• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕನಸುಗಾರ ಕನ್ನಡಿಗ ಮತ್ತು ಕಿಟ್ಟೆಲ್ ; ಸ್ಯಾಂಡಲ್‌ವುಡ್‌ನಲ್ಲಿ ಕೋವಿಡ್‌ ನಂತರ ಹೊಸ ಕನವರಿಕೆ

cknewsnow desk by cknewsnow desk
October 28, 2020
in STATE
Reading Time: 1 min read
0
ಕನಸುಗಾರ ಕನ್ನಡಿಗ ಮತ್ತು ಕಿಟ್ಟೆಲ್  ; ಸ್ಯಾಂಡಲ್‌ವುಡ್‌ನಲ್ಲಿ ಕೋವಿಡ್‌ ನಂತರ ಹೊಸ ಕನವರಿಕೆ
918
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್ ಸಮಸ್ಯೆ ಚಿತ್ರರಂಗದ ಮೇಲೆ ಗಾಢ ಕಗ್ಗತ್ತಲನ್ನೇ ಆವರಿಸುವಂತೆ ಮಾಡಿದೆ. ಮುಂದೇನಾಗುತ್ತದೆ? ದೊಡ್ಡ ನಟರ ಸಿನಿಮಾಗಳು ಸೆಟ್ಟೇರುತ್ತವಾ? ವೃತ್ತಿಪರ ನಿರ್ಮಾಪಕರು ಮತ್ತೆ ಚಿತ್ರನಿರ್ಮಾಣಕ್ಕೆ ಮುಂದಾಗುತ್ತಾರಾ? ಎನ್ನುವ ಪ್ರಶ್ನೆಗಳೆಲ್ಲ ಉದ್ಭವಿಸಿದ್ದವು. ಇಂಥ ಪ್ರಶ್ನೆಗಳಿಗೆಲ್ಲಾ ಉತ್ತರವೆನ್ನುವಂತೆ ಸ್ಯಾಂಡಲ್‌ವುಡ್‌ಗೆ ಖುಷಿ ಕೊಡುವ ಸುದ್ದಿಯೊಂದು ಹೊರಬಿದ್ದಿದೆ.

ಓಂಕಾರ್ ಮೂವೀಸ್ ಲಾಂಛನದಲ್ಲಿ ಎನ್.ಎಸ್.ರಾಜ್ʼಕುಮಾರ್ ನಿರ್ಮಾಣದ, ಜಟ್ಟ, ಮೈತ್ರಿ, ಅಮರಾವತಿಯಂತಹ ಸದಭಿರುಚಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ ಬಿ.ಎಂ.ಗಿರಿರಾಜ್ ನಿರ್ದೇಶನದಲ್ಲಿ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅಭಿನಯದ, ಐತಿಹಾಸಿಕ ಕಥಾಹಂದರದ ʻಕನ್ನಡಿಗʼ ಚಿತ್ರ ಆರಂಭಗೊಂಡಿದೆ. ಹಿರಿಯ ನಟ ಡಾ.ಶಿವರಾಜ್ ಕುಮಾರ್ ಆರಂಭ ಫಲಕ ತೋರಿಸಿದ್ದು, ರಾಘವೇಂದ್ರ ರಾಜ್ʼಕುಮಾರ್ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಿದ್ದಾರೆ.

ವಿಶೇಷ ಪಾತ್ರದಲ್ಲಿ ಸುಮಲತಾ

ಸಾಮಾನ್ಯವಾಗಿ ಆಳ್ವಿಕೆ ನಡೆಸಿದ ರಾಜ-ರಾಣಿಯರ ಕಥೆಗಳು ಎಲ್ಲೆಡೆ ದಾಖಲಾಗಿರುತ್ತವೆ. ಆದರೆ ಸಾಮಾನ್ಯ ಪ್ರಜೆಗಳ ಕೊಡುಗೆಗಳು ನೆನಪಿಗೇ ಬರುವುದಿಲ್ಲ. ಈ ನಾಡಿನ ಇತಿಹಾಸವನ್ನು ದಾಖಲಿಸುವಲ್ಲಿ ಲಿಪಿಕಾರರ ಕೊಡುಗೆ ಅಪಾರ. 1858ರ ನಂತರದ ಕಾಲಘಟ್ಟವನ್ನು ʻಕನ್ನಡಿಗʼನೊಂದಿಗೆ ಮರುಸೃಷ್ಟಿಸಲಾಗುತ್ತಿದೆ. ಈ ಸಿನಿಮಾದಲ್ಲಿ ರವಿಚಂದ್ರನ್ ಲಿಪಿಕಾರ ಗುಣಭದ್ರನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಯಕಿಯಾಗಿ ಪಾವನಾ ನಟಿಸುತ್ತಿದ್ದಾರೆ. ಸಂಕಮ್ಮಬ್ಬೆಯಾಗಿ ಸ್ವಾತಿ ಚಂದ್ರಶೇಖರ್, ನಿಘಂಟು ತಜ್ಞ ಫರ್ಡಿನಾಂಡ್‌ ಕಿಟ್ಟೆಲ್ ಪಾತ್ರಕ್ಕೆ ಜೆಮಿ ವಾಲ್ಟರ್ ಅವರನ್ನು ಕರೆ ತರಲಾಗುತ್ತಿದೆ. ಕಮರೀಲ ಭಟ್ಟನಾಗಿ ಚಿ.ಗುರುದತ್, ಮಲ್ಲಿನಾಥನಾಗಿ ಬಾಲಾಜಿ ಮನೋಹರ್, ಮಠದ ಸ್ವಾಮಿಯ ಪಾತ್ರದಲ್ಲಿ ದತ್ತಣ್ಣ ಮತ್ತು ಅಚ್ಯುತ್ ಕುಮಾರ್ ಹರಿಗೋಪಾಲನ ಪಾತ್ರ ನಿರ್ವಹಿಸುತ್ತಿದ್ದಾರೆ. ರಾಣಿ ಚಿನ್ನಬೈರಾದೇವಿ ಎನ್ನುವ ಪ್ರಮುಖ ಪಾತ್ರದಲ್ಲಿ ನಟಿ ಹಾಗೂ ಸಂಸದೆ ಸುಮಲತಾ ಅಂಬರೀಶ್ ಕಾಣಿಸಿಕೊಳ್ಳಲಿದ್ದಾರೆ.

  • ಸುಮಲತಾ ಅಂಬರೀಶ್

“ಈ ಸಿನಿಮಾದ ಕಥೆ, ಚಿತ್ರತಂಡ ಎಲ್ಲವೂ ನನಗೆ ಹೊಸದು. ಕಥೆಯ ಲೈನ್‌ ತುಂಬಾ ಇಷ್ಟವಾಯಿತು. ಪ್ರತೀ ಸಿನಿಮಾ ಕೂಡ ನನಗೆ ಹೊಸದೇ. ಕನ್ನಡಿಗನಾಗಿ ಕಾಣಿಸಿಕೊಳ್ಳುತ್ತಿರುವುದು ನನಗೆ ನಿಜಕ್ಕೂ ಸವಾಲು” ಎಂದು ರವಿಚಂದ್ರನ್ ತಿಳಿಸಿದ್ದಾರೆ.

“ಈ ಚಿತ್ರದಲ್ಲಿ ಗಟ್ಟಿಗಿತ್ತಿಯ ಪಾತ್ರದಲ್ಲಿ ನಟಿಸುತ್ತಿದ್ದೇನೆ. ಗಿರಿರಾಜ್ ಅವರ ಈ ಹಿಂದಿನ ಸಿನಿಮಾಗಳಲ್ಲೂ ನಟಿಸಿದ್ದೇನೆ. ನನಗಾಗಿ ಈ ಚಿತ್ರದಲ್ಲೂ ಪಾತ್ರ ಸೃಷ್ಟಿಸಿರುವುದು ಸಂತಸ ತಂದಿದೆ” ಎಂದು ಪಾವನಾ ಹೇಳಿದ್ದಾರೆ.

“ಕನ್ನಡ ಮಾತ್ರವಲ್ಲ, ಸಿನಿಮಾ ಪ್ರಪಂಚದ ಅದ್ಭುತ ತಂತ್ರಜ್ಞ ರವಿ ಚಂದ್ರನ್. ಕನ್ನಡಿಗ ಸಿನಿಮಾದ ಮೂಲಕ ಮೊದಲ ಬಾರಿಗೆ ಅವರೊಂದಿಗೆ ಬಣ್ಣ ಹಚ್ಚುತ್ತಿದ್ದೇನೆ. ಅವರ ತಮ್ಮನ ಪಾತ್ರ ನನಗೆ ದಕ್ಕಿರುವುದು ನನ್ನ ಪಾಲಿನ ಹೆಮ್ಮೆ” ಎಂದು ನಟ ಬಾಲಾಜಿ ಮನೋಹರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನೂರೈವತ್ತು ವರ್ಷಕ್ಕೂ ಹಿಂದಿನ ಕಥೆ ʻಕನ್ನಡಿಗʼನದ್ದಾಗಿದ್ದು, ಪಾತ್ರಗಳ ಜೊತೆಗೆ ಅಂದಿನ ಪರಿಸರ, ಕಟ್ಟಡಗಳನ್ನು ಮರುಸೃಷ್ಟಿ ಮಾಡುವುದು ನಿಜಕ್ಕೂ ಸವಾಲಿನ ಸಂಗತಿಯಾಗಿದೆ. ಈ ನಿಟ್ಟಿನಲ್ಲಿ, ಕಲಾ ನಿರ್ದೇಶಕ ಹೊಸ್ಮನೆ ಮೂರ್ತಿ ಮತ್ತು ಚಿತ್ರತಂಡ ಸಾಕಷ್ಟು ಜನ ಇತಿಹಾಸಕಾರರನ್ನು ಸಂಪರ್ಕಿಸಿ, ಹಲವಾರು ಕೃತಿಗಳನ್ನು ಪರಾಮರ್ಶಿಸಿ ಸೆಟ್ʼಗಳನ್ನು ರೂಪಿಸುತ್ತಿದ್ದಾರೆ. ಸಾಗರ, ಚಿಕ್ಕಮಗಳೂರಿನ ಸುತ್ತಮುತ್ತಲಿನ ಕೆಲವು ಪ್ರದೇಶಗಳನ್ನು ಹಾಗೆಯೇ ಬಳಸಿಕೊಳ್ಳಲಾಗುತ್ತಿದೆ. ನವೆಂಬರ್ ತಿಂಗಳಲ್ಲಿ ಮೂವತ್ತು ದಿನಗಳ ಕಾಲ ಮೊದಲ ಹಂತದ ಚಿತ್ರೀಕರಣ ನಡೆಸಿ, ಬಹುತೇಕ ದೃಶ್ಯಗಳನ್ನು ಚಿತ್ರೀಕರಿಸಿಕೊಳ್ಳುವುದು ಚಿತ್ರತಂಡದ ಸದ್ಯದ ಯೋಜನೆ. ಜಿ.ಎಸ್.ವಿ ಸೀತಾರಾಮ್ ಛಾಯಾಗ್ರಹಣ, ರವಿ ಬಸ್ರೂರ್ ಸಂಗೀತ, ಅರ್ಜುನ್ ಕಿಟ್ಟು ಸಂಕಲನ, ಹೊಸ್ಮನೆ ಮೂರ್ತಿ ಅವರ ಕಲಾ ನಿರ್ದೇಶನ ʻಕನ್ನಡಿಗʼ ಚಿತ್ರಕ್ಕಿದೆ.

ರವಿಚಂದ್ರನ್‌ ಕನ್ನಡಿಗನಾಗಿದ್ದು ಹೇಗೆ?

ನಾಯಕನ ಪಾತ್ರಕ್ಕೆ ಯಾರನ್ನು ಆಯ್ಕೆ ಮಾಡಿಕೊಳ್ಳುವುದು? ಅಪಾರ ಘನತೆ ಹೊಂದಿರುವ ಈ ಪಾತ್ರಕ್ಕೆ ಅಷ್ಟೇ ಪ್ರಮುಖ ಕಲಾವಿದನೇ ಬೇಕು ಎಂದು ಆಲೋಚಿಸುತ್ತಿದ್ದಾಗ ನಿರ್ದೇಶಕ ಗಿರಿರಾಜ್ʼಗೆ ನೆನಪಾಗಿದ್ದೇ ರವಿಚಂದ್ರನ್. ರವಿಚಂದ್ರನ್ ಅವರು ಈ ಪಾತ್ರಕ್ಕೆ ಹೇಳಿಮಾಡಿಸಿದ ವ್ಯಕ್ತಿ. ಆದರೆ ಈ ಪಾತ್ರವನ್ನು ಅವರು ಒಪ್ಪುತ್ತಾರಾ? ಎಂಬ ಅನುಮಾನವಿತ್ತು. ಒಂದು ಬಾರಿ ಕೇಳಿಬಿಡೋಣ ಎಂದು ರವಿಚಂದ್ರನ್ ಅವರನ್ನು ಚಿತ್ರತಂಡ ಸಂಪರ್ಕಿಸಿತ್ತು. ಪೂರ್ತಿ ಕಥೆ ಕೇಳಿದ ರವಿಚಂದ್ರನ್ ಅವರು ಸಿನಿಮಾದಲ್ಲಿ ನಟಿಸಲು ನನ್ನ ಅಭ್ಯಂತರವಿಲ್ಲ. ಆದರೆ ಇದು ಸಂಪೂರ್ಣ ಬೇರೆಯದ್ದೇ ಕಥೆಯಾದ್ದರಿಂದ ಮೇಕಿಂಗ್ ಇತ್ಯಾದಿಗಳನ್ನೆಲ್ಲಾ ನೀವೇ ನಿಭಾಯಿಸಿಕೊಳ್ಳಬೇಕು. ನಟಿಸೋದು ಮಾತ್ರ ನನ್ನ ಜವಾಬ್ದಾರಿ ಎಂದು ಹೇಳಿದ್ದರು. ಆ ಮೂಲಕ ʻಕನ್ನಡಿಗʼನ ಪಾತ್ರಕ್ಕೆ ರವಿಚಂದ್ರನ್‌ ಆಗಮನವಾಯಿತು ಎಂದಿದೆ ಚಿತ್ರತಂಡ.

30 ವರ್ಷಗಳ ಹಿಂದೆ ನೊಂದಾಯಿಸಿದ್ದ ಶೀರ್ಷಿಕೆ!

ರವಿಚಂದ್ರನ್ ಕನ್ನಡ ಚಿತ್ರರಂಗದ ಅಪ್ರತಿಮ ಕನಸುಗಾರ. ದಶಕಗಳು ಉರುಳಿದರೂ ಅವರ ಕಲ್ಪನೆ ಮಾಸುವುದಿಲ್ಲ ಅನ್ನೋದಕ್ಕೆ ಇದೂ ಒಂದು ನಿದರ್ಶನ. ಬರೋಬ್ಬರಿ ಮೂವತ್ತು ವರ್ಷಗಳ ಹಿಂದೆ ರವಿಚಂದ್ರನ್ ಅವರು ʻಕನ್ನಡಿಗʼ ಹೆಸರಿನ ಶೀರ್ಷಿಕೆಯನ್ನು ರಿಜಿಸ್ಟರ್ ಮಾಡಿಸಿಟ್ಟಿದ್ದರು. ಅದಾಗಿ ಇಪ್ಪತ್ತು ವರ್ಷಗಳು ಕಳೆದ ನಂತರ ಇದೇ ಎನ್.ಎಸ್. ರಾಜ್ʼಕುಮಾರ್ ಅವರು ರವಿಚಂದ್ರನ್ ಅವರ ಬಳಿ ಹೋಗಿ ʻಕನ್ನಡಿಗʼ ಶೀರ್ಷಿಕೆಯನ್ನು ನನ್ನ ಸಂಸ್ಥೆಗೆ ಬಿಟ್ಟುಕೊಡಿ, ನಾನೊಂದು ಸಿನಿಮಾ ಮಾಡಬೇಕು ಎಂದು ವಿನಂತಿಸಿದ್ದರು. ಆದರೆ, ರವಿಚಂದ್ರನ್ ʻಕನ್ನಡಿಗ ಎನ್ನುವ ಹೆಸರನ್ನು ಬಹಳ ವರ್ಷಗಳಿಂದಲೂ ಕಾಪಾಡಿಕೊಂಡು ಬಂದಿದ್ದೇನೆ. ಆ ಟೈಟಲ್ಲಿನ ಸಿನಿಮಾದಲ್ಲಿ ನಾನೇ ನಟಿಸಬೇಕು. ಕೊಡಲು ಸಾಧ್ಯವಿಲ್ಲʼ ಎಂದು ಖಡಾಖಂಡಿತವಾಗಿ ಹೇಳಿಬಿಟ್ಟಿದ್ದರು. ಬೇಸರಿಸಿಕೊಳ್ಳದ ರಾಜ್ ಕುಮಾರ್ ʻವೀರಕನ್ನಡಿಗʼ ಹೆಸರಿನಲ್ಲಿ ಚಿತ್ರ ನಿರ್ಮಾಣ ಮಾಡಿದ್ದರು. ಈಗ ಇದೇ ಎನ್.ಎಸ್. ರಾಜ್ ಕುಮಾರ್ ಅವರ ನಿರ್ಮಾಣದಲ್ಲಿ, ರವಿಚಂದ್ರನ್ ಅವರೇ ನಟಿಸುತ್ತಿರುವ ʻಕನ್ನಡಿಗʼ ಚಿತ್ರ ಸೆಟ್ಟೇರಿದೆ.

Tags: crezystarkannada cinemakannadigaravichandran
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಹ್ಯೂಮನ್‌ ಎಕ್ಸ್‌ಲೆನ್ಸ್‌ ವಿವಿಯಲ್ಲಿ  ವೇದಗಳ ಪದವಿ ಅಧ್ಯಯನಕ್ಕೆ ಚಾಲನೆ

ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಹ್ಯೂಮನ್‌ ಎಕ್ಸ್‌ಲೆನ್ಸ್‌ ವಿವಿಯಲ್ಲಿ ವೇದಗಳ ಪದವಿ ಅಧ್ಯಯನಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

Recommended

ಕೊರೊನಾ ಗೆದ್ದು ಬಂದ ಮೈಸೂರು ಜಿಲ್ಲಾಸ್ಪತ್ರೆ ವೈದ್ಯೆ ಡಾ.ತ್ರಿವೇಣಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ; ಸರಕಾರ  ವಾರಿಯರ್‌ಗಳ ಜತೆ ಇರುತ್ತದೆ ಎಂದ BSY

ಕೊರೊನಾ ಗೆದ್ದು ಬಂದ ಮೈಸೂರು ಜಿಲ್ಲಾಸ್ಪತ್ರೆ ವೈದ್ಯೆ ಡಾ.ತ್ರಿವೇಣಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿ; ಸರಕಾರ ವಾರಿಯರ್‌ಗಳ ಜತೆ ಇರುತ್ತದೆ ಎಂದ BSY

5 years ago
ಮರಳು ಗಣಿಗಾರಿಕೆ; ಪಂಚಾಯಿತಿಗೆ ಅಧಿಕಾರ

ಮರಳು ನೀತಿ ಜಾರಿ; ಶ್ರೇಣಿ ಆಧರಿಸಿ ದರ ನಿಗದಿ

1 year ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ