• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಅಮೆರಿಕದಲ್ಲಿ ಜೋ ಬೈಡನ್‌ ಜೋಶ್: ಸೋಲಿನ ಪ್ರಪಾತಕ್ಕೆ ಬಿದ್ದ ಡೊನಾಲ್ಡ್‌ ಟ್ರಂಪ್‌

cknewsnow desk by cknewsnow desk
November 9, 2020
in STATE, WORLD
Reading Time: 2 mins read
0
ಅಮೆರಿಕದಲ್ಲಿ ಜೋ ಬೈಡನ್‌ ಜೋಶ್: ಸೋಲಿನ ಪ್ರಪಾತಕ್ಕೆ ಬಿದ್ದ ಡೊನಾಲ್ಡ್‌ ಟ್ರಂಪ್‌
915
VIEWS
FacebookTwitterWhatsuplinkedinEmail
Lead photos courtesy: Wikipedia

ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರೀಸ್‌

courtesy: cnn

ವಾಷಿಂಗ್ಟನ್: ಅಮೆರಿಕ ಹಿಂದೆಂದೂ ಕಂಡರಿಯದಷ್ಟು ಕುತೂಹಲ ಕೆರಳಿಸಿದ್ದ ಅಧ್ಯಕ್ಷೀಯ ಚುನಾವಣೆ ರೋಚಕವಾಗಿ ಕೊನೆಗೊಂಡಿದೆ. ಮಾಜಿ ಉಪಾಧ್ಯಕ್ಷ, ಡೆಮಾಕ್ರಟಿಕ್‌ ಪಕ್ಷದ ಅಭ್ಯರ್ಥಿ ಜೋ ಬೈಡನ್‌ 46ನೇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಇನ್ನೊಂದೆಡೆ; ಭಾರತೀಯ ಮೂಲದ ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಅಮೆರಿಕದಲ್ಲಿರುವ ಭಾರತೀಯರೆಲ್ಲರೂ ವಿಜಯೋತ್ಸವ ಆಚರಿಸುತ್ತಿದ್ದಾರೆ. ಜನವರಿ 26ರಂದು ಬೈಡನ್‌ ಮತ್ತು ಕಮಲಾ ಹ್ಯಾರೀಸ್‌ ಪ್ರಮಾಣ ಸ್ವೀಕರಿಸಲಿದ್ದಾರೆ.

ಅಮೆರಿಕ ಮಾಧ್ಯಮಗಳು ಬೈಡನ್‌ ಆಯ್ಕೆಯನ್ನು ಖಚಿತಪಡಿಸಿದ್ದು, ಅವರು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಹಾಗೂ ಹಾಲಿ ಅಧ್ಯಕ್ಷ ಡೋನಾಲ್ಡ್‌ ಟ್ರಂಪ್‌ ಅವರನ್ನು ಸೋಲಿಸಿದ್ದಾರೆ. ಬೈಡನ್‌ ಅವರಿಗೆ 273 ಎಲೆಕ್ಟ್ರೋಲ್‌ ಮತಗಳು ಬಂದರೆ, ಟ್ರಂಪ್‌ ಅವರಿಗೆ 213 ಎಲೆಕ್ಟ್ರೋಲ್‌ ಮತಗಳು ಬಿದ್ದಿವೆ. ಗೆಲುವಿಗೆ 270 ಮತಗಳು ಸಾಕಿತ್ತು. ಹೀಗಾಗಿ ಬೈಡನ್‌ ಗೆಲುವನ್ನು ಭರ್ಜರಿ ಅನ್ನುವುದಕ್ಕಿಂತ ಐತಿಹಾಸಿಕ ಎಂದು ಅಲ್ಲಿನ ಮಾಧ್ಯಮಗಳು ಬಣ್ಣಿಸಿವೆ.

ಈ ಫಲಿತಾಂಶದೊಂದಿಗೆ ಅಮೆರಿಕ ಕಂಡ ಅತ್ಯಂತ ವಿವಾದಾಸ್ಪದ ಅಧ್ಯಕ್ಷ, ಅಮೆರಿಕ ಗ್ರೇಟ್‌ ಅಗೈನ್‌ ಎಂಬ ಘೋಷಣೆಯೊಂದಿಗೆ 2016ರಲ್ಲಿ ಅಧಿಕಾರಕ್ಕೆ ಬಂದಿದ್ದ ಡೊನಾಲ್ಡ್ ಟ್ರಂಪ್ ಅವರ 4 ವರ್ಷಗಳ ಅಧಿಕಾರಾವಧಿ ಹೀಗೆ ಅಂತ್ಯವಾಯಿತು.

ಇನ್ನೊಂದೆಡೆ, ಬೈಡನ್‌ ಅಮೆರಿಕ ಪ್ರಜೆಗಳಿಗೆ ಅಭಿವಂದನೆ ಸಲ್ಲಿಸಿದ್ದು, “ನಾನು ಎಲ್ಲ ಅಮೆರಿಕನ್ನರ ಅಧ್ಯಕ್ಷ” ಎಂದು ಹೇಳಿದ್ದಾರೆ. ಈ ಹೇಳಿಕೆಗೂ ಅಮೆರಿಕ ಮಾಧ್ಯಮಗಳು ಭಾರೀ ಮಹತ್ವ ನೀಡಿ ಭಿತ್ತರಿಸುತ್ತಿವೆ.

https://twitter.com/JoeBiden/status/1325118992785223682

ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಆಯ್ಕೆಯಾಗಲು ಶತಾಯಗತಾಯ ಪ್ರಯತ್ನ ಮಾಡಿದ್ದರು. ಅದಕ್ಕೆ ಬೇಕಿದ್ದ ಸರ್ವ ಅವಕಾಶಗಳನ್ನು ಬಳಸಿಕೊಂಡಿದ್ದರು. ಕೊನೆಗೆ ಸೋಲು ಎಂದು ಖಚಿತವಾಗುತ್ತಿದ್ದಂತೆ ಮತ ಎಣಿಕೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೂ ಹೋಗಿದ್ದರು. ಆದರೆ, ಬೈಡನ್‌ ಪರವಾದ ಅಲೆಯನ್ನು ತಡೆಯಲು ಅವರಿಗೆ ಸಾಧ್ಯವಾಗಲಿಲ್ಲ.

We did it, @JoeBiden. pic.twitter.com/oCgeylsjB4

— Kamala Harris (@KamalaHarris) November 7, 2020
ಕಮಲಾ ಹ್ಯಾರಿಸ್ ಸಂತಸ

ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರೀಸ್‌ ಅತೀವ ಸಂತಸ ವ್ಯಕ್ತಪಡಿಸಿದ್ದಾರೆ. ಅಂತಿಮ ಫಲಿತಾಂಶ ಹೊರಬರುತ್ತಿದ್ದಂತೆ ಬೈಡನ್‌ ಅವರಿಗೆ ಕರೆ ಮಾಡಿದ ಅವರು, ʼಅಂತೂ ನಾವು ಸಾಧಿಸಿಬಿಟ್ಟೆವು. ನೀವು ಅಮೆರಿಕದ ಮುಂದಿನ ಅಧ್ಯಕ್ಷರು” ಎಂದು ಹೇಳಿದರು. ಅವರು ಮಾತನಾಡಿರುವ ವಿಡಿಯೋ ಟಿಟ್ಟರ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. ಅಮೆರಿಕ ಇತಿಹಾಸದಲ್ಲಿಯೇ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಮೊದಲ ಮಹಿಳೆ ಕಮಲಾ ಹ್ಯಾರೀಸ್.

ಇನ್ನೊಂದೆ ಅಂತಿಮ ಫಲಿತಾಂಶ ಹೊರಬೀಳುವುದಕ್ಕೆ ಕೆಲ ಗಂಟೆಗಳ ಮೊದಲು ಡೊನಾಲ್ಡ್‌ ಟ್ರಂಪ್‌ ಮಾಡಿರುವ ಟ್ವೀಟ್‌ ಕೂಡ ದೊಡ್ಡ ಸುದ್ದಿಯಾಗಿದೆ.

I WON THIS ELECTION, BY A LOT!

— Donald J. Trump (@realDonaldTrump) November 7, 2020
ಯಾರು ಕಮಲಾ?

ಅಮೆರಿಕದ ಉಪಾಧ್ಯಕ್ಷರಾಗುತ್ತಿರುವ ಕಮಲಾ, ಕ್ಯಾಲಿಫೋರ್ನಿಯಾದ ಸೆನೆಟರ್. ವೃತ್ತಿಯಲ್ಲಿ ವಕೀಲರು. ಸ್ಯಾನ್​ಫ್ರಾನ್ಲಸಿಸ್ಕೋದಲ್ಲಿ ವಾಸ. ಕ್ಯಾಲಿಫೋರ್ನಿಯಾದ ಅಟಾರ್ನಿ ಜನರಲ್​ ಆಗಿದ್ದರು. ಕಮಲಾ ಅವರ​ ತಾಯಿ ತಮಿಳುನಾಡು ಮೂಲದ ಭಾರತೀಯರು, ತಂದೆ ಜಮೈಕಾ ದೇಶದವರು.

ಹೇಗಾದರೂ ಸರಿ ಮತ್ತೆ ಆಯ್ಕೆಯಾಗಬೇಕೆಂದು ಟ್ರೈ ಮಾಡಿದ್ದ ಟ್ರಂಪ್‌ ಅನೇಕ ಸ್ಟಂಟ್‌ಗಳನ್ನು ಮಾಡಿದ್ದರು. ಹ್ಯೂಸ್ಟನ್‌ನಲ್ಲಿ ನಡೆದ ಹೌಡಿ ಮೋದಿ ಹಾಗೂ ಗುಜರಾತ್‌ನಲ್ಲಿ ಆಯೋಜಿಸಲಾಗಿದ್ದ ನಮಸ್ತೆ ಟ್ರಂಪ್‌ ಇದರ ಭಾಗವೇ ಆಗಿತ್ತು. ಇವೆರಡಕ್ಕೂ ಆಘಾತ ನೀಡುವಂತೆ ಬೈಡನ್‌ ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಭಾರತೀಯ ಮೂಲದ ಕಮಲಾ ಅವರನ್ನು ಆಯ್ಕೆ ಮಾಡಿದ್ದರು. ಅದು ಫಲಿತಾಂಶದ ದಿಕ್ಕು ಬದಲಿಸಿತು. ಎಲೆಕ್ಷನ್‌ಗೂ ಮೊದಲೇ ವಿವಾದಗಳನ್ನೇ ಮೈವೆತ್ತಿದ್ದ ಟ್ರಂಪ್‌, ಚುನಾವಣೆ ಘೋಷಣೆಯಾದ ಮೇಲೂ ತಮ್ಮ ವರಸೆ ಬದಲಿಸಿಕೊಳ್ಳಲಿಲ್ಲ. ಅವರ ನಡೆ ಅವರದ್ದೇ ರಿಪಬ್ಲಿಕನ್‌ ಪಕ್ಷಕ್ಕೂ ಇರಿಸುಮುರಿಸು ಉಂಟು ಮಾಡಿತ್ತು. ಅದರಲ್ಲೂ ಮುಖ್ಯವಾಗಿ ಕಮಲಾ ಅವರನ್ನು ತೀರಾ ಕೀಳು ಭಾಷೆಯಲ್ಲಿ ಟೀಕಿಸಿದ್ದರು. ಅಮೆರಿಕದಲ್ಲಿರುವ ಭಾರತೀಯರಿಂದಲೇ ಗೆಲ್ಲಬೇಕಾಗಿದ್ದ ಟ್ರಂಪ್‌, ಭಾರತವು ಕೊಳಕು ಹಾಗು ಕೊಳಕು ಗಾಳಿಯ ದೇಶ ಎಂದು ಹೀಗಳೆದಿದ್ದರು. ಹೀಗೆ ಅನೇಕ ಕಾರಣಗಳು ಅವರನ್ನು ಸೋಲಿನ ಪ್ರಪಾತಕ್ಕೆ ನೂಕಿದವು ಎನ್ನಬುಹುದು.

Tags: america election 2020donald trumpjoe bidenkamala harris
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಲೈವ್‌ನಲ್ಲೇ ಬಿಕ್ಕಳಿಸಿದ ಯಾಂಕರ್;‌ ಟ್ರಂಪ್‌ ಆಡಳಿತದ ಕರಾಳತೆಗೆ ಕನ್ನಡಿಯಿಟ್ಟ ಬ್ಲ್ಯಾಕ್‌ ಜರ್ನಲಿಸ್ಟ್!

ಲೈವ್‌ನಲ್ಲೇ ಬಿಕ್ಕಳಿಸಿದ ಯಾಂಕರ್;‌ ಟ್ರಂಪ್‌ ಆಡಳಿತದ ಕರಾಳತೆಗೆ ಕನ್ನಡಿಯಿಟ್ಟ ಬ್ಲ್ಯಾಕ್‌ ಜರ್ನಲಿಸ್ಟ್!

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ