• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಆಪದ್ಭಾಂದವನಂತೆ ಬಂದ ದರ್ಶನ್; ರಾಜರಾಜೇಶ್ವರಿ ನಗರದಲ್ಲಿ ಬದಲಾಗುತ್ತಾ ಲೆಕ್ಕಾಚಾರ

cknewsnow desk by cknewsnow desk
October 30, 2020
in STATE
Reading Time: 1 min read
0
ಆಪದ್ಭಾಂದವನಂತೆ ಬಂದ ದರ್ಶನ್; ರಾಜರಾಜೇಶ್ವರಿ ನಗರದಲ್ಲಿ ಬದಲಾಗುತ್ತಾ ಲೆಕ್ಕಾಚಾರ
914
VIEWS
FacebookTwitterWhatsuplinkedinEmail
lead photo: Jagdish R Chandra@JagdishRChandra

ಬೆಂಗಳೂರು: ಕಳೆದ ಹಲವು ಚುನಾವಣೆಗಳಲಿ ರಾಜ್ಯದ ವಿವಿಧೆಡೆ ಸ್ಯಾಡಲ್‌ವುಡ್‌ ತಾರೆಯರನ್ನು ಪ್ರಚಾರಕ್ಕೆ ಬಳಸಿಕೊಂಡಿದ್ದ ಬಿಜೆಪಿ, ಈ ಉಪ ಚುನಾವಣೆಯಲ್ಲಿ ಮಾತ್ರ ಡ್ರಗ್ಸ್‌ ಕೇಸ್‌ ಹಿನ್ನೆಲೆಯಲ್ಲಿ ಅವರಿಂದ ದೂರವೇ ಉಳಿದಿತ್ತು. ಹೀಗಾಗಿ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ಕೆಲ ನಟ ನಟಿಯರನ್ನು ಹೊರತುಪಡಿಸಿರೆ, ಬೇರೆಯವರನ್ನು ಪ್ರಚಾರಕ್ಕೆ ಕರೆತಂದಿರಲಿಲ್ಲ.

ಆದರೆ; ರಾಜರಾಜೇಶ್ವರಿ ನಗರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರ ಜತೆಗಿನ ವೈಯಕ್ತಿಕ ಗೆಳೆತನದ ಕಾರಣಕ್ಕೆ ಸ್ಟಾರ್‌ನಟ ದರ್ಶನ್‌ ತೂಗುದೀಪ ಅವರು ಶುಕ್ರವಾರ ಕ್ಷೇತ್ರದ ಕೆಲ ಭಾಗಗಳಲ್ಲಿ ರೋಡ್‌ ಶೋ ನಡೆಸಿ ಪ್ರಚಾರ ನಡೆಸಿದರು.

ಆಪರೇಷನ್‌ ಕಮಲಕ್ಕೆ ಸಿಕ್ಕಿ ಬಿಜೆಪಿ ಸೇರಿದ್ದ ಮುನಿರತ್ನಗೆ ಈ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲೇಬೇಕು ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳೆರಡೂ ಶತಾಯಗತಾಯ ಪ್ರಯತ್ನ ನಡೆಸುತ್ತಿವೆ. ಇದೇ ವೇಳೆ ಮೂಲ ಬಿಜೆಪಿ ಕಾರ್ಯಕರ್ತರು ಅರೆಮನಸ್ಸಿನಿಂದಲೇ ಮುನಿರತ್ನ ಪರ ಪ್ರಚಾರ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಗೆಲುವು‌ ಕಷ್ಟವಾಗಬಹುದು ಎಂದು ಹೇಳಲಾಗುತ್ತಿದ್ದ ಹೊತ್ತಿನಲ್ಲೇ ಆಪದ್ಭಾಂದವನಂತೆ ಬಂದಿದ್ದಾರೆ ದರ್ಶನ್.

ಮತದಾನ ನವೆಂಬರ್‌ 3ರಂದು ನಡೆಯಲಿದ್ದು, ಅಕ್ಟೋಬರ್‌ 31; ಅಂದರೆ, ನಾಳೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇಂಥ ಹೊತ್ತಿನಲ್ಲೇ ಮುನಿರತ್ನ ಪಾಲಿಗೆ ಆಶಾಕಿರಣದಂತೆ ಬಂದ ದರ್ಶನ್‌, ಕ್ಷೇತ್ರದಲ್ಲಿ ಮಿಂಚಿನಂತೆ ಪ್ರಚಾರ ನಡೆಸಿದರು.

ಅವರು ಸಂಚಾರ ಮಾಡಿದ ಕಡೆಯಲ್ಲ ಬಿಜೆಪಿ ಕಾರ್ಯಕರ್ತರು, ಮುನಿರತ್ನ ಬೆಂಬಲಿಗರು ಹಾಗೂ ಜನರ ಜಾತ್ರೆಯೇ ಸೇರಿತ್ತು. ದರ್ಶನ್‌ ಅವರನ್ನು ನೋಡಲು ಮಹಿಳೆಯರು, ಮಕ್ಕಳು ಮನೆಗಳ ಮೇಲೆ ಹತ್ತಿದರು.

ತೆರೆದ ವಾಹನದಲ್ಲಿ ಪ್ರಚಾರ

ಬೆಳಗ್ಗೆ 10.30ಕ್ಕೆ ದರ್ಶನ್‌ ರೋಡ್ ಶೋ ಶುರುವಾಯಿತು. ತೆರೆದ ವಾಹನದ ಮೇಲೆ ಹತ್ತಿದ್ದ ದರ್ಶನ್‌ ಮೇಲೆ ಅಲ್ಲಲ್ಲಿ ಹೂಮಳೆಯೂ ಸುರಿಯಿತು. ಈ ಸಂದರ್ಭದಲ್ಲಿ ಮಾತನಾಡಿದ ದರ್ಶನ್ ಹೇಳಿದ್ದಿಷ್ಟು..

ರಾಜರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ನಟಿ ಅಮೂಲ್ಯ ಜಗದೀಶ್ ಅವರು ಆರ್.ಆರ್.ನಗರ ವ್ಯಾಪ್ತಿಯ ಯಶವಂತಪುರದಲ್ಲಿ ರೋಡ್ ಶೋ ನಡೆಸಿ ಮತಪ್ರಚಾರ ನಡೆಸಿದರು. #VoteForDevelopment #RRNagar #Munirathna @CTRavi_BJP @ArvindLBJP pic.twitter.com/6ANdnypXay

— Munirathna (@MunirathnaMLA) October 30, 2020

“ನಾನು ಪಕ್ಷ ನೋಡಿ ಪ್ರಚಾರ ಮಾಡುವ ವ್ಯಕ್ತಿ ಅಲ್ಲ. ವ್ಯಕ್ತಿಯನ್ನು ನೋಡಿ ಪ್ರಚಾರ ಮಾಡುತ್ತೇನೆ. ಮುನಿರತ್ನ ನಾನು ತುಂಬಾ ಇಷ್ಟಪಡುವ ವ್ಯಕ್ತಿ. ಕೊರೋನ ಲಾಕ್ʼಡೌನ್ ಸಂದರ್ಭದಲ್ಲಿ ಎಲ್ಲರೂ ಮನೆಯಲ್ಲಿದ್ದರು. ಅಂದು ಕೆಜಿ ಅಕ್ಕಿಗೂ ಕಷ್ಟವಾಗಿತ್ತು. ಅರ್ಧ ಲೀಟರ್‌ ಹಾಲಿಗೂ ಹಾಹಾಕಾರ ಇತ್ತು. ಅಂಥ ಸಮಯದಲ್ಲಿ ಮುನಿರತ್ನ ಮಾನವೀಯತೆಯಿಂದ ಜನರಿಗೆ ನೆರವಾದರು. ಅನ್ನ ಕೊಟ್ಟರು, ಹಾಲು ಕೊಟ್ಟರು. ಅವರು ಮಾಡಿದ ಉತ್ತಮ ಸೇವೆ ನೋಡಿ ಮನಸ್ಸು ತುಂಬಿಬಂತು. ಇಂಥ ಮಾನವೀಯ ವ್ಯಕ್ತಿತ್ವದ ಮುನಿರತ್ನ ಪರ ನಾನು ಪ್ರಚಾರ ಮಾಡುತ್ತಿದ್ದೇನೆ.”‌

“ಎಷ್ಟು ಕೋಟಿ ಇದ್ದರೇನು? ಯಾವುದೂ ಹಿಂದೆ ಬರಲ್ಲ. ಪಿತೂರಿ ಮಾಡೋಕೆ ದುಡ್ಡು ಇರುತ್ತೆ. ಜನರಿಗೆ ಸಹಾಯ ಮಾಡೋಕೆ ದುಡ್ಡಿಲ್ಲವಾ? ಮುನಿರತ್ನ ರಾಜೀನಾಮೆ ಕೊಟ್ಟರೋ ಬಿಟ್ಟರೋ ಅದು ಬೇರೆ ಮಾತು. ಆದರೆ, ಅವರ ಮಾನವೀಯ ವ್ಯಕ್ತಿತ್ವವನ್ನು ಇಷ್ಟಪಟ್ಟು ಪ್ರಚಾರ ನಡೆಸುತ್ತಿದ್ದೇನೆ”

ಕೊರೊನ ಕಿವಿಮಾತು ಹೇಳಿದ ದರ್ಶನ್‌

ಎಲ್ಲ ಕಡೆ ಕೊರೊನ ತಾಂಡವವಾಡುತ್ತಿದೆ. ಎಲ್ಲರೂ ತಪ್ಪದೇ ಮುನ್ನೆಚ್ಚರಿಕೆ ವಹಿಸಬೇಕು. ಮಾಸ್ಕ್ ಹಾಕಿಕೊಂಡು ದೈಹಿಕ ಅಂತರ ಕಾಯ್ದುಕೊಂಡು ಪ್ರಚಾರ ಮಾಡಬೇಕು. ನಾವೂ ಹಾಗೆ ಮಾಡುತ್ತೇವೆ. ಅಭಿಮಾನಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೋರಿದರು.

ನಿಖಿಲ್‌ ಕುಮಾರಸ್ವಾಮಿ ಬಗ್ಗೆ

ಇನ್ನು; ನಿಖಿಲ್‌ ಕುಮಾರಸ್ವಾಮಿ ನಡೆಸುತ್ತಿರುವ ಪ್ರಚಾರ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, “ನಿಖಿಲ್ ಅವರು ತಮ್ಮ ಪಕ್ಷದ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾರೆ. ನಾನು ಮಾತ್ರ ಮುನಿರತ್ನ ಪರ ಪ್ರಚಾರ ನಡೆಸುತ್ತೇನೆ” ಎಂದಷ್ಟೇ ಹೇಳಿದರು.

ಇಡೀ ದಿನ ರೋಡ್‌ ಶೋ

ದರ್ಶನ್ ಅವರು ತಮ್ಮ ನೆಚ್ಚಿನ ನಿರ್ಮಾಪಕ ಮುನಿರತ್ನ ಪರ ಇಡೀ ದಿನ ಪ್ರಚಾರ ಮಾಡಿದರು. ಕ್ಷೇತ್ರದ ವ್ಯಾಪ್ತಿಯ ಒಟ್ಟು 9 ವಾರ್ಡ್‍ಗಳಲ್ಲಿ ಮುನಿರತ್ನ ಜತೆಯಲ್ಲಿ ದರ್ಶನ್ ರೋಡ್ ಶೋ ನಡೆಸಿದರು.

ಇದೇ ವೇಳೆ ದರ್ಶನ್‍ ಜತೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ʼಕುಮಾರ್ ಕಟೀಲ್, ಹಿರಿಯ ಸಚಿವ ಅಶೋಕ್ ಇದ್ದರು. ಯಶವಂತಪುರ ರೈಲು ನಿಲ್ದಾಣದ ಮುಂಭಾಗದಿಂದ ರೋಡ್ ಶೋ ಆರಂಭವಾಯಿತು. ರಾಜರಾಜೇಶ್ವರಿ ನಗರದ ಕೆಲ ಪ್ರಮುಖ ರಸ್ತೆಗಳಲ್ಲಿ ರೋಡ್ ಶೋ ನಡೆಯಿತು.

ಕ್ಷೇತ್ರದ ಜೆ.ಪಿ.ಪಾರ್ಕ್ ವಾರ್ಡ್, ಜಾಲಹಳ್ಳಿ, ಹೆಚ್‍ಎಂಟಿ, ಪೀಣ್ಯ, ಗೊರಗುಂಟೆಪಾಳ್ಯ, ಲಕ್ಷ್ಮೀದೇವಿ ನಗರದಲ್ಲಿ ಪ್ರಚಾರ ನಡೆಸಿ, ಇದಾದ ಮೇಲೆ ಅಂತೆಯೇ ಲಗ್ಗೆರೆಯ ಆಲದಮರ ವೃತ್ತ, ಕೊಟ್ಟಿಗೆಪಾಳ್ಯ ಪೈಪ್‍ಲೈನ್, ಸುಂಕದಕಟ್ಟೆ, ಬಿಡಿಎ ಕಾಂಪ್ಲೆಕ್ಸ್, ಜ್ಞಾನಭಾರತಿಯ ಕೆಂಗುಂಟೆ, ಮಲ್ಲತ್ತಹಳ್ಳಿಯಲ್ಲಿ ರೋಡ್ ಶೋ ನಡೆಸಿದರು.

ಕುರುಕ್ಷೇತ್ರ ಚಿತ್ರದ ನಿರ್ಮಾಪಕ

ಮೊದಲಿನಿಂದಲೂ ದರ್ಶನ್‌ ಮತ್ತು ಮುನಿರತ್ನ ನಡುವೆ ಉತ್ತಮ ಬಾಂಧವ್ಯವಿದೆ. ದರ್ಶನ್‌ ನಟಿಸಿದ್ದ ಕನ್ನಡ ಚಿತ್ರರಂಗದ ಬಿಗ್‌ಬಜೆಟ್‌ ಚಿತ್ರ ʼಕುರುಕ್ಷೇತ್ರʼ ವನ್ನು ಇದೇ ಮುನಿರತ್ನ ನಿರ್ಮಿಸಿದ್ದರು.

ಇದೇ ವೇಳೆ ದರ್ಶನ್‌ ಎಂಟ್ರಿಯೊಂದಿಗೆ ಇಡೀ ರಾಜರಾಜೇಶ್ವರಿ ನಗರದ ಚಿತ್ರಣವೇ ಬದಲಾಗಬಹುದು ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್‌ ಗೆಲುವಿನಲ್ಲಿ ದರ್ಶನ್‌ ಪಾತ್ರ ಸಾಕಷ್ಟಿತ್ತು. ಈ ಹಿನ್ನೆಲೆಯಲ್ಲಿ ಅವರ ಪ್ರಚಾರದಿಂದ ಮುನಿರತ್ನಗೆ ಆನೆಬಲ ಬರಬಹುದು. ಮುಖ್ಯವಾಗಿ, ಅವರ ಅಭಿಮಾನಿಗಳು, ಯುವಜನರು ಹೆಚ್ಚಿನ ಪ್ರಮಾಣದಲ್ಲಿ ಬಿಜೆಪಿಗೆ ಮತ ಹಾಕಬಹುದು. ಇದು ಕಾಂಗ್ರೆಸ್‌, ಅದರಲ್ಲೂ ಡಿಕೆ ಸಹೋದರರಿಗೆ ದೊಡ್ಡ ಸವಾಲು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

Tags: Bengalurubjpdarshan-muniratnarajarajeshwari nagar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಪರಿಣಾಮ; ʼಬಡವರ ಖರ್ಜೂರಾʼ ಬೆಳೆಯುವ ಈಚಲು ಮರಗಳ ಮಾರಣಹೋಮ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಲ್ಲು ಗಣಿಗಾರಿಕೆ ಪರಿಣಾಮ; ʼಬಡವರ ಖರ್ಜೂರಾʼ ಬೆಳೆಯುವ ಈಚಲು ಮರಗಳ ಮಾರಣಹೋಮ

5 years ago
ಕೇಳಿದ್ದು ಪಡಿತರ, ಸಿಕ್ಕಿದ್ದು ಜಾತಿ ನಿಂದನೆ

ಕೇಳಿದ್ದು ಪಡಿತರ, ಸಿಕ್ಕಿದ್ದು ಜಾತಿ ನಿಂದನೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ