• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಬ್ರಾಹ್ಮಣರಿಗೆ ನೋವುಂಟು ಮಾಡಿದ 6ನೇ ತರಗತಿಯ ಸಮಾಜ ವಿಜ್ಞಾನದ 7ನೇ ಪಾಠದ ಆಕ್ಷೇಪಾರ್ಹ ಪಠ್ಯ ಡಿಲೀಟ್‌

cknewsnow desk by cknewsnow desk
December 17, 2020
in STATE
Reading Time: 1 min read
0
ಬ್ರಾಹ್ಮಣರಿಗೆ ನೋವುಂಟು ಮಾಡಿದ 6ನೇ ತರಗತಿಯ ಸಮಾಜ ವಿಜ್ಞಾನದ 7ನೇ ಪಾಠದ ಆಕ್ಷೇಪಾರ್ಹ ಪಠ್ಯ ಡಿಲೀಟ್‌
986
VIEWS
FacebookTwitterWhatsuplinkedinEmail

ಬೆಂಗಳೂರು: 6ನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡುವಂಥ ಅಂಶಗಳಿರುವ ಪಠ್ಯವನ್ನು ಕೂಡಲೇ ತೆಗೆದು ಹಾಕುವಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ಎಸ್.ಸುರೇಶ್ ಕುಮಾರ್ ಸಾರ್ವಜನಿಕ ಶಿಕ್ಷಣ ಇಲಾಖೆ ಅಯುಕ್ತರಿಗೆ ಸೂಚನೆ ನೀಡಿದ್ದಾರೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಅಡಿಯಲ್ಲಿ ರೂಪುಗೊಂಡಿರುವ, ಸದ್ಯಕ್ಕೆ ಮಕ್ಕಳು ವ್ಯಾಸಂಗ ಮಾಡುತ್ತಿರುವ 6ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಾಠ-7ರಲ್ಲಿರುವ ಅಂಶಗಳನ್ನು ಇದೀಗ ತೆಗೆದುಹಾಕುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.

ಈ ಪಠ್ಯಭಾಗವು ಬ್ರಾಹ್ಮಣರ ಭಾವನೆಗಳಿಗೆ ನೋವುಂಟು ಮಾಡಿದೆ ಎಂದು ರಾಜ್ಯ ಅಖಿಲ ಕರ್ನಾಟಕ ಬ್ರಾಹ್ಮಣ ಸಭಾ ದೂರಿತ್ತು. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಮನವಿ ಸಲ್ಲಿಸಿತ್ತು. ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಪಠ್ಯವನ್ನು ತೆಗೆದು ಹಾಕುವಂತೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಲಾಗಿದೆ ಎಂದು ಗುರುವಾರ ಸುರೇಶ್‌ ಕುಮಾರ್‌ ಅವರು ತಿಳಿಸಿದ್ದಾರೆ.

ಪಾಠ 7ರ ಪಠ್ಯದಲ್ಲಿದ್ದ ಭಾಗದ ಸಾರ

ಹೊಸ ಧರ್ಮಗಳು ಏಕೆ ಉದಯಿಸಿದುವು?

ಉತ್ತರ ವೇದಗಳ ಕಾಲದಲ್ಲಿ ವೈದಿಕ ಆಚರಣೆಗಳಾದ ಯಾಗ, ಯಜ್ಞಗಳ ಹೆಸರಿನಲ್ಲಿ ಕೃಷಿಗೆ ನೆರವಾಗುತ್ತಿದ್ದ ಪ್ರಾಣಿಗಳನ್ನು ಕೊಲ್ಲಲಾಗುತ್ತಿತ್ತು. ಇದರಿಂದ ಆಹಾರದ ಉತ್ಪಾದನೆಯು ಕುಂಠಿತವಾಯಿತು. ಅಷ್ಟು ಮಾತ್ರವಲ್ಲ ಯಾಗ, ಯಜ್ಞಗಳಲ್ಲಿ ಆಹಾರಧಾನ್ಯ, ಹಾಲು, ತುಪ್ಪಗಳನ್ನು ʼಹವಿಸ್ಸುʼ ಎಂದು ದಹಿಸಲಾಗುತ್ತಿತ್ತು. ಪರಿಣಾಮವಾಗಿ ಆಹಾರದ ಅಭಾವ ಕೂಡ ಸೃಷ್ಟಿಯಾಯಿತು. ಇನ್ನೊಂದು ಕಡೆ ವೈದಿಕ ಆಚರಣೆಗಳಾದ ಯಾಗ, ಯಜ್ಞ ಮೊದಲಾದ ಆಚರಣೆಗಳಿಂದ ಮಾತ್ರ ಮುಕ್ತಿ ಸಾಧ್ಯ ಎಂಬ ನಂಬಿಕೆ ಜನರಲ್ಲಿ ಮನೆ ಮಾಡಿತ್ತು. ಈ ದುಬಾರಿ ಆಚರಣೆಗಳು ಜನ ಸಾಮಾನ್ಯರಿಗೆ ಸಾಧ್ಯವಿರಲಿಲ್ಲ. ಈ ಆಚರಣೆಗಳನ್ನು ಸಂಸ್ಕೃತ ಮಂತ್ರಗಳ ಮೂಲಕ ನಡೆಸಲಾಗುತ್ತಿತ್ತು. ಸಂಸ್ಕೃತ ಪುರೋಹಿತ ಭಾಷೆಯಾದ್ದರಿಂದ ಅದು ಜನ ಸಾಮಾನ್ಯರಿಗೆ ಅರ್ಥವಾಗುತ್ತಿರಲಿಲ್ಲ. ಜನ ಸಾಮಾನ್ಯರ ಭಾಷೆಯಲ್ಲಿಯೇ ಸರಳಮಾರ್ಗಗಳ ಮೂಲಕ ಮುಕ್ತಿ ತೋರುವ ಹೊಸ ಧರ್ಮಗಳನ್ನು ಜನರು ಅಪೇಕ್ಷಿಸುತ್ತಿದ್ದರು. ಮತ್ತೊಂದು ಕಡೆ ಉತ್ತರ ವೇದಗಳ ಕಾಲದಲ್ಲಿ ವರ್ಣ ವ್ಯವಸ್ಥೆಯಿಂದ ಸಾಮಾಜಿಕ ವಿಘಟನೆ ಆರಂಭವಾಯಿತು. ಇದು ಸಮಾಜದಲ್ಲಿ ತಾರತಮ್ಯಕ್ಕೂ ಎಡೆಮಾಡಿತು. ಸಮಾಜದಲ್ಲಿ ಬ್ರಾಹ್ಮಣರೆಂದು ಕರೆಯಲ್ಪಡುತ್ತಿದ್ದ ಪುರೋಹಿತ ವರ್ಗವು ಹಲವು ಸವಲತ್ತುಗಳನ್ನು ಹೊಂದಿತ್ತು. ಇದೇ ಕಾಲದಲ್ಲಿ ಕ್ಷತ್ರಿಯರು ಕೂಡ ಪ್ರಾಬಲ್ಯಕ್ಕೆ ಬರಲಾರಂಭಿಸಿದರು. ಪರಿಣಾಮವಾಗಿ ನಂತರದ ಕಾಲದಲ್ಲಿ ಹಲವು ಗಣರಾಜ್ಯಗಳು ಉದಯಿಸಿದವು. ಈ ಗಣರಾಜ್ಯಗಳ ಕ್ಷತ್ರಿಯರು ಬಹು ಸವಲತ್ತನ್ನು ಹೊಂದಿದ್ದ ಬ್ರಾಹ್ಮಣರಿಗೆ ಪ್ರತಿಯಾಗಿ ಹೊಸ ಧರ್ಮಗಳ ಉದಯಕ್ಕೆ ಕಾರಣರಾದರು. ಇವೆಲ್ಲವುಗಳ ಪರಿಣಾಮವಾಗಿ 2600 ವರ್ಷಗಳ ಹಿಂದೆ ಗಂಗಾ ಬಯಲಿನಲ್ಲಿ ಸುಮಾರು 62 ಹೊಸ ಧರ್ಮಗಳು ಉದಯಿಸಿದವು. ಅವುಗಳಲ್ಲಿ ಜೈನಧರ್ಮ ಮತ್ತು ಬೌದ್ಧ ಧರ್ಮಗಳು ಪ್ರಮುಖವಾದವು. ಭೌದ್ಧ ಧರ್ಮದ ಸ್ಥಾಪಕ ಗೌತಮ ಬುದ್ಧ ಹಾಗೂ ಜೈನ ಧರ್ಮದ ಪ್ರಮುಖ ತೀರ್ಥಂಕರ ವರ್ಧಮಾನ ಮಹಾವೀರ. ಈ ಇಬ್ಬರೂ ಕೂಡ ಗಣರಾಜ್ಯಗಳ ಕುಲಗಳಿಗೆ ಸೇರಿದ ಕ್ಷತ್ರಿಯರು.

*ಈ ಮೇಲಿನ ಪಠ್ಯಸಾರಕ್ಕೆ ಬ್ರಾಹ್ಮಣರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 1ರಿಂದ 10ನೇ ತರಗತಿಗಳ ಸಮಾಜ ವಿಜ್ಞಾನದ ಪಠ್ಯದಲ್ಲಿ ಇಂಥ ಆಕ್ಷೇಪಾರ್ಹ ಅಂಶಗಳಿದ್ದರೆ ಅವುಗಳನ್ನು ತೆಗೆಯಬೇಕೆಂದು ಒತ್ತಾಯ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಅಧ್ಯಯನ ಮಾಡಲು ಪರಿಶೀಲನಾ ಸಮಿತಿಯನ್ನು ರಚಿಸಲಾಗಿದೆ ಎಂದು ಸುರೇಶ್‌ ಕುಮಾರ್‌ ಹೇಳಿದ್ದಾರೆ. ಈ ಸಮಿತಿಯಲ್ಲಿ ಶಿಕ್ಷಕರು ಮತ್ತು ವಿಷಯ ತಜ್ಞರಿದ್ದು 15 ದಿನಗಳಲ್ಲಿ ವರದಿ ನೀಡುವಂತೆ ಕೋರಲಾಗಿದೆ. ಈ ವರದಿ ಬಂದ ಬಳಿಕ ಯಾವುದೇ ಪಠ್ಯದಲ್ಲಿ ಆಕ್ಷೇಪಾರ್ಹ ಅಂಶಗಳಿದ್ದರೆ ಅದರ ಪರಾಮರ್ಶೆಗೆ ತಜ್ಞರ ಸಮಿತಿಯನ್ನೂ ನೇಮಕ ಮಾಡಲಾಗುವುದು ಎಂದಿದ್ದಾರೆ ಅವರು.

ರಾಜ್ಯದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಪಠ್ಯವನ್ನು ಪರಿಷ್ಕರಣೆ ಮಾಡಲಾಗಿಲ್ಲ. ಹಳೆಯ ಪಠ್ಯ ತೆಗೆಯುವುದಾಗಲಿ ಅಥವಾ ಹೊಸ ಪಠ್ಯವನ್ನು ಸೇರಿಸುವುದಾಗಲಿ ಮಾಡಿಲ್ಲ. ಇನ್ನು ಹಳೆಯ ಪಠ್ಯದಲ್ಲಿ ಯಾರ ಭಾವನೆಗಳಿಗಾದರೂ ನೋವಾಗುವಂಥ ಅಂಶಗಳಿದ್ದರೆ ಗಮನ ಹರಿಸಲಾಗುವುದು ಎಂದು ಅವರು ಸುರೇಶ ಕುಮಾರ್‌ ಹೇಳಿದ್ದಾರೆ.

  • ಮೇಲಿನ ಹೋಮದ ಚಿತ್ರವನ್ನು ಸಾಂದರ್ಭಿಕವಾಗಿ ಬಳಸಿಕೊಳ್ಳಲಾಗಿದೆ. / courtesy: Wikipedia

Tags: brahmanaseducationHinduskarnatakasocial science
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?

Leave a Reply Cancel reply

Your email address will not be published. Required fields are marked *

Recommended

ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

ಶಿರಾ ಗೆದ್ದು ರಾಜ್ಯವನ್ನು ಗೆಲ್ಲುತ್ತೇವೆ; ಆದರೆ, ಉಪ ಚುನಾವಣೆಯಿಂದ ಸರಕಾರ ಬೀಳಲ್ಲ ಎಂದ ಡಿಕೆಶಿ

6 years ago
ಚಿಕ್ಕಬಳ್ಳಾಪುರ ಮೆಡಿಕಲ್‌ ಕಾಲೇಜು ಕಾಮಗಾರಿ 50% ಪೂರ್ಣ; ನಿಗದಿತ ಸಮಯದೊಳಗೆ ಜಿಲ್ಲೆಯ ಮಹತ್ವಾಕಾಂಕ್ಷಿ ಯೋಜನೆ ಸಾಕಾರ; ಹಾಗಾದರೆ, ವಿದ್ಯಾರ್ಥಿಗಳ ಪ್ರವೇಶ ಯಾವಾಗ?

ಪಕ್ಕದ ಜಿಲ್ಲೆಗೇ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.‌ಲತಾ ವರ್ಗ!

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ