• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಹ್ಯೂಮನ್‌ ಎಕ್ಸ್‌ಲೆನ್ಸ್‌ ವಿವಿಯಲ್ಲಿ ವೇದಗಳ ಪದವಿ ಅಧ್ಯಯನಕ್ಕೆ ಚಾಲನೆ

cknewsnow desk by cknewsnow desk
October 26, 2020
in CHIKKABALLAPUR, STATE
Reading Time: 1 min read
0
ಮುದ್ದೇನಹಳ್ಳಿಯ ಶ್ರೀ ಸತ್ಯಸಾಯಿ ಹ್ಯೂಮನ್‌ ಎಕ್ಸ್‌ಲೆನ್ಸ್‌ ವಿವಿಯಲ್ಲಿ  ವೇದಗಳ ಪದವಿ ಅಧ್ಯಯನಕ್ಕೆ ಚಾಲನೆ
938
VIEWS
FacebookTwitterWhatsuplinkedinEmail

ಸರ್ವ ಸಮಸ್ಯೆ, ಜಿಜ್ಞಾಸೆಗಳಿಗೆ ವೇದಗಳಲ್ಲೇ ಉತ್ತರವಿದೆ: ಡಿಸಿಎಂ

ಸತ್ಯಸಾಯಿ ಗ್ರಾಮ (ಮುದ್ದೇನಹಳ್ಳಿ): ಆಧುನಿಕ ಸಮಾಜದ ಎಲ್ಲ ಜಿಜ್ಞಾಸೆಗಳಿಗೆ, ಪ್ರಶ್ನೆಗಳಿಗೆ ವೇದಗಳಲ್ಲಿ ಸ್ಪಷ್ಟ ಉತ್ತರವಿದೆ ಮತ್ತು ಪರಿಹಾರವೂ ಇದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ಚಿಕ್ಕಬಳ್ಳಾಪುರ ಜಿಲ್ಲೆ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಸೋಮವಾರ ಶ್ರೀ ಸತ್ಯಸಾಯಿ ಹ್ಯೂಮನ್‌ ಎಕ್ಸ್‌ಲೆನ್ಸ್‌ ವಿಶ್ವವಿದ್ಯಾಲಯದಲ್ಲಿ ವೇದಗಳ ಅಧ್ಯಯನದ ಪದವಿ ವಿಭಾಗಕ್ಕೆ ಚಾಲನೆ ನೀಡಿ ಮಾತನಾಡಿದ ಅವರು; ನಮ್ಮ ಬೆಳವಣಿಗೆಯ ಮೂಲ, ನಮ್ಮ ಉನ್ನತಿಯ ಮೂಲ ವೇದಗಳಲ್ಲಿಯೇ ಅಡಗಿದೆ. ಆದರೆ, ನಾವೆಲ್ಲರೂ ಇಂದು ಪಾಶ್ಚಿಮಾತ್ಯ ಶಿಕ್ಷಣ ಪದ್ಧತಿಯೇ ಶ್ರೇಷ್ಠವೆಂಬ ಭ್ರಮಾಲೋಕದಲ್ಲಿದ್ದೇವೆ. ವೇದಗಳು ನಮ್ಮವು. ಮನುಕುಲದ ಸರ್ವಾಂಗೀಣ ಶ್ರೇಯೋವೃದ್ಧಿಗೆ ನಮ್ಮ ಪೂರ್ವಜರು ಬಿಟ್ಟುಹೋಗಿರುವ ಅನರ್ಘ್ಯ ಸಂಪತ್ತು ಇದಾಗಿದೆ ಎಂದು ನುಡಿದರು.

ವೇದಗಳನ್ನು ಧರ್ಮದ ಆಧಾರದಲ್ಲಿ ನೋಡಬಾರದು. ವೇದಗಳೆಂದರೆ ನಮ್ಮ ನೈಜ ಮೂಲ. ಇವತ್ತಿಗೂ ಇಡೀ ಜಗತ್ತು ವೇದಗಳತ್ತಲೇ ನಿಬ್ಬೆರಗಾಗಿ ನೋಡುತ್ತಿದೆ. ಆದರೆ, ಈ ಪರಮಜ್ಞಾನ ಸಂಪತ್ತಿನ ನೈಜ ವಾರಸುದಾರರಾದ ನಾವು ಅರಿವಿನ ಕೊರತೆಯಿಂದ ಅನಗತ್ಯವಾದುದನ್ನು ನೆಚ್ಚಿಕೊಂಡಿದ್ದೇವೆ. ಇನ್ನು ಮುಂದೆಯಾದರೂ ವೇದಗಳ ಬಗ್ಗೆ ದೊಡ್ಡ ಪ್ರಮಾಣದಲ್ಲಿ ಅಧ್ಯಯನ ನಡೆಯಬೇಕು. ಈ ನಿಟ್ಟಿನಲ್ಲಿ ಸತ್ಯಸಾಯಿ ಶಿಕ್ಷಣ ಸಂಸ್ಥೆಗಳು ದೇಶಕ್ಕೆ, ಸಮಾಜಕ್ಕೆ ಸಾಟಿ ಇಲ್ಲದ ಕೊಡುಗೆ ನೀಡುತ್ತಿವೆ ಎಂದರು ಉಪ ಮುಖ್ಯಮಂತ್ರಿ.

ಭಯದಿಂದ ಆಚೆ ಬನ್ನಿ

ನಮ್ಮಲ್ಲಿ ಒಂದು ನಕಾರಾತ್ಮಕ ಗುಣವಿದೆ. ಅದೇನೆಂದರೆ; ಸದಾ ಭಯದಲ್ಲೇ ಬದುಕುವುದು. ಹಾಗೆ ಆಗಬಾರದು. ಒಮ್ಮೆ ಭಯದಿಂದ ಹೊರಬಂದು ಜಗತ್ತನ್ನು ನೋಡಿದರೆ ಅನೇಕ ಅವಕಾಶಗಳು ನಮಗೆ ಕಾಣುತ್ತವೆ. ವೇದಗಳಲ್ಲಿ ಹೀಗೆ ನಮಗೆ ಜ್ಞಾನೋದಯ ಮಾಡಿಸುವಂಥ ಹಾಗೂ ಬದುಕಿಗೆ ಹೊಸ ದಾರಿ ತೋರುವಂಥ ಅನೇಕ ಅಂಶಗಳಿವೆ. ಸರ್ವ ಸಮಸ್ಯೆಗಳಿಗೂ ವೇದಗಳಲ್ಲೇ ಪರಿಹಾರವಿದೆ ಎಂದು ಡಾ.ಅಶ್ವತ್ಥನಾರಾಯಣ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಓದುವುದಷ್ಟೇ ಮುಖ್ಯವಲ್ಲ

ಸಾಮಾನ್ಯವಾಗಿ ಬಹುತೇಕ ಪೋಷಕರು, ವಿದ್ಯಾರ್ಥಿಗಳು ಸಂಪಾದನೆಯತ್ತ ಗಮನ ಹರಿಸುತ್ತಾರೆ. ಆ ನಿಟ್ಟಿನಲ್ಲಿ ತೀರಾ ಮೆಟಿರಿಯಲಿಸ್ಟಿಕ್‌ ಆಗಿಬಿಡುತ್ತಾರೆ. ಹಾಗೆ ಓದಿಕೊಂಡೇ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಿಗೆ ಹೋಗುತ್ತಾರೆ. ಆದರೆ, ನಿಜವಾಗಿ ತಮಗೇನು ಬೇಕು ಎಂಬುದನ್ನು ಅವರು ಮರೆತುಬಿಡುತ್ತಾರೆ. ಕೊನೆಹಂತಕ್ಕೆ ಬಂದಾಗ ಎಲ್ಲವನ್ನೂ ಕಳೆದುಕೊಂಡು ನೆಮ್ಮದಿಗಾಗಿ ಹಪಾಹಪಿಸುತ್ತಾರೆ. ವೇದಗಳು ಇಂಥ ಸ್ಥಿತಿಯಿಂದ ನಮ್ಮನ್ನು ಪಾರು ಮಾಡುತ್ತವೆ ಎಂಬುದು ನನ್ನ ಬಲವಾದ ನಂಬಿಕೆ ಎಂದು ಡಿಸಿಎಂ ಹೇಳಿದರು.

ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಪರಿಹಾರ

ನಮ್ಮ ಶೈಕ್ಷಣಿಕ ವ್ಯವಸ್ಥೆ ಎದುರಿಸುತ್ತಿರುವ ಅನೇಕ ಮೂಲಭೂತ ಸಮಸ್ಯೆಗಳನ್ನು ಇಡಿಯಾಗಿ ಪರಿಹರಿಸಿ ಕಲಿಕೆ ಮತ್ತು ಬೋಧನೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶವಿಲ್ಲದೆ; ಗುಣಮಟ್ಟಕ್ಕೆ ಅಗ್ರಆದ್ಯತೆ ನೀಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರೂಪಿಸಿದೆ. ನಾನು ಮೇಲೆ ಹೇಳಿದ ಎಲ್ಲ ಸಮಸ್ಯೆಗಳಿಗೂ ಈ ನೀತಿಯಲ್ಲೇ ಪರಿಹಾರ ಅಡಗಿದೆ. ಸಮಾಜಕ್ಕೆ ಅಗತ್ಯವಾದ ಶಿಕ್ಷಣ ಇನ್ನು ಮುಂದೆ ದೊರೆಯಲಿದೆ. ಓರ್ವ ವಿದ್ಯಾರ್ಥಿಗೆ ಕಲಿಕೆಯ ಸ್ವಾತಂತ್ರ್ಯ ಸಿಗುತ್ತದೆ ಮಾತ್ರವಲ್ಲ, ವಿವಿಗಳಲ್ಲಿ ಬಹುವಿಷಯಗಳ ಬೋಧನೆಯೂ ಆಗಲಿದೆ. ಭಾರತವು ವಿಶ್ವಗುರುವಾಗುವತ್ತ ಪಯಣ ಆರಂಭವಾಗಿದೆ ಎಂದು ಉಪ ಮುಖ್ಯಮಂತ್ರಿ ನುಡಿದರು.

ಸತ್ಯಸಾಯಿ ಗ್ರಾಮದ ಶ್ರೀ ಮಧುಸೂದನ ಸಾಯಿ, ವಿವಿಯ ಕುಲಪತಿ ನರಸಿಂಹಮೂರ್ತಿ, ಉಪ ಕುಲಪತಿ ಡಾ.ಶ್ರೀನಿವಾಸ್‌, ವೇದಗುರುಗಳಾದ ಸುಬ್ರಹ್ಮಣ್ಯ ಶಾಸ್ತ್ರಿ ಮುಂತಾದವರು ವೇದಿಕೆಯ ಮೇಲೆ ಉಪಸ್ಥಿತರಿದ್ದರು. ಜತೆಗೆ, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಜರಿದ್ದರು.

Tags: chikkaballapurMuddenahallisri satya sai university of human excellence
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ಹೆಚ್‌.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಕುಂ ವೀರಭದ್ರಪ್ಪ ಸೇರಿ 61 ಜನರಿಗೆ ಜೇವ ಬೆದರಿಕೆ

4 years ago
ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

ನಿಗಮ-ಮಂಡಳಿ: ಬಾಗೇಪಲ್ಲಿ ಶಾಸಕ ಎಸ್.‌ಎನ್.‌ಸುಬ್ಬಾರೆಡ್ಡಿಗೆ ಆಯಕಟ್ಟಿನ ಜಾಗ; ಪ್ರದೀಪ್‌ ಈಶ್ವರ್‌ʼಗೆ ಪಕ್ಷದಲ್ಲಿ ಭರ್ಜರಿ ಚಾನ್ಸ್

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ