• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಕಾರ್ಮಿಕರಿಗೆ ತೊಂದರೆಯಾಗಿದ್ದು ನಿಜ ಎಂದು ಒಪ್ಪಿಕೊಂಡ ಕೋಲಾರದ ವಿಸ್ಟ್ರಾನ್;‌ ‌ಕಷ್ಟ ಹೇಳಿಕೊಳ್ಳಲು ಕಾರ್ಮಿಕರಿಗೆ ಹೆಲ್ಪ್‌ಲೈನ್‌, ಕಂಪನಿಯ ಭಾರತೀಯ ಉಪಾಧ್ಯಕ್ಷರ ತಲೆದಂಡ

cknewsnow desk by cknewsnow desk
December 19, 2020
in KOLAR, STATE, WORLD
Reading Time: 1 min read
0
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ

ಧ್ವಂಸವಾಗಿರುವ ವಿಸ್ಟ್ರಾನ್‌ ಕಾರ್ಖಾನೆ ವಾಹನ.

923
VIEWS
FacebookTwitterWhatsuplinkedinEmail

ಕೋಲಾರ/ಬೆಂಗಳೂರು: ಕಳೆದ ಶನಿವಾರ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ತೈವಾನ್‌ ಮೂಲದ ವಿಸ್ಟ್ರಾನ್‌ ಐಫೋನ್‌ ಘಟಕದ ವಿವಾದ ಕೊನೆಗೂ ಒಂದು ಹಂತಕ್ಕೆ ಬಂದಿದ್ದು, ವೇತನ ನೀಡಿಕೆಯಲ್ಲಿ ತನ್ನಿಂದ ತಪ್ಪಾಗಿದೆ ಎಂದು ಒಪ್ಪಿಕೊಂಡಿದೆ.

ಒಂದೆಡೆ, ಇಡೀ ಘಟನೆಯ ಬಗ್ಗೆ ರಾಜ್ಯ ಸರಕಾರ ಸಿಐಡಿ ತನಿಖೆಗೆ ಆದೇಶಿಸಿತ್ತು. ಇದೇ ವೇಳೆ ಆ್ಯಪಲ್ ಕಂಪನಿಯು ತನ್ನ ಪ್ರತಿನಿಧಿಗಳನ್ನು ಕಳಿಸಿ ಸ್ವತಂತ್ರ ತನಿಖೆಗೆ ಮುಂದಾಗಿತ್ತು. ಇವೆಲ್ಲ ಬೆಳವಣಿಗೆಗಳಿಂದ ಮುಂದೆ ಆಗಬಹುದಾದ ಮುಜುಗರವನ್ನು ತಪ್ಪಿಸಿಕೊಳ್ಳಲ ವಿಸ್ಟ್ರಾನ್‌ ಕಂಪನಿಯೇ ಇದೀಗ ತಪ್ಪೊಪ್ಪಿಕೊಂಡು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದೆ.

ಇದರ ಬೆನ್ನಲ್ಲೇ ಕಂಪನಿಯ ಭಾರತೀಯ ಉಪಾಧ್ಯಕ್ಷ ವಿನ್ಸೆಂಟ್ ಲೀ ಅವರನ್ನು ಕೆಲಸದಿಂದ ವಜಾ ಮಾಡುವುದಾಗಿ ತಿಳಿಸಿದೆ. ಇಷ್ಟಾದರೂ ವಿಸ್ಟ್ರಾನ್‌ಗೆ ನೀಡಿರುವ ಬೇಡಿಕೆ ಆದೇಶವನ್ನು ಆ್ಯಪಲ್ ಸಂಸ್ಥೆ ಮುಂದುವರಿಸುತ್ತದಾ? ಅಥವಾ ವಾಪಸ್‌ ಪಡೆಯುತ್ತದಾ? ಎಂಬ ಬಗ್ಗೆ ಇನ್ನು ಖಚಿತ ಮಾಹಿತಿ ಲಭ್ಯವಾಗಿಲ್ಲ. ಇನ್ನೂ ಆ ಸಂಸ್ಥೆಯ ಚಪ್ರತಿನಿಧಿಗಳು ವಿಸ್ಟ್ರಾನ್‌ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಕೂಲಂಕಶವಾಗಿ ಪರಿಶೀಲನೆ ಮಾಡುತ್ತಿದ್ದಾರೆ ಎಂದು ಗೊತ್ತಾಗಿದೆ.

ಕಂಪನಿ ಹೇಳಿದ್ದೇನು?

“ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ವಿಸ್ಟ್ರಾನ್‌ ಘಟಕವು ಹೊಸದು. ಅದನ್ನು ಸ್ಥಾಪಿಸುವ ಮತ್ತು ವಿಸ್ತರಣೆ ಮಾಡುವ ಪ್ರಕ್ರಿಯೆಯಲ್ಲಿ ಕೆಲವು ಲೋಪಗಳಾಗಿವೆ. ಲೇಬರ್‌ ಏಜೆನ್ಸಿಗಳು ಹಾಗೂ ವೇತನ ಪಾವತಿ ಮಾಡುವಲ್ಲಿ ತಪ್ಪುಗಳಾಗಿವೆ. ಆ ವ್ಯವಸ್ಥೆ ಇನ್ನೂ ಸಮರ್ಪಕವಾಗಬೇಕಾಗಿದೆ. ಈಗ ಆಗಿರುವ ತಪ್ಪುಗಳನ್ನು ಸರಿಪಡಿಸಲು ಶಿಸ್ತು ಕ್ರಮಗಳನ್ನೂ ಸೇರಿದಂತೆ ಹಲವಾರು ತುರ್ತು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ವಿಸ್ಟ್ರಾನ್‌ ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದೇ ವೇಳೆ ಭಾರತದಲ್ಲಿ ತನ್ನ ಕಾರ್ಯಭಾರವನ್ನು ನಿರ್ವಹಣೆ ಮಾಡುತ್ತಿದ್ದ ಉಪಾಧ್ಯಕ್ಷ ವಿನ್ಸೆಂಟ್ ಲೀ ಅವರನ್ನ ಮನೆಗೆ ಕಳಿಸಯವ ನಿರ್ಧರವನ್ನು ಕಂಪನಿ ಕೈಗೊಂಡಿದೆ. .

ಕಂಪನಿಯ ಹೇಳಿಕೆಯಲ್ಲಿ ಇನ್ನಷ್ಟು ಅಂಶಗಳ ಬಗ್ಗೆ ತಿಳಿಸಲಾಗಿದೆ, ಅವು ಹೀಗಿವೆ;
“ನಮ್ಮ ಕಂಪನಿಯ ಭಾರತೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದ ಉಪಾಧ್ಯಕ್ಷರನ್ನು ಕೆಲಸದಿಂದ ತೆಗೆದುಕಾಕಲಾಗಿದೆ. ಮುಂದಿನ ದಿನಗಳಲ್ಲಿ ಇಂಥ ಸಮಸ್ಯೆಗಳು ತಲೆದೋರದಂತೆ ಮುನ್ನೆಚ್ಚರಿಕೆ ವಹಿಸುತ್ತೇವೆ. ನಮ್ಮ ವ್ಯವಸ್ಥೆಯನ್ನು ಉತ್ತಮಪಡಿಸಿಕೊಳ್ಳುತ್ತೇವೆ. ಅಷ್ಟೇ ಅಲ್ಲದೆ, ನಮ್ಮ ಸಂಸ್ಥೆಯ ತಂಡಗಳನ್ನು ಪುನಾರಚನೆ ಮಾಡಲಾಗುವುದು” ಎಂದು ತಿಳಿಸಲಾಗಿದೆ

ಕಾರ್ಮಿಕರಿಗೆ ಹೆಲ್ಪ್‌ಲೈನ್‌

ಇಷ್ಟೆಲ್ಲ ಕ್ರಮಗಳ ಜತೆಗೆ, ಕಾರ್ಮಿಕರ ಕುಂದುಕೊರತೆಗಳ ಬಗ್ಗೆ ಸದಾ ನಿಗಾ ಇರಿಸಲು ದಿನದ ಇಪ್ಪತ್ತುನಾಲ್ಕು ಗಂಟೆಗಳ ಕಾಲ ಕೆಲಸ ಮಾಡುವ ಕಾರ್ಮಿಕರ ಹೆಲ್ಪ್‌ಲೈನ್‌ ತೆರೆಯಲಾಗುತ್ತಿದೆ. ಇದರಲ್ಲಿ ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿ ಸೇವೆ ಲಭ್ಯವಿರುತ್ತದೆ. ಯಾರೇ ಕಾರ್ಮಿಕರು ತಮ್ಮ ಕುಂದುಕೊರತೆ ಹೇಳಿಕೊಂಡರೂ ಅವರ ವಿವರಗಳನ್ನು ಗೌಪ್ಯವಾಗಿ ಇರಿಸಲಾಗುವುದು. ಯಾರೇ ಆದರೂ ಈ ವ್ಯವಸ್ಥೆಯ ಮೂಲಕ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಹೇಳಿಕೊಳ್ಳಬಹುದು ಎಂದು ಹೇಳಿಕೆಯಲ್ಲಿ ಭರವಸೆ ನೀಡಲಾಗಿದೆ.

ಇದೇ ವೇಳೆ ಆ್ಯಪಲ್ ಕಂಪನಿಯ ಉನ್ನತ ತಂಡವೊಂದು ನರಸಾಪುರ ಘಟಕದಲ್ಲಿ ತನಿಖೆ ನಡೆಸುತ್ತಿರುವ ಹಂತದಲ್ಲಿಯೇ ವಿಸ್ಟ್ರಾನ್‌ ತಪ್ಪೊಪ್ಪಿಕೊಂಡ ಹೇಳಿಕೆಯನ್ನು ಬಿಡುಗಡೆ ಮಾಡಿದೆ. ಇಡೀ ಘಟನೆಯನ್ನು ಆ್ಯಪಲ್ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎನ್ನಲಾಗಿದ್ದು, ಆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದೆ ಎಂಬ ಮಾಹಿತಿ ಸಿಕ್ಕಿದೆ.

ಉದ್ಯೋಗಿಗಳ ಬಗ್ಗೆ ಅಪಾರ ಕಾಳಜಿ ಹೊಂದಿರುವ ಆ್ಯಪಲ್, ತಮ್ಮ ನಿಯಾಮವಳಿ ಹಾಗೂ ಷರತ್ತುಗಳಲ್ಲಿ ವಿಸ್ಟ್ರಾನ್‌ ಅನೇಕ ಅಂಶಗಳನ್ನು ಉಲ್ಲಂಘನೆ ಮಾಡಿದೆ. ವೇತನ ವಿಳಂಬ ಆಗಿದೆ ಎಂಬ ಅಂಶವನ್ನು ಗುರುತಿಸಿದೆ.

ಆ್ಯಪಲ್ ಸಂಸ್ಥೆ ಎಚ್ಚರಿಕೆ

ಸದ್ಯಕ್ಕೆ ಆ್ಯಪಲ್ ವಿಷಯದಲ್ಲಿ ವಿಸ್ಟ್ರಾನ್ ಇನ್ನೂ ಪ್ರೊಬೇಷನ್​ ಅಥವಾ ಪರೀಕ್ಷೆಯ ಹಂತದಲ್ಲಿಯೇ ಇದ್ದು, ಮುಂದಿನ ದಿನಗಳಲ್ಲಿ ಆ ಕಂಪನಿಗೆ ಬೇಡಿಕೆ ಆದೇಶಗಳನ್ನು ನೀಡುತ್ತಾ ಇಲ್ಲವಾ ಎಂಬುದನ್ನು ಕಾದುನೋಡಬೇಕಿದೆ. ಈ ಹಿಂದೆ ತಾನು ವಿಧಿಸಿದ ಷರತ್ತುಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಆ್ಯಪಲ್ ಕೆಲವಾರು ಪೂರೈಕೆ ಕಂಪನಿಗಳ ಬೇಡಿಕೆ ಆದೇಶಗಳನ್ನು ರದ್ದು ಮಾಡಿತ್ತು. ವಿಸ್ಟ್ರಾನ್‌ ವಿಷಯದಲ್ಲಿ ಏನಾಗುತ್ತದೋ ಕಾದು ನೋಡಬೇಕಿದೆ.

  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಆಪಲ್‌ ಐಫೋನ್-‌12 ತಯಾರಿಸುತ್ತಿದ್ದ ಕೋಲಾರದ ವಿಸ್ಟ್ರಾನ್‌ ಕಂಪನಿಯಲ್ಲಿ ದಂಗೆ ಎದ್ದ 8,000 ಕಾರ್ಮಿಕರು; ವಾಹನಗಳಿಗೆ ಬೆಂಕಿ, ಕಾರ್ಖಾನೆ ಧ್ವಂಸ
  • ಈ ಸುದ್ದಿಯನ್ನು ಓದಲು ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ..
ಕೋಲಾರದ ವಿಸ್ಟ್ರಾನ್‌ ಕಂಪನಿ ಗಲಾಟೆ; 7,000 ಕಾರ್ಮಿಕರ ಮೇಲೆ ಕೇಸ್‌, ಆದರೆ ಎಫ್‌ಐಆರ್‌ನಲ್ಲಿ ಒಬ್ಬರ ಹೆಸರೂ ಇಲ್ಲ
Tags: karnatakakolarwistron kolar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸೇವೆಗೆ ಅಡ್ಡಿಯಾಗದ ಕೋವಿಡ್;‌ ಶಬರಿಮಲೆಯಲ್ಲಿ ಕಾರ್ತೀಕ ದೀಪೋತ್ಸವ ಸಂಭ್ರಮ

ಡಿಸೆಂಬರ್‌ 31ರಿಂದ ಶಬರಮಲೆಯಲ್ಲಿ ಮಕರವಿಳಕ್ಕು; ಕೋವಿಡ್-‌19 ನೆಗೆಟೀವ್‌ ಸರ್ಟಿಫಿಕೇಟ್‌ ಇಲ್ಲದಿದ್ದರೆ ಅಯ್ಯಪ್ಪ‌ ಸ್ವಾಮಿ ದರ್ಶನವಿಲ್ಲ

Leave a Reply Cancel reply

Your email address will not be published. Required fields are marked *

Recommended

ವಿಜಯನಗರ ಸಾಮ್ರಾಜ್ಯ ಸ್ಥಾಪನೆ ಮಾಡಿದ ಹಕ್ಕ-ಬುಕ್ಕರ ವಂಶಸ್ಥರು ಇನ್ನೂ ಇದ್ದಾರಾ? ಅಸಲಿಗೆ ಈ ಸಹೋದರರು ಯಾರು? ಇತಿಹಾಸ ಹೇಳಿದ್ದು ಸತ್ಯವೋ? ಅಸತ್ಯವೋ?

ವಿಜಯನಗರ ಸಾಮ್ರಾಜ್ಯ ಸ್ಥಾಪನೆ ಮಾಡಿದ ಹಕ್ಕ-ಬುಕ್ಕರ ವಂಶಸ್ಥರು ಇನ್ನೂ ಇದ್ದಾರಾ? ಅಸಲಿಗೆ ಈ ಸಹೋದರರು ಯಾರು? ಇತಿಹಾಸ ಹೇಳಿದ್ದು ಸತ್ಯವೋ? ಅಸತ್ಯವೋ?

5 years ago
ರಾಜೀನಾಮೆ ಪತ್ರವನ್ನು ಕಿಸೆಯಲ್ಲಿ ಇಟ್ಟುಕೊಂಡೇ ದಿಲ್ಲಿಗೆ ಹೋಗಿದ್ದರಾ ಸಿಎಂ?

ರಾಜೀನಾಮೆ ಪತ್ರವನ್ನು ಕಿಸೆಯಲ್ಲಿ ಇಟ್ಟುಕೊಂಡೇ ದಿಲ್ಲಿಗೆ ಹೋಗಿದ್ದರಾ ಸಿಎಂ?

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ