ಶಬರಿಮಲೆ: ಕೋವಿಡ್-19 ಕಾರಣದಿಂದ ಭಕ್ತರ ಪ್ರಮಾಣದಲ್ಲಿ ತೀವ್ರ ಕುಸಿತ ಉಂಟಾಗಿ ದೇವಳಕ್ಕೆ ಆದಾಯ ಕಡಿಮೆಯಾದರೂ ಅಯ್ಯಪ್ಪ ಸನ್ನಿಧಾನದಲ್ಲಿ ನಡೆಯುತ್ತಿರುವ ಧಾರ್ಮಿಕ ವಿಧಿ ವಿಧಾನಗಳಿಗೆ ಯಾವುದೇ ಕುಂದುಂಟಾಗಿಲ್ಲ.
ಅಯ್ಯಪ್ಪ ಸನ್ನಿಧಿಯಲ್ಲಿ ಭಾನುವಾರ ಕಾರ್ತೀಕ ದೀಪೋತ್ಸವ ನಡೆಯಿತು. ಈ ಸಂದರ್ಭದಲ್ಲಿ ದೇವಳದ ಮುಖ್ಯ ಅರ್ಚಕರಾದ ಶ್ರೀ ರಾಜೀವ್ ಕಂದರಾರು ಅವರು ದೀಪ ಬೆಳಗಿಸಿ ದೀಪೋತ್ಸವಕ್ಕೆ ಚಾಲನೆ ನೀಡಿದರು. ಕೋವಿಡ್ ಹಿನ್ನೆಲೆಯಲ್ಲಿ ಸನ್ನಿಧಾನದಲ್ಲಿರುವ ಅರ್ಚಕರು, ಸಿಬ್ಬಂದಿ ಮಾತ್ರ ಈ ದೇವಕಾರ್ಯದಲ್ಲಿ ಭಾಗಿಯಾಗಿದ್ದರು ಎಂದು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಸುನೀಲ್ ಅರುಮಾನೂರ್ ಅವರು ಸಿಕೆನ್ಯೂಸ್ ನೌʼಗೆ ಮಾಹಿತಿ ನೀಡಿದ್ದಾರೆ.
ಕಾರ್ತೀಕ ಮಾಸದಲ್ಲಿ ಸನ್ನಿಧಾನದಲ್ಲಿ ವಿಶೇಷ ಪೂಜೆ ಮತ್ತಿತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ. ಕಳೆವ ವರ್ಷ ಈ ದೀಪೋತ್ಸವ ಬಹಳ ವಿಜೃಂಭಣೆಯಿಂದ ಭಕ್ತರ ಸಮ್ಮುಖದಲ್ಲಿ ನೆರವೇರಿತ್ತು. ಆದರೆ, ಈ ವರ್ಷ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಜಾರಿಯಲ್ಲಿ ಇರುವುದರಿಂದ ಸೀಮಿತ ಜನರ ನಡುವೆ ನೆರೆವೇರಿಸಲಾಯಿತು ಎಂದು ಅವರು ತಿಳಿಸಿದ್ದಾರೆ.
- ಈ ಸುದ್ದಿಯನ್ನು ಓದಲು ಈ ಲಿಂಕ್ ಕ್ಲಿಕ್ ಮಾಡಿ…