• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ನಳೀನ್‌ಕುಮಾರ್‌ ಕಟೀಲ್‌ಗೂ ಗೊತ್ತಿಲ್ಲದೆ ಬಿಜೆಪಿ ಸೇರಿದ ಮಾಜಿ ಶಾಸಕ ಸಿ.ವಿ.ವೆಂಕಟರಾಯಪ್ಪ ಮೊಮ್ಮಗ ನವೀನ್‌ ಕಿರಣ್‌ಗೆ ಬಾಗೇಪಲ್ಲಿ ಅಸೆಂಬ್ಲಿ ಬಿಜೆಪಿ ಟಿಕೆಟ್‌?

cknewsnow desk by cknewsnow desk
December 24, 2020
in CHIKKABALLAPUR, STATE
Reading Time: 1 min read
0
ನಳೀನ್‌ಕುಮಾರ್‌ ಕಟೀಲ್‌ಗೂ ಗೊತ್ತಿಲ್ಲದೆ ಬಿಜೆಪಿ ಸೇರಿದ ಮಾಜಿ ಶಾಸಕ ಸಿ.ವಿ.ವೆಂಕಟರಾಯಪ್ಪ ಮೊಮ್ಮಗ ನವೀನ್‌ ಕಿರಣ್‌ಗೆ ಬಾಗೇಪಲ್ಲಿ ಅಸೆಂಬ್ಲಿ ಬಿಜೆಪಿ ಟಿಕೆಟ್‌?
1.4k
VIEWS
FacebookTwitterWhatsuplinkedinEmail
  • ಮೇಲಿನ ಚಿತ್ರ: ಮುಖ್ಯಮಂತ್ರಿ ಯಡಿಯೂರಪ್ಪ, ಕೆ.ವಿ.ನವೀನ್‌ ಕಿರಣ್, ಡಾ.ಕೆ.ಸುಧಾಕರ್‌

ಚಿಕ್ಕಬಳ್ಳಾಪುರ/ಬೆಂಗಳೂರು: ಕೆಲ ದಿನಗಳ ಹಿಂದಿನವರೆಗೂ ಸಚಿವ ಡಾ.ಕೆ.ಸುಧಾಕರ್‌ ಅವರ ರಾಜಕೀಯ ಪ್ರತಿಸ್ಪರ್ಧಿಯಾಗಿದ್ದ ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಶಾಸಕ ಸಿ.ವಿ.ವೆಂಕಟರಾಯಪ್ಪ ಅವರ ಮೊಮ್ಮಗ ಕೆ.ವಿ.ನವೀನ್‌ ಕಿರಣ್‌ ಅವರು ಗುರುವಾರದಂದು ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ್ದಾರೆ.

ಡಾ.ಸುಧಾಕರ್‌ ಜತೆಯಲ್ಲಿ ತಮ್ಮ ನಿವಾಸಕ್ಕೆ ಬೆಳಗ್ಗೆಯೇ ಬಂದ ನವೀನ್‌ ಕಿರಣ್‌ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಹಾರ ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಘಟಕದ ಯಾವ ಪದಾಧಿಕಾರಿಯೂ ಇರಲಿಲ್ಲ.

ಕಾಂಗ್ರೆಸ್‌ನಿಂದ ಎರಡು ಅವಧಿಗೆ ಗೆದ್ದಿದ್ದ ಡಾ.ಸುಧಾಕರ್‌ ಹಾಗೂ ಚಿಕ್ಕಬಳ್ಳಾಪುರದಿಂದಲೇ ಶಾಸಕರಾಗಲು ಯತ್ನಿಸಿದ್ದ ನವೀನ್‌ ಕಿರಣ್‌ ನಡುವೆ ಜಿದ್ದಾಜಿದ್ದಿನ ರಾಜಕೀಯವೇ ಇತ್ತು. ಆದರೆ, ಎಲ್ಲರ ನಿರೀಕ್ಷೆಗಳನ್ನು ತಲೆಕೆಳಗು ಮಾಡಿ ನವೀನ್, ಬಿಜೆಪಿಗೆ ಸೇರಿದ್ದು ಎಲ್ಲರ ಹುಬ್ಬೇರಿಸಿದೆ ಮಾತ್ರವಲ್ಲದೆ, ಚಿಕ್ಕಬಳ್ಳಾಪುರ ಜಿಲ್ಲಾ ರಾಜಕೀಯದಲ್ಲಿ ಹೊಸ ಸಮೀಕರಣಗಳಿಗೆ ಕಾರಣವಾಗಲಿದೆ.

ಮುಖ್ಯವಾಗಿ ಡಾ.ಸುಧಾಕರ್‌ ಅವರು ಬಿಜೆಪಿಗೆ ಸೇರಿ ಉಪ ಚುನಾವಣೆಯಲ್ಲಿ ಗೆದ್ದು ಸಚಿವರಾದ ಮೇಲೆ ಜಿಲ್ಲೆಯ ರಾಜಕಾರಣದಲ್ಲಿ ಹೊಸ ಧ್ರುವೀಕರಣಗಳು ಈಗಾಗಲೇ ಆರಂಭವಾಗಿವೆ. ಅದಕ್ಕೆ ಪೂರಕವಾಗಿ ಕೆಲ ದಿನಗಳ ಹಿಂದೆಯಷ್ಟೇ ಶಿಡ್ಲಘಟ್ಟದ ಮಾಜಿ ಶಾಸಕ ರಾಜಣ್ಣ ಕಮಲ ಪಾಳಯ ಸೇರಿದ್ದರು. ಅವರ ಸೇರ್ಪಡೆಗೂ ಸುಧಾಕರ್‌ ಅವರೇ ಕಾರಣರಾಗಿದ್ದರು.

ಪ್ರಧಾನಿ ಶ್ರೀ @narendramodi ಅವರ ನಾಯಕತ್ವ ಮತ್ತು ಬಿಜೆಪಿಯ ಅಭಿವೃದ್ಧಿ ಪರ ರಾಜಕಾರಣವನ್ನು ಮೆಚ್ಚಿ ಚಿಕ್ಕಬಳ್ಳಾಪುರದ ಜನಪ್ರಿಯ ನಾಯಕರಾದ ಶ್ರೀ ಕೆ.ವಿ.ನವೀನ್ ಕಿರಣ್ ಅವರು ಮುಖ್ಯಮಂತ್ರಿ ಶ್ರೀ @BSYBJP ಅವರ ಸಮ್ಮುಖದಲ್ಲಿ ಇಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡರು. pic.twitter.com/uN98h52Dvf

— Dr Sudhakar K (Modi ka Parivar) (@DrSudhakar_) December 24, 2020

ಈಗ ನವೀನ್‌ ಕಿರಣ್‌ ಪಕ್ಷಕ್ಕೆ ಬಂದಿರುವುದರಿಂದ ಬಿಜೆಪಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದು ಡಾ.ಸುಧಾಕರ್‌ ಹೇಳಿದ್ದಾರೆ. ಅದೇ ರೀತಿ, ರಾಜಕೀಯದಲ್ಲಿ ಯಾರೂ ಶಾಶ್ವತ ಮಿತ್ರರೂ ಅಲ್ಲ, ಶಾಶ್ವತ ಶತ್ರುಗಳೂ ಅಲ್ಲ ಎನ್ನುವ ಅರ್ಥದಲ್ಲಿ ಮಾತನಾಡಿರುವ ನವೀನ್‌ ಕಿರಣ್‌, ಬದಲಾವಣೆ ಎಂಬುದು ನಿಂತ ನೀರಲ್ಲ ಎಂದಿದ್ದಾರೆ. ಈ ಎಲ್ಲ ಹಿನ್ನೆಲೆ ನೋಡಿದರೆ ಮುಂದಿನ ದಿನಗಳಲ್ಲಿ ಸುಧಾಕರ್‌ ಮತ್ತು ನವೀನ್‌ ಕಿರಣ್‌ ಒಟ್ಟಾಗಿ ಬಿಜೆಪಿ ಬೆಳವಣಿಗೆಗೆ ಕೆಲಸ ಮಾಡಬೇಕಿದೆ.

ಕಟೀಲ್‌ ಗಮನಕ್ಕೆ ಬಾರದ ಸೇರ್ಪಡೆ

ನವೀನ್‌ ಕಿರಣ್‌ ಪಕ್ಷ ಸೇರ್ಪಡೆ ಸಂಗತಿ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವರ ಗಮನಕ್ಕೆ ಬಂದಿಲ್ಲ ಎಂದು ಪಕ್ಷದ ಕೆಲ ಮೂಲಗಳು ಖಚಿತಪಡಿಸಿವೆ. ನವೀನ್‌ ಅವರನ್ನು ನೇರವಾಗಿ ಸಿಎಂ ನಿವಾಸಕ್ಕೇ ಕರೆದುಕೊಂಡು ಬಂದು ಅವರ ಮೂಲಕವೇ ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ತಾಲ್ಲೂಕು, ಜಿಲ್ಲಾ ಸಮಿತಿಗೂ ಈ ಸೇರ್ಪಡೆಯ ಬಗ್ಗೆ ನಿಖರ ಮಾಹಿತಿ ಇಲ್ಲ ಎಂದು ಗೊತ್ತಾಗಿದೆ.

ನಿಲ್ಲದು ಆಪರೇಷನ್‌ ಕಮಲ

ಇನ್ನೊಂದೆಡೆ, ಜಿಲ್ಲೆಯಲ್ಲಿ ಬಿಜೆಪಿಗೆ ಗಟ್ಟಿ ನೆಲೆ ಮಾಡಲೇಬೇಕು ಎಂದು ನಿರ್ಧರಿಸಿರುವ ಡಾ.ಸುಧಾಕರ್‌, ಅನ್ಯ ಪಕ್ಷಗಳ ನಾಯಕರಿಗೆ ಬಲೆ ಬೀಸುವುದನ್ನು ಮುಂದುವರಿಸಿದ್ದಾರೆ. ಬಿಜೆಪಿಯ ಒಳಗಿನ ಮೂಲಗಳು ಹೇಳುವ ಪ್ರಕಾರ, ಸುಧಾಕರ್‌ ಜಿಲ್ಲೆಯ ಇನ್ನಷ್ಟು ಪ್ರಮುಖ ನಾಯಕರಿಗೂ ಗಾಳ ಹಾಕಿದ್ದಾರೆಂದು ಗೊತ್ತಾಗಿದೆ. ಕಳೆದ ಚುನಾವಣೆಯಲ್ಲಿ ತಮ್ಮ ವಿರುದ್ಧವೇ ಸ್ಪರ್ಧಿಸಿ ಸೋತಿದ್ದ ಬಲಿಷ್ಠ ನಾಯಕರೊಬ್ಬರೂ ಕಮಲ ಹಿಡಿಯಲಿದ್ದಾರೆಂದು ಆ ಮೂಲಗಳು ತಿಳಿಸಿವೆ. ಶಿಡ್ಲಘಟ್ಟದ ರಾಜಣ್ಣ, ಅದಕ್ಕೂ ಮೊದಲು ಕೆ.ವಿ.ನಾಗರಾಜ್‌ ಕೂಡ ಬಿಜೆಪಿಗೆ ಹಾರಿದ್ದರು. ಒಂದು ಕಾಲದಲ್ಲಿ ಜೆಡಿಎಸ್‌ನ ಎಚ್.ಡಿ.ರೇವಣ್ಣ ಪರಮಾಪ್ತರಾಗಿದ್ದ ಕೆ.ವಿ.ನಾಗರಾಜ್‌ ಇದೀಗ ಬಿಜೆಪಿ ಬಂದು ರಾಜ್ಯ ಮಾವು ಮಹಾಮಂಡಳಿ ಅಧ್ಯಕ್ಷರಾಗಿದ್ದು ಉಳಿದ ನಾಯಕರು ಸುಧಾಕರ್‌ ಕಡೆ ವಾಲಲು ಪ್ರೇರಣೆ ನೀಡುತ್ತಿದೆ ಎಂಬ ಮಾಹಿತಿ ಸಿಕ್ಕಿದೆ.

ನವೀನ್‌ ಕಿರಣ್‌ಗೆ ಬಾಗೇಪಲ್ಲಿ ಟಿಕೆಟ್‌

ನವೀನ್‌ ಕಿರಣ್‌ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್‌ ನೀಡುವ ಬಗ್ಗೆ ಭರವಸೆ ನೀಡಲಾಗಿದೆ ಎಂಬ ಮಾಹಿತಿಯೂ ಇದೆ. ಹೇಳಿಕೇಳಿ ನವೀನ್‌ ಕಿರಣ್‌ ಅವರ ತಾತಾ ಸಿ.ವಿ.ವೆಂಕಟರಾಯಪ್ಪ ಅವರು 1989ರಲ್ಲಿ ಈ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಈ ಹಿಂದೆ ಪಕ್ಷದಿಂದ ಕಣಕ್ಕಿಳಿದಿದ್ದ ಚಿತ್ರನಟ ಸಾಯಿಕುಮಾರ್‌ ಅವರಿಂದ ಗೆಲವು ಸಿಗದ ಕಾರಣ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ ಅನ್ನು ಸಾಯಿಕುಮಾರ್‌ ಬದಲಿಗೆ ನವೀನ್‌ ಕಿರಣ್‌ಗೆ ಕೊಡಿಸುವ ಬಗ್ಗೆ ಡಾ.ಸುಧಾಕರ್‌ ಉತ್ಸುಕರಾಗಿದ್ದಾರೆಂದು ಮಾಹಿತಿ ಸಿಕ್ಕಿದೆ.

Tags: bjpchikkaballapurdr k sudhakarnaveen kiran
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

30,000 ಜನರಿಗೆ ಒಂದೇ ಪ್ರಾಥಮಿಕ ಆರೋಗ್ಯ ಕೇಂದ್ರ! ಉತ್ತಮ ಆರೋಗ್ಯ ಸೇವೆಗಾಗಿ ಪಿಎಚ್‌ಸಿಗಳಿಗೆ ಫುಲ್ ಟ್ರೀಟ್‌ಮೆಂಟ್ ಕೊಡಲಾಗುವುದು ಎಂದ ಡಾಕ್ಟರ್‌ ಸುಧಾಕರ್‌

Leave a Reply Cancel reply

Your email address will not be published. Required fields are marked *

Recommended

ಬರಪೀಡಿತ ಗುಡಿಬಂಡೆ ಈಗ ಜಲಪೀಡಿತ!

ಚಿಕ್ಕಬಳ್ಳಾಪುರ ಜನರಿಗೆ ಎಚ್ಚರಿಕೆ ಕೊಟ್ಟ ಎಸ್ಪಿ

4 years ago
ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

ಕನ್ನಡ ಬಿಗ್‌ಬಾಸ್ ಸೀಸನ್ 3 ಸ್ಪರ್ಧಿ, ಕನ್ನಡ್ ಗೊತ್ತಿಲ್ಲ, ಉಪ್ಪು ಹುಳಿ ಖಾರ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ಇನ್ನಿಲ್ಲ; ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ನಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ