• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಜನವರಿಯಿಂದ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಪರೀಕ್ಷೆ ಉಚಿತ; ಆರೋಗ್ಯ-ವೈದ್ಯ ಶಿಕ್ಷಣ ಇಲಾಖೆ ವಿಲೀನ

cknewsnow desk by cknewsnow desk
November 21, 2020
in CHIKKABALLAPUR, STATE
Reading Time: 1 min read
0
ಜನವರಿಯಿಂದ ಜಿಲ್ಲಾಸ್ಪತ್ರೆಗಳಲ್ಲಿ ಎಲ್ಲ ಪರೀಕ್ಷೆ ಉಚಿತ; ಆರೋಗ್ಯ-ವೈದ್ಯ ಶಿಕ್ಷಣ ಇಲಾಖೆ ವಿಲೀನ
916
VIEWS
FacebookTwitterWhatsuplinkedinEmail

Lead photo by pixabay from pexels

ಬೆಳಗಾವಿ: ಕಾಸ್ಟ್‌ ಕಟಿಂಗ್‌, ಕಾರ್ಯಕ್ಷಮತೆ ಮುಂತಾದ ಕಾರಣಗಳಿಗಾಗಿ ಕೇಂದ್ರದ ನರೇಂದ್ರ ಮೋದಿ ಸರಕಾರ ಕೆಲ ಇಲಾಖೆಗಳನ್ನು ಮರ್ಜ್‌ ಮಾಡಿದಂತೆಯೇ ರಾಜ್ಯದಲ್ಲಿಯೂ ಅಂಥದ್ದೇ ಕಾರ್ಯಕ್ಕೆ ಸರಕಾರ ಕೈಹಾಕುವುದು ಖಚಿತವಾಗಿದೆ.

ಇದರ ಮೊದಲ ಹೆಜ್ಜೆಯಾಗಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಎರಡನ್ನೂ ಒಂದೇ ಇಲಾಖೆಯಾಗಿಸುವ ಚಿಂತನೆ ನಡೆದಿದೆ. ಈ ವಿಷಯವನ್ನು ಸ್ವತಃ ಆರೋಗ್ಯ ಸಚಿವ ಡಾ.ಸುಧಾಕರ್‌ ಅವರೇ ತಿಳಿಸಿದ್ದಾರೆ.

ಹಾಗೆಯೇ; ಸರಕಾರಿ ಆಸ್ಪತ್ರೆಗಳಲ್ಲಿ ಜನವರಿಯಿಂದಲೇ ಎಲ್ಲ ಪರೀಕ್ಷೆಗಳನ್ನು ಉಚಿತವಾಗಿ ಮಾಡಲಾಗುವುದು ಎಂದು ಅವರು ಪ್ರಕಟಿಸಿದ್ದಾರೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಹೊಸ ಆಕ್ಸಿಜನ್ ಘಟಕ, 200 ಹಾಸಿಗೆಗಳ ನೇತ್ರ, ಇಎನ್ʼಟಿ ವಾರ್ಡ್, 90 ಹಾಸಿಗೆಗಳ ಮಕ್ಕಳ ವಾರ್ಡ್ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.

  • ಡಾ.ಕೆ.ಸುಧಾಕರ್

ಈ ಎರಡೂ ಇಲಾಖೆಗಳು ಒಂದೇ ನಿರ್ವಹಣೆಯಲ್ಲಿರಬೇಕು ಎಂಬ ಕಾರಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಎರಡೂ ಇಲಾಖೆಗಳ ಹೊಣೆಯನ್ನು ನನಗೆ ನೀಡಿದ್ದಾರೆ. ಇದರಿಂದ ಆರೋಗ್ಯ ಕ್ಷೇತ್ರದ ನಿರ್ವಹಣೆ ಸುಲಭವಾಗಲಿದೆ. ಮುಂದಿನ ದಿನಗಳಲ್ಲಿ ಎರಡನ್ನೂ ಒಂದೇ ಇಲಾಖೆಯಾಗಿಸುವ ಚಿಂತನೆ ಇದೆ ಎಂದರು.

ಸರಕಾರಿ ಆಸ್ಪತ್ರೆಗಳಲ್ಲಿ ಶೌಚಾಲಯ, ವಾರ್ಡ್ ಸ್ವಚ್ಛವಿಲ್ಲ ಎಂಬ ಆಪಾದನೆ ಇದೆ. ಬೆಳಗಾವಿ ಆಸ್ಪತ್ರೆಯಲ್ಲಿ ಸ್ವಚ್ಛತೆಗೆ ತಿಂಗಳಿಗೆ 36 ಲಕ್ಷ ರೂ. ಖರ್ಚು ಮಾಡಲಾಗುತ್ತಿದೆ. ಆದರೂ ಸ್ವಚ್ಛವಿಲ್ಲ ಎಂದರೆ ನೋವಾಗುತ್ತದೆ. ಖಾಸಗಿಗಿಂತ ಸರಕಾರಿ ಆಸ್ಪತ್ರೆಗೆ ಹೆಚ್ಚು ಖರ್ಚು ಮಾಡಲಾಗುತ್ತದೆ. ಖಾಸಗಿ ಆಸ್ಪತ್ರೆಗೆ ಸಿಗುವ ಸೌಲಭ್ಯ ಹಾಗೂ ಅವರು ಮಾಡುವ ಸೇವೆ ಸರಕಾರಿ ಆರೋಗ್ಯ ಕ್ಷೇತ್ರದಲ್ಲೂ ದೊರೆಯಬೇಕು. ಎಲ್ಲರೂ ಈ ಕುರಿತು ಆತ್ಮವಿಮರ್ಶೆ ಮಾಡಿಕೊಳ್ಳಬೇಕು ಎಂದು ಅವರು ಕಿವಿಮಾತು ಹೇಳಿದರು.

ಲಸಿಕೆ ವಿತರಣೆಗೆ ಸಿದ್ಧತೆ

ಕೋವಿಡ್ ಲಸಿಕೆ ಬಂದ ನಂತರ ವಿತರಣೆಯಲ್ಲಿ ತೊಂದರೆ ಆಗಬಾರದೆಂದು ಈಗಲೇ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಎಲ್ಲ ಜಿಲ್ಲೆಗಳಲ್ಲಿ ಏಕಕಾಲದಲ್ಲಿ ವಿತರಿಸಲಾಗುವುದು. ಲಸಿಕೆ ಸಂಗ್ರಹಣೆಗೆ ಎಲ್ಲ ಜಿಲ್ಲೆಗಳಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುವುದು. ಉತ್ತಮ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಇದು ತುಂಬಾ ಅಗತ್ಯ. ವೈದ್ಯಾಧಿಕಾರಿಗಳು ವಾರದಲ್ಲಿ ಒಂದೆರಡು ದಿನ ಪ್ರವಾಸ ಮಾಡಿ, ಸ್ಥಳೀಯ ಸರ್ಕಾರಿ ಆರೋಗ್ಯ ಸೇವೆಯಲ್ಲಿನ ಸಮಸ್ಯೆಗಳನ್ನು ಅರಿತುಕೊಳ್ಳಬೇಕು ಹಾಗೂ ಜನಸಂಖ್ಯೆಗೆ ತಕ್ಕಂತೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಕೋವಿಡ್ ನಿಯಂತ್ರಣದಲ್ಲಿ ಬೆಳಗಾವಿ ಮಾದರಿ. ಈ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೊಳಗಾದವರಲ್ಲಿ 97% ರಷ್ಟು ಮಂದಿ ಗುಣಮುಖರಾಗಿದ್ದಾರೆ. 2 ಲಕ್ಷ ಜನರಿಗೆ ಪರೀಕ್ಷೆ ಮಾಡಲಾಗಿದೆ. ಕೋವಿಡ್ ಮರಣ ಪ್ರಮಾಣ 0.8% ರಷ್ಟಿದೆ ಎಂದು ಸಚಿವರು ತಿಳಿಸಿದರು.

Tags: Healthkarnatakamedical education
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ವರ್ಚುಯಲ್‌ ಮೇಲೆ ಕರ್ನಾಟಕದ ಬೆಡಗು; ಖಂಡಗಳನ್ನುದಾಟಿದ ಬೆಂಗಳೂರು ಟೆಕ್‌ ಸಮಿಟ್-2020

ವರ್ಚುಯಲ್‌ ಮೇಲೆ ಕರ್ನಾಟಕದ ಬೆಡಗು; ಖಂಡಗಳನ್ನುದಾಟಿದ ಬೆಂಗಳೂರು ಟೆಕ್‌ ಸಮಿಟ್-2020

Leave a Reply Cancel reply

Your email address will not be published. Required fields are marked *

Recommended

ಲಾಕ್‌ಡೌನ್‌ ಇಲ್ಲ;  ರಾಜ್ಯದಲ್ಲಿ ವೀಕೆಂಡ್‌ನಲ್ಲಿ  ಟೈಟ್ ನೈಟ್ ಕರ್ಫ್ಯೂ ಮಾತ್ರ, ಶ್ರೀರಾಮನವಮಿ ಮುಗಿದ ಮೇಲೆ ಬುಧವಾರ  ರಾತ್ರಿಯಿಂದಲೇ ಹದಿನಾಲ್ಕು ದಿನ 144 ಸೆಕ್ಷನ್ ಜಾರಿ

ಲಾಕ್‌ಡೌನ್‌ ಇಲ್ಲ; ರಾಜ್ಯದಲ್ಲಿ ವೀಕೆಂಡ್‌ನಲ್ಲಿ ಟೈಟ್ ನೈಟ್ ಕರ್ಫ್ಯೂ ಮಾತ್ರ, ಶ್ರೀರಾಮನವಮಿ ಮುಗಿದ ಮೇಲೆ ಬುಧವಾರ ರಾತ್ರಿಯಿಂದಲೇ ಹದಿನಾಲ್ಕು ದಿನ 144 ಸೆಕ್ಷನ್ ಜಾರಿ

5 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ರಾಷ್ಟ್ರಪತಿಗಳ ಬಗ್ಗೆ ಏಕವಚನಕ್ಕೆ ಸಿಎಂ ವಿಷಾದ; ಇಷ್ಟು ಸಾಲದು ಎಂದ ಹೆಚ್.ಡಿ.ಕುಮಾರಸ್ವಾಮಿ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ