• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಕಸದಿಂದ ರಸ ತೆಗೆಯುವುದು ಎಂದರೆ ಇದೇ! ₹ 1.10 ಲಕ್ಷ ಕೋಟಿ ಮೌಲ್ಯದ ಉದ್ದಿಮೆ ಆಗಲಿದೆ ತ್ಯಾಜ್ಯ ನಿರ್ವಹಣೆ; ಹೊಸ ತಲೆಮಾರಿನ ಉದ್ಯೋಗ ಸೃಷ್ಟಿಗೆ ನಾಂದಿ

cknewsnow desk by cknewsnow desk
December 15, 2020
in STATE
Reading Time: 1 min read
0
ಕಸದಿಂದ ರಸ ತೆಗೆಯುವುದು ಎಂದರೆ ಇದೇ!  ₹ 1.10 ಲಕ್ಷ ಕೋಟಿ ಮೌಲ್ಯದ ಉದ್ದಿಮೆ ಆಗಲಿದೆ ತ್ಯಾಜ್ಯ ನಿರ್ವಹಣೆ; ಹೊಸ ತಲೆಮಾರಿನ ಉದ್ಯೋಗ ಸೃಷ್ಟಿಗೆ ನಾಂದಿ
949
VIEWS
FacebookTwitterWhatsuplinkedinEmail

ಬೆಂಗಳೂರು: ಭಾರತದಲ್ಲಿ ತ್ಯಾಜ್ಯ ನಿರ್ವಹಣಾ ಉದ್ಯಮವು 2025ರ ವೇಳೆಗೆ ಸುಮಾರು 1.10 ಲಕ್ಷ ಕೋಟಿ ರೂಪಾಯಿಗಳಷ್ಟು ಮೊತ್ತದ ವ್ಯಾಪಾರ ಅವಕಾಶಗಳನ್ನು ಸೃಷ್ಟಿಸುವ ಸಾಧ್ಯತೆ ಇದೆ ಎಂದು ಐಟಿ/ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಸೋಷಿಯಲ್ ಆಲ್ಫಾ ಮತ್ತು ಎಚ್ & ಎಂ ಫೌಂಡೇಷನ್ ವತಿಯಿಂದ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ “ತ್ಯಾಜ್ಯ ನಿರ್ವಹಣೆಯಲ್ಲಿ ನಾವೀನ್ಯತಾ ಪರಿಹಾರಗಳಿಗೆ ಸವಾಲು” ಉಪಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಸವನ್ನು ಇಂಧನವನ್ನಾಗಿ ಪರಿವರ್ತಿಸುವ ತಾಂತ್ರಿಕತೆಗಳು, ಇಂಟರ್ ನೆಟ್ ಬೆಂಬಲಿತ ಸೇವೆಗಳು, ರೋಬೋಟಿಕ್ಸ್ ಆನ್ವಯಿಕತೆಗಳು, ಜೈವಿಕ ತಂತ್ರಜ್ಞಾನ ಮಧ್ಯಸ್ಥಿಕೆ ನೆರವು ಯೋಜನೆಗಳು, ಸೋಲಾರ್ ಫಲಕಗಳಿರುವ ಕಾಂಪೋಸ್ಟ್ ತಯಾರಿಕಾ ಘಟಕಗಳು, ದತ್ತಾಂಶ ವಿಶ್ಲೇಷಕಗಳು ತ್ಯಾಜ್ಯ ನಿರ್ವಹಣೆಯನ್ನು ಆರ್ಥಿಕ ಕಾರ್ಯಸಾಧುವಾದ ಸುಸ್ಥಿರ ಮಾದರಿಗಳನ್ನಾಗಿ ಮಾಡಬಲ್ಲವು ಎಂದು ಅವರು ಅಭಿಪ್ರಾಯಪಟ್ಟರು.

ತ್ಯಾಜ್ಯ ನಿರ್ವಹಣೆಯಲ್ಲಿ ಸ್ವೀಡನ್ ದೇಶವು ನಮಗೆ ಮಾದರಿಯಾಗಬೇಕು. 2016ರ ಸಂದರ್ಭದಲ್ಲಿ ಅಲ್ಲಿ ಕೂಡ ಇಲ್ಲಿನಂತೆಯೇ ತ್ಯಾಜ್ಯ ವಿಲೇವಾರಿ ಸಮಸ್ಯೆ ಇತ್ತು. ಆದರೆ ತ್ಯಾಜ್ಯವನ್ನು ಇಂಧನವನ್ನಾಗಿ ಪರಿವರ್ತಿಸುವ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳುವ ಮೂಲಕ ಆ ದೇಶವು ಈಗ ಕಸ ನಿರ್ವಹಣೆಯಿಂದ ಲಾಭ ಗಳಿಸುತ್ತಿದೆ. ಹೀಗಾಗಿ ಆ ದೇಶವು ಈಗ ಕಸವನ್ನು ಬೇರೆ ದೇಶಗಳಿಂದ ಆಮದು ಮಾಡಿಕೊಳ್ಳುತ್ತಿದೆ ಎಂದು ಉಪ ಮುಖ್ಯಮಂತ್ರಿ ವಿವರಿಸಿದರು.

ಹೆಚ್ಚುತ್ತಿರುವ ನಗರೀಕರಣದಿಂದಾಗಿ ತ್ಯಾಜ್ಯ ನಿರ್ವಹಣೆ ಅತ್ಯಂತ ಮಹತ್ವದ್ದಾಗಲಿದೆ. ಇದು ಸುಸ್ಥಿರ ಉದ್ಯೋಗಾವಕಾಶಗಳನ್ನು ಸೃಷ್ಟಿಸಲಿದೆ. ಹೊಸ ಭಾರತ ನಿರ್ಮಾಣದಲ್ಲಿ ಇದು ಹೆಚ್ಚಿನ ಬೆಳವಣಿಗೆಗೆ ಅವಕಾಶವಿರುವ ಉದ್ಯಮವಾಗಲಿದೆ. ಉತ್ತಮ ತ್ಯಾಜ್ಯ ನಿರ್ವಹಣೆಯ ನಮ್ಮ ನಗರಗಳನ್ನು ಸ್ವಚ್ಛಗೊಳಿಸುವ ಜೊತೆಗೆ ಅವುಗಳನ್ನು ವಸತಿಗೆ ಯೋಗ್ಯವಾದ ನೆಲೆಗಳನ್ನಾಗಿ ಹಾಗೂ ಕ್ಷಮತೆಯಿಂದ ಕೂಡಿದ ಸ್ಥಳಗಳನ್ನಾಗಿ ಮಾಡಲಿದೆ ಎಂದು ವಿವರಿಸಿದರು.

15,000 ಟನ್

ಭಾರತದಲ್ಲಿ ವಾರ್ಷಿಕ 2770 ಲಕ್ಷ ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದೆ. ಇದರಲ್ಲಿ ಪ್ಲ್ಯಾಸ್ಟಿಕ್ ತ್ಯಾಜ್ಯದ ಪ್ರಮಾಣ 15,000 ಟನ್ ಗಳಷ್ಟಿದ್ದು, ಇದರಲ್ಲಿ ಶೇ 40ರಷ್ಟು ಮರು ಸಂಸ್ಕರಣೆ ಆಗುತ್ತಿಲ್ಲ. ತ್ಯಾಜ್ಯ ನಿರ್ವಹಣೆಯಲ್ಲಿ ನಾವೀನ್ಯತೆಯಿಂದ ಕೂಡಿದ ಪರಿಹಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೆಚ್ಚಿನ ಲಾಭಗಳನ್ನು ಪಡೆಯಬಹುದಾಗಿದೆ. ಈ ನಿಟ್ಟಿನಲ್ಲಿ ರಾಜ್ಯವು ಕ್ರಮಗಳನ್ನು ಕೈಗೊಂಡಿದೆ. ಕರ್ನಾಟಕ ಸರ್ಕಾರವು ನಗರ ಘನ ತ್ಯಾಜ್ಯ ನಿರ್ವಹಣೆ ಕಾರ್ಯನೀತಿ-2020 ಮತ್ತು ನಗರ ಘನತ್ಯಾಜ್ಯ ನಿರ್ವಹಣಾ ಕಾರ್ಯತಂತ್ರ-2020ಕ್ಕೆ ಅನುಮೋದನೆ ನೀಡಿದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದರು.

ತ್ಯಾಜ್ಯದಿಂದ ಸಂಪತ್ತು ಸೃಷ್ಟಿಸಬೇಕು. ಈಗ ಚಾಲನೆಗೊಳಿಸಿರುವ ಉಪಕ್ರಮವು ಉದ್ಯಮಿಗಳಿಗೆ ತ್ಯಾಜ್ಯ ನಿರ್ವಹಣೆಯ ಸವಾಲುಗಳಿಗೆ ಪರಿಹಾರ ಕಂಡುಹಿಡಿಯಲು ಅನುವು ಮಾಡಿಕೊಡಲಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಅಸಂಘಟಿತ ವಲಯದ ಪಾತ್ರವನ್ನು ಹೆಚ್ಚಿಸಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಾದಿಸುವಂತೆ ಬಳಕೆ ಪ್ರಮಾಣ ತಗ್ಗಿಸುವುದು, ಮರುಬಳಕೆ, ಪುನರ್ ಸಂಸ್ಕರಣೆ ಇವು ನಮ್ಮ ಮಂತ್ರಗಳಾಗಬೇಕು ಎಂದರು.

ಈ ಉಪಕ್ರಮದ ಮೂಲಕ ತ್ಯಾಜ್ಯ ನಿರ್ವಹಣೆಗೆ ಪರಿಣಾಮಕಾರಿ ಪರಿಹಾರಗಳನ್ನು ಕಂಡುಹಿಡಿಯುವ ಐದು ನವೋದ್ಯಮಗಳನ್ನು ವಿಜೇತರೆಂದು ಆಯ್ಕೆ ಮಾಡಲಾಗುವುದು. ನಂತರ ಈ ನವೋದ್ಯಮಗಳಿಗೆ ತಮ್ಮ ತ್ಯಾಜ್ಯ ನಿರ್ವಹಣಾ ತಾಂತ್ರಿಕತೆಯನ್ನು ಪ್ರಾಯೋಗಿಕವಾಗಿ ಕಾರ್ಯರೂಪಕ್ಕೆ ತರಲು ಸೋಷಿಯಲ್ ಆಲ್ಫಾ ಮತ್ತು ಎಚ್ & ಎಂ ಫೌಂಡೇಷನ್ ನೆರವು ನೀಡಲಿವೆ.

ಸೋಷಿಯಲ್ ಆಲ್ಫಾ ಕಾರ್ಯಕ್ರಮ ನಿರ್ದೇಶಕಿ ಮಧುಶ್ರೀ ನಾರಾಯಣ್, ಭಾರತ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ವಿಜಯ್ ರಾಘವನ್, ಕರ್ನಾಟಕ ನಾವೀನ್ಯತಾ ಮತ್ತು ತಂತ್ರಜ್ಞಾನ ಸಂಸ್ಥೆಯ (ಕಿಟ್ಸ್) ನಿರ್ದೇಶಕಿ ಮೀನಾ ನಾಗರಾಜ್, ಬಿಬಿಎಂಪಿ ಹೆಚ್ಚುವರಿ ಆಯುಕ್ತ (ಘನ ತ್ಯಾಜ್ಯ ವಿಲೇವಾರಿ) ರಣದೀಪ್ ಡಿ. ಬಿಬಿಎಂಪಿ ಆಡಳಿತಾಧಿಕಾರಿ ಗೌರವ್ ಗುಪ್ತಾ, ಕರ್ನಾಟಕ ನವೋದ್ಯಮಗಳ ದೂರದರ್ಶಿತ್ವ ತಂಡದ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಅವರು ಪಾಲ್ಗೊಂಡಿದ್ದರು.

***

ಮೇಲಿನ ಚಿತ್ರ: ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಐಟಿ-ಬಿಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್‌, ಕರ್ನಾಟಕ ನವೋದ್ಯಮಗಳ ದೂರದರ್ಶಿತ್ವ ತಂಡದ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್.

Tags: e-wasteit-btkarnatakawaste management
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರಕ್ಕೆ ಚೀಯರ್ಸ್ ;‌ ಡಾ.ಸುಧಾಕರ್ʼಗೆ ವೈದ್ಯಶಿಕ್ಷಣ ಜತೆಗೆ ಆರೋಗ್ಯ ಖಾತೆ

ಡಿಕೆಶಿ ಅಧ್ಯಕ್ಷರಾದ ಮೇಲೆ ಕಾಂಗ್ರೆಸ್‌ ಸಂಸ್ಕೃತಿ ಬದಲಾಗಿದೆ ಎಂದ ಡಾ.ಕೆ.ಸುಧಾಕರ್

Leave a Reply Cancel reply

Your email address will not be published. Required fields are marked *

Recommended

ಕೋವಿಡ್‌ ವ್ಯಾಕ್ಸಿನ್‌ ಅಭಿಯಾನಕ್ಕೆ ಸಹಕರಿಸುವ ಜನಪ್ರತಿನಿಧಿಗಳಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ

ಕೋವಿಡ್‌ ವ್ಯಾಕ್ಸಿನ್‌ ಅಭಿಯಾನಕ್ಕೆ ಸಹಕರಿಸುವ ಜನಪ್ರತಿನಿಧಿಗಳಿಗೆ ಹೆಚ್ಚಿನ ಅನುದಾನ ಕೊಡಲಾಗುವುದು ಎಂದ ಶಾಸಕ ಎಸ್‌.ಎನ್.ಸುಬ್ಬಾರೆಡ್ಡಿ

5 years ago
ಪೇಪರ್ ಕಪ್ಪಿನಲ್ಲಿ ಟೀ ಹೀರಿದ ಅಡಗೂರು ವಿಶ್ವನಾಥ್ ಜತೆ ರೈಲ್ವೆ ಫ್ಲಾಟ್ ಫಾರಂ ಮೇಲೊಂದು ವೃತ್ತಾಂತ

ಪೇಪರ್ ಕಪ್ಪಿನಲ್ಲಿ ಟೀ ಹೀರಿದ ಅಡಗೂರು ವಿಶ್ವನಾಥ್ ಜತೆ ರೈಲ್ವೆ ಫ್ಲಾಟ್ ಫಾರಂ ಮೇಲೊಂದು ವೃತ್ತಾಂತ

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ