ಭಾರತಕ್ಕೆ ಹೊಸ ದಿಕ್ಕು ತೋರಿದ ಮೇ ಮಹಾಚುನಾವಣೆ; ಪರ್ವ ಕಾಲದಲ್ಲಿ ದೇಶವನ್ನು ಕೈಹಿಡಿದು ಮುನ್ನಡೆಸಿದ ಪಿ.ವಿ.ನರಸಿಂಹರಾವ್‌

1991ರಲ್ಲಿ ದಿವಾಳಿಯ ಅಂಚಿನಲ್ಲಿದ್ದ ಭಾರತವನ್ನು ಆ ಸಂಕಷ್ಟದಿಂದ ಪಾರು ಮಾಡಿದ ಸಾಹಸಿಯೆಂದರೆ, ಪಿ.ವಿ.ನರಸಿಂಹರಾವ್. ನೆಹರು-ಗಾಂಧಿ ಕುಟುಂಬದ ಕುಡಿಯಲ್ಲದ ಪಿವಿಎನ್, ಐದು ವರ್ಷಗಳ ಕಾಲ ಭಾರತದ ಚುಕ್ಕಾಣಿ ಹಿಡಿದು, ದೇಶವನ್ನು ಹೊಸ ಮನ್ವಂತರಕ್ಕೆ ಕೊಂಡೊಯ್ದ ಚಾಣಾಕ್ಷ. ಆದರೆ, ಸಮಕಾಲೀನ ಚರಿತ್ರೆಯಲ್ಲಿ ಅವರಿಗೆ ಸಿಗಬೇಕಾಗಿದ್ದ ಸ್ಥಾನ ಸಿಕ್ಕಿಲ್ಲ. ಇದು ಅವರ ಜನ್ಮಶತಾಬ್ದಿಯ ವರ್ಷ. ಈ ಸಂದರ್ಭದಲ್ಲಿ ಅವರನ್ನು ಕುರಿತ ʼಪಿವಿಎನ್: ಪರ್ವಕಾಲದ ಪುರುಷೋತ್ತಮʼ ಎನ್ನುವ ಅನುವಾದಿತ ಕೃತಿ ಈಚೆಗಷ್ಟೇ ಲೋಕಾರ್ಪಣೆಗೊಂಡಿದೆ. ಸಂಜಯ ಬರೂ ಅವರ ಮೂಲ ಇಂಗ್ಲಿಷ್ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿರುವವರು ಖ್ಯಾತ ಅನುವಾದಕ ಬಿ.ಎಸ್.ಜಯಪ್ರಕಾಶ ನಾರಾಯಣ. ಈ ಗಮನಾರ್ಹ ಕೃತಿಯ ಒಂದು ಅಧ್ಯಾಯದ ಆಯ್ದ ಭಾಗವು ಸಿಕೆನ್ಯೂಸ್‌ ನೌ ಓದುಗರಿಗಾಗಿ ಇಲ್ಲಿದೆ. ಅಧ್ಯಾಯವು ದೀರ್ಘವಾಗಿರುವುದರಿಂದ ಅದನ್ನು ಕೆಲ ಭಾಗಗಳನ್ನಾಗಿ ವಿಭಜಿಸಿ ಪ್ರಕಟಿಸಲಾಗುತ್ತಿದೆ. ಇದು ಮೊದಲ ಭಾಗ..