ಚಿಕ್ಕಬಳ್ಳಾಪುರ: ಭಾರತೀಯ ಜನತಾ ಪಕ್ಷದ ಜಿಲ್ಲಾ ವಿಶೇಷ ಸಭೆ ಮತ್ತು ಜನಸೇವಕ ಸಮಾವೇಶದ ಪೂರ್ವಭಾವಿ ಸಭೆ ಚಿಕ್ಕಬಳ್ಳಾಪುರ ಸಿದ್ದೇಶ್ವರ ಸಮುದಾಯ ಭವನದಲ್ಲಿ ನಡೆಯಿತಲ್ಲದೆ, ಜನಸೇವಕ ಸಮಾವೇಶಕ್ಕೆ ಮಾಡಿಕೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಪಕ್ಷದ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಮುಖಂಡರ ಜತೆ ಸಮಾಲೋಚನೆ ನಡೆಸಿದರು.
ಈ ವೇಳೆ ಮಾತನಾಡಿದ ರಾಮಲಿಂಗಪ್ಪ, ಇದೇ ಜನವರಿ 13ರಂದು ನಗರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಜನಸೇವಕ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಎಲ್ಲರ ಸಹಕಾರದಿಂದ ಈ ಸಮಾವೇಶವನ್ನು ಯಶಸ್ವಿಗೊಳಿಸಬೇಕಿದೆ ಎಂದರು. ಈ ಸಮಾವೇಶವನ್ನು ಯಶಸ್ವಿಯಾಗಿ ನಡೆಸಿಲು ಅಗತ್ಯವಾದ ಪೂರ್ವ ಸಿದ್ದತೆ, ರೂಪರೇಷೆಗಳ ಬಗ್ಗೆ ಅವರು ಜಿಲ್ಲಾ ಪದಾಧಿಕಾರಿಗಳ ಚರ್ಚಿಸಿದರು.
ಸಭೆಯಲ್ಲಿ ರಾಜ್ಯ ಕಾರ್ಯದರ್ಶಿಗಳು ಹಾಗೂ ವಿಭಾಗ ಪ್ರಭಾರಿಗಳಾದ ಕೇಶವ ಪ್ರಸಾದ್, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ರಾಜ್ಯ ಕಾರ್ಯದರ್ಶಿಗಳು ಹಾಗೂ ಜನಸೇವಕ ಸಮಾವೇಶದ ಸಂಚಾಲಕರಾದ ನವೀನ್, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷರು ಹಾಗೂ ಜನಸೇವಕ ಸಮಾವೇಶದ ವ್ಯವಸ್ಥಾಪಕರಾದ ಗೀತಾ ವಿವೇಕಾನಂದ, ಜಿಲ್ಲಾ ಉಸ್ತುವಾರಿ ಕೃಷ್ಣಾರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ್, ಆವಲಗುರ್ಕಿ ಶ್ರೀನಿವಾಸ್ ರೆಡ್ಡಿ, ಮರಳಕುಂಟೆ ಕೃಷ್ಣಮೂರ್ತಿ, ಜಿಲ್ಲಾ ವಕ್ತಾರ ರಮೇಶ್ ಬಾಯರಿ ಹಾಗೂ ಜಿಲ್ಲೆಯ ಇತರೆ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಮಂಡಲದ ಅಧ್ಯಕ್ಷರು ಈ ಸಭೆಯಲ್ಲಿ ಇದ್ದರು.
ಬೆಂಗಳೂರು ವರದಿ: ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ನೇತೃತ್ವದ ಇನ್ನೊಂದು ತಂಡದಲ್ಲಿ ಉಪ ಮುಖ್ಯಮಂತ್ರಿಗಳಾದ ಲಕ್ಷ್ಮಣ ಸವದಿ, ಸಚಿವರಾದ ಬಿ.ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯ ಉಪಾಧ್ಯಕ್ಷೆ ಶೋಭಾ ಕರಂದ್ಲಾಜೆ, ಸಂಸದರಾದ ಶಿವಕುಮಾರ್ ಉದಾಸಿ, ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ ಇರಲಿದ್ದು, ಕಾರ್ಯಕ್ರಮದ ಸಂಚಾಲಕರಾಗಿ ರಾಜ್ಯ ಕಾರ್ಯದರ್ಶಿಗಳಾದ ನವೀನ್ ಇರುವರು. ಈ ತಂಡವು ಜನವರಿ 11ರಂದು ಹಾವೇರಿ ಮತ್ತು ದಾವಣಗೆರೆ ಜಿಲ್ಲೆ, 12ರಂದು ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆ, 13ರಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಮಾವೇಶ ಏರ್ಪಡಿಸಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.