• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ನ.17ರಿಂದ ಪದವಿ, ಎಂಜನೀಯರಿಂಗ್‌, ಡಿಪ್ಲೊಮೋ ಕಾಲೇಜ್‌ ಆರಂಭ; ಹೊಸ SOP ರಿಲೀಸ್

cknewsnow desk by cknewsnow desk
November 9, 2020
in COVID-19, STATE
Reading Time: 2 mins read
0
ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್
913
VIEWS
FacebookTwitterWhatsuplinkedinEmail

Lead photo: Mysore University

ಬೆಂಗಳೂರು: ಕೋವಿಡ್‌-19 ಪಿಡುಗಿನ ಹಿನ್ನೆಲೆಯಲ್ಲಿ ಸ್ಥಗಿತವಾಗಿರುವ ಪದವಿ, ಎಂಜನೀಯರಿಂಗ್‌ ಹಾಗೂ ಡಿಪ್ಲೊಮೋ ಕಾಲೇಜುಗಳ ತರಗತಿಗಳನ್ನು ಇದೇ ನವೆಂಬರ್‌ 17ರಿಂದ ಆರಂಭಿಸುವ ಬಗ್ಗೆ ಯುಜಿಸಿ ಮಾರ್ಗಸೂಚಿಯಂತೆ ಉನ್ನತ ಶಿಕ್ಷಣ ಇಲಾಖೆ ಎಸ್‌ಒಪಿ (ಪ್ರಮಾಣಿತ ಕಾರ್ಯಚರಣಾ ವಿಧಾನ) ಯನ್ನು ಬಿಡುಗಡೆ ಮಾಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ; ಆಫ್‌ಲೈನ್‌ ತರಗತಿಗಳ ಆರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈ ಎಸ್‌ಒಪಿಯಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾದ ಸೂಚನೆಗಳಿದ್ದು, ಅವುಗಳ ಪ್ರಕಾರವೇ ತರಗತಿಗಳು ನಡೆಯುತ್ತವೆ. ಹಾಗೆಯೇ, ಪ್ರಥಮ ಹಾಗೂ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೂ ನಿಗದಿತ ಸೂಚನೆಗಳಿವೆ ಎಂದು ಡಿಸಿಎಂ ತಿಳಿಸಿದ್ದಾರೆ.

Photo by Anna Shvets from Pexels

ಸ್ನಾತಕೋತ್ತರ, ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ:
ಆಯ್ಕೆ 1: ಭೌತಿಕ ತರಗತಿಗಳಿಗೆ ಹಾಜರಾಗುವುದು
  • ಭೌತಿಕ ತರಗತಿಗಳನ್ನು ನವೆಂಬರ್‌ 17ರಿಂದ ಪ್ರಾರಂಭಿಸುವುದು. ಭೌತಿಕವಾಗಿ ಕಾಲೇಜಿಗೆ ಬಂದು ತರಗತಿಗಳಿಗೆ ಹಾಜರಾಗಲು ಸಿದ್ಧರಿರುವ ವಿದ್ಯಾರ್ಥಿಗಳಿಗೆ ಅವರ ಪೋಷಕರಿಂದ ನಿಗದಿತ ನಮೂನೆಯಲ್ಲಿ ಸಹಿ ಮಾಡಿದ ಒಪ್ಪಿಗೆ ಪತ್ರ ಪಡೆದು ಭೌತಿಕ ತರಗತಿಗಳನ್ನು ನಡೆಸುವುದು.
  • ಭೌತಿಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯವಿರುವಂತೆ ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧಪಡಿಸಿಕೊಳ್ಳುವುದು.
  • ಬೋಧನಾ, ಪ್ರಯೋಗಾಲಯ ಮತ್ತು ಪ್ರಾಜೆಕ್ಟ್ ತರಗತಿಗಳನ್ನು ಅವಶ್ಯಕವಿದ್ದಲ್ಲಿ ಪಾಳಿ ವ್ಯವಸ್ಥೆಯ (shift system) ಮೇರೆಗೆ ನಡೆಸುವುದು.
ಆಯ್ಕೆ 2: ಆನ್‌ಲೈನ್ ತರಗತಿಗಳ ಮೂಲಕ ಅಭ್ಯಾಸ ಮಾಡುವುದು
  • ಭೌತಿಕ ತರಗತಿಗಳಿಗೆ ಹಾಜರಾಗಲು ಇಚ್ಛಿಸದ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕವೇ ತರಗತಿಗಳನ್ನು ನಡೆಸುವುದು. ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಬಯಸಿದ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿ ದಿನವು ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸುವುದು.
  • ಸಂಪರ್ಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯಕವಿರುವಂತೆ ತರಗತಿ ವೇಳಾ ಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ದಪಡಿಸಿಕೊಳ್ಳುವುದು.
  • ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ ಅಧ್ಯಯನ ಸಾಮಗ್ರಿಗಳನ್ನು ಪ್ರತಿ Period/Sessionಗೆ ಸಂಬಂಧಿಸಿದAತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ವಾಟ್ಸಾಪ್/ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು Video Lectures, PowerPoint Presentations, E-Notes, E-Books, Audio Books ಮತ್ತು Practice Questions ಇತ್ಯಾದಿಗಳ ರೂಪದಲ್ಲಿ ಇರತಕ್ಕದ್ದು. ಸದರಿ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್‌ ಮಾಡತಕ್ಕದ್ದು.
ಸ್ನಾತಕೋತ್ತರ, ಅಂತಿಮ ವರ್ಷ ಹೊರತುಪಡಿಸಿ ಇತರೆ ವಿದ್ಯಾರ್ಥಿಗಳಿಗೆ
  • ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳನ್ನು ನಡೆಸುವುದು. ಈ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಬಗ್ಗೆ ಇರುವ ಅನುಮಾನ ಅಥವಾ ಸಮಸ್ಯೆಗಳನ್ನು ನಿವಾರಿಸುವ ಸಂಬಂಧ ಪ್ರತಿದಿನವೂ ಭೌತಿಕ ಸಂಪರ್ಕ ತರಗತಿಗಳನ್ನು (Contact Classes) ನಡೆಸುವುದು.
  • ಸಂಪರ್ಕ ತರಗತಿಗಳನ್ನು ನಡೆಸುವಾಗ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಕಾಲೇಜಿನಲ್ಲಿ ಲಭ್ಯವಿರುವ ಒಟ್ಟು ತರಗತಿ ಕೊಠಡಿಗಳ ಸಂಖ್ಯೆಗೆ ಅನುಗುಣವಾಗಿ ಆರೋಗ್ಯ ಇಲಾಖೆಯಿಂದ ಹೊರಡಿಸಲಾಗಿರುವ ಮತ್ತು ಪ್ರಸ್ತುತ ಮಾರ್ಗ ಸೂಚಿಗಳ ಪ್ರಕಾರ ದೈಹಿಕ ಅಂತರವನ್ನು ಕಾಪಾಡಿಕೊಂಡು ಸುರಕ್ಷಿತವಾಗಿ ತರಗತಿಗಳನ್ನು ನಡೆಸಲು ಅವಶ್ಯವಿರುವಂತೆ ತರಗತಿ ವೇಳಾಪಟ್ಟಿಯನ್ನು ಕಾಲೇಜಿನ ಹಂತದಲ್ಲಿಯೇ ಸಿದ್ಧಪಡಿಸಿಕೊಳ್ಳುವುದು.
  • ಎಲ್ಲಾ ಅಧ್ಯಾಪಕರು ತಮ್ಮ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಕ್ರಮದ ಕುರಿತು ಮುಂದಿನ ಕನಿಷ್ಠ ಒಂದು ತಿಂಗಳ ಅಧ್ಯಯನ ಸಾಮಾಗ್ರಿಗಳನ್ನು ಪ್ರತಿ Period/ Session ಗೆ ಸಂಬAಧಿಸಿದAತೆ ತಯಾರಿಸಿ ವಿದ್ಯಾರ್ಥಿಗಳಿಗೆ ಟೆಲಿಗ್ರಾಂ/ ವಾಟ್ಸಾಪ್/ ಇ-ಮೇಲ್ ಮೂಲಕ ಕಡ್ಡಾಯವಾಗಿ ನೀಡುವುದು. ಅಧ್ಯಯನ ಸಾಮಗ್ರಿಗಳು Video Lectures, PowerPoint Presentations, E-Notes, E-Books, Audio Books ಮತ್ತು Practice Questions ಇತ್ಯಾದಿಗಳ ರೂಪದಲ್ಲಿಇರತಕ್ಕದ್ದು. ಈ ಅಧ್ಯಯನ ಸಾಮಗ್ರಿಗಳನ್ನು ಕಾಲೇಜಿನ ವೆಬ್‌ಸೈಟ್‌ನಲ್ಲಿ ಕಡ್ಡಾಯವಾಗಿ ಅಪ್‌ಲೋಡ್‌ ಮಾಡತಕ್ಕದ್ದು.
  • ಆನ್‌ಲೈನ್/ಸಂಪರ್ಕ ತರಗತಿಗಳಿಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳು ಆನ್-ಕ್ಯಾಂಪಸ್ ಹಾಗೂ ಆಫ಼್-ಕ್ಯಾಂಪಸ್ ಹಾಸ್ಟೆಲ್‌ಗಳಲ್ಲಿ ಉಳಿದು ಕೊಳ್ಳಬಹುದು.
ಸಾಮಾನ್ಯ ಮಾರ್ಗಸೂಚಿ
  • ಕಾಲೇಜಿನ ಸಂಪೂರ್ಣ ಕಟ್ಟಡ, ಮುಖ್ಯದ್ವಾರ, ಶೌಚಾಲಯ ಹಾಗೂ ಎಲ್ಲಾ ಕೊಠಡಿಗಳಲ್ಲಿನ ಪೀಠೋಪಕರಣ ಮತ್ತು ಪಠ್ಯ ಸಾಮಗ್ರಿಗಳನ್ನು ಸ್ಯಾನಿಟೈಸ್ ಮಾಡಿಸುವುದು. ಬೋಧಕರು, ವಿದ್ಯಾರ್ಥಿಗಳು ಹಾಗೂ ಇತರೆ ಸಿಬ್ಬಂದಿ ಕಡ್ಡಾಯವಾಗಿ 3 ದಿನಗಳ ಮುಂಚೆ ಕೋವಿಡ್-19 (RTPCR)‌ ಪರೀಕ್ಷೆಯನ್ನು ಮಾಡಿಕೊಂಡು Test Report Negative ಇದ್ದಲ್ಲಿ ಮಾತ್ರ ವಿ‍ಶ್ವವಿದ್ಯಾಲಯ / ಕಾಲೇಜುಗಳಿಗೆ ಹಾಜರಾಗುವುದು.
  • ಎಲ್ಲಾ ಕಾಲೇಜುಗಳು ತಮ್ಮ ತಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗೊಂದಿಗೆ Mapping ಮಾಡಿಕೊಳ್ಳವುದು. ಪ್ರತಿ ತರಗತಿಯಿಂದ ಒಬ್ಬ ವಿದ್ಯಾರ್ಥಿಯನ್ನು ಗುರುತಿಸಿ ತನ್ನ ಸಹಪಾಠಿಗಳಲ್ಲೇನಾದರು ಕೋವಿಡ್‌‌ʼಗೆ ಸಂಬಂಧಿಸಿದ ಲಕ್ಷಣಗಳನ್ನು ಕಂಡುಬಂದಲ್ಲಿ ಅದನ್ನು ಕೋವಿಡ್‌ ಕಾರ್ಯಪಡೆ/ಸೆಲ್‌ ಗಮನಕ್ಕೆ ತರುವಂತೆ ಸೂಚಿಸುವುದು.
  • ಕಾಲೇಜುಗಳಿಗೆ ಹಾಜರಾಗುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮನೆಯಿಂದಲೇ ಊಟ ಮತ್ತು ಕುಡಿಯುವ ನೀರನ್ನು ಸ್ವತ: ತಂದು ಅವರೇ ಉಪಯೋಗಿಸುವುದು. ಉಪನ್ಯಾಸಕರು ಕಡ್ಡಾಯವಾಗಿ ಮಾಸ್ಕ್‌ ಮತ್ತು Face Shield/ Visor ಅನ್ನು ಧರಿಸುವುದು. ಕಾಲೇಜುಗಳಲ್ಲಿ ಲೈಬ್ರರಿ ಮತ್ತು ಕ್ಯಾಂಟೀನ್‌ಗಳನ್ನು ತೆರೆಯುವಂತಿಲ್ಲ. ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಎನ್‌.ಸಿ.ಸಿ ಹಾಗೂ ಎನ್‌.ಎಸ್‌.ಎಸ್‌ ಚಟುವಟಿಕೆಗಳನ್ನು ಪ್ರಾರಂಭಿಸುವಂತಿಲ್ಲ.
ಪ್ರವೇಶ, ನಿರ್ಗಮನ ಕೇಂದ್ರಗಳ ಸುರಕ್ಷತಾ ಕ್ರಮ
  • ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಥರ್ಮಲ್ ಸ್ಕ್ಯಾನರ್ ಮತ್ತು ಸಾನಿಟೈಸರ್ಗಳ ಸೂಕ್ತ ವ್ಯವಸ್ಥೆಗಳನ್ನು ಮಾಡಬೇಕು. ಪ್ರವೇಶ/ ನಿರ್ಗಮನ ಸ್ಥಳಗಳಲ್ಲಿ ಜನಸಂದಣಿಯನ್ನು ತಪ್ಪಿಸಬೇಕು. ವಿವಿಧ ಕೋರ್ಸುಗಳಿಗೆ ಸೀಮಿತ ವಿದ್ಯಾರ್ಥಿ ಸಂಖ್ಯೆಯನ್ನು ನಿಗಧಿಗೊಳಿಸಿ, ಪ್ರತ್ಯೇಕ ಪ್ರವೇಶ ಮತ್ತು ನಿರ್ಗಮನದ ಸಮಯಗಳನ್ನು ಅನುಸರಿಸಬೇಕು.
  • ಆವರಣದ ಒಳಗೆ ಮತ್ತು ಹೊರಗೆ ಕ್ಯೂ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು, ನೆಲದ ಮೇಲೆ 6 ಅಡಿಗಳ ಅಂತರವಿರುವ ನಿರ್ದಿಷ್ಟ ಗುರುತುಗಳನ್ನು ಮಾಡುವುದು ಮತ್ತು ಅದನ್ನು ಪಾಲಿಸಬೇಕು. ಒಂದು ವೇಳೆ ಪ್ರವೇಶ/ ನಿರ್ಗಮನಕ್ಕೆ ಒಂದಕ್ಕಿಂತ ಹೆಚ್ಚು ಗೇಟ್ ಗಳನ್ನು ಸಂಸ್ಥೆಯು ಹೊಂದಿದ್ದಲ್ಲಿ, ಜನಸಂದಣಿಯನ್ನು ತಪ್ಪಿಸಲು, ಎಲ್ಲಾ ಗೇಟ್ ಗಳನ್ನು ಸಾಕಷ್ಟು ಎಚ್ಚರಿಕೆಯಿಂದ ಬಳಸಬೇಕು. ವಿದ್ಯಾರ್ಥಿಗಳ ಪ್ರವೇಶ ಮತ್ತು ನಿರ್ಗಮನದ ಮೇಲ್ವಿಚಾರಣೆಯನ್ನು ಮಾಡಬೇಕು.
  • ವಿದ್ಯಾರ್ಥಿ, ಬೋಧಕ, ಬೋಧಕೇತರ ಸಿಬ್ಬಂದಿಯ ಥರ್ಮಲ್‌ ತಪಾಸಣೆ, ಮುಖಗವಸು/ಮಾಸ್ಕ್ ಧರಿಸುವುದು, ಕೈಗಳನ್ನು ಶುದ್ಧಿಗೊಳಿಸುವುದನ್ನು ಎಲ್ಲಾ ಪ್ರವೇಶ ಕೇಂದ್ರಗಳಲ್ಲಿ ಖಚಿತಪಡಿಸಿಕೊಳ್ಳಬೇಕು. ಜ್ವರ, ಕೆಮ್ಮು, ಉಸಿರಾಟದ ತೊಂದರೆಯ ಲಕ್ಷಣಗಳನ್ನು ಹೊಂದಿರುವವರು ಶಿಕ್ಷಣ ಸಂಸ್ಥೆಯ ಆವರಣದೊಳಗೆ ಪ್ರವೇಶಿಸುವುದನ್ನು ನಿಷೇಧಿಸುವುದು.
ತರಗತಿ ಕೊಠಡಿಗಳು, ಕಲಿಕಾ ತಾಣಗಳು ಹೇಗಿರಬೇಕು?
  • ಎಲ್ಲಾ ಕಲಿಕಾ ಸ್ಥಳಗಳಲ್ಲಿ ನೈರ್ಮಲ್ಯವನ್ನು ಖಚಿತಪಡಿಸಿಕೊಳ್ಳಬೇಕು. ಆಗಾಗ್ಗೆ ಸ್ಪರ್ಶಿಸಲ್ಪಡುವ ಡೋರ್ ನಾಬ್ ಗಳು, ಎಲಿವೇಟರ್ ಬಟನ್ ಗಳು, ಹ್ಯಾಂಡ್ ರೈಲ್ ಗಳು, ಕುರ್ಚಿಗಳು, ಬೆಂಚುಗಳು, ವಾಶ್ ರೂಮ್ ಫಿಕ್ಚರ್ ಗಳು ಇತ್ಯಾದಿ, ಎಲ್ಲಾ ತರಗತಿಗಳು, ಪ್ರಯೋಗಾಲಯಗಳು, ಲಾಕರ್ ಗಳು, ಪಾರ್ಕಿಂಗ್ ಪ್ರದೇಶಗಳು ಹಾಗೂ ತರಗತಿಗಳಲ್ಲಿ ಸ್ವಚ್ಛಗೊಳಿಸುವಿಕೆ ಮತ್ತು ನಿಯತ ಸೋಂಕು ತಡೆಗಟ್ಟುವಿಕೆ (1% ಸೋಡಿಯಂ ಹೈಪೋಕ್ಲೋರೈಟ್ ಬಳಸಿ) ಪ್ರಕ್ರಿಯೆಯನ್ನು ತರಗತಿಗಳು ಪ್ರಾರಂಭವಾಗುವ ಮುನ್ನ ಮತ್ತು ದಿನದ ಕೊನೆಯಲ್ಲಿ ಕಡ್ಡಾಯಗೊಳಿಸಬೇಕು. ಬೋಧನಾ ಸಾಮಗ್ರಿಗಳು, ಕಂಪ್ಯೂಟರ್, ಲ್ಯಾಪ್ʼಟಾಪ್, ಪ್ರಿಂಟರ್ʼಗಳನ್ನು ನಿಯಮಿತವಾಗಿ 70% ಆಲ್ಕೋಹಾಲ್ ಸ್ವೈಪ್ʼನಿಂದ ಒರೆಸಿ ಸೋಂಕು ತೆಗೆಯಬೇಕು.
  • ತರಗತಿಗಳು, ಪ್ರಯೋಗಾಲಯಗಳು, ಕಂಪ್ಯೂಟರ್ ಲ್ಯಾಬ್ ಗಳು, ಗ್ರಂಥಾಲಯಗಳು ಮತ್ತು ಅಲ್ಲಿನ ಆಸನಗಳನ್ನು ಸ್ವಚ್ಚವಾಗಿಡಬೇಕು ಹಾಗೂ ಆಸನಗಳ ನಡುವೆ ಅಂತರವನ್ನು ಗುರುತಿಸಬೇಕು.
  • ಉಗುಳುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸುವುದು.
  • ಆರೋಗ್ಯ ಸೇತು ಆ್ಯಪ್’ ಅನ್ನು ಮೊಬೈಲ್ʼನಲ್ಲಿ ಅನುಸ್ಥಾಪನೆಗೊಳಿಸಿ ಬಳಸುವ ಕುರಿತು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಸಲಹೆ ನೀಡುವುದು.
  • ಅವಶ್ಯಕತೆಗೆ ಅನುಸಾರವಾಗಿ ಜಿಲ್ಲಾ ಆರೋಗ್ಯ ಕೇಂದ್ರದ ಸಹಾಯದೊಂದಿಗೆ ವೈದ್ಯಕೀಯ ಸಮಾಲೋಚಕರನ್ನು ವಿದ್ಯಾರ್ಥಿಗಳು ಭೇಟಿಮಾಡಿ ತಮ್ಮ ಆತಂಕ, ಮಾನಸಿಕ ಒತ್ತಡ ಅಥವಾ ಭಯದ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸುವುದು.
  • ಸಾಮಾಜಿಕ ಅಂತರ ಕಾಪಾಡಲು ಶಿಕ್ಷಣ ಸಂಸ್ಥೆಗಳ ಆಯಕಟ್ಟಿನ ಸ್ಥಳಗಳಲ್ಲಿ ಸೂಚನಾ ಫಲಕ, ಚಿಹ್ನೆ, ಭಿತ್ತಿಪತ್ರಗಳನ್ನು ಪ್ರದರ್ಶಿಸಬೇಕು. ಸಂಸ್ಥೆಯ ಕೋವಿಡ್ ಕೋಶ/ಕಾರ್ಯಪಡೆಯ ವಿವರಗಳನ್ನು ಪ್ರಚುರಗೊಳಿಸಬೇಕು (ತುರ್ತು ಸಂಖ್ಯೆ, ಸಹಾಯವಾಣಿ ಸಂಖ್ಯೆ, ಇಮೇಲ್ ಐಡಿ ಮತ್ತು ಸಂಪರ್ಕ).
  • ಶಿಕ್ಷಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕಡ್ಡಾಯವಾಗಿ ಗುರುತಿನ ಚೀಟಿಯನ್ನು ಧರಿಸುವುದನ್ನು ಕಡ್ಡಾಯಗೊಳಿಸುವುದು.
  • ಶಿಕ್ಷಣ ಸಂಸ್ಥೆಗಳು ಅಗತ್ಯಾನುಸಾರ ಬೋಧನಾ ಸಮಯವನ್ನು ವಿಸ್ತರಿಸಬಹುದು ಅಥವಾ ಪರಿವರ್ತಿಸುವುದು.
  • ತರಗತಿ ಕೊಠಡಿ, ಕಲಿಕಾ ತಾಣಗಳಲ್ಲಿ ಸ್ಥಳಾವಕಾಶದ ಲಭ್ಯತೆಯನ್ನು ಆಧರಿಸಿ, ತರಗತಿಗಳಿಗೆ ಹಾಜರಾಗಲು 50%ವರೆಗಿನ ವಿದ್ಯಾರ್ಥಿಗಳಿಗೆ ರೊಟೇಷನ್ ಆಧಾರದ ಮೇಲೆ ಅವಕಾಶ ನೀಡುವುದು.
  • ಸಂದರ್ಶಕರಿಗೆ ಪ್ರವೇಶ ನೀಡಬಾರದು ಅಥವಾ ಅವರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಬೇಕು. ಪ್ರವೇಶಾವಕಾಶ ನೀಡಿದಲ್ಲಿ ಸಂದರ್ಶಕರ ಸಂಪೂರ್ಣ ಸಂಪರ್ಕ ವಿವರಗಳನ್ನು ಅವನು/ಅವಳು ಭೇಟಿ ಯಾಗುವ ವ್ಯಕ್ತಿಗಳ ಹೆಸರುಗಳ ಜತೆಗೆ ನಿರ್ವಹಿಸತಕ್ಕದ್ದು.
  • ವಿದ್ಯಾರ್ಥಿಗೆ ಅಥವಾ ಅವರ ಮನೆಯಲ್ಲಿ ಯಾವುದೇ ವ್ಯಕ್ತಿಗೆ ಕೋವಿಡ್ ಸೊಂಕಿನ ಲಕ್ಷಣಗಳಾದ ನೆಗಡಿ, ಕೆಮ್ಮು, ಜ್ವರ, ಮೂಗು ಸೋರುವುದು ಮುಂತಾದ ಲಕ್ಷಣಗಳಿದ್ದಲ್ಲಿ ವಿದ್ಯಾರ್ಥಿಯನ್ನು ಕಾಲೇಜಿಗೆ ಕಳುಹಿಸದೆ ಹಾಗೂ ಕೂಡಲೇ ಹತ್ತಿರದ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ಪಡೆಯುವ ಬಗ್ಗೆ ವಿದ್ಯಾರ್ಥಿ ಹಾಗೂ ಪೋಷಕರಿಗೆ ಅರಿವು ಮೂಡಿಸುವುದು.
  • ವಿದ್ಯಾರ್ಥಿಗಳು ಕಾಲೇಜಿನ ಆವರಣವನ್ನು ಪ್ರವೇಶಿಸುತ್ತಿದ್ದಂತೆ ಸ್ಯಾನಿಟೈಸರ್ ಅಥವಾ ಸಾಬೂನಿನಿಂದ ಕೈಗಳನ್ನು ಸ್ವಚ್ಚಗೊಳಿಸಿಕೊಳ್ಳಲು ಅವಕಾಶ ಕಲ್ಪಿಸತಕ್ಕದ್ದು. ಅಗತ್ಯತೆಗೆ ಅನುಸಾರ ಥರ್ಮಲ್ ಸ್ಕ್ಯಾನರ್ ಗಳನ್ನು ಒದಗಿಸಿಕೊಳ್ಳುವುದು ಮತ್ತು ಪ್ರತಿದಿನ ಪ್ರತಿ ವಿದ್ಯಾರ್ಥಿಯ ದೇಹದ ಉಷ್ಣತೆಯನ್ನು ಕಡ್ಡಾಯವಾಗಿ ಪರೀಕ್ಷಿಸುವುದು.
  • ವಿದ್ಯಾರ್ಥಿಗಳು ಕಾಲೇಜಿಗೆ ಪ್ರವೇಶಿಸುವ ಸಂದರ್ಭದಲ್ಲಿ ಯಾವುದೇ ವಿದ್ಯಾರ್ಥಿಗೆ ರೋಗ ಲಕ್ಷಣಗಳು ಇದ್ದಲ್ಲಿ ಅಂತಹ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ಕ್ರಮವಹಿಸುವುದು ಹಾಗೂ ಅವರಿಗೆ ಅಗತ್ಯ ಚಿಕಿತ್ಸೆ ಪಡೆದುಕೊಳ್ಳಲು ಸೂಚಿಸುವುದು ಮತ್ತು ಮಾರ್ಗದರ್ಶನ ನೀಡುವುದು.
  • ಕಾಲೇಜಿಗೆ ಬರುವ ಪ್ರತಿ ವಿದ್ಯಾರ್ಥಿಯು ಕಡ್ಡಾಯವಾಗಿ ಮತ್ತು ಸರಿಯಾಗಿ ಮಾಸ್ಕ್ (ಮುಖ ಕವಚ) ಧರಿಸಿರುವುದನ್ನು ಖಚಿತಪಡಿಸಿಕೊಳ್ಳುವುದು. ವಿದ್ಯಾರ್ಥಿಗಳು ಕಾಲೇಜಿನ ಆವರಣ, ತರಗತಿ ಕೊಠಡಿ, ಪ್ರಯೋಗಾಲಯ, ಗ್ರಂಥಾಲಯ, ಹಾಸ್ಟೆಲ್, ಉಪಹಾರ ಗೃಹ, ಕ್ರೀಡಾಂಗಣ, ಬ್ಯಾಂಕ್ ಸೇರಿದಂತೆ ಯಾವುದೇ ಸ್ಥಳ ಹಾಗೂ ಸಂದರ್ಭಗಳಲ್ಲಿಯೂ ಗುಂಪು ಸೇರದೆ ಕಡ್ಡಾಯವಾಗಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಬಗ್ಗೆ ಸೂಚಿಸುವುದು.
  • ವಿದ್ಯಾರ್ಥಿಗಳು/ಕಾಲೇಜು ಸಿಬ್ಬಂದಿ ಬಳಸಿದ ಮಾಸ್ಕ್ ಗಳನ್ನು ಸುರಕ್ಷಿತವಾಗಿ ವಿಲೇವಾರಿ ಮಾಡಲು ಸೂಕ್ತ ಕಸದ ತೊಟ್ಟಿ/ಬುಟ್ಟಿಗಳ ವ್ಯವಸ್ಥೆ ಮಾಡುವುದು.
  • ಕಾಲೇಜಿನ ಪ್ರಾಂಶುಪಾಲರು, ಬೋಧಕರು ಮತ್ತು ಆಡಳಿತ ಸಿಬ್ಬಂದಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಹಾಗೂ ಅಗಿಂದಾಗ್ಗೆ ಸಾಬೂನು/ಸ್ಯಾನಿಟೈಸರ್ ನಿಂದ ಕೈತೊಳೆದುಕೊಳ್ಳುವುದು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಬೇಕು.
  • ಕಾಲೇಜಿನ ಪ್ರಾಂಶುಪಾಲರು, ಬೋಧಕರು, ಆಡಳಿತ ಸಿಬ್ಬಂದಿಗಳಲ್ಲಿ ಯಾರಿಗಾದರೂ ಕೋವಿಡ್ ಸೊಂಕಿನ ಲಕ್ಷಣಗಳು ಇದ್ದಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷೆಯನ್ನು ಮಾಡಿಸುವುದು.
  • ವಿದ್ಯಾರ್ಥಿಗಳ ಮಾನಸಿಕ ಮತ್ತು ದೈಹಿಕ ಸ್ವಾಸ್ಥ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಆರೋಗ್ಯಕರ, ಶುಚಿ ಮತ್ತು ಸ್ವಾಸ್ಯವಾದ ಆಹಾರ ಪದಾರ್ಥಗಳನ್ನು ಬಳಸುವಂತೆ ವಿದ್ಯಾರ್ಥಿಗಳಿಗೆ ಸೂಚಿಸುವುದು ಹಾಗೂ ವಿದ್ಯಾರ್ಥಿಗಳ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ವ್ಯಾಯಾಮ, ಯೋಗ, ಸರಳ ಪ್ರಾಣಾಯಾಮಗಳನ್ನು ಸಾಮಾಜಿಕ ಅಂತರದೊಂದಿಗೆ ಮಾಡುವಂತೆ ಪ್ರೇರೇಪಿಸುವುದು.
  • ಹೆಚ್ಚಿನ ಸಲಹೆ, ಮಾರ್ಗದರ್ಶನ ಮತ್ತು ಸಂಶಯಗಳ ನಿವಾರಣೆಗಾಗಿ ಹತ್ತಿರದ ಆರೋಗ್ಯ ಕೇಂದ್ರವನ್ನು ಸಂಪರ್ಕಿಸುವುದು. ವಿದ್ಯಾರ್ಥಿಗಳ ಪೋಷಕರಿಂದ ನಿರಂತರ ಪ್ರತಿಕ್ರಿಯೆ (Continuous Feedback) ಪಡೆಯಲು ಕಾಲೇಜು ಹಂತದಲ್ಲಿ ಕಾರ್ಯವಿಧಾನಗಳನ್ನು ರೂಪಿಸಿಕೊಳ್ಳುವುದು.
  • ಕಾಲೇಜು ಹಂತದಲ್ಲಿ ಕೋವಿಡ್ ಮಾರ್ಗಸೂಚಿಗಳ ಅನುಸರಣೆ ಹಾಗೂ ಕೋವಿಡ್-19 ರ ಸಾಂಕ್ರಾಮಿಕ ಹಿನ್ನಲೆಯಲ್ಲಿ ಉದ್ಭವಿಸುವಂತಹ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ಬೋಧಕವರ್ಗ ಹಾಗೂ ಬೋಧಕೇತರ ಸಿಬ್ಬಂದಿಯನ್ನೊಳಗೊಂಡ ಕೋವಿಡ್ ಕಾರ್ಯಪಡೆ (Taskforce) ಯನ್ನು ಪ್ರಾಂಶುಪಾಲರು ತಮ್ಮ ಅಧ್ಯಕ್ಷತೆಯಲ್ಲಿ ರಚಿಸುವುದು.
  • ವಿಶ್ವವಿದ್ಯಾಲಯ ಹಂತದಲ್ಲಿ ಕೋವಿಡ್ ಮಾರ್ಗಸೂಚಿಗಳ ಅನುಸರಣೆ ಹಾಗೂ ಕೋವಿಡ್-19ರ ಸಾಂಕ್ರಾಮಿಕ ಹಿನ್ನಲೆಯಲ್ಲಿ ಉದ್ಭವಿಸುವಂತಹ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ಕೋವಿಡ್ ಕಾರ್ಯಪಡೆ (Taskforce) ಯನ್ನು ರಚಿಸಲು ಉಪಕುಲಪತಿಗಳು ಕ್ರಮಕೈಗೊಳ್ಳುವುದು.
  • ಪ್ರತಿ ವಿಶ್ವವಿದ್ಯಾಲಯವು ತನ್ನ ವ್ಯಾಪ್ತಿಯ ಸಂಯೋಜಿತ ಕಾಲೇಜುಗಳಿಂದ ನಿಯತವಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ದತ್ತಾಂಶಗಳನ್ನು ಪಡೆಯಲು ಕ್ರಮಕೈಗೊಳ್ಳುವುದು. ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವುದರ ಬಗ್ಗೆ ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಸುರಕ್ಷತೆಗೆ ಕಾಲೇಜುಗಳು ತೆಗೆದುಕೊಂಡ ಕ್ರಮಗಳ ಬಗ್ಗೆ ವಿಶ್ವವಿದ್ಯಾಲಯವು ನಿಗಾವಹಿಸುವುದು.
  • ಕಾಲೇಜಿನಲ್ಲಿ ಒಂದು ಪ್ರತ್ಯೇಕ ಕೊಠಡಿಯನ್ನು ಮೀಸಲಿಟ್ಟು ಅದರಲ್ಲಿ ಕೋವಿಡ್ ಪ್ರಥಮ ಚಿಕಿತ್ಸೆಗಾಗಿ ಕೋವಿಡ್ ಕಿಟ್‌ಗಳನ್ನು ಹಾಗೂ ಅಗತ್ಯತೆಗೆ ಅನುಸಾರವಾಗಿ ಪಲ್ಸ್-ಆಕ್ಸಿಮೀಟರ್‌ಗಳನ್ನು ಒದಗಿಸಿಕೊಳ್ಳುವುದು.
  • ಕ್ಯಾಂಪಸ್ ನಲ್ಲಿ ಸಾಕಷ್ಟು ಸುರಕ್ಷಿತ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು.
  • ಮಾನಸಿಕ ಆರೋಗ್ಯ & ಯೋಗಕ್ಷೇಮಕ್ಕೆ ಶಿಕ್ಷಣ ಸಚಿವಾಲಯದ ವೆಬ್ ಸೈಟ್ ನಲ್ಲಿ ರಚಿಸಲಾಗಿರುವ “ಮನೋದರ್ಪಣ್” ಹೆಸರಿನ ವೆಬ್ ಪೇಜ್ ನ ಬಗ್ಗೆ ಎಲ್ಲಾ ಬೋಧಕ ಸದಸ್ಯರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಅರಿವು ಮೂಡಿಸಬೇಕು. ಈ ವೆಬ್ ಪೇಜ್ ಸಲಹೆ, ಪ್ರಾಯೋಗಿಕ ಸಲಹೆಗಳು, ಭಿತ್ತಿಪತ್ರಗಳು, ವೀಡಿಯೋಗಳು, ಮನೋಸಾಮಾಜಿಕ ಬೆಂಬಲ, FAQ ಮತ್ತು ಆನ್ʼಲೈನ್ ಪ್ರಶ್ನೆ ಮಾಡುವ ಅವಕಾಶಗಳನ್ನು ಒಳಗೊಂಡಿದ್ದು, ಇವುಗಳ ಸದುಪಯೋಗ ಪಡಿಸಿಕೊಳ್ಳಲು ಕ್ರಮವಹಿಸಬೇಕು. ವಿದ್ಯಾರ್ಥಿಗಳಿಗೆ ಟೆಲಿ ಕೌನ್ಸಲಿಂಗ್ ನೀಡುವ ರಾಷ್ಟ್ರೀಯ ಟೋಲ್ ಫ್ರೀ ಸಹಾಯವಾಣಿ (84454440632) ಅನ್ನು ಸ್ಥಾಪಿಸಲಾಗಿದ್ದು, ಅದನ್ನು ಮಾನಸಿಕ ಆರೋಗ್ಯದ ಸಮಸ್ಯೆಗಳನ್ನು ಪರಿಹರಿಸಲು ಬಳಸಿಕೊಳ್ಳುವುದು.
  • ಕೇಂದ್ರ ಆರೋಗ್ಯ & ಕುಟುಂಬ ಕಲ್ಯಾಣ ಸಚಿವಾಲಯ https://www.mohfw.gov.in ನವರ ಕೆಳಕಂಡ ವಿಡಿಯೋ ಮತ್ತು ಡಾಕ್ಯುಮೆಂಟ್ ಲಿಂಕ್ ಗಳನ್ನು ವಿಶ್ವವಿದ್ಯಾಲಯ/ ಕಾಲೇಜು ವೆಬ್ ಸೈಟ್ ನಲ್ಲಿ ಪ್ರಕಟಿಸುವುದು ಮತ್ತು ಸದರಿ ಲಿಂಕ್ ಗಳನ್ನು ವಿದ್ಯಾರ್ಥಿಗಳು ಮತ್ತು ಬೋಧಕರೊಂದಿಗೆ ಇ-ಮೇಲ್, ಸಾಮಾಜಿಕ ಜಾಲತಾಣಗಳಾದ ಫೇಸ್ ಬುಕ್, ವಾಟ್ಸಾಪ್ ಮತ್ತು ಟ್ವಿಟರ್ ಮೂಲಕ ಹಂಚಿಕೊಳ್ಳುವುದು.
  • ಮಾನಸಿಕ ಆರೋಗ್ಯವನ್ನು ನೋಡಿಕೊಳ್ಳಲು ಪ್ರಾಯೋಗಿಕ ಸಲಹೆಗಳು. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ನೋಡಿ..
    https://www.youtube.com/watch?v=uHB3WJsLJ8s&feature=youtube
  • ಕೋವಿಡ್‌-19ರ ಸಮಯದಲ್ಲಿ ನಮ್ಮ ಮನಸ್ಸನ್ನು ನಿಭಾಯಿಸುವ ಬಗ್ಗೆ. ಡಾಕ್ಯೂಮೆಂಟ್‌ ನೋಡಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
    https://www.mohfw.gov.in/pdf/MindingourmindsduringCoronaeditedat.pdf
  • ಕೋವಿಡ್‌-19 ಸಮಯದಲ್ಲಿ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮವನ್ನು ಹೇಗೆ ನಿರ್ವಹಿಸುವುದು ಎಂಬುದರ ಕುರಿತು ವಿವಿಧ ಆರೋಗ್ಯ ತಜ್ಞರ ಅಭಿಪ್ರಾಯಗಳನ್ನು ಪಾಲಿಸುವುದು. ಅದಕ್ಕೆ ಅಗತ್ಯವಾದ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
    https://www.youtube.com/watch?v=iuKhtSehp24&feature=youtube
    ನಡೆವಳಿಕೆಯ ಸ್ವಾಸ್ಥ್ಯ: ಟೋಲ್ ಫ್ರೀ ಸಹಾಯವಾಣಿ – 0804611007 
ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿಗೆ ಜಾಗೃತಿ
  • ಕೋವಿಡ್-19 ಸೋಂಕು ಹೇಗೆ ಹರಡುತ್ತದೆ, ಸೋಂಕಿನ ಸಾಮಾನ್ಯ ಲಕ್ಷಣಗಳು ಮತ್ತು ಅದರ ಹರಡುವಿಕೆಯನ್ನು ನಿಯಂತ್ರಿಸಲು ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುವುದು.‌
  • ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು, ಉದಾಹರಣೆಗೆ, ಕೈಗಳನ್ನು ಹೇಗೆ ತೊಳೆಯುವುದು, ಕೆಮ್ಮುವುದು ಅಥವಾ ಸೀನುವುದು ಹೇಗೆ ಹಾಗೂ ಮುಖ, ಕಣ್ಣು, ಬಾಯಿ ಮತ್ತು ಮೂಗುಗಳನ್ನು ಮುಟ್ಟುವುದನ್ನು ತಪ್ಪಿಸುವುದರ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ನಿಯಮಿತವಾಗಿ ತಿಳಿಸುವುದು.
  • ಸಾಮಾಜಿಕ ಅಂತರ, ಮುಖಕವಚ/ ಮಾಸ್ಕ್ ಧರಿಸುವುದು, ಸ್ವಚ್ಛತೆ ಇತ್ಯಾದಿಗಳ ಅಗತ್ಯವನ್ನು ಮನವರಿಕೆ ಮಾಡುವುದು. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕಾಗಿ ವ್ಯಾಯಾಮ, ಯೋಗ, ಪ್ರಾಣಾಯಾಮ, ಧ್ಯಾನ ಮತ್ತು ಮುಂತಾದ ಚಟುವಟಿಕೆಗಳನ್ನು ಪ್ರೋತ್ಸಾಹಿಸುವುದು.
  • ಮಾನಸಿಕ ಆರೋಗ್ಯವನ್ನು ಸುಧಾರಿಸಲು ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಸ್ನೇಹಿತರು, ಶಿಕ್ಷಕರು ಮತ್ತು ಪೋಷಕರೊಂದಿಗೆ ಹಂಚಿಕೊಳ್ಳಲು ಪ್ರೋತ್ಸಾಹಿಸಬೇಕು. ಏಕಾಗ್ರತೆ, ಸಕಾರಾತ್ಮಕ ಮನೋಭಾವ, ಉತ್ತಮ ಆಹಾರ ಸೇವನೆ, ವಿಶ್ರಾಂತಿ ಮತ್ತು ನಿದ್ರೆಗಳ ಆವಶ್ಯಕತೆಯ ಬಗ್ಗೆ ಮನವರಿಕೆ ಮಾಡಿಕೊಡುವುದು.
  • ಶುಚಿರುಚಿಯಾದ ಆಹಾರ ಮತ್ತು ತಾಜಾ ಹಣ್ಣುಗಳ ಸೇವನೆ, ಆಗಾಗ್ಗೆ ಬಿಸಿ ನೀರು ಕುಡಿಯುವುದು, ಜಂಕ್ ಫುಡ್ ಅಥವಾ ಇತರೆ ವಸ್ತುಗಳನ್ನು ತ್ಯಜಿಸುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವ ಬಗ್ಗೆ ಅರಿವು ಮೂಡಿಸುವುದು.
  • ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಆಡಿಯೋ, ವಿಡಿಯೋ ಮತ್ತಿತರ ಮಾಧ್ಯಮ ಬಿಡಿಭಾಗಗಳನ್ನು ಶುಚಿಗೊಳಿಸುವಂತೆ ತಿಳಿಸುವುದು. 
  • ವಿದ್ಯಾರ್ಥಿಗಳು ತಮ್ಮ ಲ್ಯಾಪ್‌ಟಾಪ್‌ಗಳು, ಆಡಿಯೋ, ವಿಡಿಯೋ ಮತ್ತು ಇತರ ಮಾಧ್ಯಮ ಪರಿಕರಗಳನ್ನು ನಿಯಮಿತವಾಗಿ ಸ್ವಚ್ಚಗೊಳಿಸುವಂತೆ ತಿಳಿಸುವುದು.
  • ಕೋವಿಡ್-19 ನ ಸೋಂಕು, ಪರಿಣಾಮ ಮತ್ತು ನಿಯಂತ್ರಣ ಕ್ರಮಗಳ ಬಗ್ಗೆ ಮುಕ್ತವಾಗಿ ಚರ್ಚಿಸುವುದು. ವೈರಸ್‌ನಿಂದ ಉಂಟಾಗುವ ಸೋಂಕಿನ ಅಪಾಯದ ಬಗ್ಗೆ ಜಾಗೃತಿ ಮೂಡಿಸಲು ಕ್ಯಾಂಪಸ್ ನ ಸೂಕ್ತ ಸ್ಥಳಗಳಲ್ಲಿ ಪೋಸ್ಟರ್ ಮತ್ತು ಸ್ಟಿಕ್ಕರ್‌ಗಳನ್ನು ಅಂಟಿಸಬೇಕು.‌
  • ವಿಕಲಚೇತನರಿಗೆ ಸೂಕ್ತ ಮತ್ತು ಸಮಯೋಚಿತ ಸೌಲಭ್ಯಗಳನ್ನು ಒದಗಿಸಬೇಕು. ಜಾತಿ, ಮತ, ಲಿಂಗ ತಾರತಮ್ಯ ಮಾಡಬಾರದು.
  • ಪುಸ್ತಕಗಳು, ಇತರ ಕಲಿಕಾ ಸಾಮಗ್ರಿಗಳು ಮತ್ತು ತಿನ್ನಬಹುದಾದ ವಸ್ತುಗಳನ್ನು ಹಂಚಿಕೊಳ್ಳುವುದನ್ನು ನಿರುತ್ಸಾಹಗೊಳಿಸಬೇಕು. ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ಆರೋಗ್ಯಕ್ಕೆ ಸಂಬಂಧಿಸಿದಂತೆ ಕೇಂದ್ರ/ರಾಜ್ಯ ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸುವ ನಿರ್ದೇಶನಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳು ಕಡ್ಡಾಯವಾಗಿ ಪಾಲಿಸುವುದು.
  • ಹಾಸ್ಟೆಲ್‌ಗಳಿಗೆ ಸಂಬಂಧಿಸಿದ ಆರೋಗ್ಯ ಮಾರ್ಗಸೂಚಿಗಳನ್ನು ಸಮಾಜ ಕಲ್ಯಾಣ/ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಹೊರಡಿಸಲಿದ್ದು ಸದರಿ ಮಾರ್ಗಸೂಚಿಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿನ ಹಾಗೂ ಇತರೆ ಎಲ್ಲಾ ಹಾಸ್ಟೆಲ್‌ಗಳಲ್ಲಿಯೂ ಕಡ್ಡಾಯವಾಗಿ ಅನುಸರಿಸುವುದು.
  • ಜಿಲ್ಲೆಯಲ್ಲಿನ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕೋವಿಡ್ ಸಾಂಕ್ರಾಮಿಕ ತುರ್ತು ಪರಿಸ್ಥಿತಿಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೋವಿಡ್ ಉಸ್ತುವಾರಿ ಮತ್ತು ಸಮನ್ವಯ ಸಮಿತಿಯನ್ನು ರಚಿಸಲಾಗಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಸಮಿತಿಯ ಅಧ್ಯಕ್ಷರಾಗಿದ್ದು; ಜಿಪಂ ಸಿಇಓ, ಜಿಲ್ಲಾ ವೈದ್ಯಾಧಿಕಾರಿ, ಜಿಲ್ಲಾ ಸರ್ಜನ್‌, ಜಿಲ್ಲಾ ಸಾರಿಗೆ ಅಧಿಕಾರಿ (ಆಟಿʼಓ), ಕೆಎಸ್‌ಆರ್‌ಟಿಯ ವಿಭಾಗೀಯ ನಿಯಂತ್ರಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆಯ ಜಿಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ, ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರು ಸದಸ್ಯ ರಾಗಿರುತ್ತಾರೆ.
ಜಿಲ್ಲಾ ಮಟ್ಟದ ಸಮಿತಿಯ ಪಾತ್ರ, ಕರ್ತವ್ಯಗಳು
  • ಜಿಲ್ಲೆಯ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಶೈಕ್ಷಣಿಕ ಮತ್ತು ಸಾಮಾನ್ಯ ಮಾರ್ಗಸೂಚಿಗಳ ಅನುಷ್ಠಾನವನ್ನು ಪರಿವೀಕ್ಷಿಸುವುದು.
  • ಶಿಕ್ಷಣ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಅವಶ್ಯಕತೆಗನುಸಾರವಾಗಿ ಕೋವಿಡ್ ತಪಾಸಣೆ ನಡೆಸುವುದು.
  • ವಿದ್ಯಾರ್ಥಿಗಳಿಗೆ ಸಾರಿಗೆ ಮತ್ತು ಬಸ್‌ಪಾಸ್ ವ್ಯವಸ್ಥೆ ಕಲ್ಪಿಸುವುದು. ಕಾಲೇಜುಗಳಿಗೆ ಕೋವಿಡ್ ಪ್ರಥಮ ಚಿಕಿತ್ಸೆ ಕಿಟ್‌ಗಳನ್ನು ಒದಗಿಸುವುದು.
  • ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಮತ್ತು ಇತರೆ ಹಾಸ್ಟೆಲ್‌ಗಳನ್ನು ಪ್ರಾರಂಬಿಸುವುದು ಮತ್ತು ಸದರಿ ಹಾಸ್ಟೆಲ್‌ಗಳಲ್ಲಿ ಕೋವಿಡ್ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು.
  • ವಿದ್ಯಾರ್ಥಿಗಳಲ್ಲಿ ಕರೋನ ಹರಡುವಿಕೆಯನ್ನು ತಡೆಗಟ್ಟುವ ಕುರಿತಂತೆ ಜಾಗೃತಿ ಮೂಡಿಸುವುದು.
Tags: college reopenCovid-19karnatakasop for covid
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ವೈದ್ಯ ಡಾ.ಎಚ್.ಎಂ.ದಡ್ಡಿ, ಶಿಕ್ಷಣ ತಜ್ಞ ಡಾ.ವೂಡೇ ಕೃಷ್ಣಗೆ ನಾಡೋಜ ಗರಿ

ವೈದ್ಯ ಡಾ.ಎಚ್.ಎಂ.ದಡ್ಡಿ, ಶಿಕ್ಷಣ ತಜ್ಞ ಡಾ.ವೂಡೇ ಕೃಷ್ಣಗೆ ನಾಡೋಜ ಗರಿ

Leave a Reply Cancel reply

Your email address will not be published. Required fields are marked *

Recommended

ಆರೋಗ್ಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದರೆ 5 ವರ್ಷ ಜೈಲು!  1,763 ವೈದ್ಯರನ್ನು   ನೇಮಿಸಲಾಗಿದೆ ಎಂದ  ಹೆಲ್ತ್‌ ಮಿನಿಸ್ಟರ್

ಆರೋಗ್ಯ ಸಿಬ್ಬಂದಿ ಮೇಲೆ‌ ಹಲ್ಲೆ ಮಾಡಿದರೆ 5 ವರ್ಷ ಜೈಲು! 1,763 ವೈದ್ಯರನ್ನು ನೇಮಿಸಲಾಗಿದೆ ಎಂದ ಹೆಲ್ತ್‌ ಮಿನಿಸ್ಟರ್

4 years ago
ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ?

ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್‌ ಪಾಸಿಟಿವ್

3 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ