• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ನಮಸ್ಕಾರ ಫ್ರಮ್‌ ಆಸ್ಟ್ರೇಲಿಯಾ ಎಂದು ಐಟಿ ಸಿಟಿಯನ್ನು ಹಾಡಿಹೊಗಳಿದ ಆಸಿಸ್‌ ಪಿಎಂ

cknewsnow desk by cknewsnow desk
November 19, 2020
in STATE, TECH, WORLD
Reading Time: 1 min read
0
ನಮಸ್ಕಾರ ಫ್ರಮ್‌ ಆಸ್ಟ್ರೇಲಿಯಾ ಎಂದು ಐಟಿ ಸಿಟಿಯನ್ನು ಹಾಡಿಹೊಗಳಿದ ಆಸಿಸ್‌ ಪಿಎಂ
926
VIEWS
FacebookTwitterWhatsuplinkedinEmail

ಬೆಂಗಳೂರು: ನಗರದಲ್ಲಿ ಗುರುವಾರ ಆರಂಭವಾದ ಬೆಂಗಳೂರು ಟೆಕ್‌ ಸಮಿಟ್-‌2020ಯಲ್ಲಿ ಪಾಲ್ಗೊಂಡು ಮಾತನಾಡಿದ ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್‌ ಮಾರಿಸನ್, ಭಾರತದ ಗ್ರೇಟ್‌ ಸಿಟಿಗಳಲ್ಲಿ ಒಂದಾದ ಬೆಂಗಳೂರು ನಗರವನ್ನು ಮಿಸ್‌ ಮಾಡಿಕೊಳ್ಳುತ್ತಿವೆ ಎಂದರು.

ಸಿಡ್ನಿಯಿಂದಲೇ ವರ್ಚುಯಲ್‌ ವೇದಿಕೆಯ ಮೂಲಕ ಭಾಷಣ ಮಾಡಿದ ಅವರು, ಆಸ್ಟ್ರೇಲಿಯಾ ಮತ್ತು ಬೆಂಗಳೂರು ನಡುವಿನ ಬಾಂಧವ್ಯವನ್ನು ಮೆಲುಕು ಹಾಕಿದರಲ್ಲದೆ, ಬೆಂಗಳೂರಿನಲ್ಲಿ ನಡೆಯುತ್ತಿರುವ ಶೃಂಗಸಭೆಯ ʼಸದ್ದುʼಗಳನ್ನು ನಾನು ಮಿಸ್‌ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

ಸ್ಕಾಟ್‌ ಮಾರಿಸನ್‌ ಆಡಿದ ಕೆಲ ಮುಖ್ಯವಾದ ಮಾತುಗಳು ಇಲ್ಲಿವೆ;

  • ನಮಸ್ಕಾರ ಫ್ರಮ್‌ ಆಸ್ಟ್ರೇಲಿಯಾ. ಆಸ್ಟ್ರೇಲಿಯಾ ಮತ್ತು ಭಾರತ ಆವಿಷ್ಕಾರ ಮೈತ್ರಿಕೂಟದ ಹೆಮ್ಮೆಯ ದೇಶಗಳಾಗಿದ್ದು, ಈ ಸಮಿಟ್‌ನಲ್ಲಿ ಭಾಗಿಯಾಗಿರುವುದಕ್ಕೆ ತುಂಬಾ ಸಂತೋಷವಾಗಿದೆ. ಇದಕ್ಕಾಗಿ ನಾನು ನನ್ನ ಗುಡ್‌ಫ್ರೆಂಡ್‌ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಭಾರಿಯಾಗಿದ್ದೇನೆ.
  • ಆಸ್ಟ್ರೇಲಿಯಾದ ನೀತಿ ನಿರೂಪಕರು, ಹೂಡಿಕೆದಾರರು, ಕೈಗಾರಿಕೋದ್ಯಮಿಗಳು, ಸ್ಟಾರ್‌ಟಪ್‌ ಲೀಡರ್ಸ್‌ ಸೇರಿದಂತೆ 150ಕ್ಕೂ ಹೆಚ್ಚು ಆಸಿಸ್‌ ಪ್ರತಿನಿಧಿಗಳು ಈ ಸಮಿಟ್‌ನಲ್ಲಿ ಭಾಗಿಯಾಗಿದ್ದಾರೆ. ಹಾಗೆ ನೋಡಿದರೆ, ಈ ವರ್ಷ ಶೃಂಗದಲ್ಲಿ ನೇರವಾಗಿ ಭಾಗಿಯಾಗಲು ಸಾಧ್ಯವಾಗದ್ದಕ್ಕೆ ಕ್ಷಮಿಸಿ. ಮುಂದಿನ ಬಾರಿ ಖಂಡಿತವಾಗಿಯೂ ಬೆಂಗಳೂರಿಗೆ ಹಾರಿ ಬರುತ್ತೇನೆ. ಈ ಟೆಕ್‌ ಸಮಿಟ್‌ನಲ್ಲಿ ಶ್ರೇಷ್ಠ ನಗರವಾದ ಬೆಂಗಳೂರಿನ ಸ್ಫೂರ್ತಿ ಹಾಗೆಯೇ ಇದೆ ಎಂದು ಭಾವಿಸಿದ್ದೇನೆ.
  • ಭಾರತವು ಜಗತ್ತಿನ 4ನೇ ಅತಿದೊಡ್ಡ ಕೈಗಾರಿಕಾ ಕ್ಲಸ್ಟರ್‌ ಆಗಿದೆ. ದೇಶದ ಒಟ್ಟಾರೆ ತಾಂತ್ರಿಕ ನಿಪುಣರಲ್ಲಿ ಮೂರನೇ ಒಂದು ಭಾಗದಷ್ಟು ತಜ್ಞರು ಬೆಂಗಳೂರಿನಲ್ಲೇ ಇದ್ದಾರೆ. ಆ ಮಟ್ಟಿಗೆ ಆ ನಗರದ ಪ್ರಭಾವವಿದೆ. ಹಾಗೆಯೇ, 25ಕ್ಕೂ ಹೆಚ್ಚು ಆಸ್ಟ್ರೇಲಿಯಾ ಕಂಪನಿಗಳು ಬೆಂಗಳೂರಿನಲ್ಲಿ ನೆಲೆನಿಂತಿದ್ದು, ಈ ಕಂಪನಿಗಳಲ್ಲಿ ಬೆಂಗಳೂರಿನ ಮಹತ್ವಾಕಾಂಕ್ಷೆಯ ಮಾನವ ಸಂಪನ್ಮೂಲ ಕೆಲಸ ಮಾಡುತ್ತಿದೆ. ನೆಕ್ಸ್ಟ್‌ ಈಸ್‌ ನೌ ಎಂಬ ಪರಿಕಲ್ಪನೆಗೆ ಬೆಂಗಳೂರು ಅತ್ಯುತ್ತಮ ಉದಾಹರಣೆ.
  • ಕೋವಿಡ್‌ನಿಂದ ಜಗತ್ತು ತುಂಬಾ ಕಷ್ಟಪಟ್ಟಿದೆ. ಎಲ್ಲಡೆ ಪ್ರಾಣನಷ್ಟ, ಉದ್ಯೋಗ ನಷ್ಟ ಉಂಟಾಗಿ ಆರ್ಥಿಕ ಮತ್ತು ಸಾಮಾಜಿಕ ಕಂಪನಗಳು ಉಂಟಾಗಿವೆ. ಅದು ನಮಗೆಲ್ಲರಿಗೂ ನೋವು ಕೊಟ್ಟಿದೆ. ಆದರೂ ಅದನ್ನು ಸಮರ್ಥವಾಗಿ ಎದುರಿಸಲು ಪ್ರಯತ್ನ ಮಾಡಿದ್ದೇವೆ. ಹೊಸ ಸಂದರ್ಭಗಳಿಗೆ ಹೊಂದಿಕೊಳ್ಳುತ್ತಿದ್ದೇವೆ. ವಾಕ್ಸಿನ್‌ಗಾಗಿ ಒಟ್ಟಾಗಿ ಹೋರಾಟ ನಡೆಸುತ್ತಿದ್ದೇವೆ.
  • ಕೋವಿಡ್‌ ಪೀಡೆ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ತಾಂತ್ರಿಕವಾಗಿ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಅನೇಕ ಬದಲಾವಣೆಗಳನ್ನು ಮಾಡಿಕೊಂಡಿದೆ. ವೈರಸ್‌ ಬಂದ ಮೊದಲ ಮೂರೇ ವಾರಗಳಲ್ಲಿ ಆಸ್ಟ್ರೇಲಿಯಾ ಕಂಪನಿಗಳು ಕಾರ್ಯ ನಿರ್ವಹಿಸುವ ವಿಧಾನವನ್ನೇ ಬದಲಿಸಿಕೊಂಡವು. ಕೋವಿಡ್‌ ಅನ್ನು ತಂತ್ರಜ್ಞಾನ ಮತ್ತು ವಿಜ್ಞಾನದಿಂದ ಸಮರ್ಥವಾಗಿ ಎದುರಿಸಿದವು. ಬಹುತೇಕ ಎಲ್ಲ ವ್ಯಾಪಾರ-ವಹಿವಾಟುಗಳು ಆನ್‌ಲೈನ್‌ಗೆ ಬಂದವು. ಅದೇ ರೀತಿ ವೈದ್ಯಕೀಯ, ಪರಿಸರ ಅಸಮತೋಲನ ಸೇರಿದಂತೆ ಜಗತ್ತನ್ನು ಕಾಡುತ್ತಿರುವ ಅನೇಕ ಸಮಸ್ಯೆಗಳ ವಿರುದ್ಧ ತಂತ್ರಜ್ಞಾನ ಮತ್ತು ವಿಜ್ಞಾನದಿಂದಲೇ ಹೋರಾಟ ನಡೆಸಬಹುದು ಎಂದು ಕಂಡುಕೊಂಡವು. ಈ ನಿಟ್ಟಿನಲ್ಲಿ ಭಾರತದ ಜತೆ ಒಟ್ಟಾಗಿ ಕೆಲಸ ಮಾಡಲು ಆಸ್ಟ್ರೇಲಿಯಾ ಸದಾ ಸಿದ್ಧವಿದೆ.
  • ಆಸ್ಟ್ರೇಲಿಯಾ-ಭಾರತ ದೀರ್ಘಕಾಲದ ಸ್ನೇಹಶೀಲ ದೇಶಗಳು. ಪ್ರಜಾಪ್ರಭುತ್ವ, ಕಾನೂನು, ಹಿತಾಸಕ್ತಿ, ಬದ್ಧತೆ, ಆವಿಷ್ಕಾರ ಸೇರಿ ಅನೇಕ ವಿಷಯಗಳಲ್ಲಿ ಎರಡೂ ದೇಶಗಳ ನಡುವೆ ಅಗಾಧ ಸಾಮ್ಯತೆ ಇದೆ. ನಂಬಿಕೆ, ಗೆಳೆತನ, ಬದ್ಧತೆ ನಮ್ಮ ಹೆಗ್ಗುತುಗಳಾಗಿವೆ. ಹೀಗಾಗಿ ಬೆಂಗಳೂರಿನಲ್ಲಿ ನಮ್ಮ ದೇಶದ ಕಂಪನಿಗಳು ಉತ್ತಮವಾಗಿ ಕೆಲಸ ಮಾಡುತ್ತಿವೆ. ಅದೇ ರೀತಿ ಇನ್ಫೋಸಿಸ್‌ನಂಥ ಕಂಪನಿಗಳು ಆಸ್ಟ್ರೇಲಿಯಾದಲ್ಲಿ ತಮ್ಮ ವಹಿವಾಟನ್ನು ವಿಸ್ತರಿಸಿಕೊಳ್ಳುತ್ತಿವೆ.
  • ಕಳೆದ ಹತ್ತು ವರ್ಷಗಳಲ್ಲಿ ಐಎಸ್‌ಎಸ್‌ಆರ್‌ಎಫ್‌ ಕಡೆಯಿಂದ 13 ಸಲ ಬೆಂಗಳೂರು ಮತ್ತು ಆಸ್ಟ್ರೇಲಿಯಾ ವಿಶ್ವವಿದ್ಯಾಲಯಗಳಿಗೆ ಅನುದಾನ ಸಿಕ್ಕಿದೆ. ಇದರಿಂದ ಸಂಶೋಧನೆ, ಬಾಹ್ಯಾಕಾಶ ಮುಂತಾದ ಕ್ಷೇತ್ರಗಳಲ್ಲಿ ಮತ್ತಷ್ಟು ಆಳವಾಗಿ ಅಧ್ಯಯನ ನಡೆಸಲು ಸಾಧ್ಯವಾಗುತ್ತಿದೆ. ಹೀಗಾಗಿ ಭಾರತ-ಆಸ್ಟ್ರೇಲಿಯಾ ಮುಂದೆ ಅಪರಿಮಿತ ಅವಕಾಶಗಳೇ ಇವೆ. ಅವುಗಳನ್ನು ಸಾಧ್ಯತೆಗಳನ್ನಾಗಿ ಪರಿವರ್ತಿಸಿಕೊಳ್ಳುವ ನಿಟ್ಟಿನಲ್ಲಿ ಒಟ್ಟಾಗಿ ನಡೆಯಬೇಕಿದೆ.

Tags: bengaluru tech summit 2020BTS2020Scott Morrison
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಭಿವೃದ್ಧಿಯತ್ತ ಭಾರತದ ಮಿಂಚಿನ ಓಟ; ಭಯದಿಂದ ಚಡಪಡಿಸುತ್ತಿದೆಯಾ ಚೀನಾ

ಅಭಿವೃದ್ಧಿಯತ್ತ ಭಾರತದ ಮಿಂಚಿನ ಓಟ; ಭಯದಿಂದ ಚಡಪಡಿಸುತ್ತಿದೆಯಾ ಚೀನಾ

Leave a Reply Cancel reply

Your email address will not be published. Required fields are marked *

Recommended

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

2 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ