• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಓದಿನಲ್ಲಿ ನೋ ಟೈಂ ವೇಸ್ಟ್; ಈ ವರ್ಷದಿಂದಲೇ ಡಿಪ್ಲೊಮೋ ಸಿಲೆಬಸ್ ಪರಿಷ್ಕರಣೆ

cknewsnow desk by cknewsnow desk
September 22, 2020
in NEWS IN USE, STATE
Reading Time: 1 min read
0
ಓದಿನಲ್ಲಿ ನೋ ಟೈಂ ವೇಸ್ಟ್; ಈ ವರ್ಷದಿಂದಲೇ ಡಿಪ್ಲೊಮೋ ಸಿಲೆಬಸ್ ಪರಿಷ್ಕರಣೆ
915
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರ: ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರುವಂತೆ ಡಿಪ್ಲೊಮೋ ಕೋರ್ಸುಗಳ ಪಠ್ಯವನ್ನು ಅಮೂಲಾಗ್ರವಾಗಿ ಪರಿಷ್ಕರಣೆ ಮಾಡಲು ಸರಕಾರ ನಿರ್ಧರಿಸಿದೆ. ಇದಕ್ಕೆ ಕಾರಣವಿಷ್ಟೇ, ಎಲ್ಲ ವೃತ್ತಿಯಾಧಾರಿತ ಕೆಲಸಗಳಲ್ಲಿ ಪರಿಪೂರ್ಣತೆ ಮತ್ತು ನೀಟ್’ನೆಸ್ ಇರಬೇಕು ಮತ್ತು ಓದುವಾಗ ಬೇಡದ್ದೆಲ್ಲ ಓದಿಕೊಂಡು ಕಾಲಹರಣ ಬೇಡ ಎಂಬುದು.

ಡಿಪ್ಲೊಮೋಗಳ ಹೊಸ ಸಿಲೆಬಸ್ ಹೇಗಿರುತ್ತದೆ? ಅತ್ಯಂತ ಪರಿಣಾಮಕಾರಿಯಾಗಿ ಹಾಗೂ ಸರಳವಾಗಿರುತ್ತದೆ. ಸುಲಭವಾಗಿ ಅರ್ಥವಾಗುವಂತೆ, ಅದರಲ್ಲೂ ಏನನ್ನು ಕಲಿಯಬೇಕೋ ಅದನ್ನೇ ನಿರ್ದಿಷ್ಟವಾಗಿ ಆ ಪಠ್ಯವನ್ನೇ ಕಲಿಯುವ ನಿಟ್ಟಿನಲ್ಲಿ ಬದಲಾಗುತ್ತದೆ.

ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ಪ್ರಕಟಿಸಿದರು.

  • ‘ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಫಾರ್ ಸೂಪರ್ ಟ್ರೈನರ್ಸ್’ ಸಂಸ್ಥೆಯ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ.

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿ ಅಂಗಟ್ಟದಲ್ಲಿ ಜಿಲ್ಲಾಡಳಿತ, ಜಿ.ಪಂ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ₹.15.90 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿರುವ ‘ವಿಶ್ವೇಶ್ವರಯ್ಯ ಇನ್ಸ್ಟಿಟ್ಯೂಟ್ ಫಾರ್ ಸೂಪರ್ ಟ್ರೈನರ್ಸ್’ ಸಂಸ್ಥೆಯ ಕಟ್ಟಡ ಕಾಮಗಾರಿಗೆ ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ. ಕೆ.ಸುಧಾಕರ್ ಅವರ ಜತೆಗೂಡಿ ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಸಿಲೆಬಸ್ ಬದಲು ಬದಲು ಸುದ್ದಿಯನ್ನು ಅನೌನ್ಸ್ ಮಾಡಿದರು.

ಅದಕ್ಕೆ ಅವರು ಕೊಟ್ಟ ಮತ್ತಷ್ಟು ಕಾರಣಗಳು ಹೀಗಿದ್ದವು..
ರಾಜ್ಯದಲ್ಲಿ ಕೌಶಲ್ಯಪೂರ್ಣ ಶಿಕ್ಷಣ ನೀಡುವುದು ಮತ್ತು ಅದು ವಿದ್ಯಾರ್ಥಿಯ ಭವಿಷ್ಯದ ಜತೆಗೆ ದೇಶ ಕಟ್ಟುವುದಕ್ಕೂ ಸಹಕಾರಿ ಆಗಬೇಕು. ವಿನಾಕಾರಣ ಅಗತ್ಯವಿಲ್ಲದ ವಿಷಯಗಳನ್ನು ಓದಿಕೊಂಡು ಕಾಲಹರಣ ಮಾಡುವುದರಲ್ಲಿ ಅರ್ಥವೇ ಇಲ್ಲ. ಕಾಲಕ್ಕೆ ತಕ್ಕಂತೆ, ಅಗತ್ಯಕ್ಕೆ ತಕ್ಕಂತೆ ಬದಲಾವಣೆಗಳು ಆಗುತ್ತಿರಬೇಕು. ಈ ನಿಟ್ಟಿನಲ್ಲಿ ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಬಂದಿದೆ. ಅದನ್ನು ಕೂಡ ಹಂತ ಹಂತವಾಗಿ ರಾಜ್ಯದಲ್ಲಿ ಜಾರಿ ಮಾಡಲು ಸರಕಾರ ಮುಂದಾಗಿದೆ. ಶಿಕ್ಷಣ ಮತ್ತು ಕೌಶಲ್ಯತೆ ಜತೆ ಜತೆಯಾಗಿಯೇ ನಡೆಯಬೇಕು. ಅಭಿವೃದ್ಧಿಗೆ ಇದೇ ಬುನಾದಿ ಎಂಬುದು ಡಿಸಿಎಂ ಕೊಟ್ಟ ಕಾರಣಗಳು.

ಜಪಾನ್ ಮತ್ತು ಜರ್ಮನಿ ಸ್ಕಿಲ್

ಅತ್ಯುತ್ತಮ ಕೌಶಲ್ಯತೆ ಇದ್ದರೆ ಯಾವುದೇ ಕ್ಷೇತ್ರದಲ್ಲಿಯೂ ವೇಗವಾಗಿ ಮುಂದುವರಿಯಬಹುದು ಎಂದು ಬಲವಾಗಿ ಪ್ರತಿಪಾದಿಸಿದ ಉಪ ಮುಖ್ಯಮಂತ್ರಿ, ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಜಾಗತಿಕ ಗುಣಮಟ್ಟದ ಸುಧಾರಣೆಗಳನ್ನು ಕೈಗೊಳ್ಳಲಿದೆ. ಉತ್ತಮ ರೀತಿ ಕೌಶಲ್ಯವಿದ್ದರೆ ಉತ್ತಮ ಸಾಧನೆ ಮಾಡಬಹುದು. ಎಂತಹ ದುಃಸ್ಥಿತಿಯಲ್ಲಿ ಇದ್ದರೂ ಉನ್ನತ ಮಟ್ಟ ತಲುಪಬಹುದು. ಇದಕ್ಕೆ ಜಪಾನ್ ಮತ್ತು ಜರ್ಮನಿ ದೇಶಗಳೇ ಸಾಕ್ಷಿ. ಎರಡನೇ ಜಾಗತಿಕ ಯುದ್ಧದಲ್ಲಿ ಬಹುತೇಕ ನಿರ್ನಾಮವಾಗಿದ್ದ ಇವೆರಡೂ ದೇಶಗಳು ಕೆಲವೇ ದಶಕಗಳಲ್ಲಿ ಮುಂದುವರಿದ ದೇಶಗಳಾದವು. ಇದಕ್ಕೆ ಕಾರಣ ಆ ದೇಶದ ಜನರಲ್ಲಿದ್ದ ಕೌಶಲ್ಯತೆ ಎಂದು ನುಡಿದರು.

ಕೌಶಲ್ಯತೆ ಅಥವಾ ಕಸುಬುದಾರಿಕೆಯೇ ಗೊತ್ತಿಲ್ಲದಿದ್ದರೆ ಅಭಿವೃದ್ಧಿ ಎಲ್ಲಿಂದ ಸಾಧ್ಯವಾಗುತ್ತದೆ. ಹೀಗಾಗಿ ನಮ್ಮ ಯುವಜನರಲ್ಲಿ ಆ ರೀತಿಯ ಕೌಶಲ್ಯತೆ ಬರಲೇಬೇಕು. ಈ ನಿಟ್ಟಿನಲ್ಲಿ ಸರಕಾರ ಮಹತ್ತ್ವದ ಹೆಜ್ಜೆಗಳನ್ನು ಇಡುತ್ತಿದ್ದು, ಕೌಶಲ್ಯ ವೃದ್ಧಿಗೆ ಎಲ್ಲ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮುಖ್ಯವಾಗಿ ಜಪಾನ್ ಮತ್ತು ಜರ್ಮನಿ ದೇಶಗಳಲ್ಲಿ ಇರುವಂತೆ ಗುಣಮಟ್ಟದ ಕೌಶಲ್ಯ ತರಬೇತಿ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ಜಗತ್ತೇ ಒಂದು ಊರು

ನಮ್ಮಲ್ಲಿ ಒಂದು ಮಾತಿದೆ. ಕೆಲಸ ಬಲ್ಲವನಿಗೆ ಜಗತ್ತೇ ಊರು. ಕಸುಬು ಗೊತ್ತಿಲ್ಲದವನಿಗೆ ಹುಟ್ಟಿದೂರಷ್ಟೇ ಊರು. ಪ್ರತಿಭೆಗೆ ಗಡಿ ಎಂಬುದೇ ಇಲ್ಲ. ಹೀಗಾಗಿ ಯುವಜನರು ತಮ್ಮ ಹಾಗೂ ದೇಶದ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕೌಶಲ್ಯತೆಯನ್ನು ಕರಾರುವಕ್ಕಾಗಿ ಕಲಿಯಬೇಕು. ಆಗ ಮಾತ್ರ ಉತ್ತಮ ಫಲಿತಾಂಶ ಹೊರಬರುತ್ತದೆ, ಅವರೂ ಬೆಳೆಯುತ್ತಾರೆ. ಕೌಶಲ್ಯತೆ ಸಾಧಿಸುವುದು ಎಂದರೆ ಕಚೇರಿಯಲ್ಲಿ ಕೂತು ಕೆಲಸ ಮಾಡುವ ಅಥವಾ ಕಂಪ್ಯೂಟರಿನಲ್ಲಿ ಮೂಲಕ ಉದ್ಯೋಗ ಮಾಡುವುದಲ್ಲ. ಬೇಸಾಯ ಮಾಡುವುದರಲ್ಲಿಯೂ ಕೌಶಲ್ಯತೆ ಸಾಧಿಸಬಹುದು. ಗಾರೆ ಕೆಲಸ, ಹೈನುಗಾರಿಕೆ, ಪುಷ್ಪೋದ್ಯಮ ಸೇರಿದಂತೆ ಯಾವುದೇ ಕಸುಬಿನಲ್ಲಿ ಬೇಕಾದರೂ ಕೌಶಲ್ಯತೆಯನ್ನು ಸಾಧಿಸಿ ಉತ್ತಮ ಬೆಳವಣಿಗೆ ಸಾಧಿಸಬಹುದು. ಅದು ಯಾವುದೇ ವೃತ್ತಿ ಆಗಬಹುದು. ಅದಕ್ಕೆ ಕೌಶಲ್ಯತೆ ಇಲ್ಲದಿದ್ದರೆ ನಿರುಪಯೋಗ. ಹಾಗೆ ನೋಡಿದರೆ ಚಿಕ್ಕಬಳ್ಳಾಪುರ ಬೇಸಾಯದ ತೊಟ್ಟಿಲು. ಹೈನುಗಾರಿಕೆ, ಪುಷ್ಪೋದ್ಯಮ, ರೇಷ್ಮೆ ಇತ್ಯಾದಿಗಳಲ್ಲಿ ಸಮೃದ್ಧವಾಗಿದೆ. ಇದರ ಜತೆಗೆ ಕೌಶಲ್ಯವೂ ಸೇರಿಕೊಂಡರೆ ಅದ್ಭುತಗಳನ್ನೇ ಸಾಧಿಸಬಹುದು ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.

ಚಿಕ್ಕಬಳ್ಳಾಪುರ ಅವಕಾಶಗಳ ಆಗರ: ಡಾ. ಸುಧಾಕರ್‌

ರಾಜ್ಯದ ರಾಜಧಾನಿಗೆ ಅತಿ ಸನಿಹದಲ್ಲಿರುವ ಚಿಕ್ಕಬಳ್ಳಾಪುರ ಜಿಲ್ಲೆಯು ಅವಕಾಶಗಳ ಆಗರವಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌ ಹೇಳಿದರು.

ನಮ್ಮ ಜಿಲ್ಲೆ ಅನೇಕ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿದ್ದು, ವ್ಯಾಪಕವಾದ ಅವಕಾಶಗಳನ್ನು ಹೊಂದಿದೆ. ಹೀಗಾಗಿ ಜಿಲ್ಲೆಯ ಯುವಕರು ತಮ್ಮ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ಕೊಂಡು ತಮ್ಮ ಪ್ರತಿಭೆಯನ್ನು ಮುಂಚೂಣಿಗೆ ತಂದುಕೊಳ್ಳಬಹುದು.

ಇಷ್ಟೇ ಅಲ್ಲ, ಜಿಲ್ಲೆ ಜ್ಞಾನದ ಕಣಜ ಎಂಬುದು ಈಗಾಗಲೇ ಸಾಬೀತಾಗಿದೆ. ಭಾರತರತ್ನರಾದ ಸರ್‌ ಎಂ. ವಿಶ್ವೇಶ್ವರಯ್ಯ, ಪ್ರೊ. ಸಿ.ಎನ್.ಆರ್.‌ ರಾವ್‌ ನಮ್ಮ ಜಿಲ್ಲೆಯವರು. ಇವರ ಜತೆ ಇನ್ನೂ ಅನೇಕ ಪ್ರತಿಭಾವಂತರು ನಮ್ಮ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆಂದು ಸಚಿವರು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಚಿಕ್ಕ ನರಸಿಂಹಯ್ಯ, ಉಪಾಧ್ಯಕ್ಷರಾದ ನಿರ್ಮಲಾ ಮುನಿರಾಜು, ಜಿಲ್ಲಾಧಿಕಾರಿ ಆರ್.ಲತಾ, ಜಿಪಂ ಸಿಇಒ ಫೌಜಿ಼ಯಾ ತರನ್ನಮ್, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್ ಇತರರು ಉಪಸ್ಥಿತರಿದ್ದರು.

PHOTO BY VANSH SHARMA FROM PEXELS

Tags: chikkaballapurdr k sudhakarkolarMuddenahallisir m visvesvarayaskill
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಚಿವ ಸುರೇಶ್ ಕುಮಾರ್ ಆಶಯದಂತೆ ಚೌಕಾಬಾರ ಬಿಟ್ಟ ಸರಕಾರಿ ಕಾರು ಚಾಲಕರು

ಸಚಿವ ಸುರೇಶ್ ಕುಮಾರ್ ಆಶಯದಂತೆ ಚೌಕಾಬಾರ ಬಿಟ್ಟ ಸರಕಾರಿ ಕಾರು ಚಾಲಕರು

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ಅಟ್ಟಹಾಸದಲ್ಲೂ ಹಳ್ಳಿಮಕ್ಕಳ ಮೊಗದಲ್ಲಿ ಮೂಡಿತು ಮಂದಹಾಸ!!

ಕೋವಿಡ್‌ ಅಟ್ಟಹಾಸದಲ್ಲೂ ಹಳ್ಳಿಮಕ್ಕಳ ಮೊಗದಲ್ಲಿ ಮೂಡಿತು ಮಂದಹಾಸ!!

5 years ago
ಸ್ಯಾಂಡಲ್‌ವುಡ್‌ಗೆ ಗೋಧ್ರಾ ಶಾಕ್ !;‌ ನೀನಾಸಂ ಸತೀಶ್‌ ಚಿತ್ರದ ಮೇಲೆ  ಸೆನ್ಸಾರ್‌ ಕರಿನೆರಳು

ಸ್ಯಾಂಡಲ್‌ವುಡ್‌ಗೆ ಗೋಧ್ರಾ ಶಾಕ್ !;‌ ನೀನಾಸಂ ಸತೀಶ್‌ ಚಿತ್ರದ ಮೇಲೆ ಸೆನ್ಸಾರ್‌ ಕರಿನೆರಳು

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ