• About
  • Advertise
  • Careers
  • Contact
Sunday, May 18, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶದಲ್ಲಿ ದ್ವಿಪಕ್ಷೀಯ ಸಹಕಾರ; ಕರ್ನಾಟಕ-ಬ್ರಿಟನ್‌ ನಡುವೆ ನಿರ್ಮಾಣವಾಗುತ್ತಿದೆ ಜ್ಞಾನಸೇತುವೆ

cknewsnow desk by cknewsnow desk
December 17, 2020
in STATE
Reading Time: 1 min read
0
ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶದಲ್ಲಿ ದ್ವಿಪಕ್ಷೀಯ ಸಹಕಾರ; ಕರ್ನಾಟಕ-ಬ್ರಿಟನ್‌ ನಡುವೆ ನಿರ್ಮಾಣವಾಗುತ್ತಿದೆ ಜ್ಞಾನಸೇತುವೆ
915
VIEWS
FacebookTwitterWhatsuplinkedinEmail
  • ಒಪ್ಪಂದಕ್ಕೆ ಅಂಕಿತ ಆದ ನಂತರ ಮುಖ್ಯಮಂತ್ರಿ ಯಡಿಯೂರಪ್ಪ, ಬ್ರಿಟಿಷ್ ಕೌನ್ಸಿಲ್‍ನ (ಭಾರತ) ನಿರ್ದೇಶಕ ಬಾರ್ಬರಾ ವಿಕ್‍ಹ್ಯಾಮ್ ದಾಖಲೆಗಳನ್ನು ವಿನಿಮಯ ಮಾಡಿಕೊಂಡರು. ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಬ್ರಿಟಿಷ್ ಕೌನ್ಸಿಲ್‍ನ ದಕ್ಷಿಣ ಭಾರತ ನಿರ್ದೇಶಕಿ ಜಾನಕಿ ಪುಷ್ಪನಾಥನ್ ಇದ್ದರು.

ಕರ್ನಾಟಕದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಸೃಜಿಸಿ ರಾಜ್ಯ ಸರಕಾರದ ಗುಣಮಟ್ಟವುಳ್ಳ ಉನ್ನತ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ತಲುಪಲು ನೆರವಾಗಲಿದೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ದ್ವಿಪಕ್ಷೀಯ ಸಹಕಾರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ರಾಜ್ಯ ಸರ್ಕಾರ ಮತ್ತು ಬ್ರಿಟಿಷ್ ಸರ್ಕಾರದ ನಡುವೆ ಇಂದು ಸಹಿ ಮಾಡಲಾಯಿತು.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾಯಕತ್ವ ಬೆಳವಣಿಗೆಗೆ ಸಂಬಂಧಿಸಿದಂತೆ ಮೊಟ್ಟಮೊದಲ ಬಾರಿಗೆ ಮೂರು ವರ್ಷಗಳ ಅವಧಿಯ ಒಪ್ಪಂದಕ್ಕೆ ಎರಡೂ ಸರಕಾರಗಳು ಸಹಿ ಮಾಡಿವೆ ಎಂದರು.

ನಾವೀನ್ಯತಾ ಪಾಲುದಾರಿಕೆ

ಸಹಕಾರ, ವಾಣಿಜ್ಯ ಮತ್ತು ವ್ಯಾಪಾರ, ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ, ರಕ್ಷಣಾ ಮತ್ತು ಸಂಸ್ಕತಿ ಮುಂತಾದ ಕ್ಷೇತ್ರಗಳಿಗೆ ಭಾರತ ಮತ್ತು ಬ್ರಿಟಿಷ್ ನಡುವಿನ ಸಂಬಂಧ ವ್ಯಾಪಿಸಿದೆ. ಕರ್ನಾಟಕ ಸರಕಾರದ ಗ್ಲೋಬಲ್ ಇನ್ನೋವೇಷನ್ ಅಲಯನ್ಸ್ ಕಾರ್ಯಕ್ರಮವು ಜಗತ್ತಿನಾದ್ಯಂತ ಎಲ್ಲಾ ರಾಷ್ಟ್ರಗಳೊಂದಿಗೆ ನಾವೀನ್ಯತಾ ಪಾಲುದಾರಿಕೆಯನ್ನು ಹೆಚ್ಚಿಸುವ ಮೂಲಕ ಕರ್ನಾಟಕವನ್ನು ಮುಂಚೂಣಿಯಲ್ಲಿರುವ ತಂತ್ರಜ್ಞಾನ ಹಬ್ ಎಂಬ ಜಾಗತಿಕ ಕೀರ್ತಿಗೆ ಪಾತ್ರವಾಗಿಸಿದೆ. ಯು.ಕೆ ಕರ್ನಾಟಕದ ಬಹುಮುಖ್ಯ ಜಿ.ಐ.ಎ ಪಾಲುದಾರನಾಗಿದ್ದು, 2017-18 ರಲ್ಲಿ ಶೇ.38% ಹೂಡಿಕೆಯನ್ನು ಭಾರತದಲ್ಲಿ ಬ್ರಿಟಿಷ್ ಸರಕಾರ ಮಾಡಿದೆ.

ಟೆಕ್ ಹಬ್, ಟೆಕ್ ಕ್ಲಸ್ಟರ್ಸ್ ಸ್ಥಾಪನೆ ಹಾಗೂ ಗೋ ಗ್ಲೋಬಲ್ ನಂತಹ ಕಾರ್ಯಕ್ರಮಗಳು ಭಾರತದಿಂದ ನಾವೀನ್ಯತಾ ಸ್ಟಾರ್ಟ್‍ಅಪ್‍ಗಳನ್ನು ಯು.ಕೆಗೆ ತಲುಪಿಸಲು ಸಾಧ್ಯವಾಗಿಸಿರುವುದು ಸ್ವಾಗತಾರ್ಹ ಎಂದು ಇದೇ ವೇಳೆ ಮುಖ್ಯಮಂತ್ರಿಗಳು ತಿಳಿಸಿದರು.

ವಾಯುಮಾಲಿನ್ಯ ತಡೆಗೆ ನವೀನ ಮಾದರಿ

ನಗರಾಭಿವೃದ್ಧಿ ಇಲಾಖೆಯು ಬ್ರಿಟಿಷ್ ಸರಕಾರದೊಂದಿಗೆ ಹವಾಮಾನ ಸ್ಥಿತಿಸ್ಥಾಪಕ ನಗರಗಳ ಸಮೃದ್ಧ ನಗರಾಭಿವೃದ್ಧಿ ಕಾರ್ಯಕ್ರಮದ ಮೂಲಕ ಈಗಾಗಲೇ ಸಹಯೋಗವನ್ನು ಬೆಳೆಸಿದೆ. ಈ ಮೂಲಕ ಬೆಂಗಳೂರಿನಲ್ಲಿ ಬಹುವಿಧ ಸಾರಿಗೆ ಹಬ್‍ಗಳ ವಿನ್ಯಾಸ ಮತ್ತು ಕಾರ್ಯಾಚರಣೆಗೆ ಪರಿವರ್ತಿತ ಯೋಜನೆಯನ್ನು ತರುವಲ್ಲಿ ಸಹಕಾರಿಯಾಗಿದೆ. ಸಮಗ್ರ ಸಾರಿಗೆ ಪ್ರಾಧಿಕಾರ ಮತ್ತು ಸಾರಿಗೆ ಪರಿವೀಕ್ಷಣಾಲಯವನ್ನು ಯುಕೆ ಕಾಟಪಲ್ಟ್ʼನ ಸಹಯೋಗದೊಂದಿಗೆ ಜಾರಿಗೆ ತರಲಾಗುತ್ತಿದೆ ಎಂದರು ಸಿಎಂ. ಈ ಯೋಜನೆಯು ವಾಯುಮಾಲಿನ್ಯ ತಡೆಗೆ ನವೀನ ಮಾದರಿಗಳನ್ನು ಕಲ್ಪಿಸುತ್ತದೆ. ಈ ಕ್ಷೇತ್ರದಲ್ಲಿ ಕರ್ನಾಟಕದ ನಾಯಕತ್ವವನ್ನು ಪ್ರತಿಫಲಿಸಲು ಇದೊಂದು ವೇದಿಕೆಯಾಗಿದ್ದು ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಯೋಜನೆಗಳನ್ನು ರೂಪಿಸಬಹುದಾಗಿದೆ ಎಂದರು.

ಬ್ರಿಟಿಷ್ ಕೌನ್ಸಿಲ್‍ನ (ಭಾರತ) ನಿರ್ದೇಶಕರಾದ ಬಾರ್ಬರಾ ವಿಕ್‍ಹ್ಯಾಮ್ ಮಾತನಾಡಿ; ಈ ಒಪ್ಪಂದವು ಭಾರತ ಸರಕಾರ ಮತ್ತು ಯುಕೆ ನಡುವಿನ ಶೈಕ್ಷಣಿಕ ಸಂಬಂಧವನ್ನು ಸುಭದ್ರಗೊಳಿಸುವುದರ ಜತೆಗೆ ಭಾರತದ ರಾಷ್ಟ್ರೀಯ ಶಿಕ್ಷಣ ನೀತಿ-2020ರಲ್ಲಿ ತಿಳಿಸಲಾಗಿರುವ ಜ್ಞಾನವರ್ಧನೆಯ ಆಶಯವನ್ನು ಬೆಂಬಲಿಸಲಿದೆ ಎಂದರು. ಕರ್ನಾಟಕದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳನ್ನು ಸೃಜಿಸಿ ರಾಜ್ಯ ಸರಕಾರದ ಗುಣಮಟ್ಟವುಳ್ಳ ಉನ್ನತ ಶಿಕ್ಷಣ ವ್ಯವಸ್ಥೆ ಕಲ್ಪಿಸುವ ಗುರಿಯನ್ನು ತಲುಪಲು ನೆರವಾಗಲಿದೆ ಎಂದರು.

ರಾಷ್ಟ್ರೀಯ ಶಿಕ್ಷಣ ನೀತಿ ಪೂರಕ

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ; ಶಿಕ್ಷಣದಲ್ಲಿ ಮಹತ್ವದ ಬದಲಾವಣೆಯನ್ನು ತರಲು ಭಾರತ ಸನ್ನದ್ಧವಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯು ಇದಕ್ಕೆ ಪೂರಕವಾದ ಅವಕಾಶವನ್ನು ಕಲ್ಪಿಸಲಿದೆ ಎಂದರು. ಶಿಕ್ಷಣ ನೀತಿಯನ್ನು ಜಾರಿಗೆ ತರುವಲ್ಲಿ ರಾಜ್ಯ ಸರಕಾರ ಮುಂಚೂಣಿಯಲ್ಲಿದ್ದು, ಬ್ರಿಟಿಷ್ ಕೌನ್ಸಿಲ್ ಮೂಲಕ ಯುಕೆ ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗಿನ ಸಹಯೋಗ ಸಮಯೋಚಿತವಾಗಿದೆ ಎಂದರು. ಯೋಜಿತ ಕ್ರಮಗಳ ಮೂಲಕ ಉನ್ನತ ಶಿಕ್ಷಣದ ಪಾಲುದಾರರಿಗೆ ಹೆಚ್ಚಿನ ಲಾಭವನ್ನು ಈ ಸಹಯೋಗ ಮಾಡಿಕೊಡಲಿದೆ ಎಂದು ಅಭಿಪ್ರಾಯಪಟ್ಟರು.

UK is Karnataka’s Partner of Choice.

Foreign secretary @DominicRaab’s meeting with @CMofKarnataka @BSYBJP further boosters our shared vision on sustainability and commitment to #BuildBackBetter. @drashwathcn @PhilipRBarton @UKinIndia pic.twitter.com/Z2yvVwhSJM

— Jeremy Pilmore-Bedford (@PilmoreBedford) December 17, 2020

ಬ್ರಿಟಿಷ್ ಕೌನ್ಸಿಲ್‍ನ ದಕ್ಷಿಣ ಭಾರತ ನಿರ್ದೇಶಕಿ ಜಾನಕಿ ಪುಷ್ಪನಾಥನ್ ಮಾತನಾಡಿ; ಉದ್ಯೋಗ ಮತ್ತು ಕೌಶಲ್ಯಾಭಿವೃದ್ಧಿ ಜಗತ್ತಿನ ಎಲ್ಲಾ ಸರಕಾರಗಳ ಪ್ರಮುಖ ಆಶಯವಾಗಿದ್ದು, ಒಪ್ಪಂದವು ಈ ಆಶಯವನ್ನು ಈಡೇರಿಸುವಲ್ಲಿ ಸಹಕಾರಿಯಾಗಲಿದೆ. ದಕ್ಷಿಣ ಭಾರತದ ಅದರಲ್ಲೂ ಕರ್ನಾಟಕದ ವಿದ್ಯಾರ್ಥಿ ಮತ್ತು ಸಂಶೋಧಕರಿಗೆ ಇದು ನೆರವಾಗಲಿದೆ ಎಂದರು.

ಈ ಒಡಂಬಡಿಕೆಯು ಎರಡೂ ದೇಶಗಳ ನಡುವೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆ ಹಾಗೂ ಸಾಮಾಜಿಕ ಸಂಯೋಜನೆಗೆ ಪರಸ್ಪರ ಲಾಭದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಹಕಾರಿಯಾಗಲಿದೆ ಎಂದ ಅವರು, ಭಾರತ ಸರಕಾರದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಉಲ್ಲೇಖಿಸಿರುವ ಫಲಿತಾಂಶಗಳನ್ನು ಸಾಧಿಸಲು ಬ್ರಿಟಿಷ್ ಕೌನ್ಸಿಲ್ ಹಾಗೂ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ನಡುವೆ ಸಹಿ ಮಾಡಿರುವ ಒಪ್ಪಂದವು ಸಹಾಯಕವಾಗಲಿದೆ. ರಾಜ್ಯ ಹಾಗೂ ಯುಕೆನಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳ ನಡುವೆ ವಿದ್ಯಾರ್ಥಿ ಹಾಗೂ ಭೋದಕ ವರ್ಗದ ವಿನಿಮಯ ಮತ್ತು ಸಂಶೋಧನೆಯನ್ನು ಹೆಚ್ಚಿಸಲು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಅಂತಾರಾಷ್ಟ್ರೀಕರಣವನ್ನು ಒಡಂಬಡಿಕೆಯು ಬೆಂಬಲಿಸಲಿದೆ. ಎರಡೂ ದೇಶಗಳ ಉನ್ನತ ಶಿಕ್ಷಣ ಸಂಸ್ಥೆಗಳ ನಡುವೆ ಶಿಕ್ಷಣ ಮತ್ತು ಸಂಶೋಧನಾ ಪಾಲುದಾರಿಕೆ, ಬೋಧಕ ವರ್ಗದವರಿಗೆ ನಾಯಕತ್ವ ಅಭಿವೃದ್ಧಿ ಮುಂತಾದ ಕ್ರಮಗಳ ಮೂಲಕ ರಾಜ್ಯದ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಯುಕೆ ವಿದೇಶಾಂಗ, ಕಾಮನ್ ವೆಲ್ತ್ ಮತ್ತು ಅಭಿವೃದ್ಧಿ ವ್ಯವಹಾರಗಳ ಸಚಿವ ಡಾಮಿನಿಕ್ ರಾಬ್, ಬ್ರಿಟಿಷ್ ಕೌನ್ಸಿಲ್ ಅಧಿಕಾರಿಗಳು, ಮುಖ್ಯಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags: educationkarnatakaunited kingdom
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

ಚುನಾವಣಾ ವ್ಯವಸ್ಥೆಗೆ ಸುಪ್ರೀಂ ಚಿಕಿತ್ಸೆ

ಹನಿಟ್ರ್ಯಾಪ್‌: ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

by cknewsnow desk
March 27, 2025
0

ಅರ್ಜಿದಾರರನ್ನೇ ಕ್ಲಾಸ್ ತೆಗೆದುಕೊಂಡ ಕೋರ್ಟ್

Next Post
ಬ್ರಾಹ್ಮಣರಿಗೆ ನೋವುಂಟು ಮಾಡಿದ 6ನೇ ತರಗತಿಯ ಸಮಾಜ ವಿಜ್ಞಾನದ 7ನೇ ಪಾಠದ ಆಕ್ಷೇಪಾರ್ಹ ಪಠ್ಯ ಡಿಲೀಟ್‌

ಬ್ರಾಹ್ಮಣರಿಗೆ ನೋವುಂಟು ಮಾಡಿದ 6ನೇ ತರಗತಿಯ ಸಮಾಜ ವಿಜ್ಞಾನದ 7ನೇ ಪಾಠದ ಆಕ್ಷೇಪಾರ್ಹ ಪಠ್ಯ ಡಿಲೀಟ್‌

Leave a Reply Cancel reply

Your email address will not be published. Required fields are marked *

Recommended

ಡಿಜಿಟ್‌ನೊಂದಿಗೆ  ಸಿಎಂ ಪುತ್ರ ವಿಜಯೇಂದ್ರ ಡೀಲ್ ಬಗ್ಗೆ ಹೇಳಿದ  ಬಸನಗೌಡ ಪಾಟೀಲ್‌ ಯತ್ನಾಳ್‌

ನನ್ನ ನಾಲಿಗೆ ಸರಿ ಇದ್ದಿದ್ದಕ್ಕಾಗಿಯೇ ರಾಜ್ಯದಲ್ಲಿ ಇಷ್ಟೆಲ್ಲಾ ಬದಲಾವಣೆ ಆಗಿದೆ ಎಂದ ಯತ್ನಾಳ್

4 years ago
ಜೆಡಿಎಸ್ ಅಧಿಕಾರಕ್ಕೆ ಬಂದರೆ ಕೃಷಿ ಪಂಪುಸೆಟ್ಟುಗಳಿಗೆ 24/7 ಉಚಿತ ವಿದ್ಯುತ್

ಗೃಹಲಕ್ಷ್ಮಿಯರ ಜೀವಕ್ಕೆ ಗ್ಯಾರಂಟಿ ಕೊಡಿ!

5 months ago

Popular News

  • ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    ನಮ್ಮ ಸೇನೆಗೆ ಮತ್ತಷ್ಟು ಯೋಧರು ಬೇಕೆ? ಇಲ್ಲಿದೆ ಐಡಿಯಾ!!

    0 shares
    Share 0 Tweet 0
  • ಹಾಡಿದವು ಕಣ್ಣುಗಳು!!

    0 shares
    Share 0 Tweet 0
  • ಎಚ್ಚೆನ್ ಎಂಬುವವರಿದ್ದರು ಎಂಬುದನ್ನು ಶತಮಾನಗಳ ನಂತರ ನಂಬುವುದೇ ಕಷ್ಟವಾಗಬಹದು…

    0 shares
    Share 0 Tweet 0
  • ಚಿರಸ್ಮರಣೀಯ ಚಿರಂಜೀವಿ

    0 shares
    Share 0 Tweet 0
  • ಬಾಲುಗಾರು… ಅದ್ಭುತಃ!!

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025
ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

May 8, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2021 cknewsnow

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2021 cknewsnow

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ