• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಸರಕಾರ ಅನುಮೋದನೆ ನೀಡಿದ್ದರೂ ನೆನೆಗುದಿಗೆ ಬಿದ್ದಿದ್ದ ಪ್ರಸ್ತಾವನೆ; 302 ಉಪನ್ಯಾಸಕರ ನೇಮಕಾತಿ ಶೀಘ್ರ ಎಂದ ಡಿಸಿಎಂ

cknewsnow desk by cknewsnow desk
December 11, 2020
in NEWS IN USE
Reading Time: 1 min read
0
ಸರಕಾರ ಅನುಮೋದನೆ ನೀಡಿದ್ದರೂ ನೆನೆಗುದಿಗೆ ಬಿದ್ದಿದ್ದ ಪ್ರಸ್ತಾವನೆ; 302 ಉಪನ್ಯಾಸಕರ ನೇಮಕಾತಿ ಶೀಘ್ರ ಎಂದ ಡಿಸಿಎಂ

ಡಾ.ಸಿ.ಎನ್.ಅಶ್ವತ್ಥನಾರಾಯಣ

915
VIEWS
FacebookTwitterWhatsuplinkedinEmail

ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ಬಹಳ ದಿನದಿಂದ ನೆನೆಗುದಿಗೆ ಬಿದ್ದಿರುವ ಅನುದಾನಿತ ಪದವಿ ಕಾಲೇಜುಗಳ 302 ಉಪನ್ಯಾಸಕರ ನೇಮಕಾತಿ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚಿಸಿದರು.

ಹಣಕಾಸು ಇಲಾಖೆಯಿಂದ ಅನುಮೋದನೆ ಸಿಕ್ಕಿದ ನಂತರವೂ ನೆನೆಗುದಿಗೆ ಬಿದ್ದಿರುವ ಅನುದಾನಿತ ಪದವಿ ಕಾಲೇಜುಗಳ 302 ಉಪನ್ಯಾಸಕರ ನೇಮಕಾತಿ ಬಗ್ಗೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ತಮ್ಮ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚಿಸಿದರು.

ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಅನುದಾನಿತ ಪ್ರಾಧ್ಯಾಪಕರ ಒಕ್ಕೂಟದ ಪ್ರತಿನಿಧಿಗಳು, ಉನ್ನತ ಶಿಕ್ಷಣ ಹಾಗೂ ಹಣಕಾಸು ಇಲಾಖೆಗಳ ಅಧಿಕಾರಿಗಳ ಜತೆ ಸಭೆ ನಡೆಸಿದ ಡಿಸಿಎಂ, ಉಪನ್ಯಾಸಕರ ಸಮಸ್ಯೆಗಳನ್ನು ಆಲಿಸಿದರಲ್ಲದೆ; ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಒಟ್ಟು  907 ಮಂದಿ  ಉಪನ್ಯಾಸಕರನ್ನು ಅನುದಾನಿತ ಕಾಲೇಜುಗಳಿಗೆ ನೇಮಕ ಮಾಡಿಕೊಳ್ಳಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಇದರಲ್ಲಿ 369 ಮಂದಿಗೆ ನೇಮಕಾತಿ ಅದೇಶ ನೀಡಿದ್ದು ಅವರೆಲ್ಲರೂ ತಮಗೆ ನಿಯೋಜನೆ ಆಗಿರುವ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಯುಜಿಸಿ ನಿಯಮಗಳ ಅನುಸಾರವಾಗಿಯೇ ಅವರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಡಿಸಿಎಂ ತಿಳಿಸಿದರು.

ಇನ್ನು, 302 ಅಭ್ಯರ್ಥಿಗಳ ಅರ್ಜಿಗಳು ಪರಿಶೀಲನೆ ಹಂತದಲ್ಲಿದ್ದು, ಇಷ್ಟೂ ಮಂದಿಯ ನೇಮಕಾತಿ ಕುರಿತಂತೆ ಕೂಡಲೇ ಹಣಕಾಸು ಇಲಾಖೆಗೆ ಪ್ರಸ್ತಾವನೆ ಕಳಿಸುವಂತೆ ತಮ್ಮ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ ಡಿಸಿಎಂ, ಈ ಬಗ್ಗೆ ಉನ್ನತ ಮಟ್ಟದಲ್ಲಿ ಮಾತುಕತೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ.ಜಾಫರ್ ಅವರು ಕೂಡ, ಪ್ರಸ್ತಾವನೆ ಬಂದ ತಕ್ಷಣ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

  • ಕೊಳ್ಳೆಗಾಲದ ಶಾಸಕ ಮಹೇಶ್‌, ಡಾ.ಅಶ್ವತ್ಥನಾರಾಯಣ

ಕೊಳ್ಳೆಗಾಲದ ಶಾಸಕ ಮಹೇಶ್‌ ಅವರ ನೇತೃತ್ವಲ್ಲಿ ಡಾ.ಅಶ್ವತ್ಥನಾರಾಯಣ ಅವರನ್ನು ಭೇಟಿಯಾದ ಅನುದಾನಿತ ಕಾಲೇಜುಗಳ ಉಪನ್ಯಾಸಕರು ತಮ್ಮೆಲ್ಲ ಸಮಸ್ಯೆಗಳನ್ನು ನಿವೇದನೆ ಮಾಡಿಕೊಂಡರು. 2015ರ ಡಿಸೆಂಬರ್ 31ರವರೆಗಿನ ಬೋಧಕರ ಖಾಲಿ ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿತ್ತು. ಆ ಪ್ರಕಾರ ಈ ನೇಮಕ ಮಾಡಬೇಕಾಗಿದೆ.

Tags: Dr. CN AshwathnarayanFirst grade college recruitmentkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಬಲವಿದ್ದರೂ ಸೋತ ಕಾಂಗ್ರೆಸ್; ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷಗಿರಿ ಬಿಜೆಪಿ ಪಾಲು

ರೆಮಿಡಿಸ್ವಿರ್ ಔಷಧಿಗೆ ಹೆಚ್ಚು ದರ ವಿಧಿಸಿದರೆ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಹೆಲ್ತ್ ಮಿನಿಸ್ಟರ್ ಎಚ್ಚರಿಕೆ

Leave a Reply Cancel reply

Your email address will not be published. Required fields are marked *

Recommended

ಸೆಪ್ಟೆಂಬರ್’ನಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಪ್ರಾರಂಭ

ಸರಕಾರದಿಂದ ಪ್ರಜಾಪ್ರಭುತ್ವ ವಿರೋಧಿ ನಡೆ

3 years ago
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ