• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NEWS IN USE

15,000 ವಿದ್ಯಾರ್ಥಿಗಳಿಗೆ ಜಿಸಿಸಿಟಿಗಳಲ್ಲಿ ಅಲ್ಪಾವಧಿ ತರಬೇತಿ; ಆಮೇಲೆ ಕೈಗಾರಿಕೆಗಳಲ್ಲಿ ಗ್ಯಾರಂಟಿ ಉದ್ಯೋಗ ಕೊಡಿಸುತ್ತೇವೆ ಎಂದ ಡಿಸಿಎಂ

cknewsnow desk by cknewsnow desk
December 30, 2020
in NEWS IN USE, STATE
Reading Time: 1 min read
0
15,000 ವಿದ್ಯಾರ್ಥಿಗಳಿಗೆ ಜಿಸಿಸಿಟಿಗಳಲ್ಲಿ ಅಲ್ಪಾವಧಿ ತರಬೇತಿ; ಆಮೇಲೆ ಕೈಗಾರಿಕೆಗಳಲ್ಲಿ  ಗ್ಯಾರಂಟಿ ಉದ್ಯೋಗ ಕೊಡಿಸುತ್ತೇವೆ ಎಂದ ಡಿಸಿಎಂ
917
VIEWS
FacebookTwitterWhatsuplinkedinEmail

ಯಶವಂತಪುರ-ಯಲಹಂಕ ಹಾಗೂ ಬೆಂ.ಗ್ರಾಮಾಂತರ-ವಿಜಯಪುರ ಜಿಲ್ಲೆಗಳಲ್ಲಿ ಹೊಸ ಜಿಟಿಟಿಸಿ ಸ್ಥಾಪನೆ

ಬೆಂಗಳೂರು: ರಾಜ್ಯದ ವಿವಿಧೆಡೆಯಲ್ಲಿರುವ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರಗಳು (ಜಿಟಿಟಿಸಿ) ನೀಡುವ ವೃತ್ತಿಪರ ಕೋರ್ಸುಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಮುಂದಿನ ವರ್ಷದಿಂದ 15,000 ವಿದ್ಯಾರ್ಥಿಗಳಿಗೆ ಅಲ್ಪಾವಧಿ ತರಬೇತಿ ನೀಡಿ ಕುಶಲ ಕಾರ್ಮಿಕರನ್ನಾಗಿ ರೂಪಿಸುವ ಗುರಿಯನ್ನು ರಾಜ್ಯ ಸರಕಾರ ಹಾಕಿಕೊಂಡಿದೆ.

ಬೆಂಗಳೂರಿನ ರಾಜಾಜಿನಗರದಲ್ಲಿರುವ ಪ್ರತಿಷ್ಠಿತ ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಸಂಸ್ಥೆ (ಜಿಟಿಟಿಸಿ)ಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಈ ವಿಷಯವನ್ನು ಪ್ರಕಟಿಸಿದರು.

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಜಿಟಿಟಿಸಿ ನೀಡುವ ತರಬೇತಿಗೆ ವಿಪರೀತ ಬೇಡಿಕೆ ಇದ್ದು, ಇದುವರೆಗೂ ವರ್ಷಕ್ಕೆ 6000 ಮಂದಿಗಷ್ಟೇ ವಾರ್ಷಿಕ ಅಲ್ಪಾವಧಿ ತರಬೇತಿ ನೀಡಲಾಗುತ್ತಿತ್ತು. ಇನ್ನು ಕೈಗಾರಿಕೆ ಉದ್ಯೋಗ ಮಾರುಕಟ್ಟೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಹೆಚ್ಚಿನ ಪ್ರಮಾಣದಲ್ಲಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಕುಶಲಭರಿತ ಮಾನವ ಸಂಪನ್ಮೂಲವನ್ನು ಕೈಗಾರಿಕೆಗಳಿಗೆ ಒದಗಿಸಲಾಗುವುದು ಎಂದರು.

ಸದ್ಯಕ್ಕೆ ಎಲ್ಲ ಜಟಿಟಿಸಿಗಳಲ್ಲಿ 2ರಿಂದ 3 ತಿಂಗಳ ಅಲ್ಪಾವಧಿ ತರಬೇತಿ ಕೋರ್ಸುಗಳಿಗೆ ಹೆಚ್ಚು ಬೇಡಿಕೆ ಬರುತ್ತಿದೆ. ಇದೇ ತರಬೇತಿಯನ್ನು ಮತ್ತಷ್ಟು ವಿಸ್ತೃತಗೊಳಿಸಲಾಗುವುದು ಎಂದ ಡಿಸಿಎಂ, ಈ ತರಬೇತಿಯಿಂದ ಕೈಗಾರಿಕೆ ಮತ್ತು ಅಭ್ಯರ್ಥಿಗೂ ಉಪಯೋಗವಾಗಬೇಕು, ಇದು ಸರಕಾರದ ಉದ್ದೇಶವಾಗಿದೆ ಎಂದರು.

Visited the Government Toolroom and Training Centre at Rajajinagar. Interacted with the trainees & the faculty regarding facilities at the Centre. Directed concerned officials to take up replacements of old equipment & also to include Mechatronics in the curriculum.

1/2 pic.twitter.com/TmrsJ2UoDB

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) December 30, 2020

ಬೆಂಗಳೂರಿನಲ್ಲಿ ಇನ್ನೆರಡು ಜಿಟಿಟಿಸಿ

ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಒಂದು ಜಿಟಿಟಿಸಿ (ರಾಜಾಜಿನಗರ) ಇದ್ದು, ಶೀಘ್ರದಲ್ಲೇ ಇನ್ನೂ ಎರಡು ಜಿಟಿಟಿಸಿಗಳನ್ನು ಯಲಹಂಕ ಮತ್ತು ಯಶವಂತಪುರದಲ್ಲಿ ಸ್ಥಾಪನೆ ಮಾಡಲಾಗುವುದು. ಹೆಚ್ಚು ಡಿಮಾಂಡ್‌ ಇರುವ ಮೆಕಟ್ರಾನಿಕ್ಸ್‌ (ಮೆಕಾನಿಕಲ್‌-ಎಲೆಕ್ಟ್ರಾನಿಕ್ಸ್)‌ ವಿಭಾಗವನ್ನು ಇನ್ನೂ ಕೆಲವು ಜಿಟಿಟಿಸಿಗಳಲ್ಲೂ ಆರಂಭಿಸಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

ರಾಜಾಜಿನಗರದಲ್ಲಿ ಕಾರ್ಯಾಚರಿಸುತ್ತಿರುವ ಜಿಟಿಟಿಸಿಯನ್ನು 1972ರಲ್ಲಿ ಸ್ಥಾಪನೆ ಮಾಡಲಾಗಿದ್ದು ಅತ್ಯುತ್ತಮ ಗುಣಮಟ್ಟದಿಂದ ನಡೆಯುತ್ತಿದೆ. ಇಡೀ ರಾಜ್ಯದಲ್ಲಿಯೇ ಇದೊಂದು ಪ್ರತಿಷ್ಠಿತ ಕೈಗಾರಿಕಾ ತರಬೇತಿ ಕೇಂದ್ರವಾಗಿ ಹೆಸರಾಗಿದೆ. ರಾಜ್ಯದಲ್ಲಿ ಒಟ್ಟು 24 ಜಿಟಿಟಿಸಿಗಳು ಯಶಸ್ವಿಯಾಗಿ ಕಾರ್ಯಾಚರಿಸುತ್ತಿವೆ. ಶೀಘ್ರದಲ್ಲೇ ವಿಜಯಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ನೂತನ ಜಿಟಿಟಿಸಿಗಳನ್ನು ತೆರೆಯಲಾಗುವುದು. ಚಳ್ಳಕೆರೆ, ಕೊಪ್ಪಳ, ಚಿತ್ರದುರ್ಗ, ಹುಣಸೂರು ಮತ್ತು ಮಡಿಕೇರಿಗಳಲ್ಲಿ ನಿರ್ಮಾಣ ಹಂತದಲ್ಲಿರುವ ಜಿಟಿಟಿಸಿ ಕ್ಯಾಂಪಸ್ಸುಗಳು ಆದಷ್ಟು ಬೇಗ ಲೋಕಾರ್ಪಣೆಗೊಳ್ಳಲಿವೆ ಎಂದರು.

ಕಲ್ಯಾಣ ಕರ್ನಾಟಕದ ಭಾಗದಲ್ಲಿರುವ ಜಿಟಿಟಿಸಿಗಳನ್ನು ಮೇಲ್ದರ್ಜೆಗೇರಿಸಲಾಗುವುದು. ಅದಕ್ಕೆ ಅಗತ್ಯವಾದ ಅನುದಾನವನ್ನು ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಪಡೆಯಲು ಸೂಚಿಸಲಾಗಿದೆ. ಬೆಂಗಳೂರು, ಬೆಳಗಾವಿ, ಧಾರವಾಡ ಜಿಟಿಟಿಸಿಗಳಲ್ಲಿರುವ ಯಂತ್ರೋಪಕರಣಗಳು ಹಳೆಯದಾಗಿದ್ದು, ಇವುಗಳನ್ನು ಸಾಧ್ಯವಾದಷ್ಟು ಮೇಲ್ದರ್ಜೆಗೆ ಏರಿಸುವುದು ಅಥವಾ ಯಂತ್ರಗಳನ್ನೇ ಅಳವಡಿಸಲಾಗುವುದು ಎಂದರು ಡಾ.ಅಶ್ವತ್ಥನಾರಾಯಣ.

ತರಬೇತಿ ಮತ್ತು ಉತ್ಪಾದನೆ

ಈಗಾಗಲೇ ಎಲ್‌ ಅಂಡ್‌ ಟಿ, ಇಸ್ರೋ, ಏರೋಸ್ಪೇಸ್‌, ಎಚ್‌ಎಎಲ್‌ ಮುಂತಾದ ಕಡೆಗಳಿಂದ ಜಿಟಿಟಿಸಿಗಳಿಗೆ ಬೇಡಿಕೆ ಬರುತ್ತಿದೆ. ಆಯಾ ಕಂಪನಿಗಳ ಬೇಡಿಕೆಗಳಿಗೆ ತಕ್ಕಂತೆ ಇಲ್ಲಿ ಉತ್ಪನ್ನಗಳನ್ನು ತಯಾರಿಸಿ ಕೊಡಲಾಗುತ್ತಿದೆ. ಒಂದೆಡೆ ತರಬೇತಿ, ಇನ್ನೊಂದೆಡೆ ಉತ್ಪಾದನೆ ಕೂಡ ಆಗಬೇಕು. ಲಭ್ಯವಿರುವ ಯಂತ್ರಗಳು ಎರಡಕ್ಕೂ ಉಪಯೋಗವಾಗಬೇಕು. ಪ್ರತೀ ಜಿಟಿಟಿಸಿಯೂ ಆರ್ಥಿಕವಾಗಿ ಸ್ವಾವಲಂಬನೆ ಸಾಧಿಸಬೇಕು ಎಂಬುದು ಸರಕಾರದ ಉದ್ದೇಶವಾಗಿದೆ ಎಂದು ಡಿಸಿಎಂ ತಿಳಿಸಿದರು.

ಕರ್ನಾಟಕ ಉಪಕರಣಾಗಾರ ಹಾಗೂ ತರಬೇತಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಜಿಟಿಟಿಸಿಯ ವರ್ಕ್ ಶಾಪ್ ಹಾಗೂ ತರಬೇತಿ ಕೇಂದ್ರಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.

Tags: employmentgttckarnatakaskill
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

Leave a Reply Cancel reply

Your email address will not be published. Required fields are marked *

Recommended

ಹೂ ಈಸ್ ಸಿದ್ದರಾಮಯ್ಯ?

ಕಲಿಸುವ ಗುರುವು ಬೀದಿಯಲ್ಲಿ ನಿಂತಿದ್ದಾಗ ಭಾರತ ವಿಶ್ವಗುರು ಆಗಲು ಸಾಧ್ಯವೇ?

4 years ago
ಅರಣ್ಯದಲ್ಲಿ ತಪ್ಪಿದ ಮಹಾ ದುರಂತ!!

ವಿಷಲಾರಿ, ವಾಟದಹೊಸಹಳ್ಳಿ ಕೆರೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ