• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಮುರುಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ, 20 ಅಂತಸ್ತುಗಳ ರಾಜಗೋಪುರ ಸ್ಥಾಪಿಸಿದ್ದ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ನಿಧನ

cknewsnow desk by cknewsnow desk
December 17, 2020
in STATE
Reading Time: 1 min read
0
ಮುರುಡೇಶ್ವರದಲ್ಲಿ 123 ಅಡಿ ಎತ್ತರದ ಶಿವನ ಮೂರ್ತಿ, 20 ಅಂತಸ್ತುಗಳ ರಾಜಗೋಪುರ ಸ್ಥಾಪಿಸಿದ್ದ ಖ್ಯಾತ ಉದ್ಯಮಿ ಆರ್.ಎನ್. ಶೆಟ್ಟಿ ನಿಧನ

ಆರ್.ಎನ್. ಶೆಟ್ಟಿ

915
VIEWS
FacebookTwitterWhatsuplinkedinEmail

ಬೆಂಗಳೂರು: ಉದ್ಯಮಿ, ಸಮಾಜ ಸೇವಕ ಹಾಗೂ ಆರ್‌ಎನ್ಎಸ್ ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸಂಸ್ಥಾಪಕರೂ ಆದ ಆರ್.ಎನ್. ಶೆಟ್ಟಿ (92) ಅವರು ಗುರುವಾರ ನಸುಕಿನ 2 ಗಂಟೆ ಸುಮಾರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪ್ರಖ್ಯಾತ ಧಾರ್ಮಿಕ ತಾಣವಾದ ಮುರುಡೇಶ್ವರದಲ್ಲಿ ಬೃಹತ್‌ ಶಿವನಮೂರ್ತಿ ಹಾಗೂ ಅತಿ ಎತ್ತರದ ರಾಜಗೋಪುರವನ್ನು ಅವರು ನಿರ್ಮಾಣ ಮಾಡಿದ್ದರು. ಶಿವನ ಮೂರ್ತಿ 123 ಅಡಿ ಎತ್ತರವಿದ್ದು, ಜಗತ್ತಿನಲ್ಲಿಯೇ ಎರಡನೇ ಅತಿ ಎತ್ತರದ ಶಿವನ ಮೂರ್ತಿಯಾಗಿದೆ. ಇದಕ್ಕಾಗಿ ಶೆಟ್ಟಿ ಅವರು ಐವತ್ತು ದಶಲಕ್ಷಕ್ಕೂ ಹೆಚ್ಚು ಮೊತ್ತವನ್ನು ಖರ್ಚು ಮಾಡಿದ್ದರು. ಹಾಗೆಯೇ, ಶಿವನಿಗೆ ಸಮರ್ಪಣೆಯಾಗಿ ೨೦ ಅಂತಸ್ತುಗಳ 249 ಅಡಿ ಎತ್ತರದ ರಾಜಗೋಪುರವೂ ಅತ್ಯಂತ ಪ್ರಮುಖ ಆಕರ್ಷಣೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ನಿರ್ಮಾಣ ಮಾಡಲಾಗಿರುವ ಈ ಗೋಪುರದಲ್ಲಿ ಲಿಫ್ಟ್‌ ಇದ್ದು, ಗೋಪುರದ ತುತ್ತತುದಿಯಿಂದ ಶಿವನ ಮೂರ್ತಿಯನ್ನು ನೋಡವುದೇ ಪರಮಾನಂದ.

  • ಆರ್.ಎನ್. ಶೆಟ್ಟಿ ಸ್ಥಾಪಿಸಿದ ಮುರಡೇಶ್ವರದಲ್ಲಿನ ರಾಜಗೋಪುರ.

Murdeshwar photos: CKPhotography ಸಿಕೆಪಿ@ckphotographi

ಈ ಮೂಲಕ ಅವರು ಮುರುಡೇಶ್ವರವನ್ನು ಒಂದು ಪವಿತ್ರ ಪುಣ್ಯತಾಣ ಹಾಗೂ ಪ್ರವಾಸೋದ್ಯಮ ಕೇಂದ್ರವಾಗಿಯೂ ಪರಿವರ್ತಿಸಿದ್ದಾರೆ. ನಿತ್ಯ ಸಾವಿರಾರು ಭಕ್ತರು ಈ ಕ್ಷೇತ್ರಕ್ಕೆ ಭೇಟಿ ನೀಡುವಂತೆ ಅಭಿವೃದ್ಧಿಪಡಿಸಿದ್ದರು.

ಉತ್ತರ ಕನ್ನಡ ಜಿಲ್ಲೆಯ ಪವಿತ್ರ ಪುಣ್ಯ ಕ್ಷೇತ್ರ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದ ಆರ್.ಎನ್. ಶೆಟ್ಟಿ ಅವರು ರಾಜ್ಯದ ಮತ್ತು ದೇಶದ ಪ್ರಗತಿಗೆ ತಮ್ಮದೇ ಕೊಡುಗೆ ನೀಡಿದ್ದ ಹೆಸರಾಂತ ಉದ್ಯಮಿ. ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿ ವಿವಿಧ ರಂಗಗಳಲ್ಲಿ ಆರ್.ಎನ್. ಶೆಟ್ಟಿ ಅವರು ಛಾಪು ಮೂಡಿಸಿದ್ದರು. ಕರ್ನಾಟಕದ ಅಭಿವೃದ್ಧಿಗೂ ಅವರು ನೀಡಿರುವ ಕೊಡುಗೆ ಅಸಾಧಾರಣ.

1961ರಲ್ಲಿ ಮೂಲಸೌಕರ್ಯ ಕಂಪನಿ ಹುಟ್ಟು ಹಾಕಿದ ಆರ್.ಎನ್. ಶೆಟ್ಟಿ ಅವರು, ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ ಜಲಾಶಯ, ಮಾಣಿ ಅಣೆಕಟ್ಟೆ, ವಾರಾಹಿ ಜಲ ವಿದ್ಯುತ್ ಯೋಜನೆ, ಕೆ.ಎಲ್.ಇ. ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವೇ ಮೊದಲಾದ ಹತ್ತು ಹಲವು ಮಹತ್ವದ ಜನೋಪಯೋಗಿ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಮೈಲುಗಲ್ಲಿನ ಸಾಧನೆ ಮಾಡಿದ್ದಾರೆ.

ಆರ್.ಎನ್.ಶೆಟ್ಟಿ ಟ್ರಸ್ಟ್ ವತಿಯಿಂದ ಹಲವು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಶಿಕ್ಷಣದವರೆಗೆ ವಿದ್ಯಾದಾನ ಮಾಡುತ್ತಿದ್ದಾರೆ. ಅವರಿಗೆ ಸರ್.ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ, ರಾಜ್ಯ ಸರ್ಕಾರದಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕಾಸಿಯಾದ ಕೈಗಾರಿಕಾ ರತ್ನ ಪ್ರಶಸ್ತಿಯೇ ಮೊದಲಾದ ಹತ್ತು ಹಲವು ಗೌರವಗಳು ಸಂದಿವೆ.

ಆರ್.ಎನ್. ಶೆಟ್ಟಿ ಅವರು ಇತ್ತೀಚೆಗಷ್ಟೇ ಕೋವಿಡ್ ಸಂದರ್ಭದಲ್ಲಿ ಪಿಎಂ ಕೇರ್ಸ್ʼಗೆ 2.4 ಕೋಟಿ ರೂಪಾಯಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಕೋಟಿ 5 ಲಕ್ಷ ರೂಪಾಯಿ ಸೇರಿ ಒಟ್ಟು 3 ಕೋಟಿ 9 ಲಕ್ಷ ರೂ. ದೇಣಿಗೆ ನೀಡಿದ್ದರು.

Tags: karnatakaMurdeshwarrn shetty
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶದಲ್ಲಿ ದ್ವಿಪಕ್ಷೀಯ ಸಹಕಾರ; ಕರ್ನಾಟಕ-ಬ್ರಿಟನ್‌ ನಡುವೆ ನಿರ್ಮಾಣವಾಗುತ್ತಿದೆ ಜ್ಞಾನಸೇತುವೆ

ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶದಲ್ಲಿ ದ್ವಿಪಕ್ಷೀಯ ಸಹಕಾರ; ಕರ್ನಾಟಕ-ಬ್ರಿಟನ್‌ ನಡುವೆ ನಿರ್ಮಾಣವಾಗುತ್ತಿದೆ ಜ್ಞಾನಸೇತುವೆ

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ