ಬೆಂಗಳೂರು: ಕೋವಿಡ್ ಕಾಲದಲ್ಲಿ ವಿದ್ಯಾರ್ಥಿಗಳ ಪಾಲಿಗೆ ಆಶಾಕಿರಣವಾಗಿದ್ದ ವಿದ್ಯಾಗಮ ಯೋಜನೆ ಜನವರಿ 1ರಿಂದಲೇ ಪುನಾರಂಭ ಆಗಲಿದೆ. ಈ ಬಗ್ಗೆ ಸಾರ್ವಜನಕ ಶಿಕ್ಷಣ ಇಲಾಖೆ ಅಧಿಕೃತವಾಗಿ ಆದೇಶ ಹೊರಡಿಸಿದೆ.
ಹೊಸ ವರ್ಷದ ದಿನದಿಂದಲೇ ವಿದ್ಯಾಗಮವನ್ನು ಸಕಲ ಮುನ್ನೆಚ್ಚರಿಕೆಗಳೊಂದೊಗೆ ಪುನಾರಂಭಿಸಲು ಇಲಾಖೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಅಂದಿನಿಂದ ಕರ್ತವ್ಯಕ್ಕೆ ಹಾಜರಾಗುವಂತೆ ಶಿಕ್ಷಕರಿಗೆ ಸೂಚನೆ ನೀಡಿದೆ. ಈಗಾಗಲೇ ಈ ಆದೇಶವು ಎಲ್ಲ ಜಿಲ್ಲೆಗಳ ಇಲಾಖೆಯ ಉಪ ನಿರ್ದೇಶಕರಿಗೆ ತಲುಪಿದೆ.
ಎಲ್ಲ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದ ಸಚಿವರು
ಈ ಆದೇಶ ಹೊರಬೀಳುವುದಕ್ಕೆ ಮುನ್ನ ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್, ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಕೈಗೊಂಡಿದ್ದ ವಿದ್ಯಾಗಮ ಯೋಜನೆಯನ್ನು ಪರಿಷ್ಕರಿಸಿ ಸುಧಾರಿತ ಮತ್ತು ಸುರಕ್ಷತಾ ಕ್ರಮಗಳೊಂದಿಗೆ ಹೊಸ ರೀತಿಯಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದರು.
ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿಯೂ ವಿದ್ಯಾಗಮ ಕಾರ್ಯಕ್ರಮವನ್ನು ನಡೆಸಲಾಗುವುದು. ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿದ್ದು, ಇದು ಶಾಲಾರಂಭವಲ್ಲ ಎಂದು ಸಚಿವರು ಹೇಳಿದರು. ವಿದ್ಯಾಗಮ ಗ್ರಾಮೀಣಪ್ರದೇಶದ ವಿದ್ಯಾರ್ಥಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ ಎಂದರು.
ಆಗಸ್ಟ್ 8ರಿಂದ ವಿದ್ಯಾಗಮ ಕಾರ್ಯಕ್ರಮವನ್ನು ಆರಂಭಿಸಲಾಗಿತ್ತು. ಆದರೆ, ಕೆಲವರಿಗೆ ಸೋಂಕು ತಗುಲಿದ ಪರಿಣಾಮ ಅಕ್ಟೋಬರ್10ರಂದು ಇದನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಪುನಾ ವಿದ್ಯಾಗಮವನ್ನು ಪ್ರಾರಂಭ ಮಾಡುತ್ತಿರುವುದರಿಂದ ಮಕ್ಕಳು ಶಾಲೆಯಿಂದ ದೂರ ಉಳಿಯುವುದು ತಪ್ಪುತ್ತದೆ. ಅಷ್ಟೇ ಅಲ್ಲದೆ, ಹಳ್ಳಿಗಾಡು ಪ್ರದೇಶದಲ್ಲಿ ಮಕ್ಕಳಗ ಶಾಲೆಯ ಸಮಯದಲ್ಲೇ ತಂದೆ-ತಾಯಿ ಜತೆ ಕೆಲಸಗಳಿಗೆ ಹೋಗುವುದು ಕೂಡ ತಪ್ಪುತ್ತದೆ. ಎಲ್ಲಕ್ಕಿಂತ ಮಿಗಿಲಾಗಿ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪೀಡೆಗಳಿಗೆ ಕಡಿವಾಣ ಬೀಳಲಿದೆ ಎಂದಿದ್ದಾರೆ.
ಉಳಿದಂತೆ; ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆವರಣದಲ್ಲಿಯೇ ವಿದ್ಯಾಗಮ ನಡೆಯಲಿದೆ. ಈಗಿನಂತೆಯೇ ಆನ್ʼಲೈನ್, ಚಂದನ ವಾಹಿನಿಯಲ್ಲಿ ನಡೆಯುತ್ತಿರುವ ಪಾಠಗಳು ಮುಂದುವರಿಯುತ್ತವೆ ಎಂದಿದ್ದಾರೆ ಸಚಿವರು.
ಉಳದಂತೆ; ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೂಗೊಂಡಿದೆ. ಮಕ್ಕಳು ಮಾಸ್ಕ್ ಧರಿಸುವುದು, ದೈಹಿಕ ಅಂತರ ಪಾಲನೆ. ಸ್ಯಾನಿಟೈಸಿಂಗ್ ಮುಂತಾದ ಕ್ರಮಗಳು ಕಡ್ಡಾಯ. ವಿದ್ಯಾಗಮಕ್ಕೆ ಬರಲಿಚ್ಛಿಸುವ ಮಕ್ಕಳು ಕಡ್ಡಾಯವಾಗಿ ಪೋಷಕರ ಒಪ್ಪಿಗೆ ಪತ್ರ ತರಬೇಕು ಹಾಗೂ ಆಯಾ ಶಾಲೆಯಲ್ಲಿ ಮಕ್ಕಳು ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್‌ಗೆ ಒಳಪಡಬೇಕು. ಜತೆಗೆ; ಜ್ವರ, ಕೆಮ್ಮು, ನೆಗಡಿ ಲಕ್ಷಣ ಹಾಗೂ ಕೋವಿಡ್ ಲಕ್ಷಣಗಳಿರುವ ವಿದ್ಯಾರ್ಥಿಗಳು ವಿದ್ಯಾಗಮಕ್ಕೆ ಬರುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.