• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಐದು ತಿಂಗಳ ನಂತರ ಹಳಿಹತ್ತಿ ‘ನಡುವೆ ಅಂತರ ಇರಲಿ’ ಎಂದ ನಮ್ಮ ಮೆಟ್ರೋ

cknewsnow desk by cknewsnow desk
September 14, 2020
in NEWS IN USE, STATE
Reading Time: 2 mins read
0
921
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್‌ ಅಬ್ಬರಕ್ಕೆ ಹೆದರಿ ಮಾರ್ಚ್‌ 22ರಂದು, ಅಂದರೆ ಐದು ತಿಂಗಳಿಂದ ಹಳಿಗಳಿಂದ ದೂರವುಳಿದಿದ್ದ ನಮ್ಮ ಮೆಟ್ರೋ ಮತ್ತೆ ಹಳಿಹತ್ತಿದೆ. ಸೋಮವಾರ (ಸೆಪ್ಟೆಂಬರ್‌ 7) ಬೆಂಗಳೂರು, ದೆಹಲಿ ಸೇರಿದಂತೆ ದೇಶದ ಎಲ್ಲ ನಗರಗಳಲ್ಲೂ ಮೆಟ್ರೋ ರೈಲು ಸಂಚಾರ ಆರಂಭವಾಗಿದೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು.

ಮಾರ್ಚ್‌ನಲ್ಲಿ ಇದ್ದ ವೈರಾಣುವನ ಅಬ್ಬರವನ್ನು ಕಂಡು ಇಡೀ ವರ್ಷ ನಮ್ಮ ಮೆಟ್ರೋ ಪ್ರಯಾಣ ಅನುಮಾನ ಎಂದೇ ಭಾವಿಸಿದ್ದ ಬೆಂಗಳೂರಿಗರು, ಯಾವ ಆತಂಕವೂ ಇಲ್ಲದೆ ಬಿಎಂಆರ್‌ಸಿಎಲ್‌ ನಿಗದಿಪಡಿಸಿದ್ದ ನಿಯಮಗಳನ್ನು ಅಚ್ಚುಕಟ್ಟಾಗಿ ಪಾಲಿಸಿ ರೈಲಿನಲ್ಲಿ ಬಿಂದಾಸ್‌ ಆಗಿ ಪ್ರಯಾಣ ಮಾಡಿದರು. ಇವತ್ತು ನೇರಳೆ ಮಾರ್ಗವಾದ ಬೈಯ್ಯಪ್ಪನಹಳ್ಳಿ-ಮೈಸೂರು ರಸ್ತೆ ನಡುವೆ ಮಾತ್ರ ರೈಲುಗಳು ಸಂಚಾರ ಮಾಡಿದವು.

ಹೆಚ್ಚೂಕಮ್ಮಿ 150 ದಿನದಿಂದ ಜನರ ಸೇವೆಯಿಂದ ದೂರವಿದ್ದ ಮೆಟ್ರೋ ಸಿಬ್ಬಂದಿ ಕೂಡ ರೈಲು ಸಂಚಾರ ಆರಂಭವಾದ ಬಗ್ಗೆ ಎಲ್ಲರೂ ಸಂತಸ ವ್ಯಕ್ತಪಡಿಸಿದರು. “ಕೋವಿಡ್‌ ಇಡೀ ವರ್ಷ ಇದ್ದು ಜನರನ್ನು ಕಾಡಿಸುತ್ತದೆ ಎಂಬ ಭಯವಿತ್ತು. ಆದರೆ, ವೈರಾಣು ಬಗ್ಗೆ ಜನರಲ್ಲಿ ಭಯ ದೂರವಾಗಿ ಜಾಗೃತಿ ಬಂದಿದೆ. ಹೀಗಾಗಿ ಇವತ್ತು ಮೇಟ್ರೋಗೆ ಬಂದ ಪ್ರಯಾಣಿಕರು ಧೈರ್ಯವಾಗಿ ಬಂದು ಪ್ರಯಾಣಿಸಿದರು. ಅವರ ಉತ್ಸಾಹ ಕಂಡು ನಮ್ಮಲ್ಲೂ ಆತ್ಮಸ್ಥೈರ್ಯ ಹೆಚ್ಚಾಗಿದೆ” ಎನ್ನುತ್ತಾರೆ ಬೈಯ್ಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಕೆಲಸ ಮಾಡುವ ಸಿಬ್ಬಂದಿಯೊಬ್ಬರು ಸಿಕೆನ್ಯೂಸ್‌ ನೌ ಜತೆ ಮಾತನಾಡುತ್ತಾ ತಿಳಿಸಿದರು.

ಹಳಿಗೆ ಬಂದ ಕೂಡಲೇ ಸಂಭ್ರಮ

ಬೆಳಗ್ಗೆ 8 ಗಂಟೆಗೆ ಬೈಯ್ಯಪ್ಪನಹಳ್ಳಿಯಿಂದ ಮೈಸೂರು ರಸ್ತೆಗೆ ಹೊರಟ ರೈಲಿನಲ್ಲಿ ಪ್ರಯಾಣಿಕರು ಖುಷಿಯಾಗಿ ತೆರಳಿದರು. ಅವರ ಮೊಗದಲ್ಲಿ ಕಚೇರಿಗೆ ಸಮಯಕ್ಕೆ ಸರಿಯಾಗಿ ಹೋಗುತ್ತಿರುವ ಸಂತಸದ ಜತೆಗೆ, ಐದು ತಿಂಗಳ ನಂತರ ಮತ್ತೆ ರೈಲು ಹತ್ತಿದ್ದು ಹರ್ಷ ಉಂಟು ಮಾಡಿದೆ. ಅದರ ಜತೆಗೆ, ಕೋರೊನ ಬಗ್ಗೆ ಜನರಲ್ಲಿ ಆತಂಕವೂ ಕಡಿಮೆಯಾಗಿರುವುದಕ್ಕೆ ಇದು ನಿದರ್ಶನ. ಹೀಗೆಯೇ ಎಲ್ಲ ರೀತಿಯಲ್ಲೂ ಜನಜೀವನ ಸಹಜ ಸ್ಥಿತಿಗೆ ಬರಲಿ ಎಂದು ಮೆಟ್ರೋ ಪ್ರಯಾಣಿಕ ಪ್ರತಾಪ್‌ ರೆಡ್ಡಿ ಹೇಳಿದರು. ಇವರು ನಿತ್ಯವೂ ಬೈಯ್ಯಪ್ಪನಹಳ್ಳಿಯಿಂದ ವಿಜಯನಗರಕ್ಕೆ ಪ್ರಯಾಣಿಸುತ್ತಾರೆ.

ಎಲ್ಲ ರೈಲುಗಳು ಪೀಕ್‌ ಅವರ್‌ನಲ್ಲಿ ಮಾತ್ರ ಸಂಚರಿಸಿದವು. ಅಂದರೆ, ಬೆಳಗ್ಗೆ 8ರಿಂದ 11 ಹಾಗೂ ಅಪರಾಹ್ನ 4.30ರಿಂದ 7.30ರವರೆಗೂ ಸಂಚರಿಸಿದವು. ಐದು ನಿಮಿಷಗಳ ಅಂತರದಲ್ಲಿ ರೈಲು ಸಂಚರಿಸಿದವು. ಒಟ್ಟು 91 ಟ್ರಿಪ್‌ಗಳು ಆಗಿವೆ ಎಂದು ಮೆಟ್ರೋ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು, ಬುಧವಾರದಿಂದ ಹಸಿರು ಮಾರ್ಗದಲ್ಲಿಯೂ ರೈಲು ಸಂಚಾರ ಪುನಾರಂಭ ಆಗಲಿದೆ. ಹಾಗೆಯೆ, ಬೈಯ್ಯಪ್ಪನಹಳ್ಳಿಯಿಂದ ವಿಧಾನಸೌಧದ ತನಕ ಪ್ರಯಾಣಿಸಿದಾಗ ಹಲವಾರು ದೃಶ್ಯಗಳು ಕಂಡವು. ಪ್ರತಿ ನಿಲ್ದಾಣದಲ್ಲಿ 60 ಸೆಕೆಂಡುಗಳ ಕಾಲ ರೈಲುಗಳು ನಿಲ್ಲುತ್ತಿದ್ದವು.

ಟೋಕನ್‌ ಇರಲಿಲ್ಲ

ಮೊದಲೇ ಹೇಳಿದಂತೆ ಮೆಟ್ರೋ ನಿಲ್ದಾಣಗಳಲ್ಲಿ ಟೋಕನ್‌ ಕೌಂಟರ್‌ಗಳನ್ನು ಮುಚ್ಚಲಾಗಿತ್ತು. ಮಾಹಿತಿ ಕೇಂದ್ರಗಳು ಮಾತ್ರ ತೆರೆದಿದ್ದವು. ಸ್ಮಾರ್ಟ್‌ಕಾರ್ಡ್‌ ಇದ್ದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಯಿತು. ಆರು ಬೋಗಿಗಳ ಪ್ರತೀ ರೈಲಿನಲ್ಲಿ ಒಮ್ಮೆಲೆ 400 ಪ್ರಯಾಣಿಕರಿಗಷ್ಟೇ ಪ್ರವೇಶಿಸಲು ಅವಕಾಶ ನೀಡಲಾಯಿತು. ಇದೇ ವೇಳೆ ಕೋಲಾರ, ಚಿಂತಾಮಣಿ, ಹೊಸಕೋಟೆ ಮತ್ತಿತರೆ ಭಾಗಗಳಿಂದ ಬಂದ ಪ್ರಯಾಣಿಕರು ಸ್ಮಾರ್ಟ್‌ಕಾರ್ಡ್‌ಗಳಿಲ್ಲದೆ ವಾಪಸ್‌ ಹೋಗಿ ಬಿಎಂಟಿಸಿ ಬಸ್ಸಿನಲ್ಲಿಯೇ ಸಿಟಿಯತ್ತ ಪ್ರಯಾಣ ಬೆಳೆಸಿದ ದೃಶ್ಯಗಳೂ ಕಂಡುಬಂದವು.

ನಿಲ್ದಾಣಗಳಲ್ಲೂ ಕಟ್ಟುನಿಟ್ಟು

ಮೆಟ್ರೋ ಸಿಬ್ಬಂದಿ ಎಲ್ಲ ನಿಲ್ದಾಣಗಳಲ್ಲೂ ಕಟ್ಟುನಿಟ್ಟಾಗಿ ನಿಯಮ ಪಾಲನೆಯತ್ತ ಗಮನ ಹರಿಸಿದ್ದರು. ಯಾರೊಬ್ಬರೂ ನಿಯಮ ತಪ್ಪದಂತೆ ನೋಡಿಕೊಳ್ಳುತ್ತಿದ್ದರು. ಒಮ್ಮೆಲೆ 50 ಮಂದಿಗಷ್ಟೇ ಫ್ಲಾಟ್ ಫಾರಂಗೆ ಬಿಡಲಾಗುತ್ತಿತ್ತು. ಅವರಲ್ಲಿ ದೈಹಿಕ ಅಂತರ ಇರುವಂತೆ ನೋಡಿಕೊಳ್ಳುತ್ತಿದ್ದರು. ಎಸ್ಕಲೇಟರ್ ಮೇಲೆ ಸಾಗುವಾಗಲೂ ಮುಂದಿನ ಮೆಟ್ಟಿಲು ಅಂತರ ಬಿಟ್ಟು ಕಡ್ಡಾಯವಾಗಿ ನಿಲ್ಲಬೇಕಾಗಿತ್ತು. ಲಿಫ್ಟಿಗೂ ನಿಯಮಗಳಿದ್ದವು. 4ಕ್ಕಿಂತ ಹೆಚ್ಚು ಜನರಿಗೆ ಎಂಟ್ರಿ ಇರಲೇ ಇಲ್ಲ.

ಪಿಪಿಎ ಕಿಟ್‌

ಪ್ರಯಾಣಿಕರನ್ನು ತಪಾಸಣೆ ಮಾಡಿ ನಿಲ್ದಾಣದೊಳಕ್ಕೆ ಬಿಡುವ ಸಿಬ್ಬಂದಿ ಪಿಪಿಎ ಕಿಟ್‌ ಧರಿಸಿದ್ದರು. ಪ್ರಯಾಣಿಕರು ಬಂದ ಹಾಗೆಲ್ಲ ಅವರು ತಾಳ್ಮೆಯಿಂದ ತಪಾಸಣೆ ನಡೆಸುತ್ತಿದ್ದರು. ನಿಲ್ದಾಣದ ಪ್ರವೇಶ ದ್ವಾರದಲ್ಲಿಯೇ ಸ್ಯಾನಿಟೈಸರ್‌ ಮತ್ತೂ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಲಾಗಿತ್ತು.

ಧೈರ್ಯ ತುಂಬಿದ ಶ್ರೀರಾಮುಲು

ಇದೆಲ್ಲ ಒಂದೆಡೆ ಇದ್ದರೆ, ಮತ್ತೊಂದೆಡೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಿ, ವೈರಸ್‌ಗೆ ಹೆದರದೆ ಧೈರ್ಯವಾಗಿ ಮೆಟ್ರೋದಲ್ಲ ಸಂಚರಿಸಿ ಎಂದು ಬೆಂಗಳೂರು ವಾಸಿಗಳಿಗೆ ಕರೆ ನೀಡಿದ್ದು ವಿಶೇಷವಾಗಿತ್ತು. ಅಧಿಕಾರಿಗಳ ಜತೆ ರೈಲಿನಲ್ಲಿ ಪ್ರಯಾಣಿಸಿದ ಸಚಿವರು, ಬೋಗಿಯಲ್ಲಿದ್ದ ಪ್ರಯಾಣಕರನ್ನು ಮಾತನಾಡಿಸಿದರು. ಬಳಿಕ ವಿಧಾನಸೌಧ ನಿಲ್ದಾಣದಲ್ಲಿ ಮಾಡಲಾಗಿದ್ದ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಮೆಟ್ರೋ ಆ್ಯಪ್‌

ಪ್ರಯಾಣಿಕರಿರಲ್ಲಿ ಸ್ಮಾರ್ಟ್‌ಕಾರ್ಡ್‌ ಅವಲಂಬನೆಯನ್ನು ಹೆಚ್ಚಿಸಲು ಬಿಎಂಆರ್‌ಸಿಎಲ್‌ ಅಭಿವೃದ್ಧಿಪಡಿಸಿರುವ ನಮ್ಮ ಮೆಟ್ರೋ ಆ್ಯಪ್‌ ಇದೀಗ ಲಭ್ಯವಿದೆ. ಅಂಡ್ರಾಯ್ಡ್‌ ಪ್ಲೇಸ್ಟೋರ್‌ನಲ್ಲಿ ಇದೆ. ಇದರ ಮೂಲಕವೇ ಸ್ಮಾರ್ಟ್‌ಕಾರ್ಡ್‌ ಟಾಪ್‌ಅಪ್‌ ಮಾಡಿಸಿಕೊಳ್ಳಬಹದು.

photos: bnmk photographs

Tags: Bengalurumetrometro railnamma metro
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸೈನೇಡ್ ದಿಬ್ಬ, ಜಲಾವೃತ ಗಣಿಗಳು ಮತ್ತು 3,200 ಎಕರೆ ಚಿನ್ನದಂಥ ಭೂಮಿ; ಆಸ್ಟ್ರೇಲಿಯಾ ಕಂಪನಿ ಹೋದ ಮೇಲೆ ಇಂಡಸ್ಟ್ರೀಯಲ್‌ ಪಾರ್ಕ್‌ ಭಜನೆ !!

ಸೈನೇಡ್ ದಿಬ್ಬ, ಜಲಾವೃತ ಗಣಿಗಳು ಮತ್ತು 3,200 ಎಕರೆ ಚಿನ್ನದಂಥ ಭೂಮಿ; ಆಸ್ಟ್ರೇಲಿಯಾ ಕಂಪನಿ ಹೋದ ಮೇಲೆ ಇಂಡಸ್ಟ್ರೀಯಲ್‌ ಪಾರ್ಕ್‌ ಭಜನೆ !!

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ