• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಯುನಿವರ್ಸಿಟಿಗಳಿಗೆ ಸರ್ಜರಿ; ಉಪನ್ಯಾಸಕರ ವರ್ಗಾವಣೆಗೆ ಹೊಸ ಕಾಯ್ದೆ, ಇನ್ಮುಂದೆ ಎಲ್ಲವೂ ಸರಳ

cknewsnow desk by cknewsnow desk
September 16, 2020
in STATE
Reading Time: 1 min read
0
ಯುನಿವರ್ಸಿಟಿಗಳಿಗೆ ಸರ್ಜರಿ; ಉಪನ್ಯಾಸಕರ ವರ್ಗಾವಣೆಗೆ ಹೊಸ ಕಾಯ್ದೆ, ಇನ್ಮುಂದೆ ಎಲ್ಲವೂ ಸರಳ
914
VIEWS
FacebookTwitterWhatsuplinkedinEmail

ಬೆಂಗಳೂರು: ರಾಜ್ಯದಲ್ಲಿ ಈಗಾಗಲೇ ಜಾರಿಯಲ್ಲಿರುವ ಉಪನ್ಯಾಸಕರ ವರ್ಗಾವಣೆಯ ನಿಯಮಗಳನ್ನು ಬದಲಿಸಲು ಸರಕಾರ ನಿರ್ಧರಿಸಿದೆ. ಜತೆಗೆ, ರಿಜಿಸ್ಟ್ರಾರ್‌ ಐಎಎಸ್‌ ಅಥವಾ ಕೆಎಎಸ್‌ ಅಧಿಕಾರಿಗಳು, ಉಪ ಕುಲಪತಿಗಳ ನೇಮಕದಲ್ಲಿ ಕ್ವಾಲಿಟಿ, ವಿವಿಗಳಿಗೆ ಐಪಿಎಸ್ ಮತ್ತು ಐಎಫ್ಎಸ್ ಅಧಿಕಾರಿಗಳಿಗೆ ಎಂಟ್ರಿ ಕೊಡದಿರುವುದು.. ಇವೆಲ್ಲ ಸರಕಾರದ ತಲೆಯಲ್ಲಿರುವ ಮಹತ್ತ್ವದ ಯೋಚನೆಗಳು.

ಈಗಿರುವ 2016ರ ವರ್ಗಾವಣೆ ಕಾಯ್ದೆಯನ್ನು ವಾಪಸ್ ಪಡೆದು ಅದಕ್ಕೆ ಸೂಕ್ತ ತಿದ್ದುಪಡಿ ತಂದು ಹೊಸ ನಿಯಮಗಳನ್ನು ಜಾರಿಗೆ ತರಲಾಗುವುದು. ಕಳೆದ ಅಧಿವೇಶನದಲ್ಲಿಯೇ ಇದರಲ್ಲಿ ಕೆಲ ತಿದ್ದುಪಡಿಗಳನ್ನು ಮಾಡುವ ಉದ್ದೇಶವಿತ್ತಾದರೂ ಆ ಕಾಯ್ದೆಯಲ್ಲಿ ಕೆಲ  ದೋಷಗಳಿದ್ದ ಕಾರಣ ಇಡೀ ಕಾಯ್ದೆಯನ್ನೇ ವಾಪಸ್ ಪಡೆದು ಹೊಸ ನಿಯಮ ರೂಪಿಸಲು ನಿರ್ಧರಿಸಲಾಗಿದೆ. ಹೀಗೆ ಮಾಡುವುದರಿಂದ ವರ್ಗಾವಣೆ ನಿಯಮಗಳು ಸರಳವಾಗಿರುತ್ತವೆ ಮತ್ತೂ ಗೊಂದಲಗಳು ಇರುವುದೇ ಇಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.‌ಅಶ್ವತ್ಥನಾರಾಯಣ ಪ್ರತಿಪಾದಿಸಿದ್ದಾರೆ.

ಈಗಾಗಲೇ ಈ ಕಾಯ್ದೆಯ ಬಗ್ಗೆ ಸಂಬಂಧಪಟ್ಟ ಎಲ್ಲರಿಂದಲೂ ಸರಕಾರ ಸಲಹೆ ಪಡೆದಿದೆ. ಉಪನ್ಯಾಸಕರ ಸಂಘದಿಂದಲೂ ಸಲಹೆಗಳನ್ನು ಕೇಳಿ ಪಡೆದಿದೆ. ಈ ಮಸೂದೆಯನ್ನು ಮುಂದಿನ ಅಧಿವೇಶನದಲ್ಲೇ ಮಂಡಿಸಲಾಗುವುದು. ಬಳಿಕ ಅದಕ್ಕೆ ಬರುವ ಆಕ್ಷೇಪಗಳನ್ನು ಗಮನದಲ್ಲಿಟ್ಟುಕೊಂಡು ಕಾಯ್ದೆ ರೂಪದಲ್ಲಿ ಜಾರಿಗೆ ತರಲಾಗುವುದು ಎಂದು ಡಿಸಿಎಂ ಹೇಳಿದ್ದಾರೆ.

ಸೋಮವಾರದಿಂದ ವಿಧಾನಮಂಡಲ ಕಲಾಪ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬುಧವಾರ ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕ ಕ್ಷೇತ್ರದ ಎಲ್ಲ ಪಕ್ಷಗಳ ಸದಸ್ಯರ ಜತೆ ಮಹತ್ವದ ಮಾತುಕತೆ ನಡೆಸಿದ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಇಲಾಖೆಯಲ್ಲಿ ಕಳೆದ ಒಂದು ವರ್ಷದಿಂದ ಜಾರಿಗೆ ತಂದ  ವಿವಿಧ ಸುಧಾರಣೆಗಳ ಬಗ್ಗೆ ಮಾಹಿತಿ ನೀಡಿದರಲ್ಲದೆ, ಇಲಾಖೆಯಲ್ಲಿ ಮುಂದೆ ತರಲಿರುವ ಸುಧಾರಣೆಗಳತ್ತ ಬೆಳಕು ಚೆಲ್ಲಿದರು.

ವಿವಿಗಳಿಗೆ ಐಪಿಎಸ್, ಐಎಫ್ಎಸ್ ಅಧಿಕಾರಿಗಳು ಬೇಡ

ವಿಶ್ವವಿದ್ಯಾಲಯಗಳಲ್ಲಿನ ಆಡಳಿತಕ್ಕೆ ಮತ್ತಷ್ಟು ಚುರುಕು ನೀಡುವ ಉದ್ದೇಶದಿಂದ ಎಲ್ಲ ವಿವಿಗಳ ರಿಜಿಸ್ಟ್ರಾರ್ ಹುದ್ದೆಗಳಿಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ನೇಮಕ ಮಾಡಲು ಸುಗ್ರೀವಾಜ್ಣೆ ತರಲಾಗಿದೆ. ಅದಕ್ಕೆ ಈ ಅಧಿವೇಶನದಲ್ಲಿಯೇ ಒಪ್ಪಿಗೆ ಪಡೆಯಲಾಗುವುದು ಎಂದರು ಡಿಸಿಎಂ. ಹಾಗೆ ನೋಡಿದರೆ ವಿವಿಗಳಿಗೆ ದೊಡ್ಡ ಮಟ್ಟದ ಸರ್ಜರಿಗೇ ಸರಕಾರ ಕೈಹಾಕಿದೆ ಎಂಬುದು ಇದರಿಂದ ಗೊತ್ತಾಗುತ್ತದೆ.

ಇದಕ್ಕೆ ಪ್ರತಿಕ್ರಿಯಿಸಿದ ಪರಿಷತ್ ಸದಸ್ಯ ವೈ.ಎ.ನಾರಾಯಣ ಸ್ವಾಮಿ, ರಿಜಿಸ್ಟ್ರಾರ್ ಹುದ್ದೆಗೆ ಐಎಎಸ್ ಅಥವಾ ಕೆಎಎಸ್ ಅಧಿಕಾರಿಗಳನ್ನು ತರುವುದು ಉತ್ತಮ ಯೋಚನೆ. ಆದರೆ, ಐಪಿಎಸ್ ಮತ್ತು ಐಎಫ್ಎಸ್ ಅಧಿಕಾರಿಗಳನ್ನು ದಯವಿಟ್ಟು ನೇಮಕ ಮಾಡಬೇಡಿ. ಹಾಗೆಯೇ, ವಿವಿಗಳಲ್ಲಿ ಅಧ್ಯಾಪಕರಿಂದ ಮೊದಲಗೊಂಡು ಎಲ್ಲ ಹಂತಗಳ ನೇಮಕಾತಿಗಾಗಿ ಒಂದು ಕೇಂದ್ರೀಕೃತ ಸೆಲ್ ಮಾಡಿ. ಅದು ಬಿಟ್ಟು ವಿವಿ ಮಟ್ಟದಲ್ಲಿಯೇ ನೇಮಕಾತಿ ಮಾಡಿಕೊಳ್ಳಲು ಅವಕಾಶ ನೀಡಬೇಡಿ. ಹೀಗೆ ಮಾಡುವುದರಿಂದ ಎಲ್ಲ ವಿವಿಗಳಲ್ಲೂ ರಾಜಕಾರಣಿಗಳ ಹಸ್ತಕ್ಷೇಹ ಬಹುತೇಕ ನಿಲ್ಲುತ್ತದೆ. ಜತೆಗೆ ಬಡ್ತಿ ನೀಡುವಾಗ ಸೇವಾ ಹಿರಿತನಕ್ಕಿಂತ ಕಾರ್ಯನಿರ್ವಹಣೆಯ ದಕ್ಷತೆಯನ್ನು ಪರಿಗಣಿಸಿ ಕೊಡಬೇಕು ಹಾಗೂ ವಿವಿಗಳಲ್ಲಿ ಮೂಲಭೂತ ಸೌಕರ್ಯ, ಕಟ್ಟಡಗಳ ನಿರ್ಮಾಣದ ಕೆಲಸವನ್ನು ವಿವಿಗಳ ಆಡಳಿತದಿಂದ ಹೊರಗೆ ತರಬೇಕು ಎಂದೂ ಅವರು ಸಲಹೆ ನೀಡಿದರು. ಈ ಬಗ್ಗೆ ಗಂಭೀರ ಪರಿಶೀಲನೆ ನಡೆಸುವುದಾಗಿ ಡಿಸಿಎಂ ಭರವಸೆ ನೀಡಿದರು.

ಇದೇ ವೇಳೆ, ವಿವಿಗಳಲ್ಲಿ ಅನಗತ್ಯ ಖರೀದಿಗಳಿಗೆ ಕಡಿವಾಣ ಹಾಕಬೇಕು. ಅಗತ್ಯವಿಲ್ಲದ ಸಾಫ್ಟ್ ವೇರ್ ಖರೀದಿ, ಕಂಪ್ಯೂಟರುಗಳ ಖರೀದಿ ಇತ್ಯಾದಿಗಳ ಮೇಲೆ ತೀವ್ರ ನಿಗಾ ನಿಡಬೇಕು. ಇದರಿಂದ ವಿವಿಗಳಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ ಎಂದ ಅಂಶವನ್ನು ಕೆಲ  ಸದಸ್ಯರು ಉಪ ಮುಖ್ಯಮಂತ್ರಿಯ ಗಮನಕ್ಕೆ ತಂದರು.

ವಿಸಿ ನೇಮಕದಲ್ಲಿ ಕ್ವಾಲಿಟಿ

ಉಪ ಕುಲಪತಿ ನೇಮಕದಲ್ಲಿ ಗುಣಮಟ್ಟವನ್ನು ಗಣನೆಗೆ ತೆಗೆದುಕೊಳ್ಳಲೇಬೇಕು. ಅದಕ್ಕೆ ಉತ್ತಮವಾದ ಮಾನದಂಡವನ್ನು ರೂಪಿಸಿ. ಅದಕ್ಕೆ ಅಗತ್ಯಬಿದ್ದರೆ ತಜ್ಞರ ಸಮಿತಿಯನ್ನು ರಚಿಸಿ. ವೈಸ್‌ ಚಾನ್ಸಲರ್‌ ಆಗಲು ಅರ್ಜಿ ಹಿಡಿದುಕೊಂಡು ನಿಮ್ಮ ಮನೆ ಬಾಗಿಲಿಗೆ ಬರುವ ವ್ಯಕ್ತಿಗಳಿಗೆ ಮಣೆ ಹಾಕಬೇಡಿ ಎಂದು ಪರಿಷತ್ ಸದಸ್ಯರು ಡಿಸಿಎಂಗೆ ಸಲಹೆ ಮಾಡಿದರು.

ವಿಧಾನ ಪರಿಷತ್ ಸದಸ್ಯರಾದ ಬಸವರಾಜ್ ಹೊರಟ್ಟಿ, ಅರುಣ್ ಶಹಾಪುರ, ಅ. ದೇವೇಗೌಡ, ತಾರಾ ಅನುರಾಧ, ಹನುಮಂತ್ ನಿರಾಣಿ, ಮರಿತಿಬ್ಬೆ ಗೌಡ ಮುಂತಾದವರು ಈ ಸಭೆಯಲ್ಲಿ ಉಪಸ್ಥಿತರಿದ್ದರು.

lead photo courtesy: mysore university

Tags: dr cn ashwath narayanIASIFSkarnataka higher educationKarnataka universitiesKAS
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿ ತುಂಬಾ ಉತ್ತರ ಭಾರತೀಯರು!! ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎಂದ ಎಚ್‌ಡಿಕೆ

ಭಾರತೀಯ ಸಂಸ್ಕೃತಿ ಅಧ್ಯಯನ ಸಮಿತಿ ತುಂಬಾ ಉತ್ತರ ಭಾರತೀಯರು!! ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ ಎಂದ ಎಚ್‌ಡಿಕೆ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ