• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

2025: 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆ, ಬೆಂಗಳೂರು ಟೆಕ್‌ ಶೃಂಗದಲ್ಲಿ ಟಾರ್ಗೆಟ್‌ ಫಿಕ್ಸ್‌

cknewsnow desk by cknewsnow desk
November 19, 2020
in STATE, TECH
Reading Time: 1 min read
0
2025: 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆ,  ಬೆಂಗಳೂರು ಟೆಕ್‌ ಶೃಂಗದಲ್ಲಿ ಟಾರ್ಗೆಟ್‌ ಫಿಕ್ಸ್‌
914
VIEWS
FacebookTwitterWhatsuplinkedinEmail

ಬೆಂಗಳೂರು ಟೆಕ್‌ ಸಮ್ಮಿಟ್‌-2020ಯಲ್ಲಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಘೋಷಣೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಡಿಜಿಟಲ್‌ ಇಂಡಿಯಾ ಹಾಗೂ ಆತ್ಮನಿರ್ಭರ್‌ ಭಾರತ್‌ ಪರಿಕಲ್ಪನೆ ಹಿನ್ನೆಲೆ ಕರ್ನಾಟಕವು ಅಭಿವೃದ್ಧಿಯಲ್ಲಿ ದಾಪುಗಾಲು ಇಡುತ್ತಿದ್ದು, ಮುಂದಿನ ಐದು ವರ್ಷಗಳಲ್ಲಿ 300 ಶತಕೋಟಿ ಡಾಲರ್‌ ಡಿಜಿಟಲ್‌ ಆರ್ಥಿಕತೆಯ ಗುರಿ ಸಾಧಿಸಲಾಗುವುದು ಎಂದು ಐಟಿ-ಬಿಟಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಬೆಂಗಳೂರಿನಲ್ಲಿ ಗುರುವಾರ ನಡೆದ ಬೆಂಗಳೂರು ಟೆಕ್‌ ಸಮ್ಮಿಟ್‌ (ಬಿಟಿಎಸ್)-2020 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ 52 ಶತಕೋಟಿ ಡಾಲರ್‌ವಷ್ಟು ಡಿಜಿಟಲ್‌ ಆರ್ಥಿಕತೆಯ ಗುರಿಯನ್ನು ರಾಜ್ಯವು ದಾಟಿದೆ. ಮುಂದಿನ ಪಂಚವರ್ಷಗಳಲ್ಲಿ ಈ ನಿಟ್ಟಿನಲ್ಲಿ ಹಾಕಿಕೊಂಡಿರುವ ಗುರಿಯನ್ನು ಮುಟ್ಟಲು ಎಲ್ಲ ರೀತಿಯ ಕ್ರಮಗಳನ್ನು ಸರಕಾರ ಕೈಗೊಂಡಿದೆ ಎಂದರು.

ಪ್ರಧಾನಮಂತ್ರಿ ಮೋದಿ ಅವರು ನಿಗದಿಪಡಿಸಿರುವ ಒಂದು ಟ್ರಿಲಿಯನ್‌ ಡಿಜಿಟಲ್‌ ಆರ್ಥಿಕತೆಯ ಗುರಿಗೆ ಹೆಚ್ಚಿನ ಕೊಡುಗೆ ನೀಡಲು ಕರ್ನಾಟಕ ಸನ್ನದ್ಧವಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಸುಧಾರಣೆಗಳನ್ನು ಕೈಗೊಂಡು ಐಟಿ-ಬಿಟಿ ಸೇರಿದಂತೆ ಸರ್ವ ಕ್ಷೇತ್ರಗಳಲ್ಲೂ ಸುಧಾರಣೆಗಳನ್ನು ತರಲಾಗಿದೆ. ನಿಗದಿತ ಗುರಿಯನ್ನು ತಪ್ಪದೇ ಮುಟ್ಟಲಾಗುವುದು ಎಂದು ಉಪ ಮುಖ್ಯಮಂತ್ರಿ ಸ್ಪಷ್ಟವಾಗಿ ಹೇಳಿದರು.

ಡಿಸಿಎಂ ಹೇಳಿದ ಮತ್ತಷ್ಟು ಮಾತುಗಳು ಹೀಗಿವೆ;

  • *ಡಿಜಿಟಲ್‌ ಆರ್ಥಿಕತೆಯ ಗುರಿ ತಲುಪಲು ರಾಜ್ಯವು ಈಗಾಗಲೇ ಡಿಜಿಟಲ್‌ ಎಕಾನಮಿ ಮಿಷನ್‌ ಸ್ಥಾಪನೆ ಮಾಡಿ ಕಾರ್ಯಪ್ರವೃತ್ತವಾಗಿದೆ. ತಂತ್ರಜ್ಞಾನದ ಮೂಲಕ ಆರ್ಥಿಕತೆಗೆ ವೇಗ ನೀಡುವುದು ಈ ಮಿಷನ್‌ ಉದ್ದೇಶವಾಗಿದೆ.
  • ಡಿಜಿಟಲ್‌ ಎಕಾನಮಿ ಮಿಷನ್‌ ಮೂಲಕ ಇನ್‌ವೆಸ್ಟ್‌ ಇಂಡಿಯಾ ಮೂಲಕ ಜಾಗತಿಕ ಸಂಪರ್ಕಗಳನ್ನು ಕರ್ನಾಟಕದ ಜತೆ ಅನುಸಂಧಾನಗೊಳಿಸುತ್ತಿದ್ದು, ಈ ಉಪಕ್ರಮದಿಂದ ಕರ್ನಾಟಕದ ತಂತ್ರಜ್ಞಾನ ಉದ್ಯಮ ಮತ್ತು ರಾಜ್ಯದ ಬ್ರಾಂಡ್ ಈಕ್ವಿಟಿಯನ್ನು ಉತ್ತಮಗೊಳಿಸುತ್ತಿದೆ. ಈ ಮೂಲಕ ಮುಂದಿನ ಮೈಲುಗಲ್ಲು ಸಾಧಿಸಲಾಗುವುದು. ಇದಕ್ಕೆ ಪೂರಕವಾಗಿ ಹೊಸ ತಲೆಮಾರಿನ ನವೋದ್ಯಮ, ಐಟಿ ಬಿಟಿ ಜತೆಗೆ ಎಲೆಕ್ಟ್ರಾನಿಕ್‌ ಸಂಶೋಧನೆ ಮತ್ತು ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡಲಾಗಿದೆ.
  • ಕೆಲವೇ ದಿನಗಳ ಹಿಂದೆಯಷ್ಟೇ ರಾಜ್ಯ ಸರಕಾರ ಅತ್ಯಂತ ದೂರದೃಷ್ಟಿಯುಳ್ಳ ಹಾಗೂ ಲಮುಂದಿನ ಐದು ವರ್ಷಗಳಲ್ಲಿ ಪರಿಣಾಮಕಾರಿ ಫಲಿತಾಂಶವನ್ನು ನೀಡಬಲ್ಲ ಐಟಿ ನೀತಿ-2020-25 ಅನ್ನು ರೂಪಿಸಿದ್ದು, ರಾಜ್ಯದ ಪ್ರತಿಮೂಲೆಗೂ ಅತ್ಯುತ್ತಮ ಕನೆಕ್ಟಿವಿಟಿ ಮಾಡಿ ಸಂಪರ್ಕ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಉಪಕ್ರಮಿಸಲಾಗಿದೆ. ಈಗಾಗಲೇ ಲಭ್ಯವಿರುವ 4ಜಿ ಸೇವೆಯ ಜತೆಗೆ, 5ಜಿ ಸೇವೆಯನ್ನೂ ಪ್ರತಿ ಮೂಲೆಗೂ ವಿಸ್ತರಿಸುವುದು, ಆ ಮೂಲಕ ಡಿಜಿಟಲ್‌ ಆರ್ಥಿಕತೆ ಗುರಿಗೆ ಶಕ್ತಿ ತುಂಬುದು ಸರಕಾರದ ಉದ್ದೇಶವಾಗಿದೆ.
  • ಬೆಂಗಳೂರಿಗೆ ಅದ್ಬುತವಾದ ತಂತ್ರಜ್ಞಾನ ಪಯಣದ ಟ್ರ್ಯಾಕ್ ಇದ್ದು, ಈ ವೇದಿಕೆಯ ಮೂಲಕ ಇವತ್ತು ಮತ್ತೊಂದು ಪ್ರಮುಖ ಅಧ್ಯಾಯ ಆರಂಭಗೊಳ್ಳುತ್ತಿದೆ. ಸುಮಾರು 5500 ಡ್ರೈವಿಂಗ್ ಟೆಕ್ನಾಲಜಿ ಕಂಪನಿಗಳು ರಾಜ್ಯದಲ್ಲಿದ್ದು, ಅವೆಲ್ಲವೂ ಜಾಗತಿಕ ಮಟ್ಟಕ್ಕೆ ಸರಿಸಾಟಿಯಾಗಿ ಕೆಲಸ ಮಾಡುತ್ತಿವೆ..
  • *ಕೋವಿಡ್ ಸಮಯದಲ್ಲಿ ತಂತ್ರಜ್ಞಾನ ಬಳಸಿಕೊಂಡು ರಾಜ್ಯದಲ್ಲಿ ಆಡಳಿತ ನಡೆಸಲಾಗಿದೆ. ಅಂತಹ ವಿಪರೀತ ಸಂರ್ಭದಲ್ಲೂ ರಾಜ್ಯ ಸರಕಾರವು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕೆಲಸ ಮಾಡಿದೆ. ಹೀಗಾಗಿ ಐಟಿ ಬಿಟಿ ಕ್ಷೇತ್ರದಲ್ಲಿ ಹೊಸ ಹೊಸ ಅವಕಾಶಗಳು ತೆರೆದುಕೊಳ್ಳುತ್ತಿವೆ. ಶಿಕ್ಷಣ ಕ್ಷೇತ್ರದಲ್ಲಿ ತಂತ್ರಜ್ಞಾನವನ್ನು ಬಳಸಿಕೊಂಡು ಸುಧಾರಣೆ ತರುವಲ್ಲಿ ನಾವು ಯಶಸ್ವಿಯಾಗಿದ್ದೇವೆ.
  • ಪ್ರಧಾನಿ ಮೋದಿ ಅವರ ಕನಸುಗಳನ್ನು ಕರ್ನಾಟಕ ನನಸು ಮಾಡುತ್ತಿದೆ. ಅವರ ಕನಸು ಆತ್ಮನಿರ್ಭರ ಕಲ್ಪನೆಯೊಂದಿಗೆ ಕರ್ನಾಟಕವನ್ನು ನಿರ್ಮಿಸುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಬೆಂಗಳೂರು ತಂತ್ರಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಪ್ರಭಾವಶಾಲಿಯಾಗಿ ಬೆಳೆಯಲಿದೆ ಎಂಬ ವಿಶ್ವಾಸ ನನ್ನದು.‌
  • ತಂತ್ರಜ್ಞಾನ ಕ್ಷೇತ್ರವೇ ಮುಂದಿನ ದಿನಗಳಲ್ಲಿ ತನ್ನ ಅಧಿಪತ್ಯವನ್ನು ಸಾಧಿಸಲಿದೆ. ಅದಕ್ಕೆ ಡಿಜಿಟಲ್‌ ಇಂಡಿಯಾ, ಡಿಜಿಟಲ್‌ ಎಕಾನಮಿ ಉಪ ಕ್ರಮಗಳು ಬಲ ತುಂಬುತ್ತಿವೆ. ಭವಿಷ್ಯದಲ್ಲಿ ತಂತ್ರಜ್ಞಾನವೇ ಆಡಳಿತ ನಡೆಸಲಿದೆ. ಆ ನಿಟ್ಟಿನಲ್ಲಿ ಭಾರತದ ಜತೆ ಕರ್ನಾಟಕವೂ ದಾಪುಗಾಲು ಇಡುತ್ತಿದೆ.
Tags: bengaluru tech summit 2020BTS2020karnataka it-bt
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಡಿಜಿಟಲ್‌ ಇಂಡಿಯಾ ಜಗತ್ತಿನ ಅವಕಾಶಗಳ ಹೆಬ್ಬಾಗಿಲು ಎಂದ ಪಿಎಂ ನರೇಂದ್ರ ಮೋದಿ

ಡಿಜಿಟಲ್‌ ಇಂಡಿಯಾ ಜಗತ್ತಿನ ಅವಕಾಶಗಳ ಹೆಬ್ಬಾಗಿಲು ಎಂದ ಪಿಎಂ ನರೇಂದ್ರ ಮೋದಿ

Leave a Reply Cancel reply

Your email address will not be published. Required fields are marked *

Recommended

ಮುಳಬಾಗಿಲಿನಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ

ಮುಳಬಾಗಿಲಿನಿಂದ ಜೆಡಿಎಸ್ ಪಂಚರತ್ನ ರಥಯಾತ್ರೆ

3 years ago
ಆದಾಯ ತೆರಿಗೆ ಸ್ಲ್ಯಾಬ್ ಬದಲಿಲ್ಲ

ಆದಾಯ ತೆರಿಗೆ ಸ್ಲ್ಯಾಬ್ ಬದಲಿಲ್ಲ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ