತಹದ್ದು ಎಂದು ಅವರು ಅಭಿಪ್ರಾಯಪಟ್ಟರು.

Lead Photo Courtesy: Wikipedia

Tags: dr cn ashwath narayanfinal semester examhigher educationsemester exam
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿಕ್ಕಾಪಟ್ಟೆ ಸ್ಯಾನಿಟೈಸರ್; ಬರುತ್ತಾ ಕ್ಯಾನ್ಸರ್?

ಸಿಕ್ಕಾಪಟ್ಟೆ ಸ್ಯಾನಿಟೈಸರ್; ಬರುತ್ತಾ ಕ್ಯಾನ್ಸರ್?

Comments 1

  1. PK Channakrishna says:
    6 years ago

    Useful story.

    Reply

Leave a Reply Cancel reply

Your email address will not be published. Required fields are marked *

Recommended

ಅಜಿತ್ ದೊವಲ್: ಭಾರತದ ಜೇಮ್ಸ್ ಬಾಂಡ್

ಅಜಿತ್ ದೊವಲ್: ಭಾರತದ ಜೇಮ್ಸ್ ಬಾಂಡ್

4 years ago
ಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ

ಚುನಾವಣೆಯಲ್ಲಿ ಗೆದ್ದ ಕೂಡಲೇ ಮುನಿರತ್ನಗೆ ಸಚಿವ ಸ್ಥಾನ ಖಚಿತ ಎಂದ ಸಿಎಂ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ