• About
  • Advertise
  • Careers
  • Contact
Thursday, October 29, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ; ಆರ್ಥಿಕ ಸಂಕಷ್ಟವಿದ್ದರೂ ಆರೋಗ್ಯ ಕ್ಷೇತ್ರಕ್ಕೆ ಕಾಯಕಲ್ಪ ಎಂದ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
December 28, 2020
in CHIKKABALLAPUR, KOLAR, STATE
Reading Time: 1 min read
0
ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆ; ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಬಿಜೆಪಿ ಅತಿರಥಮಹಾರಥರ ಡೇ ಔಟ್‌
914
VIEWS
FacebookTwitterWhatsuplinkedinEmail

ಬೆಂಗಳೂರು: ಕೋವಿಡ್‌ನಿಂದಾಗಿ ಆರ್ಥಿಕ ಸಂಕಷ್ಟ ಎದುರಾದರೂ ನಮ್ಮ ಸರ್ಕಾರ ಆರೋಗ್ಯ ಕ್ಷೇತ್ರಕ್ಕೆ ಚೈತನ್ಯ ತುಂಬುವ ಕೆಲಸ ಮಾಡುತ್ತಿದ್ದು, ಚಿಕ್ಕಬಳ್ಳಾಪುರ, ಕೋಲಾರವೂ ಸೇರಿದಂತೆ ಎಲ್ಲ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ನಿರ್ಮಿಸುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಮಾಗಡಿ ರಸ್ತೆ ಬಳಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ‘ಆರೋಗ್ಯ ಸೌಧ’ ಕಟ್ಟಡದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಿದರು. ನಂತರ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆರ್ಥಿಕ ದುಸ್ಥಿತಿ ಇದ್ದರೂ ಆರೋಗ್ಯ ಕ್ಷೇತ್ರಕ್ಕೆ ಚೈತನ್ಯ ತುಂಬುವ ಕೆಲಸ ಮಾಡಿದ್ದಾರೆ. ರಾಜ್ಯ ಸರ್ಕಾರ 4 ಹೊಸ ವೈದ್ಯಕೀಯ ಕಾಲೇಜುಗಳಿಗೆ ಮಂಜೂರಾತಿ ನೀಡಿದ್ದು, ಈ ಪೈಕಿ ಮೂರು ಕಾಲೇಜುಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಕೂಡ ಉದ್ಘಾಟನೆಯಾಗಲಿದೆ ಎಂದರು.

ರಾಜ್ಯದಲ್ಲಿ 18 ವೈದ್ಯಕೀಯ ಕಾಲೇಜುಗಳಿವೆ. ಆದರೆ 9 ಜಿಲ್ಲೆಗಳಲ್ಲಿ ಮೆಡಿಕಲ್ ಕಾಲೇಜು ಇಲ್ಲ. ಅಂತಹ ಕಡೆಗಳಲ್ಲಿ ಪಿಪಿಪಿ ಮಾದರಿ ಅಥವಾ ಬೇರೆ ಮಾದರಿಯಲ್ಲಿ ಹೊಸ ಕಾಲೇಜು ನಿರ್ಮಿಸುವ ಗುರಿ ಇದೆ. ಅದಕ್ಕೆ ಹೊಂದಿಕೊಂಡಂತೆ ಜಿಲ್ಲಾಸ್ಪತ್ರೆ, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಕೂಡ ನಿರ್ಮಿಸಲಾಗುವುದು ಎಂದು ತಿಳಿಸಿದರು.

ಕೋವಿಡ್ ಸಮಯದಲ್ಲಿ ನಮ್ಮ ಸರ್ಕಾರ ಬದ್ಧತೆ ತೋರಿದೆ. ಹಲವಾರು ವರ್ಷಗಳಿಂದ ರಾಜ್ಯದ ಆಸ್ಪತ್ರೆಗಳಲ್ಲಿ ಸುಮಾರು ಐದಾರು ಸಾವಿರ ಹಾಸಿಗೆಗಳಿಗೆ ಮಾತ್ರ ಆಕ್ಸಿಜನ್ ಅಳವಡಿಸಲಾಗಿತ್ತು. ಆದರೆ ಕಳೆದ ಕೆಲವೇ ತಿಂಗಳಲ್ಲಿ ಸುಮಾರು 30 ಸಾವಿರ ಹಾಸಿಗೆಗಳಿಗೆ ಆಕ್ಸಿಜನ್ ಅಳವಡಿಸಲಾಗಿದೆ. ಕೊರೊನಾ ಯೋಧರಾದ ವೈದ್ಯರು, ಸಿಬ್ಬಂದಿಗೆ ಸುಮಾರು 125 ಕೋಟಿ ರೂ. ಖರ್ಚು ಮಾಡಿ ಭತ್ಯೆ ನೀಡಲಾಗುತ್ತಿದೆ ಎಂದರು.

ದೇಶದ ಜಿಡಿಪಿಯಲ್ಲಿ ಶೇ.1 ರಿಂದ 1.5 ರಷ್ಟು ಮಾತ್ರ ಆರೋಗ್ಯ ಕ್ಷೇತ್ರಕ್ಕೆ ನೀಡಲಾಗುತ್ತಿತ್ತು. ಇನ್ನು ಮುಂದೆ ಶೇ.2.5 ರಷ್ಟು ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿಯವರ ಸರ್ಕಾರ ಜಾರಿ ಮಾಡಿದ ಆಯುಷ್ಮಾನ್ ಭಾರತ್ ಯೋಜನೆ ಆರೋಗ್ಯ ಕರ್ನಾಟಕವಾಗಿ ನಮ್ಮಲ್ಲಿ ಜಾರಿಯಾಗಿದ್ದು, ಬಿಪಿಎಲ್ ಜೊತೆಗೆ ಎಪಿಎಲ್ ವರ್ಗಕ್ಕೂ ವಿಮೆ ಲಭ್ಯವಿದೆ ಎಂದರು.

ಆರೋಗ್ಯ ಇಲಾಖೆಯ 53 ಕಚೇರಿಗಳು ಒಂದೇ ಕಡೆ ಸುಲಲಿತವಾಗಿ ಕಾರ್ಯನಿರ್ವಹಿಸಲು ಹೊಸ ಕಟ್ಟಡ ನಿರ್ಮಿಸಲಾಗಿದೆ. ಕಟ್ಟಡದಲ್ಲಿ ಆಯುಕ್ತಾಲಯ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಎಲ್ಲವೂ ಈ ಕಟ್ಟಡದಲ್ಲಿ ಕಚೇರಿಗಳನ್ನು ಹೊಂದಲಿವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ ಉಪಸ್ಥಿತರಿದ್ದರು.

ಮುಖ್ಯಮಂತ್ರಿಗಳಿಂದ ಮೆಚ್ಚುಗೆ

ಸಚಿವ ಡಾ.ಕೆ.ಸುಧಾಕರ್ ಅವರು ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರಲು ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಸುಧಾರಣೆ ತರಲು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಾಥಮಿಕ ಆರೋಗ್ಯ ಕೇಂದ್ರಗಳು ಗ್ರಾಮೀಣ ಪ್ರದೇಶಗಳ ಸಂಜೀವಿನಿಯಾಗಿವೆ. ಇಂತಹ ಕೇಂದ್ರಗಳನ್ನು ಸುಸಜ್ಜಿತವಾಗಿಸಲು ಯೋಜನೆ ರೂಪಿಸಲಾಗಿದೆ. ಆರೋಗ್ಯ, ಅನುಕಂಪ ಮತ್ತು ಬದ್ಧತೆ ಮೂರು ಅಂಶಗಳನ್ನು ನಾವು ಅಳವಡಿಸಿಕೊಂಡಿದ್ದೇವೆ. ಜನರಿಗೆ ನೀಡುವ ಆರೋಗ್ಯ ಸೇವೆಗೆ ತಕ್ಕಂತೆ ಶುಲ್ಕ ಪಡೆಯಬೇಕು. ಆದರೆ ಖಾಸಗಿ ಆರೋಗ್ಯ ಕ್ಷೇತ್ರದಿಂದ ಜನರಿಗೆ ವಂಚಿಸುವ ಕೆಲಸವಾಗಬಾರದು ಎಂದು ಅವರು ಹೇಳಿದರು.

Tags: dr k sudhakarHealthkarnatakamedical college
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

ರಾಜೀನಾಮೆ ಕೊಟ್ಟು ಹೊರಬನ್ನಿ; ಅಪಮಾನಿತ ದಲಿತ ಸಚಿವರಿಗೆ #Jds ಕಿವಿಮಾತು

by cknewsnow desk
October 22, 2026
0

ಮೈಸೂರು ದಸರಾದಲ್ಲಿ ಅವಮಾನ ಪ್ರಸಂಗ; ಬಾಯಲ್ಲಿ ಜಾತ್ಯತೀತ ತತ್ವ, ಆಚರಣೆಯಲ್ಲಿ ಅಸೃಶ್ಯತೆ!; ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

Next Post
ಹೊಸ ವರ್ಷಾಚರಣೆಗೆ ಬರಲಿದೆ ಕೋವಿಡ್‌ ಹೊಸ ಮಾರ್ಗಸೂಚಿ; ಸಂಭ್ರಮ ಸರಳವಾಗಿರಲಿ, ಅಬ್ಬರಕ್ಕೆ ಅವಕಾಶವೇ ಇಲ್ಲ

ಹೊಸ ವರ್ಷಾಚರಣೆಗೆ ಬರಲಿದೆ ಕೋವಿಡ್‌ ಹೊಸ ಮಾರ್ಗಸೂಚಿ; ಸಂಭ್ರಮ ಸರಳವಾಗಿರಲಿ, ಅಬ್ಬರಕ್ಕೆ ಅವಕಾಶವೇ ಇಲ್ಲ

Leave a Reply Cancel reply

Your email address will not be published. Required fields are marked *

Recommended

ಶಿರಾದಲ್ಲಿ ಬಿಜೆಪಿ ನಿಗೂಢ ಹೆಜ್ಜೆ; ಯಾರಿಗೂ ಗೊತ್ತಿಲ್ಲದೆ ಗಡಿ ದಾಟಿದ ಉಪ ಮುಖ್ಯಮಂತ್ರಿ!

BMS ಟ್ರಸ್ಟ್ ಅಕ್ರಮ: ಸಚಿವ ಅಶ್ವತ್ಥನಾರಾಯಣ + ಒಂದು ಕಾಣದ ಕೈ

4 years ago
4 ವಾರಗಳವರೆಗೆ ಚಿತ್ರಮಂದಿರಗಳ ಹೌಸ್‌ಫುಲ್‌ಗೆ ಅವಕಾಶ; ಒಂದು ವೇಳೆ ಪ್ರೇಕ್ಷಕರಲ್ಲಿ ಕೊರೊನ  ಸೋಂಕು ಕಂಡುಬಂದರೆ ಈ ನಿರ್ಧಾರ ಬದಲು ಎಂದ ಸಚಿವ ಡಾ.ಕೆ.ಸುಧಾಕರ್

4 ವಾರಗಳವರೆಗೆ ಚಿತ್ರಮಂದಿರಗಳ ಹೌಸ್‌ಫುಲ್‌ಗೆ ಅವಕಾಶ; ಒಂದು ವೇಳೆ ಪ್ರೇಕ್ಷಕರಲ್ಲಿ ಕೊರೊನ ಸೋಂಕು ಕಂಡುಬಂದರೆ ಈ ನಿರ್ಧಾರ ಬದಲು ಎಂದ ಸಚಿವ ಡಾ.ಕೆ.ಸುಧಾಕರ್

6 years ago

Popular News

  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0
  • 10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026
ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ