• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಸಮಾಧಾನದ ಸುದ್ದಿ!; ಸೇರೊ ಸಮೀಕ್ಷೆಯಲ್ಲಿ ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ: ಡಾ.ಕೆ.ಸುಧಾಕರ್‌

cknewsnow desk by cknewsnow desk
November 6, 2020
in COVID-19, STATE
Reading Time: 1 min read
0
ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್
918
VIEWS
FacebookTwitterWhatsuplinkedinEmail
LEAD PHOTO BY Polina Tankilevitch FROM Pexels

ಡಿಸೆಂಬರ್ ಅಂತ್ಯ, ಮಾರ್ಚ್ ಕೊನೆಯಲ್ಲಿ ಮತ್ತೆ ಸರ್ವೆ

ಬೆಂಗಳೂರು: ರಾಜ್ಯದಲ್ಲಿ ಶೇ.16ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸಮೀಕ್ಷೆಯಿಂದ ಗೊತ್ತಾಗಿದೆ. ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲೂ ಸಮೀಕ್ಷೆ ನಡೆದಿದ್ದು, 843 ಜನ ತಮ್ಮ ಸ್ಯಾಂಪಲ್ಸ್‌ ನೀಡಿದ್ದಾರೆ.

ಈ ವಿಷಯವನ್ನು ಬೆಂಗಳೂರಿನಲ್ಲಿ ಸುದಿಗೋಷ್ಠಿಯಲ್ಲಿ ತಿಳಿಸಿದ ಡಾ.ಕೆ.ಸುಧಾಕರ್‌ ಅವರು, ವಿವಿಧ ನಗರಗಳಾದ ಮುಂಬಯಿ, ಪುಣೆ, ದಿಲ್ಲಿ ನಗರಗಳ ಕೆಲ ಪ್ರದೇಶಗಳಲ್ಲಿ ಈ ಸಮೀಕ್ಷೆ ನಡೆಸಲಾಗಿದೆ. ಆದರೆ ಕರ್ನಾಟಕದಲ್ಲಿ ಮಾತ್ರ ಎಲ್ಲ 30 ಜಿಲ್ಲೆಗಳಲ್ಲೂ ಸಮೀಕ್ಷೆ ನಡೆಸಲಾಗಿದೆ ಎಂದರು.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಎಂಟು ವಲಯಗಳಲ್ಲೂ ಈ ಸಮೀಕ್ಷೆ ನಡೆದಿದೆ. 16,585 ಜನರ ಮಾದರಿಗಳನ್ನು ಸಂಗ್ರಹಿಸಿ ವೈಜ್ಞಾನಿಕವಾಗಿ ಪರೀಕ್ಷೆ ಮಾಡಲಾಗಿದ್ದು, 15,624 ಮಂದಿಯ ಫಲಿತಾಂಶ ಸಿಕ್ಕಿದೆ. ಈ ಹಿಂದೆ ಹಾಗೂ ಸಮೀಕ್ಷೆ ಮಾಡುವ ಸಮಯದಲ್ಲಿ ಸೋಂಕಿಗೆ ಒಳಗಾಗಿದ್ದವರ ಒಟ್ಟು ಪ್ರಮಾಣವು 27.3%ರಷ್ಟಿದೆ ಎಂದು ಸಚಿವರು ಮಾಹಿತಿ ನೀಡಿದರು.

ಈ ಪೈಕಿ ಸಮೀಕ್ಷೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 412 ಹಾಗೂ ಕೋಲಾರ ಜಿಲ್ಲೆಯಲ್ಲಿ 431 ಮಂದಿ ಸ್ಯಾಂಪಲ್ಸ್‌ ನೀಡಿದ್ದಾರೆ.

ಮುಖ್ಯವಾಗಿ ಕಡಿಮೆ ರಿಸ್ಕ್, ಮಧ್ಯಮ ರಿಸ್ಕ್ ಮತ್ತು ಹೆಚ್ಚು ರಿಸ್ಕ್ ಎಂದು ವರ್ಗೀಕರಿಸಿ ಪರೀಕ್ಷೆ ನಡೆಸಲಾಗಿದೆ. ಕೊರೊನ ವೈರಸ್ ದೇಹವನ್ನು ಪ್ರವೇಶಿಸಿದಾಗ ಪ್ರತಿರೋಧಕವಾಗಿ ಐಜಿಜಿ ಉತ್ಪತ್ತಿಯಾಗುತ್ತದೆ. ಐಜಿಜಿ ಹೊಂದಿದವರು ಮತ್ತು ಸೋಂಕಿತರನ್ನು ಪತ್ತೆ ಮಾಡುವ ಮೂಲಕ ಈ ಸಮೀಕ್ಷೆಯನ್ನು ಕ್ರಮಬದ್ಧವಾಗಿ ನಡೆಸಲಾಗಿದೆ ಎಂದರು ಸಚಿವರು.

15,624 ಜನರಲ್ಲಿ ಐಜಿಜಿ ಪ್ರತಿಕಾಯ ಇರುವವರ ಪ್ರಮಾಣ 16.4% ಇದೆ. ಅಂದರೆ ಇಷ್ಟು ಜನರು ಸೋಂಕಿಗೊಳಗಾಗಿ ಗುಣಮುಖರಾಗಿದ್ದಾರೆ. ಈ ಪ್ರಮಾಣ ದೆಹಲಿಯಲ್ಲಿ 29.1%, ಮುಂಬೈ ಸ್ಲಮ್ ರಹಿತ ಪ್ರದೇಶಗಳಲ್ಲಿ 16% ಹಾಗೂ ಸ್ಲಮ್ ಗಳಲ್ಲಿ 57%, ಪುಣೆಯ 5 ಪ್ರದೇಶಗಳಲ್ಲಿ 36.1 ರಿಂದ 65.4%, ಇಂದೋರ್ ನಲ್ಲಿ 7.8%, ಪುದುಚೆರಿಯಲ್ಲಿ 22.7%, ಚೆನ್ನೈನಲ್ಲಿ 32.3% ಇದೆ. 15,624 ಜನರಲ್ಲಿ ಸಕ್ರಿಯ ಸೋಂಕಿತರ ಪ್ರಮಾಣ 12.7% ರಷ್ಟಿದೆ ಎಂದು ಅವರು ವಿವರವಾದ ಮಾಹಿತಿ ನೀಡಿದರು.

ಸಮೀಕ್ಷೆ ನಡೆದದ್ದು ಯಾವಾಗ?

ಈ ಸಮೀಕ್ಷೆ 2020ರ ಸೆಪ್ಟೆಂಬರ್ 3ರಿಂದ 16 ರವರೆಗೆ ನಡೆದಿತ್ತು. ಕೋವಿಡ್ ಮರಣ ಪ್ರಮಾಣವನ್ನು ಸೋಂಕಿಗೆ ಒಳಗಾದ ಒಟ್ಟು ಜನರಿಗೆ ಹೋಲಿಸಿದರೆ, ಬಹಳ ಕಡಿಮೆ ಇದೆ. ರಾಜ್ಯದಲ್ಲಿ ಮರಣ ಪ್ರಮಾಣ 0.05% ಇದೆ. ಮುಂಬೈಯಲ್ಲಿ 0.05-0.10%, ಪುಣೆಯಲ್ಲಿ 0.08%, ದೆಹಲಿಯಲ್ಲಿ 0.09%, ಚೆನ್ನೈನಲ್ಲಿ 0.13% ಮರಣ ಪ್ರಮಾಣವಿದೆ. ಇದೇ ರೀತಿ ಡಿಸೆಂಬರ್ ಅಂತ್ಯದಲ್ಲಿ ಒಂದು ಹಾಗೂ ಮಾರ್ಚ್ ಅಂತ್ಯಕ್ಕೆ ಮತ್ತೊಂದು ಸರ್ವೆ ನಡೆಸಲಾಗುವುದು ಎಂದು ತಿಳಿಸಿದರು.

ಹೆಚ್ಚು ಪರೀಕ್ಷೆ ನಡೆಸಿ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು, ಚಿಕಿತ್ಸೆಯ ಗುಣಮಟ್ಟ ಹೆಚ್ಚಿಸುವುದು ಸೇರಿದಂತೆ ಹಲವಾರು ಕ್ರಮಗಳನ್ನು ಜಾರಿ ಮಾಡಲು ಈ ಸರ್ವೆ ನೆರವಾಗಲಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಬಹಳ ಕಡಿಮೆ ಇದೆ. ಗುಣಮುಖರ ಪ್ರಮಾಣ 95%. ದೀಪಾವಳಿ ಆಚರಣೆಗೆ ಸಂಬಂಧಿಸಿದಂತೆ ವರದಿ ನೀಡಲು ತಜ್ಞರಿಗೆ ಸೂಚಿಸಲಾಗಿದೆ. ವರದಿ ಬಂದ ಬಳಿಕ ಪಟಾಕಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಕೋವಿಡ್ ಸೋಂಕಿಗೊಳಗಾಗಿ ಗುಣಮುಖರಾದವರ ಆರೋಗ್ಯದ ನಿಗಾ ಇರಿಸಲು ಪುನರ್ವಸತಿ ಕೇಂದ್ರ ಆರಂಭಿಸಲಾಗುವುದು ಎಂದು ಡಾ.ಸುಧಾಕರ್‌ ಹೇಳಿದರು.

ಏನಿದು ಐಜಿಜಿ?

ಐಜಿಜಿ ಎನ್ನುವುದು ಇಮ್ಯುನೊಗ್ಲೋಬಿಲಿನ್‌ಗಳ ಒಂದು ವರ್ಗ. ಮಾನವನ ದೇಹದಲ್ಲಿ ಕಂಡುಬರುವ ಅತ್ಯಂತ ಸಾಮಾನ್ಯ ಪ್ರತಿಕಾಯ ಇದಾಗಿದೆ. ಇದು ದೇಹಕ್ಕೆ ಪ್ರವೇಶಿಸಿದ ರೋಗಕಾರಕ ಅಣುಗಳನ್ನು ನಾಶಪಡಿಸಲು ಸಹಾಯ ಮಾಡುತ್ತದೆ.

Karnataka's Covid-19 recovery rate stands at 93.79% which is higher than the national average of 92.09%.
Karnataka is conducting 1,22,848 tests per million population which is the 3rd highest among major states in India.@PMOIndia @CMofKarnataka @MoHFW_INDIA @DHFWKA pic.twitter.com/okN52LqThU

— Dr Sudhakar K (Modi ka Parivar) (@DrSudhakar_) November 4, 2020

ಆರೋಗ್ಯ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ, ಕೋವಿಡ್ ಸರ್ವೆ ಸಮಿತಿಯ ಮುಖ್ಯಸ್ಥ ಡಾ.ಗಿರಿಧರ ಬಾಬು ಉಪಸ್ಥಿತರಿದ್ದರು.

Tags: covid 19dr k sudhakarkarnatakasero survey
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮಹಾಮಾರಿ ಕೋವಿಡ್ ನಡುವೆ ಹೂಡಿಕೆಗೆ ಉತ್ತೇಜನ; ನ.19-21ರಂದು ಟೆಕ್ ಸಮ್ಮೇಳನ: ಇದು ಬೆಂಗಳೂರು BTS

ಮಹಾಮಾರಿ ಕೋವಿಡ್ ನಡುವೆ ಹೂಡಿಕೆಗೆ ಉತ್ತೇಜನ; ನ.19-21ರಂದು ಟೆಕ್ ಸಮ್ಮೇಳನ: ಇದು ಬೆಂಗಳೂರು BTS

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ