ಕೈಗಾರಿಕೆಗಳಲ್ಲಿ ಹೂಡಿಕೆ; ಕೋಲಾರ, ಚಿಕ್ಕಬಳ್ಳಾಪುರಕ್ಕೆ ಜಾಕ್’ಪಾಟ್

ಬೆಂಗಳೂರು: ಕೋವಿಡ್-‌19 ನಂತರ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ವಿನ್ಯಾಸ ಮತ್ತು ಉತ್ಪಾದನಾ (ಇಎಸ್‌ಡಿಎಂ) ಕ್ಷೇತ್ರಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಮಹತ್ವದ ಕ್ರಮಗಳನ್ನು ಕೈಗೊಂಡಿರುವ ರಾಜ್ಯ ಸರ್ಕಾರ, ಈ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಖರೀದಿಸಲಾಗುವ ಭೂಮಿಗೆ ಶೇ 25ರಷ್ಟು ನೇರ ಸಬ್ಸಿಡಿ ನೀಡುವುದೂ ಸೇರಿದಂತೆ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ಈ ಪೈಕಿ ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ ಮತ್ತು ಚಿತ್ರದುರ್ಗಕ್ಕೆ ಹೆಚ್ಚು ಮಹತ್ವ ನೀಡಲಾಗುತ್ತಿದೆ.