• About
  • Advertise
  • Careers
  • Contact
Monday, May 19, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

ಐಐಟಿ ಮಾದರಿಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜ್ ಅಭಿವೃದ್ಧಿ; ಪ್ರತ್ಯೇಕ ಕಾಯ್ದೆ ರೂಪಿಸಲು ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡನೆ

cknewsnow desk by cknewsnow desk
December 15, 2020
in NEWS IN USE, TECH
Reading Time: 1 min read
0
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಚಿಕಿತ್ಸೆಗೆ ಸಡಗೋಪನ್ ಸಮಿತಿ ಕೊಟ್ಟ ಶಿಫಾರಸು

ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜ್

915
VIEWS
FacebookTwitterWhatsuplinkedinEmail

ಉಪ ಮುಖ್ಯಮಂತ್ರಿಗೆ ಕಾಯ್ದೆ ಕುರಿತು ವರದಿ ಸಲ್ಲಿಸಿದ ಡಾ.ಸಡಗೋಪನ್‌ ನೇತೃತ್ವದ ಸಮಿತಿ

ಬೆಂಗಳೂರು: ಪ್ರತಿಷ್ಠಿತ ಯೂನಿವರ್ಸಿಟಿ ವಿಶ್ವೇಶ್ವರಯ್ಯ ತಾಂತ್ರಿಕ ಕಾಲೇಜನ್ನು (UVCE) ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆಯ ಅಗತ್ಯವಿದ್ದು, ಅದಕ್ಕೆ ಬೇಕಾದ ವಿಧೇಯಕವನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಬೆಂಗಳೂರಿನಲ್ಲಿ ಮಂಗಳವಾರ ಯುವಿಸಿಇ ಕಾಯ್ದೆಯನ್ನು ರೂಪಿಸುವ ನಿಟ್ಟಿನಲ್ಲಿ ವಿವಿಧ ಐಐಟಿಗಳು ಹಾಗೂ ಐಐಎಂಗಳ ಕಾಯ್ದೆಗಳನ್ನು ಅಧ್ಯಯನ ಮಾಡಿ ಸಿದ್ಧಪಡಿಸಿದ ಸಮಗ್ರ ವರದಿಯನ್ನು ಐಐಐಟಿಬಿ ನಿರ್ದೇಶಕ ಡಾ.ಸಡಗೋಪನ್‌ ನೇತೃತ್ವದ ಸಮಿತಿಯಿಂದ ಸ್ವೀಕರಿಸಿದ ನಂತರ ಮಾತನಾಡಿದ ಡಿಸಿಎಂ, ನಮ್ಮ ರಾಜ್ಯದ ಹೆಮ್ಮೆಯ ಶಿಕ್ಷಣ ಸಂಸ್ಥೆಯಾದ ಯುವಿಸಿಇ ಅನ್ನು ಅತ್ಯುನ್ನತ ಮಟ್ಟದಲ್ಲಿ ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆಯ ಅಗತ್ಯವಿದೆ ಎಂದರು.

ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯಕ್ಕೆ ಶೈಕ್ಷಣಿಕ, ಆರ್ಥಿಕ, ಆಡಳಿತಾತ್ಮಕ ಸ್ವಾಯತ್ತತೆಯನ್ನು ನೀಡುವ ಬಗ್ಗೆ ಸರಕಾರಕ್ಕೆ ಮಹತ್ವದ ಶಿಫಾರಸುಗಳನ್ನು ಮಾಡಿರುವ ಸಮಿತಿಯು, ಸಂಸ್ಥೆಗೆ ಮೀಸಲಾದ ಪ್ರತ್ಯೇಕ ಹಾಗೂ ವಿಶೇಷ ಕಾಯ್ದೆ ಅಗತ್ಯ ಇರುವುದನ್ನು ಒತ್ತಿ ಹೇಳಿದೆ. ಅದರಂತೆ ಅಗತ್ಯವಾದ ಕಾನೂನು, ಆಡಳಿತಾತ್ಕಕ ಕ್ರಮಗಳನ್ನು ಸರಕಾರ ಕೈಗೊಳ್ಳುತ್ತಿದೆ ಎಂದರು.

'UVCE 2.0' ಪರಿಕಲ್ಪನೆಯಲ್ಲಿ ಬೆಂಗಳೂರು ನಗರದ ಈ ಪ್ರತಿಷ್ಠಿತ ಕಾಲೇಜಿನ ಸುಧಾರಣಾ ಕ್ರಮಗಳ ಬಗ್ಗೆ ಚರ್ಚಿಸಿ ಹಲವು ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದೆ.

ಯು.ವಿ.ಸಿ.ಯಿ.ಯನ್ನು ಐಐಟಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಪ್ರತ್ಯೇಕ ಕಾಯ್ದೆಯ ಅಗತ್ಯವಿದ್ದು, ಈ ವಿಧೇಯಕವನ್ನು ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಲಾಗುವುದು.

1/3 pic.twitter.com/nI3BSUCCfN

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) December 15, 2020

ಉದ್ದೇಶಿತ ವಿಧೇಯಕದಲ್ಲಿರುವ ಅಂಶಗಳೇನು?

*ಮುಂದಿನ ದಿನಗಳಲ್ಲಿ ಆರ್ಥಿಕವಾಗಿ ಸರಕಾರದ ಮೇಲೆ ಅವಲಂಬನೆ ತಗ್ಗಿಸಲು ಆರ್ಥಿಕ ಮಾದರಿಯನ್ನು ಸಿದ್ಧಪಡಿಸಿಕೊಂಡು ಆಂತರಿಕವಾಗಿ ಹಾಗೂ ಬಾಹ್ಯ ಮೂಲಗಳಿಂದ ಸಂಪನ್ಮೂಲ ಕ್ರೋಢೀಕರಣಕ್ಕೆ ಅವಕಾಶ ನೀಡಬೇಕು. ದೇಣಿಗೆ ಸ್ವೀಕಾರ, ಹಳೆಯ ವಿದ್ಯಾರ್ಥಿಗಳಿಂದ ಹಣಕಾಸು ನೆರವು ಪಡೆಯುವ ಅಂಶವು ಉದ್ದೇಶಿತ ವಿಧೇಯಕದಲ್ಲಿದೆ ಎಂದರು ಡಿಸಿಎಂ.

*ಅತ್ಯುತ್ತಮ ಗುಣಮಟ್ಟದ ಬೋಧಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವುದು. ಅವರಿಗೆ ಉತ್ತಮ ವೇತನ ನೀಡಬೇಕಿದೆ. ಜತೆಗೆ ಟ್ಯೂಷನ್ ಫೀ ನಿಗದಿ ಮಾಡುವ ಅಧಿಕಾರವನ್ನು ಯುವಿಸಿಇಗೇ ನೀಡಬೇಕು. ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಮತ್ತು ಆರ್ಥಿಕವಾಗಿ ದುರ್ಬಲವಾಗಿರುವ ವಿದ್ಯಾರ್ಥಿಗಳಿಗೆ ನೆರವು ನೀಡಬೇಕು ಎಂದ ಅಂಶವೂ ಸೇರಿದೆ ಎಂದು ಡಿಸಿಎಂ ತಿಳಿಸಿದರು.

*ಉತ್ಕೃಷ್ಟ ಶೈಕ್ಷಣಿಕ ಹಿನ್ನೆಲೆಯ ಬೋಧಕರ‌ ನೇಮಕ, ಸಂಶೋಧನೆ ಹಾಗೂ ಮೂಲಸೌಕರ್ಯಕ್ಕೆ ಆದ್ಯತೆ ನೀಡುವುದು, ಹೊಸ ರೀತಿಯ ಪಠ್ಯವನ್ನು ಸೇರ್ಪಡೆಗೊಳಿಸುವ ಹಾಗೂ ಹೊಸ ಕೋರ್ಸುಗಳನ್ನು ಆರಂಭಿಸಲು ಯುವಿಸಿಇಗೆ ಪೂರ್ಣ ಸ್ವಾಯತ್ತತೆ ಕೊಡಬೇಕು.

*ಆಡಳಿತದಲ್ಲಿ ಯುವಿಸಿಇಗೆ ಪೂರ್ಣ ಅಧಿಕಾರ ನೀಡುವುದರ ಜತೆಗೆ ಸ್ವತಂತ್ರ ಅಸ್ತಿತ್ವ ನೀಡಬೇಕು. ಒಟ್ಟಾರೆ ಮಾಲೀಕತ್ವ ಸರಕಾರದ್ದೇ ಆಗಿದ್ದರೂ ಆಡಳಿತದಲ್ಲಿ ಯುವಿಸಿಇಯದ್ದೇ ಅಂತಿಮ ನಿರ್ಧಾರವಾಗಬೇಕು. 11 ಸದಸ್ಯರ ಆಡಳಿತ ಮಂಡಳಿಯಲ್ಲಿ ಸರಕಾರಕ್ಕೂ ಸಮಾನ ಪ್ರಾತಿನಿಧ್ಯ ಇರುತ್ತದೆ. ಸರಕಾರ, ಕೈಗಾರಿಕೆ, ಶೈಕ್ಷಣಿಕ ವಲಯದಿಂದ ತಲಾ ಮೂವರು ಸದಸ್ಯರು, ಹಳೆಯ ವಿದ್ಯಾರ್ಥಿಗಳಿಂದ ಇಬ್ಬರು ಸದಸ್ಯರು ಇರಬೇಕು. ಈ ಅಂಶವೂ ಪ್ರಸ್ತಾವಿತ ವಿಧೇಯಕದಲ್ಲಿ ಇರುತ್ತದೆಂದು ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.

ಕ್ಯಾಂಪಸ್‌ಗೆ ಭೇಟಿ ಮತ್ತು ಪರಿಶೀಲನೆ

ಇದಕ್ಕೂ ಮುನ್ನ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಅವರು ಸಮಿತಿಯ ಸದಸ್ಯರೊಂದಿಗೆ ಕೆ.ಆರ್.ವೃತ್ತದಲ್ಲಿರುವ ಯುವಿಸಿಇ ಕ್ಯಾಂಪಸ್‌ಗೆ ಭೇಟಿ ನೀಡಿ ಪರಿಶೀಲನೆ ಮಾಡಿದರು. ಕಟ್ಟಡಗಳ ನಿರ್ಮಾಣ, ಮೂಲಸೌಕರ್ಯ ಇತ್ಯಾದಿ ಅಂಶಗಳ ಬಗ್ಗೆ ಸಮಿತಿ ಜತೆ ಚರ್ಚೆ ನಡೆಸಿದರು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷ ಡಾ.ಎಸ್.ಸಡಗೋಪನ್, ಸಮಿತಿ ಸದಸ್ಯರಾದ ಬೆಂಗಳೂರು ವಿವಿ ಕುಲಪತಿ ಪ್ರೊ.ವೇಣುಗೋಪಾಲ್, ಬಿ. ಮುತ್ತುರಾಮನ್, ಪ್ರಶಾಂತ್ ಪ್ರಕಾಶ್ ನಾಗಾನಂದ ದೊರೆಸ್ವಾಮಿ, ನಾರಾಯಣನ್‌ ಮುಂತಾದವರು ಡಿಸಿಎಂ ಜತೆಯಲ್ಲಿದ್ದರು.

Tags: karnataka educationUniversity Visvesvaraya College of EngineeringUVCE
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಮಾರ್ಚ್‌ 1ರಿಂದ ದ್ವಿತೀಯ ಪಿಯು, 20ರಿಂದ sslc ಪರೀಕ್ಷೆ

by cknewsnow desk
December 3, 2024
0

ಎಲ್ಲ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

ಪೋಡಿ ತ್ವರಿತ ಇತ್ಯರ್ಥಕ್ಕೆ 1,786 ಹುದ್ದೆ ಭರ್ತಿ

by cknewsnow desk
August 12, 2024
0

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ‍್ಸ್, 36 ಎಡಿಎಲ್‌ಆರ್‌ಗಳ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

kptclನಲ್ಲಿ 902 ಹುದ್ದೆಗೆ ನೇಮಕ

by cknewsnow desk
May 24, 2024
0

ನೇಮಕಾತಿ ಆದೇಶ ನೀಡಿದ ಸರಕಾರ

ಕೆಸಿಇಟಿ-24 ಪರೀಕ್ಷೆ: ಜನವರಿ 10ರಿಂದ online ಅರ್ಜಿ ಸಲ್ಲಿಕೆಗೆ ಅವಕಾಶ

CET EXAM; ಔಟ್ ಆಫ್ ಸಿಲೆಬಸ್ ಪ್ರಶ್ನೆ ಕೈಬಿಟ್ಟು ಮೌಲ್ಯಮಾಪನ; ವಿದ್ಯಾರ್ಥಿಗಳಿಗೆ ನಿರಾಳ

by cknewsnow desk
April 28, 2024
0

ತಜ್ಞರ ಶಿಫಾರಸು ಒಪ್ಪಿಕೊಂಡ ರಾಜ್ಯ ಸರಕಾರ

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

ದ್ವಿತೀಯ ಪಿಯುಸಿ ಫಲಿತಾಂಶ: ಧೂಳೆಬ್ಬಿಸಿದ ಬಾಲಕಿಯರು

by cknewsnow desk
April 11, 2024
0

ವಿಜ್ಞಾನದಲ್ಲಿ ವಿದ್ಯಾಲಕ್ಷ್ಮಿ ಪ್ರಥಮ

ಬೆಳಗ್ಗೆ 10.15 ಗಂಟೆಗೆ ದ್ವಿತೀಯ PUC ಪರೀಕ್ಷೆ; ಶುಭವಾಗಲಿ ವಿದ್ಯಾರ್ಥಿಗಳೇ

ನಾಳೆ ಬೆಳಗ್ಗೆ 10 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶ

by cknewsnow desk
April 9, 2024
0

11 ಗಂಟೆ ನಂತರ ಅಂತರ್ಜಾಲದಲ್ಲಿ ಫಲಿತಾಂಶ ನೋಡಬಹುದು

Next Post
ಕೋವಿಡ್‌ ನಡುವೆಯೂ ಕರಗದ ಭಕ್ತಿ; ಬೆಂಗಳೂರು ಮೂಲದ ಭಕ್ತರೊಬ್ಬರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ 184 ಗ್ರಾಂ ತೂಕದ ಚಿನ್ನದ ಹಾರ ಸಮರ್ಪಣೆ

ಕೋವಿಡ್‌ ನಡುವೆಯೂ ಕರಗದ ಭಕ್ತಿ; ಬೆಂಗಳೂರು ಮೂಲದ ಭಕ್ತರೊಬ್ಬರಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ 184 ಗ್ರಾಂ ತೂಕದ ಚಿನ್ನದ ಹಾರ ಸಮರ್ಪಣೆ

Leave a Reply Cancel reply

Your email address will not be published. Required fields are marked *

Recommended

BTS: ಟೆಕ್‌ ಶೃಂಗದಲ್ಲಿ 12 ಒಪ್ಪಂದ; ತಂತ್ರಜ್ಞಾನ, ನವೋದ್ಯಮ, ಸಂಶೋಧನೆ, ಕೃಷಿಗೆ ಆದ್ಯತೆ

BTS: ಟೆಕ್‌ ಶೃಂಗದಲ್ಲಿ 12 ಒಪ್ಪಂದ; ತಂತ್ರಜ್ಞಾನ, ನವೋದ್ಯಮ, ಸಂಶೋಧನೆ, ಕೃಷಿಗೆ ಆದ್ಯತೆ

5 years ago
ಗುಡಿಬಂಡೆ ಬಳಿ KSRTC ಬಸ್ ಅಪಘಾತ; 15 ಪ್ರಯಾಣಿಕರಿಗೆ ಗಾಯ

ಗುಡಿಬಂಡೆ ಬಳಿ KSRTC ಬಸ್ ಅಪಘಾತ; 15 ಪ್ರಯಾಣಿಕರಿಗೆ ಗಾಯ

2 years ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ