• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು; ಕಂಪನಿಯಲ್ಲಿ ಮುಷ್ಕರ ನಿಷೇಧ, ಲಾಕ್‌ಔಟ್‌ ತೆರವು

cknewsnow desk by cknewsnow desk
November 17, 2020
in STATE
Reading Time: 1 min read
0
ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು; ಕಂಪನಿಯಲ್ಲಿ ಮುಷ್ಕರ ನಿಷೇಧ, ಲಾಕ್‌ಔಟ್‌ ತೆರವು
915
VIEWS
FacebookTwitterWhatsuplinkedinEmail


ಆಡಳಿತ ಮಂಡಳಿ, ಕಾರ್ಮಿಕ ಪ್ರತಿನಿಧಿಗಳ ಜತೆ ಡಿಸಿಎಂ ಮಾತುಕತೆ

ಬೆಂಗಳೂರು: ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ತೀವ್ರ ಕಗ್ಗಂಟಾಗಿದ್ದ ಬಿಡದಿ ಸಮೀಪದ ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು ನಿವಾರಣೆಗೆ ಸರಕಾರ ಯತ್ನಿಸಿದ್ದು, ಇದೇ ವೇಳೆ ಕಂಪನಿಯಲ್ಲಿ ಇನ್ನು ಮುಂದೆ ಮುಷ್ಕರ ನಿಷೇಧಿಸಿ ಲಾಕ್‌ಔಟ್‌ ತೆರವುಗೊಳಿಸಲು ಸರಕಾರ ಮಂದಾಗಿದೆ.

ರಾಜ್ಯದ ಏಕೈಕ ಬೃಹತ್‌ ಆಟೋಮೊಬೈಲ್‌ ಕೈಗಾರಿಕೆಯಾಗಿರುವ ಟೊಯೋಟ-ಕಿರ್ಲೋಸ್ಕರ್‌ ಕಂಪನಿಯಲ್ಲಿ ಕೆಲ ದಿನಗಳ ಹಿಂದೆ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಉಂಟಾದ ತಿಕ್ಕಾಟದಿಂದ ಸುಮಾರು 39 ಕಾರ್ಮಿಕರನ್ನು ಅಮಾನತು ಮಾಡಲಾಗಿತ್ತು. ಇದರಿಂದ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದರೆ, ಕಂಪನಿಯೂ ಲಾಕ್‌ಔಟ್‌ ಘೋಷಣೆ ಮಾಡಿತ್ತು.

ಇದರಿಂದ ಕೂಡಲೇ ಮಧ್ಯಪ್ರವೇಶ ಮಾಡಿದ ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾರ್ಮಿಕರು ಮತ್ತು ಆಡಳಿತ ಮಂಡಳಿ ಒಳಗೊಂಡಂತೆ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್‌, ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಮುಂತಾದವರೊಂದಿಗೆ ತುರ್ತು ಸಭೆ ನಡೆಸಿದರಲ್ಲದೆ, ಕಾರ್ಮಿಕ ವ್ಯಾಜ್ಯ ಕಾಯ್ದೆ ಸೆಕ್ಷನ್‌ 10 (3)ರ ಪ್ರಕಾರ ಪ್ರಕಾರ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ ಲಾಕ್‌ಔಟ್‌ ತೆರವುಗೊಳಿಸುವ ಮಹತ್ವದ ಆದೇಶವನ್ನು ಮಂಗಳವಾರ ಸಂಜೆಯೊಳಗೆ ಹೊರಡಿಸಲಾಗುವುದು ಎಂದು ಪ್ರಕಟಿಸಿದರು.

ನಾಳೆ ಬೆಳಗ್ಗೆಯಿಂದಲೇ ಕಂಪನಿಯ ಉತ್ಪಾದನಾ ಚಟುವಟಿಕೆ ಪುನಾರಂಭ ಆಗಬೇಕು. ಕೂಡಲೇ ಕೆಲಸಕ್ಕೆ ಹಾಜರಾಗಿ ಎಂದು ಕಾರ್ಮಿಕರಿಗೆ ಹಾಗೂ ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆಡಳಿತ ಮಂಡಳಿಗೆ ಡಿಸಿಎಂ ಸೂಚಿಸಿದರು.

ಮುಷ್ಕರ, ಲಾಕ್‌ಔಟ್‌ ಎರಡೂ ಸರಿಯಲ್ಲ

ಮೊದಲಿನಿಂದಲೂ ರಾಜ್ಯದಲ್ಲಿ ಉತ್ತಮ ಶ್ರಮಸಂಸ್ಕೃತಿ ಇದೆ. ಇದರಿಂದ ಕೈಗಾರಿಗೆಗಳ ಬೆಳವಣಿಗೆ ಉತ್ತಮವಾಗಿ ಆಗಿದೆ ಎಂದು ಹೇಳಬಹುದು. ಇಡೀ ಏಷ್ಯಾದಲ್ಲಿಯೇ ಉತ್ತಮ ಹೂಡಿಕೆ ಹಾಗೂ ಕೈಗಾರಿಕೆಗಳಿಗೆ ಪೂರಕ ವಾತಾವರಣ ರಾಜ್ಯದಲ್ಲಿದೆ. ಕೋವಿಡ್‌ ನಂತರ ಕುಸಿತ ಕಂಡಿರುವ ಆರ್ಥಿಕತೆಯನ್ನು ಮತ್ತೆ ಮೇಲೆತ್ತುವ ಕೆಲಸ ಎಲ್ಲರೂ ಮಾಡಬೇಕಿದೆ. ಆದರೆ, ಮುಷ್ಕರ ಮತ್ತು ಲಾಕ್‌ಔಟ್‌ನಿಂದ ನಾವು ಎಂಥ ಸಂದೇಶ ನೀಡಲು ಸಾಧ್ಯ? ಎಂದು ಡಿಸಿಎಂ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಮಿಕ ಹಾಗೂ ಆಡಳಿತ ಮಂಡಳಿ ಪ್ರತಿನಿಧಿಗಳನ್ನು ಖಾರವಾಗಿ ಪ್ರಶ್ನಿಸಿದರು.

ನಾಳೆಯಿಂದ ಕಾರ್ಖಾನೆ ಆರಂಭಿಸಲು ಆಡಳಿತ ಮಂಡಳಿ ಪ್ರತಿನಿಧಿಗಳಿಗೆ ಸೂಚಿಸಲಾಗಿದೆ. ಹಾಗೆಯೇ ಕಾರ್ಮಿಕರಿಗೂ ಕೂಡ ಸಹಕರಿಸಬೇಕೆಂದು ತಿಳಿಸಲಾಗಿದೆ. ಈ ಸಂಬಂಧ ಕಾರ್ಮಿಕ ಇಲಾಖೆ ಸಂಜೆ ಒಳಗೆ ಆದೇಶ ಹೊರಡಿಸಲಿದೆ. ಸಮಸ್ಯೆ ಇದ್ದರೆ ಮುಂದಿನ ದಿನಗಳಲ್ಲಿ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುವುದು.

2/2

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) November 17, 2020

ಚೀನಾಕ್ಕೆ ಪರ್ಯಾಯವಾಗಿ ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಆದರಲ್ಲೂ ಕರ್ನಾಟಕದಲ್ಲಿ ಇನ್ನಷ್ಟು ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಜಪಾನ್‌, ದಕ್ಷಿಣ ಕೊರಿಯಾ, ತೈವಾನ್‌ನಂಥ ದಕ್ಷಿಣ ಆಸಿಯಾ ದೇಶಗಳು ತುದಿಗಾಲ ಮೇಲೆ ನಿಂತಿವೆ. ಇಂಥ ಹೊತ್ತಿನಲ್ಲಿ ಮುಷ್ಕರ, ಲಾಕ್‌ಡೌನ್‌ನಂಥ ಮಾತುಗಳು ಬರಲೇಬಾರದು ಎಂದ ಅವರು; ಜಪಾನಿಯರಲ್ಲಿ ಇರುವ ವರ್ಕ್‌ ಕಲ್ಚರ್‌ ನಮ್ಮಲ್ಲೂ ಬರಬೇಕು. ಅಲ್ಲಿ ತಮ್ಮ ಕೆಲಸ ಇಷ್ಟವಾಗದಿದ್ದರೆ ಅಥವಾ ತೃಪ್ತಿ ನೀಡದಿದ್ದರೆ ಅವರು ತಮ್ಮ ಪ್ರಾಣವನ್ನೇ ತೆಗೆದುಕೊಂಡು ಬಿಡುತ್ತಾರೆ. ಕೆಲಸಕ್ಕೆ, ಕರ್ತವ್ಯಕ್ಕೆ ಅವರು ಅಷ್ಟು ಮಹತ್ವ ನೀಡುತ್ತಾರೆ. ಇದು ಸ್ಪರ್ಧಾತ್ಮಕ ಜಗತ್ತು. ಮಾರಕಟ್ಟೆಯಲ್ಲಿ ನೂರೆಂಟು ಕಾರುಗಳಿವೆ. ಗ್ರಾಹಕನಿಗೆ ಆಯ್ಕೆ ಹೆಚ್ಚಾಗಿದೆ ಎಂಬುದನ್ನು ಮರೆಯಬಾರದು ಎಂದು ಕಾರ್ಮಿಕ ಪ್ರತಿನಿಧಿಗಳಿಗೆ ಸೂಕ್ಷ್ಮವಾಗಿ ತಿಳಿಹೇಳಿದರು ಡಿಸಿಎಂ.

ಸಭೆಯಲ್ಲಿ ಮಾಗಡಿ ಶಾಸಕ ಮಂಜುನಾಥ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ್, ರಾಮನಗರ ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಗಿರೀಶ್, ಹೆಚ್ಚುವರಿ ಕಾರ್ಮಿಕ ಆಯುಕ್ತ ಮಂಜುನಾಥ ಸಭೆಯಲ್ಲಿ ಹಾಜರಿದ್ದರು.

ಪ್ರತಿಷ್ಠಿತ ಕಂಪನಿ

ರಾಜ್ಯದಲ್ಲಿ ಪ್ರತಿಷ್ಠಿತವಾದ ಟೊಯೋಟ-ಕಿರ್ಲೋಸ್ಕರ್ ಕಂಪನಿಯ ಬಿಡದಿ ಘಟಕದಲ್ಲಿ 7,000 ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ. 1997 ಅಕ್ಟೋಬರ್‌ 6ರಂದು ಅಂದರೆ; 23 ವರ್ಷಗಳ ಹಿಂದೆ ಸ್ಥಾಪನೆಯಾಗಿದ್ದ ಈ ಘಟಕದಲ್ಲಿ ಭಾರತೀಯ ರಸ್ತೆಗಳಿಗೆ ಸೂಕ್ತವಾಗುವ ಅನೇಕ ವಾಹನಗಳು ಉತ್ಪಾದನೆಯಾಗಿವೆ.

ಸುಮಾರು 432 ಎಕರೆ ಪ್ರದೇಶದಲ್ಲಿ ಕಂಪನಿ ನೆಲೆನಿಂತಿದೆ. ವಾರ್ಷಿಕ 3.1 ಲಕ್ಷ ವಾಹನಗಳನ್ನು ತಯಾರು ಮಾಡುವ ಸಾಮರ್ಥ್ಯವನ್ನು ಹೊಂದಿದು, 2016ರಲ್ಲಿ 1,42,500 ವಾಹನಗಳನ್ನು ತಯಾರು ಮಾಡಿತ್ತು. ಜಪಾನ್ ಮೂಲದ ಟೊಯೋಟ ಶೇ 89ರಷ್ಟು ಹಾಗೂ ಬೆಂಗಳೂರು ಮೂಲದ ಕಿಲ್ರೋಸ್ಕರ್‌ ಕಂಪನಿ ಶೇ.11ರಷ್ಟು ಪಾಲು ಬಂಡವಾಳ ಹೊಂದಿವೆ. ಈ ಘಟಕದಲ್ಲಿ ಇನ್ನೋವಾ, ಫಾರ್ಚುನರ್, ಕ್ಯಾಂಬ್ರಿ ಸೇರಿದಂತೆ ವಿವಿಧ ಮಾದರಿಯ ಕಾರುಗಳು ಉತ್ಪಾದನೆಯಾಗುತ್ತವೆ. ಮೊದಲು ಬಂದ ಟೊಯೋಟ ಕ್ವಾಲೀಸ್‌ ಭಾರತೀಯ ಆಟೋ ಮಾರುಕಟ್ಟೆಯಲ್ಲಿ ದೊಡ್ಡ ಸಂಚಲನ ಉಂಟು ಮಾಡಿತ್ತು.

Tags: bidadi toyotakarnatakaToyota Kirloskar Motor
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಜಿಲ್ಲೆಯಾದ 11 ವರ್ಷಗಳ ನಂತರ ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ಪ್ರತ್ಯೇಕ ಆಡಳಿತ ಮಂಡಳಿ‌

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣವನ್ನು ಶೀಲ ಸಂಪತ್ತು ಎಂದಿದ್ದರು ಸ್ವಾಮಿ ವಿವೇಕಾನಂದರು

ಶಿಕ್ಷಣವನ್ನು ಶೀಲ ಸಂಪತ್ತು ಎಂದಿದ್ದರು ಸ್ವಾಮಿ ವಿವೇಕಾನಂದರು

5 years ago
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ರಾಜ್ಯದಲ್ಲಿ ನೀಗಲಿದೆ ಲಸಿಕೆ ಹಾಹಾಕಾರ, ಮೋದಿ ಕೊಟ್ಟರು ಪರಿಹಾರ: ಕುಣಿದು ಕುಪ್ಪಳಿಸಿದ ಯಡಿಯೂರಪ್ಪ ಸರಕಾರ

5 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ