• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ವಿದೇಶದಲ್ಲೇ ಓದಿ; ಆದರೆ, ಭಾರತಕ್ಕೆ ಸೇವೆ ಮೀಸಲಿಡಿ: ಹೊಸ ವೈದ್ಯರಿಗೆ ಪಾಠ ಮಾಡಿದ ಡಾಕ್ಟರ್

cknewsnow desk by cknewsnow desk
November 11, 2020
in CHIKKABALLAPUR, STATE
Reading Time: 1 min read
0
ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬಿಜೆಪಿ ಅತಿರಥಮಹಾರಥರ ಡೇ ಔಟ್‌
914
VIEWS
FacebookTwitterWhatsuplinkedinEmail

ಮೈಸೂರು: ಜಗತ್ತಿನ ಯಾವುದೇ ಮೂಲೆಗಾದರೂ ನೀವು ಹೋಗಿ ಕಲಿಯಿರಿ. ಆದರೆ ನಿಮ್ಮ ಸೇವೆಯನ್ನು ಇಲ್ಲಿನ ಜನತೆಗಾಗಿ ಮೀಸಲಿಡಿ ಎಂದು ಭಾವೀ ವೈದ್ಯರುಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಿವಿಮಾತು ಹೇಳಿದ್ದಾರೆ.

ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾಮಠದಲ್ಲಿ ಬುಧವಾರ ಜೆಎಸ್‍ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ 11ನೇ ಘಟಿಕೋತ್ಸವ ಪ್ರಯುಕ್ತ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿದ ಅವರು; ಹೆಚ್ಚು ಹೆಚ್ಚು ಕಲಿಯಿರಿ, ಎಷ್ಟು ತಿಳಿದುಕೊಂಡರೂ ಅದು ಕಡಿಮೆಯೇ. ವಿದೇಶಕ್ಕೆ ಹೋಗಿ ಬೇಕಾದರೂ ಕಲಿಯಿರಿ. ಆದರೆ ಮರಳಿ ಬಂದು ಇಲ್ಲಿನ ಜನತೆಗೆ ಸೇವೆ ನಿಡುವುದನ್ನು ಮಾತ್ರ ಮರೆಯದಿರಿ. ಜೆಎಸ್ಎಸ್ ಶ್ರೇಷ್ಠ ಶಿಕ್ಷಣ ಸಂಸ್ಥೆ. ಇಲ್ಲಿ ನೀವು ಕಲಿತಿದ್ದೀರಿ, ಸ್ಪೂರ್ತಿಯ ಸೆಲೆ ಇಲ್ಲಿದೆ. ಆ ಸ್ಫೂರ್ತಿಯನ್ನು ನಿಮ್ಮ ಜೊತೆ ಒಯ್ಯಿರಿ ಎಂದರು.

ನಾವಿಂದು ಕೋವಿಡ್ ವಿರುದ್ಧ ಹೋರಾಡುತ್ತಿದ್ದೇವೆ. ಸೋಂಕಿತರ ಚಿಕಿತ್ಸೆ, ತಪಾಸಣೆಗಾಗಿ ಜೆಎಸ್ಎಸ್ ಸಂಸ್ಥೆಯು ಸರಕಾರದ ಜತೆ ಸಹಾಯಕ್ಕೆ ನಿಂತಿತ್ತು. ಸ್ವಾಮೀಜಿಯವರ ಶುಭಾಶೀರ್ವಾದದೊಂದಿಗೆ ನಿಮಗಿಲ್ಲಿ ಸಾಧನೆಗೆ ಅವಕಾಶ ಲಭಿಸಿದೆ. ವೈದ್ಯಕೀಯ ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಟ್ಟು ಪದವಿ ಪಡೆದಿದ್ದೀರಿ. ಮೊದಲು ನೀವೆಲ್ಲ ತಮ್ಮ ಜವಾಬ್ದಾರಿ ಏನು ಎಂಬುದನ್ನು ಅರಿಯಬೇಕು. ಈ ಶಿಕ್ಷಣ ಇಲ್ಲಿಗೆ ನಿಲ್ಲಲ್ಲ. ಅದು ಸದಾ ಮುಂದುವರಿಯಲಿದೆ. ಜೀವನದಲ್ಲಿ ಹುಟ್ಟಿನಿಂದ ಸಾಯುವವರೆಗೂ ಕಲಿಯುವುದು ಇದ್ದೇ ಇರುತ್ತದೆ. ಕಲಿಯುವಿಕೆ ನಿರಂತರ ಎಂದರು ಅವರು.

ಸಾರ್ವಜನಿಕರ ಆರೋಗ್ಯದ ಕುರಿತು ಕಾಳಜಿ ವಹಿಸಬೇಕು. ಸಮುದಾಯವನ್ನು ಶಿಕ್ಷಣಭರಿತವಾಗಿ ಮಾಡಿ ಅವರಿಗೆ ಜೀವನ ಶೈಲಿಯ ಕುರಿತು ಅರಿವು ಮೂಡಿಸಬೇಕು. ನಿಮ್ಮಲ್ಲಿ ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ವೈದ್ಯೋ ನಾರಾಯಣೋ ಹರಿ ಎಂಬ ಮಾತಿದೆ. ವೈದ್ಯರನ್ನು ದೇವರಿಗೆ ಹೋಲಿಕೆ ಮಾಡುತ್ತಾರೆ. ಅಂತಹ ದೇವರುಗಳನ್ನು ಸೃಷ್ಟಿ ಮಾಡಿರತಕ್ಕ ಈ ಸಂಸ್ಥೆಯೇ ನಿಜ ದೇವಾಲಯ ಎಂದು ನಾನು ಭಾವಿಸುತ್ತೇನೆ.  ನಡೆದಾಡುವ ದೈವ ಸಂಭೂತರಾಗಿ ಶ್ರೀ ಸ್ವಾಮೀಜಿಯವರ ವಿಶೇಷ ಆಶೀರ್ವಾದ ನಿಮ್ಮ ಇಡೀ ಜೀವನದುದ್ದಕ್ಕೂ ರಕ್ಷಾಕವಚವಾಗಿರಲಿದೆ ಎಂದು ಸಚಿವರು ವೈದ್ಯರಿಗೆ ಹಾರೈಸಿದರು.

ಅನೇಕ ಕಾರ್ಯಕ್ರಮಗಳನ್ನು ಸರಕಾರ ಮಾಡುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣವನ್ನು ಚೆನ್ನಾಗಿ ನಿಭಾಯಿಸುತ್ತಿದ್ದೇವೆ. ಸರಕಾರದ ಜತೆ ಆಧಾರ ಸ್ತಂಭಗಳಾಗಿ ಹಲವು ಸಂಸ್ಥೆಗಳು ನಿಂತಿವೆ. ಕರ್ನಾಟಕ ಕೋವಿಡ್ ನಿಯಂತ್ರಿಸುವಲ್ಲಿ ಸಾಧನೆಗೈದಿದೆ. ಇನ್ನೇನು ದೀಪಾವಳಿ ಸಮೀಪಿಸುತ್ತಿದೆ. ದಸರಾವನ್ನು ಸರಳವಾಗಿ ಆಚರಿಸಿ ಯಶಸ್ವಿಯಾಗಿದ್ದೇವೆ. ಕೋವಿಡ್ ಹೆಚ್ಚಳವಾಗಿಲ್ಲ. ನಮಗೆ ಕೇರಳ ಪಾಠವಾಗಬೇಕು. ತಿಂಗಳ ಹಿಂದೆ ಪ್ರಕರಣ ಹೆಚ್ಚಿತ್ತು. ಆದರೆ ಇಂದು ಪ್ರಕರಣಗಳು ಕಡಿಮೆಯಾಗುತ್ತಿವೆ. ಹಾಗಂತ ನಾವು ಮೈಮರೆಯಬಾರದು ಎಂದು ಅವರು ಎಚ್ಚರಿಸಿದರು.

ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಸಾನಿಧ್ಯ

ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ಸಾನಿಧ್ಯದಲ್ಲಿ ಪದವಿ ಪ್ರದಾನ ಮಾಡಲಾಗಿದ್ದು ಶ್ರೀಗಳು ಪ್ರತಿಜ್ಞಾವಿಧಿ ಬೋಧಿಸಿದರು. ಒಟ್ಟು 1436 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.  52 ವಿದ್ಯಾರ್ಥಿಗಳಿಗೆ ಪದಕ, 42 ವಿದ್ಯಾರ್ಥಿಗಳಿಗೆ ಪಿ.ಎಚ್‌ಡಿ, 5 ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೂಪರ್ ಸ್ಪೆಷಾಲಿಟಿ ಪದವಿ ನೀಡಲಾಯಿತು. ಕೊರೋನ ಹಿನ್ನೆಲೆಯಲ್ಲಿ ಪದಕ ಗೆದ್ದ ವಿದ್ಯಾರ್ಥಿಗಳಿಗೆ ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿತ್ತು.

ಡಾ.ಸಿದ್ದಾರ್ಥ ಸುಬ್ರಹ್ಮಣ್ಯಂ ಜೋಶಿ, ಡಾ.ಕೃಷ್ಣಕುಮಾರ್, ಡಾ.ಅಶ್ವತಿ ಕೆ. ಡಾ.ವಿನುತಾ ಜೆ, ಡಾ.ಸ್ಫೂರ್ತಿರಾಜ್ , ಡಾ.ಡಿ ಹೆಚ್.ಪ್ರವೀಣ್, ಡಾ.ಅನು ಜಾರ್ಜ್ ಟಿ, ಡಾ.ಅಭಿಮನ್ಯು ಚಂದಕ್, ಡಾ.ಸಿ.ಮಯೂರ್, ಡಾ.ಪೂಜಾ ಸೇರಿದಂತೆ ಹಲವರು ಪದಕ ಪಡೆದರು. ವರ್ಚುವಲ್ ಲೈವ್ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದು, ಘಟಿಕೋತ್ಸವ ಕಾರ್ಯಕ್ರಮದಲ್ಲಿ ಜೆಎಸ್‍ಎಸ್ ವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಬೆಠಸೂರು ಮಠ್, ಸಮಕುಲಾಧಿಪತಿ ಡಾ.ಬಿ.ಸುರೇಶ್, ಕುಲಪತಿ ಸುರೀಂದರ್ ಸಿಂಗ್ ಭಾಗಿಯಾಗಿದ್ದರು.

Tags: dr k sudhakarjss mysoresuttur mata
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋವಿಡ್‌ ನಡುವೆ ವಿಮಾನ ವಿಹಾರ ಮಾಡುವಿರಾ? ಹಾಗಾದರೆ, ಈ ವರದಿ ಓದಿ..

ಕೋವಿಡ್‌ ನಡುವೆ ವಿಮಾನ ವಿಹಾರ ಮಾಡುವಿರಾ? ಹಾಗಾದರೆ, ಈ ವರದಿ ಓದಿ..

Leave a Reply Cancel reply

Your email address will not be published. Required fields are marked *

Recommended

ಲಾಕ್ ಡೌನ್ ಇಲ್ಲ

ನದಿ ಜೋಡಣೆ: ಕೇಂದ್ರಕ್ಕೆ ಬೊಮ್ಮಾಯಿ ಸ್ಪಷ್ಟಪಡಿಸಿದ್ದೇನು?

4 years ago
ಕೋಲಾರದ ವಿಸ್ಟ್ರಾನ್‌ ಕಂಪನಿ ಗಲಾಟೆ; 7,000 ಕಾರ್ಮಿಕರ ಮೇಲೆ ಕೇಸ್‌, ಆದರೆ ಎಫ್‌ಐಆರ್‌ನಲ್ಲಿ ಒಬ್ಬರ ಹೆಸರೂ ಇಲ್ಲ

ಕೋಲಾರದ ವಿಸ್ಟ್ರಾನ್‌ ಕಂಪನಿ ಗಲಾಟೆ; 7,000 ಕಾರ್ಮಿಕರ ಮೇಲೆ ಕೇಸ್‌, ಆದರೆ ಎಫ್‌ಐಆರ್‌ನಲ್ಲಿ ಒಬ್ಬರ ಹೆಸರೂ ಇಲ್ಲ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ