ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಹೊಸ ಐಫೋನ್‌ಗಳನ್ನು ತಯಾರಿಕೆ ಮಾಡುತ್ತಿದ್ದ ತೈವಾನ್‌ ಮೂಲದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದಿರುವ ಸುಮಾರು 8,000 ಕಾರ್ಮಿಕರು, ಶನಿವಾರ ಬೆಳಗ್ಗೆ ಉಗ್ರ ಪ್ರತಿಭಟನೆ ನಡೆಸಿದರಲ್ಲದೆ, ಕಟ್ಟಡ ಮತ್ತು ವಾಹನಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.