• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ

cknewsnow desk by cknewsnow desk
October 30, 2020
in STATE
Reading Time: 1 min read
0
ಸಿಎಂಗೆ ಕೌಂಟರ್‌; ಶಿರಾ ಕೆರೆಗಳಿಗೆ ನೀರು ತುಂಬಿಸದಿದ್ದರೆ ವಿಧಾನಸೌಧವರೆಗೂ ಪಾದಯಾತ್ರೆ ಮಾಡುವೆ ಎಂದ ಎಚ್‌ಡಿಕೆ
916
VIEWS
FacebookTwitterWhatsuplinkedinEmail

ಶಿರಾ: ಉಪ ಚುನಾವಣೆ ಮುಗಿದ ಬಳಿಕ ಶಿರಾ ತಾಲ್ಲೂಕಿನಲ್ಲಿರುವ 65 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡದಿದ್ದರೆ, ಶಿರಾ ಪಟ್ಟಣದಿಂದ ಬೆಂಗಳೂರಿನ ವಿಧಾನಸೌಧದವರೆಗೆ ಪಾದಯಾತ್ರೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಉಪ ಚುನಾವಣೆ ಹಿನ್ನೆಲೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಪರವಾಗಿ ಶಿರಾ ಪಟ್ಟಣದಲ್ಲಿ ಶುಕ್ರವಾರ ಪ್ರಚಾರ ನಡೆಸಿದ ಅವರು, ತಾಲ್ಲೂಕಿನ ಜನತೆಗೆ ನೀಡಿರುವ ಭರವಸೆಯನ್ನು ಈಡೇರಿಸಲು ತಾವು ಯಾವುದೇ ಹೋರಾಟಕ್ಕೂ ಸಿದ್ದ ಎಂದು ಘೋಷಿಸಿದರು.

2006ರಲ್ಲಿ ನಾನು ಮುಖ್ಯಮಂತ್ರಿಯಾದ ವೇಳೆ ಶಿರಾದಲ್ಲಿ ಕುಡಿಯುವ ನೀರಿನ ತೊಂದರೆ ನೀಗಿಸಲು ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದ್ದೆ. ಹಲವು ವರ್ಷಗಳಾದರೂ ಈ ಯೋಜನೆ ಅನುಷ್ಠಾನವಾಗದಿರುವುದು ಅತ್ಯಂತ ನೋವಿನ ಸಂಗತಿ. ಚುನಾವಣೆ ಮುಗಿದ ತಕ್ಷಣ ಸರಕಾರ ಯೋಜನೆ ಅನುಷ್ಠಾನ ಮಾಡದಿದ್ದರೆ ತಾಲ್ಲೂಕಿನ ಜನತೆ ಪರವಾಗಿ ಬೆಂಗಳೂರಿನ ವಿಧಾನಸೌಧದವರೆಗೂ ಪಾದಯಾತ್ರೆ ನಡೆಸುತ್ತೇನೆ ಎಂದು ಪ್ರಕಟಿಸಿದರು.

ನಾನು ಮುಖ್ಯಮಂತ್ರಿಯಾದ ವೇಳೆ ತಾಲ್ಲೂಕಿನ ಹೊನ್ನಗಾನಹಳ್ಳಿ ಗ್ರಾಮದಲ್ಲಿ ಗ್ರಾಮವಾಸ್ತವ್ಯ ಮಾಡಿದ್ದೆ. ಅಂದು ಮದಲೂರು ಕೆರೆ ವೀಕ್ಷಣೆ ನಡೆಸಿದ ವೇಳೆ ನೀರಿನ ಸಮಸ್ಯೆ ಇರುವುದು ಅರಿವಾಯಿತು. ಅಂದೇ ನಾನು ಕೆರೆಗಳಿಗೆ ನೀರು ತುಂಬಿಸಬೇಕೆಂಬ ತೀರ್ಮಾನ ಮಾಡಿದ್ದೆ ಎಂದು ಎಚ್‌ಡಿಕೆ ನೆನಪಿಸಿಕೊಂಡರು.

ಬೆಂಗಳೂರಿಗೆ ಹಿಂತಿರುಗಿದ ನಂತರ ಸಭೆ ನಡೆಸಿ ಶಿರಾದಲ್ಲಿರುವ ಎಲ್ಲಾ ಕೆರೆಗಳಿಗೆ ನೀರು ತುಂಬಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೆ. ಸುಮಾರು 850 ಕೋಟಿ ರೂ. ವೆಚ್ಚದಲ್ಲಿ ತಾಲ್ಲೂಕಿನಲ್ಲಿ ಕೆರೆಗಳಿಗೆ ನೀರು ತುಂಬಿಸಲು ʼಸಿಕಾನ್ʼ ಎಂಬ ಖಾಸಗಿ ಕಂಪನಿಗೆ ನೀಡಲಾಗಿತ್ತು. ಆದರೆ ಆ ವೇಳೆಗೆ ನನ್ನ ಅಧಿಕಾರಾವಧಿ ಮುಗಿದ ಕಾರಣ ಯೋಜನೆ ನೆನೆಗುದಿಗೆ ಬಿದ್ದಿದೆ ಎಂದು ವಿಷಾದಿಸಿದರು.

ಹೇಮಾವತಿ ನದಿಯಿಂದ ನೀರು ಹೆಚ್ಚಿನ ಪ್ರಮಾಣದಲ್ಲಿ ಲಭ್ಯವಾಗುವುದಿಲ್ಲ ಎಂಬ ಕಾರಣಕ್ಕಾಗಿ ಭದ್ರ ಮೇಲ್ದಂಡೆ ಯೋಜನೆಯಿಂದ ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ 19 ಟಿಎಂಸಿ ನೀರು ಬಳಸಿಕೊಂಡು ಯೋಜನೆಯನ್ನು ಜಾರಿ ಮಾಡಲು ನಮ್ಮ ಸರಕಾರ ನಿರ್ಧರಿಸಿತ್ತು ಎಂದ ಅವರು, ಚಿತ್ರದುರ್ಗದಲ್ಲಿ ಹಲವು ವರ್ಷಗಳಿಂದ ಕುಡಿಯುವ ನೀರಿಗಾಗಿ ಹೋರಾಟ ನಡೆಸುತ್ತಿದ್ದರು. ಹೀಗಾಗಿ ಸುಮಾರು ಒಂದೂವರೆಲಕ್ಷ ಹೆಕ್ಟೇರ್ ನೀರಾವರಿ ಪ್ರದೇಶಕ್ಕೆ ಭದ್ರ ಮೇಲ್ದಂಡೆ ಯೋಜನೆಯಿಂದ 4,500 ಕೋಟಿ ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಲು ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿತ್ತು ಎಂದರು.

ಐದು ವರ್ಷ ಆಡಳಿತ ನಡೆಸಿದ ಬಿಜೆಪಿಯವರು ಹಾಗೂ ಕಾಂಗ್ರೆಸಿಗರು ತಾಲ್ಲೂಕಿನ ಅಭಿವೃದ್ಧಿ ಬಗ್ಗೆ ಗಮನಕೊಡಲಿಲ್ಲ. ಈಗ ಉಪಚುನಾವಣೆ ಬಂದಿದೆ ಎಂಬ ಒಂದೇ ಕಾರಣಕ್ಕಾಗಿ ಕೆರೆಗಳಿಗೆ ನೀರು ತುಂಬಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ನೀವು ಅಧಿಕಾರದಲ್ಲಿದ್ದಾಗ ಈ ಕೆಲಸವನ್ನು ಏಕೆ ಮಾಡಲಿಲ್ಲ.

ಶಿರಾ ಕ್ಷೇತ್ರದ ಹುಣಸೇಹಳ್ಳಿಯಲ್ಲಿ ಕುಮಾರಸ್ವಾಮಿ ಪ್ರಚಾರ.

ಹಿಂದಿನ ಕಾಂಗ್ರೆಸ್ ಅವಯಲ್ಲಿ ಸ್ವತಃ ಸಣ್ಣ ನೀರಾವರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಟಿ.ಬಿ.ಜಯಚಂದ್ರ ಅವರು ತಾಲ್ಲೂಕಿನಲ್ಲಿರುವ ಎಷ್ಟು ಕೆರೆಗಳಿಗೆ ನೀರು ತುಂಬಿಸಿದರು. ಅಂದು ನೀವು ತಾಲ್ಲೂಕಿನ ಅಭಿವೃದ್ಧಿಗೆ ಗಮನಹರಿಸಿದ್ದಿದ್ದರೆ ಇಂದು ಜನತೆ ಕುಡಿಯುವ ನೀರಿಗೆ ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತೇ ಎಂದು ಹರಿಹಾಯ್ದರು. ಹಲವಾರು ವರ್ಷಗಳಿಂದ ಶಿರಾವನ್ನು ಎಲ್ಲ ರಾಜಕೀಯ ಪಕ್ಷಗಳು ಕಡೆಗಣನೆ ಮಾಡಿವೆ. ಇದಕ್ಕೆ ಶಾಶ್ವತ ಪರಿಹಾರ ನೀಡಬೇಕೆಂದು ನಿಶ್ಚಯಿಸಿದ್ದೇನೆ. ತಾಲೂಕಿನ ಸಮಸ್ಯೆಗೆ ಇತಿಶ್ರೀ ಹಾಡುತ್ತೇನೆ ಎಂದು ವಾಗ್ದಾನ ಮಾಡಿದರು.

ನವೆಂಬರ್ 3ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಕ್ಷೇತ್ರದ ಜನತೆ ಯಾವುದೇ ಆಸೆ ಆಮಿಷಗಳು, ಸುಳ್ಳು ಆಶ್ವಾಸನೆಗಳು, ಪೊಳ್ಳು ಭರವಸೆಗಳಿಗೆ ಬಲಿಯಾಗಬೇಡಿ. ನಮ್ಮ ಪಕ್ಷದ ಅಭ್ಯರ್ಥಿಯಾಗಿರುವ ಅಮ್ಮಾಜಮ್ಮ ಅವರಿಗೆ ನಿಮ್ಮ ಅಮೂಲ್ಯವಾದ ಮತ ನೀಡಿ ಹೆಚ್ಚಿನ ಮತಗಳಿಂದ ಆಯ್ಕೆ ಮಾಡಿ ಎಂದು ಕರೆ ನೀಡಿದರಲ್ಲದೆ, ನಾನು ಈಗ ಏನು ವಾಗ್ದಾನ ಮಾಡಿದ್ದೇನೋ ಅದನ್ನು ಖಂಡಿತ ಈಡೇರಿಸಿಕೊಡುತ್ತೇನೆ. ಜೆಡಿಎಸ್‍ನ ಮೇಲೆ ಭರವಸೆಯಿಟ್ಟು ನಮ್ಮನ್ನು ಕೈಹಿಡಿಯಿರಿ ಎಂದು ಕುಮಾರಸ್ವಾಮಿ ಜನತೆಗೆ ಭಾವುಕರಾಗಿ ಮನವಿ ಮಾಡಿದರು.

Tags: hd kumaraswamyjdssiraSira by election
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಭಾರತದ ಐಕ್ಯತಾಮೂರ್ತಿಯ ನೆನಪು; ಏಕತೆಯೊಂದಿಗೆ ದೇಶದ ಭವಿಷ್ಯಕ್ಕೆ ದಿಕ್ಕು ತೋರಿದ ಸರ್ದಾರ್‌ ಪಟೇಲರು

ಭಾರತದ ಐಕ್ಯತಾಮೂರ್ತಿಯ ನೆನಪು; ಏಕತೆಯೊಂದಿಗೆ ದೇಶದ ಭವಿಷ್ಯಕ್ಕೆ ದಿಕ್ಕು ತೋರಿದ ಸರ್ದಾರ್‌ ಪಟೇಲರು

Leave a Reply Cancel reply

Your email address will not be published. Required fields are marked *

Recommended

ಕಮೀಷನ್‌ ಕಲೆಕ್ಷನ್‌ʼಗಾಗಿ ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಕೃತಕ ವಿದ್ಯುತ್‌ ಅಭಾವ ಸೃಷ್ಟಿ!

ಕಮೀಷನ್‌ ಕಲೆಕ್ಷನ್‌ʼಗಾಗಿ ಕಾಂಗ್ರೆಸ್‌ ಸರಕಾರದಿಂದ ರಾಜ್ಯದಲ್ಲಿ ಕೃತಕ ವಿದ್ಯುತ್‌ ಅಭಾವ ಸೃಷ್ಟಿ!

3 years ago
ತಲೆಗೂದಲು ತೆರೆದಿಟ್ಟ ಸತ್ಯ

ತಲೆಗೂದಲು ತೆರೆದಿಟ್ಟ ಸತ್ಯ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ