• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಶಬರಿಮಲೆ; ನಿರ್ಬಂಧದ ನಡುವೆಯೂ ಸ್ವಾಮಿ ಅಯ್ಯಪ್ಪರನ್ನು ಕಣ್ತುಂಬಿಕೊಂಡ ಭಕ್ತರು

P K Channakrishna by P K Channakrishna
November 21, 2020
in NEWS IN USE, STATE
Reading Time: 2 mins read
0
ಶಬರಿಮಲೆ; ನಿರ್ಬಂಧದ ನಡುವೆಯೂ ಸ್ವಾಮಿ ಅಯ್ಯಪ್ಪರನ್ನು ಕಣ್ತುಂಬಿಕೊಂಡ ಭಕ್ತರು
911
VIEWS
FacebookTwitterWhatsuplinkedinEmail

ಶಬರಿಮಲೆ: ಶ್ರೀ ಅಯ್ಯಪ್ಪ ಸ್ವಾಮಿಯ ಎರಡು ತಿಂಗಳ ಮಂಡಲೋತ್ಸವ ಹಾಗೂ ಮಕರವಿಳಕ್ಕು ಉತ್ಸವದ ಆರಂಭವಾಗಿ ಇಂದಿಗೆ (ಶುಕ್ರವಾರ) ನಾಲ್ಕು ದಿನಗಳಾಗಿದ್ದು, ಕೋವಿಡ್‌-19 ಹಿನ್ನೆಲೆಯಲ್ಲಿ ಟ್ರಾವಂಕೂರ್‌ ದೇವಸ್ವಂ ಮಂಡಳಿ ಬಿಗಿಕ್ರಮಗಳನ್ನು ಕೈಗೊಂಡಿದ್ದು, ಸಿಕೆನ್ಯೂಸ್‌ ನೌಗೆ ಸನ್ನಿಧಾನದ ಪ್ರತ್ಯಕ್ಷ ದೃಶ್ಯಗಳು ಲಭ್ಯವಾಗಿವೆ.

ಇದೇ ನವೆಂಬರ್‌ 16ರಂದು ಸಂಜೆಯೇ ಅಯ್ಯಪ್ಪ ಸ್ವಾಮಿ ಆಲಯದ ಬಾಗಿಲು ತೆರೆಯಲಾಯಿತಾದರೂ 17ರಿಂದ ಭಕ್ತರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು. ವರ್ಚುವಲ್‌ ಕ್ಯೂನಲ್ಲಿ ಹೆಸರು ನೋಂದಾಯಿಸಿಕೊಂಡ 1000 ಭಕ್ತರಿಗೆ ಮಾತ್ರ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 17ರಿಂದ 20ರವೆರೆಗೆ 4000 ಭಕ್ತರು ಮಾತ್ರ ಅಯ್ಯಪ್ಪ ಸ್ವಾಮಿ ದರ್ಶನ ಪಡೆದಿದ್ದು, ಇನ್ನೂ ಶನಿವಾರ ಮತ್ತು ಭಾನುವಾರ ದಿನಕ್ಕೆ 2000 ಭಕ್ತರಿಗೆ ಸ್ವಾಮಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ದೇವಸ್ವಂ ಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುನೀಲ್‌ ಅರುಮಾನೂರ್ ಅವರು ಸಿಕೆನ್ಯೂಸ್‌ ನೌಗೆ ಮಾಹಿತಿ ನೀಡಿದ್ದಾರೆ.

ಪ್ರತಿವರ್ಷವೂ ಈ ಕಾಲದಲ್ಲಿ ಲಕ್ಷಾಂತರ ಭಕ್ತರಿಂದ ತುಂಬಿತುಳುಕುತ್ತಿದ್ದ ಸನ್ನಿಧಾನದಲ್ಲಿ ಸಾವಿರ ಲೆಕ್ಕದಲ್ಲಿ ಅಥವಾ ಅದಕ್ಕಿಂತ ಕಡಿಮೆ ಪ್ರಮಾಣದಲ್ಲಿ ಭಕ್ತರು ಕಾಣುತ್ತಿದ್ದಾರೆ. ಈಗಾಗಲೇ ವರ್ಚುಯಲ್‌ ಕ್ಯೂನಲ್ಲಿ ನೋಂದಾಯಿಸಿಕೊಂಡಿರುವ ಭಕ್ತರು ಮಾತ್ರ ಸ್ವಾಮಿಯ ದರ್ಶನಕ್ಕೆ ಬರುತ್ತಿದ್ದಾರೆ. ಪಂಪಾ ತಟದಿಂದ ಕಾಲ್ನಡಿಗೆಯಲ್ಲಿ ಬೆಟ್ಟವನ್ನೇರಿ ಬರುವ ಭಕ್ತರು, ಸ್ವಾಮಿಯ ದರ್ಶನ ಪಡೆದು ಕೆಲವೊತ್ತು ಸನ್ನಿಧಾನದಲ್ಲಿಯೇ ವಿಶ್ರಮಿಸಿದ ನಂತರ ವಾಪಸ್‌ ಹೊರಡುತ್ತಿದ್ದಾರೆ. ಕೋವಿಡ್‌ ಮಾರ್ಗಸೂಚಿಯ ಪ್ರಕಾರ ಸನ್ನಿಧಾನದಲ್ಲಿ ರಾತ್ರಿ ವೇಳೆ ಭಕ್ತರಿಗೆ ಉಳಿಯಲು ಅವಕಾಶ ನೀಡಲಾಗುತ್ತಿಲ್ಲ.

ದೈಹಿಕ ಅಂತರ, ಸ್ಯಾನಿಟೈಸ್‌ ಮತ್ತು ಮಾಸ್ಕ್‌

ಸನ್ನಿಧಾನದಲ್ಲಿ ದೈಹಿಕ ಅಂತರ, ಸ್ಯಾನಿಟೈಸ್‌ ಮತ್ತು ಮಾಸ್ಕ್‌ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಅಲ್ಲಿನ ಸಿಬ್ಬಂದಿ ಈ ಮೂರು ಅಂಶಗಳ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಜತೆಗೆ, ಭಕ್ತರಿಗೆ ಸನ್ನಿಧಾನದಲ್ಲಿ ಕೋವಿಡ್‌ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡುತ್ತಿದ್ದಾರೆ. ಮಾಹಿತಿ ಕೇಂದ್ರದಿಂದಲೂ ಈ ಬಗ್ಗೆ ನಿರಂತರವಾಗಿ ಮಾಹಿತಿ ನೀಡುತ್ತಿರುವುದರಿಂದ ಭಕ್ತರು ಎಲ್ಲ ಮುನ್ನೆಚ್ಚರಿಕೆಗಳನ್ನು ಕೈಗೊಂಡಿರುವುದು ಕಂಡು ಬಂದಿತು.

ದರ್ಶನಕ್ಕೆ ತೆರಳುವ ಕ್ಯೂನಲ್ಲಿ ದೈಹಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್‌ ಗುರುತು ಹಾಕಲಾಗಿದೆ. ಒಮ್ಮೆಲೆ ಭಕ್ತರು ನುಗ್ಗಿ ಬರಲು ಆಗದಂತೆ ದೈಹಿಕ ಅಂತರವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹಾಗೆಯೇ ಪಡಿ (ಹದಿನೆಂಟು ಮೆಟ್ಟಿಲು) ಹತ್ತಿ ಸನ್ನಿಧಾನವನ್ನು ಪ್ರವೇಶಿಸುವಾಗಲು ದೈಹಿಕ ಅಂತರವನ್ನು ಕಟ್ಟುನಿಟ್ಟಾಗಿ ಮಾಡಲಾಗಿದೆ. ಪಡಿ ಹತ್ತುವಾಗ ಇಕ್ಕೆಲಗಳಲ್ಲೂ ಸಿಬ್ಬಂದಿ ಪಿಪಿ ಕಿಟ್‌ಗಳನ್ನು ಧರಿಸಿ, ಸ್ವತಃ ಮುನ್ನೆಚ್ಚರಿಕೆ ವಹಿಸಿ ಭಕ್ತರು ಸುಲಭವಾಗಿ ಹತ್ತಿಹೋಗುವುದಕ್ಕೆ ಸಹಾಯ ಮಾಡುತ್ತಿದ್ದಾರೆ ಎಂದು ಸುನೀಲ್‌ ಅವರು ಮಾಹಿತಿ ನೀಡಿದ್ದಾರೆ.

https://www.youtube.com/watch?v=2nLs4xnwXnk

ಇನ್ನೊಂದೆಡೆ, ಮೂರನೇ ಬಾರಿಗೆ ಯಾತ್ರೆ ಕೈಗೊಂಡು ಗಂಟೆ ಕಟ್ಟುವ ಸ್ವಾಮಿಗಳಿಗೆ ಪ್ರತ್ಯೇಕ ಜಾಗ ನಿಗದಿ ಮಾಡಲಾಗಿದೆ. ಈ ಮೊದಲು ಸಿಕ್ಕಸಿಕ್ಕ ಜಾಗದಲ್ಲಿ ಭಕ್ತರು ಗಂಟೆ ಕಟ್ಟುವುದು, ಅದನ್ನು ಬೇರೆಯವರು ಮುಗಿಬಿದ್ದು ಕಿತ್ತುಕೊಳ್ಳುವುದು ನಡೆಯುತ್ತಿತ್ತು. ಈ ಬಾರಿ ಅಲ್ಲಿ ನಿರ್ದಿಷ್ಟ ಜಾಗವನ್ನು ಗೊತ್ತು ಮಾಡಲಾಗಿದೆ.

ಭಕ್ತರ ಆನಂದ, ಧನ್ಯತೆ

ಪ್ರತಿ ವರ್ಷವೂ ಸನ್ನಿಧಾನಕ್ಕೆ ಬಂದಾಗ ಭಕ್ತರು ಪ್ರವಾಹದಂತೆ ಇರುತ್ತಿದ್ದರು. ಆದರೆ, ಈ ವರ್ಷ ಕೋವಿಡ್‌ ಕಾರಣದಿಂದ ಭಕ್ತರು ಕಡಿಮೆಯಾಗಿದ್ದಾರೆ. ಲಕ್ಷ ಲೆಕ್ಕದಲ್ಲಿ ಇರುತ್ತಿದ್ದ ಜನ ಈಗ ಸಾವಿರ ಲೆಕ್ಕದಲ್ಲಿ ಇದ್ದಾರೆ. ಹೀಗಾಗಿ ಸ್ವಾಮಿ ದರ್ಶನ ಸುಲಭವಾಗಿ ಆಗುತ್ತಿದೆ. ಎಲ್ಲಿಯೂ ನಿಲ್ಲುವಂತಿಲ್ಲ. ಯಾರೂ ತಳ್ಳುತ್ತಿಲ್ಲ. ಸ್ವಾಮಿಯನ್ನು ಕಣ್ತುಂಬಾ ದರ್ಶನ ಮಾಡಿಕೊಳ್ಳುತ್ತಿದ್ದಾರೆ ಭಕ್ತರು. ಅವರ ಮುಖದಲ್ಲಿ ಧನ್ಯತೆ, ಆನಂದ ಕಾಣುತ್ತಿದೆ ಎಂದು ಸುನೀಲ್‌ ಅವರು ಹೇಳುತ್ತಾರೆ.

Tags: keralasabarimalaswamy ayyappaswamy saranam
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಹೊಸ ವರ್ಷಕ್ಕೆ ಕೋವಿಡ್‌ ವ್ಯಾಕ್ಸಿನ್

ಹೆಚ್ಚುತ್ತಲೇ ಇದೆ ಕೊರೊನಾ ಆತಂಕ; ಲಸಿಕೆ ಸಿಗುವುದು ಇನ್ನೂ ತಡ ಎಂದ ಡಾ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಕೋಲಾರದಲ್ಲಿ ನಿಂತು ಕೋಡಿಹಳ್ಳಿ ಚಳಿಬಿಡಿಸಿದ ಕುಮಾರಸ್ವಾಮಿ; ಡೋಂಗಿಗಳಿಂದ ಪಾಠ ಕಲಿಯಬೇಕಿಲ್ಲ ಎಂದ ದಳಪತಿ

ಎತ್ತಿನಹೊಳೆ: ಬೊಮ್ಮಾಯಿಗೆ ಎಚ್‌ಡಿಕೆ ಪತ್ರ ಬರೆದರೆ ಸಾಕೆ?

5 years ago
ಪೊಲೀಸರ ಕ್ವಾಟ್ರಸುಗಳ ಕುಸಿತಕ್ಕೆ ಕೊನೆಯೇ ಇಲ್ಲ!

ಪೊಲೀಸರ ಕ್ವಾಟ್ರಸುಗಳ ಕುಸಿತಕ್ಕೆ ಕೊನೆಯೇ ಇಲ್ಲ!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ