• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮೈಸೂರು ವಿವಿ ಘಟಿಕೋತ್ಸವ ಶತಮಾನೋತ್ಸವ; 29,018 ವಿದ್ಯಾರ್ಥಿಗಳಿಗೆ ಪದಕ ಪ್ರದಾನೋತ್ಸವ

cknewsnow desk by cknewsnow desk
October 20, 2020
in NATION, STATE
Reading Time: 1 min read
0
ಮೈಸೂರು ವಿವಿ ಘಟಿಕೋತ್ಸವ ಶತಮಾನೋತ್ಸವ; 29,018 ವಿದ್ಯಾರ್ಥಿಗಳಿಗೆ ಪದಕ ಪ್ರದಾನೋತ್ಸವ
920
VIEWS
FacebookTwitterWhatsuplinkedinEmail

ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವಕ್ಕೆ ಸಾಕ್ಷಿಯಾದ ಕ್ರಾಫರ್ಡ್ ಹಾಲ್.


ಮೈಸೂರು: ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರು ಸ್ಥಾಪಿಸಿದ್ದ ಐತಿಹಾಸಿಕ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವ ಸೋಮವಾರ ವರ್ಚುವಲ್ ವೇದಿಕೆಯಲ್ಲಿ ವಿವಿಯ ಕ್ರಾಫರ್ಡ್ ಭವನದಲ್ಲಿ ಅರ್ಥಪೂರ್ಣವಾಗಿ ನಡೆಯಿತು.

29,018 ವಿದ್ಯಾರ್ಥಿಗಳಿಗೆ ವಿವಿಧ ಪದವಿ ಪ್ರದಾನ ಮಾಡಲಾಗಿದೆ. ಮೈಸೂರು ವಿವಿಯಲ್ಲಿ ಪುರುಷರೇ ಮೇಲುಗೈ ಸಾಧಿಸಿದ್ದು, 18,344 (ಶೇ.63.21) ವಿದ್ಯಾರ್ಥಿಗಳು, 10,674 (ಶೇ.36.78) ವಿದ್ಯಾರ್ಥಿನಿಯರಿಗೆ ಪದವಿ ಪ್ರದಾನ ಮಾಡಲಾಯಿತು. ಅಗ್ರಿ ಬಿಸನೆಸ್ ವಿಭಾಗದಲ್ಲಿ ಮನೋಜ್ ರಂಜನ್ ಅವರಿಗೆ ಡಿಲಿಟ್ ನೀಡಿ ಗೌರವಿಸಲಾಗಿದೆ. 654 ವಿದ್ಯಾರ್ಥಿಗಳಿಗೆ ಪಿಎಚ್‍ಡಿ ಪದವಿ ಪ್ರದಾನ ಮಾಡಲಾಯಿತು. 264 ಮಹಿಳೆ, 390 ಪುರುಷರಿಗೆ ಪಿಎಚ್‍ಡಿ ಪದವಿ ಪ್ರದಾನಿಸಲಾಗಿದೆ. ಒಟ್ಟು 392 ಪದಕ, 198 ಬಹುಮಾನ ನೀಡಲಾಗಿದೆ. 7,971 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ, 20,393 ಅಭ್ಯರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗಿದೆ.

ಪದವಿ ಪ್ರದಾನ ಮಾಡಿದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ.

ಇನ್ಪೋಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾ ಮೂರ್ತಿ ಅವರ ಅನುಪಸ್ಥಿತಿಯಲ್ಲಿ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವಕ್ಕೆ ಕ್ರಾಫರ್ಡ್ ಹಾಲ್ ಸಾಕ್ಷಿಯಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆನ್ಲೈನ್ ಮೂಲಕವೇ ಘಟಿಕೋತ್ಸವ ಭಾಷಣ ಮಾಡಿದರು. ರಾಜ್ಯಪಾಲ ವಾಜುಬಾಯಿ ವಾಲಾ ಅವರು ಬೆಂಗಳೂರಿನ ರಾಜಭವನದಿಂದ ಲೈವ್ʼನಲ್ಲಿ ಪಾಲ್ಗೊಂಡಿದ್ದರು. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ, ಮೈಸೂರು ವಿವಿ ಕುಲಪತಿ ಪ್ರೊ. ಹೇಮಂತ್ ಕುಮಾರ್ ಸೇರಿ ಹಲವು ಗಣ್ಯರು ಘಟಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಧಾನಿ ಭಾಷಣವೂ ಐತಿಹಾಸಿಕ

PM Narendra Modi(Image courtesy: twitter.com/BJP4India)

ಕೋವಿಡ್‌ ಹಿನ್ನೆಲೆಯಲ್ಲಿ ದಿಲ್ಲಿಯಿಂದಲೇ ಆಲ್‌ಲೈನ್‌ ಮೂಲಕವೇ ಘಟಿಕೋತ್ಸವ ಭಾಷಣ ಮಾಡಿದ ಪ್ರಧಾನಿ ಮೋದಿ ಅವರ ಭಾಷಣವೂ ಐತಿಹಾಸಿಕ ಎನ್ನುವಷ್ಟು ವಿಶೇಷವಾಗಿತ್ತು. ಅವರು ತಮ್ಮ ಮಾತಿನುದ್ದಕ್ಕೂ ಶಿಕ್ಷಣದ ಮಹತ್ತ್ವವನ್ನು ಒತ್ತಿ ಹೇಳಿದರಲ್ಲದೆ, ಮೈಸೂರು ವಿವಿಯನ್ನು ಸ್ಥಾಪಿಸಿದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರನ್ನು ವಿಶೇಷವಾಗಿ ನೆನಪು ಮಾಡಿಕೊಂಡರು. ಅವರ ದಿವ್ಯ ದೂರದೃಷ್ಟಿಯಿಂದ ಈ ವಿಶ್ವವಿದ್ಯಾಲಯವು ದೇಶದಲ್ಲಿಯೇ ಪ್ರತಿಷ್ಟಿತ ಮತ್ತು ಶ್ರೇಷ್ಟ ವಿವಿಯಾಗಿ ರೂಪುಗೊಂಡಿದೆ. ಇದಕ್ಕೆ ಮಾನಸ ಗಂಗೋತ್ರಿ ಎಂದು ನಾಮಕರಣ ಮಾಡಿದ ಪೂರ್ವ ಕುಲಪತಿ ಕುವೆಂಪು ಅವರ ಕ್ರಮ ಅತ್ಯಂತ ಸೂಕ್ತವಾಗಿದೆ ಎಂದು ನುಡಿದರು.

ಇದಕ್ಕೂ ಮುನ್ನ ತಮ್ಮ ಮಾತಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್‌ ಅವರ ಮಾತು; “ಶಿಕ್ಷಣವೇ ಜೀವನದ ಬೆಳಕು” ಎಂಬ ವಾಕ್ಯವನ್ನು ಉದ್ಘರಿಸಿದರು. ಇದರೊಂದಿಗೆ ಮೈಸೂರು ವಿವಿಯ ಪರಂಪರೆ ಹಾಗೂ ಕನ್ನಡದ ಘನತೆಯನ್ನು ಪ್ರಧಾನಿ ಕೊಂಡಾಡಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗಗಳಲ್ಲಿ ಪದವಿಗಳನ್ನು ಸ್ವೀಕರಿಸಿದವರೆಲ್ಲರೂ ಪ್ರಧಾನಿ ಮಾತುಗಳನ್ನು ತದೇಕಚಿತ್ತದಿಂದ ಆಲಿಸಿದರು.

ಮುಖ್ಯವಾಗಿ ಅವರು ಕೆಲವು ವಾಕ್ಯಗಳನ್ನು ಕನ್ನಡದಲ್ಲಿಯೇ ಮಾತನಾಡಿದರು. “ಘಟಿಕೋತ್ಸವದ ಈ ಸ್ಮರಣೀಯ ಸಮಾರಂಭದ ಸಂದರ್ಭದಲ್ಲಿ ನಿಮಗೆಲ್ಲರಿಗೂ ಅಭಿನಂದನೆಗಳು. ಇದು ಪದವಿ ಪ್ರಮಾಣ ಪತ್ರ ಪಡೆಯುತ್ತಿರುವ ಎಲ್ಲರಿಗೂ ಶುಭಾಶಯಗಳು. ಬೋಧಕ ಸಿಬ್ಬಂದಿಗೂ ಶುಭಾಶಯಗಳನ್ನು ಕೋರುತ್ತೇನೆ” ಎಂದು ಹೇಳಿದಾಗ ಕ್ರಾಫರ್ಡ್‌ ಹಾಲ್‌ಗೆ ಮತ್ತಷ್ಟು ಮೆರುಗು ಬಂದಿತೆನ್ನಬಹುದು.

ಜಾಗತಿಕವಾಗಿ ಸ್ಪರ್ಧಿಸಲು ನಮ್ಮ ದೇಶದ ಯುವಕರನ್ನು ಸಜ್ಜುಗೊಳಿಸಬೇಕಾಗಿದೆ ಎಂದ ಪ್ರಧಾನಿ, ಈ ನಿಟ್ಟಿನಲ್ಲಿ ಕಳೆದ ಐದು ವರ್ಷಗಳಿಂದ ಶಿಕ್ಷಣ ನೀತಿಯಲ್ಲಿ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಜಾಗತಿಕ ಅವಶ್ಯಕತೆಗೆ ತಕ್ಕಂತೆ ನಮ್ಮ ದೇಶದ ಶಿಕ್ಷಣ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆಯನ್ನು ಮಾಡಲಾಗುತ್ತಿದೆ. ಈಗ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೊಳಿಸಲಾಗುತ್ತಿದ್ದು, ಆ ಮೂಲಕ ದೇಶದ ಯುವಕರಿಗೆ ಜಾಗತಿಕ ಮಟ್ಟದ ಉನ್ನತ ಗುಣಮಟ್ಟದ ಶಿಕ್ಷಣವನ್ನು ನೀಡಲಾಗುತ್ತಿದೆ ಎಂದರು.

ಎಲ್ಲರಿಗೂ ಮೈಸೂರು ದಸರಾ, ನಾಡಹಬ್ಬದ ಹೃದಯಪೂರ್ವಕ ಶುಭಾಶಯ ಕೋರಿದ ಪ್ರಧಾನಿ, ಕೋವಿಡ್ 19ಗೆ ಸಂಬಂಧಿಸಿದ ನಿರ್ಬಂಧಗಳಿರಬಹುದು; ಆದರೆ, ಸಂಭ್ರಮದ ಉತ್ಸಾಹಕ್ಕೇನೂ ಕೊರತೆ ಇಲ್ಲ ಎಂದು ಅವರು ಹೇಳಿದರು.

Tags: centenary convocation ceremonynarendra modiuniversity of mysore
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮೈಸೂರು ವಿವಿ ಘಟಿಕೋತ್ಸವ ಶತಮಾನೋತ್ಸವ; 29,018 ವಿದ್ಯಾರ್ಥಿಗಳಿಗೆ ಪದಕ ಪ್ರದಾನೋತ್ಸವ

ಶಿಕ್ಷಣದಲ್ಲಿ ಮೂಲಭೂತ ಬದಲಾವಣೆ ಉದ್ದೇಶವೇ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಎಂದ ಪಿಎಂ

Leave a Reply Cancel reply

Your email address will not be published. Required fields are marked *

Recommended

ಹೋಸಪೇಟೆ ವಕೀಲರೊಬ್ಬರ ಕೋಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ; ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೆ ಆಗ್ರಹ

ಹೋಸಪೇಟೆ ವಕೀಲರೊಬ್ಬರ ಕೋಲೆ ಖಂಡಿಸಿ ನ್ಯಾಯಾಲಯ ಕಲಾಪ ಬಹಿಷ್ಕಾರ; ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೆ ಆಗ್ರಹ

5 years ago
ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಗೆ ಡಿಸಿಎಂ ಪೂಜೆ

ಕೆಂಪಾಪುರದಲ್ಲಿರುವ ನಾಡಪ್ರಭು ಕೆಂಪೇಗೌಡರ ವೀರ ಸಮಾಧಿಗೆ ಡಿಸಿಎಂ ಪೂಜೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ