• About
  • Advertise
  • Careers
  • Contact
Friday, October 30, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಾಜ್ಯದಲ್ಲಿ ಕೊರೊನಾ ಲಸಿಕೆ‌ ಸಂಗ್ರಹಕ್ಕೆ ಸಿದ್ಧತೆ ಪೂರ್ಣ; ತಲಾ 45 ಲಕ್ಷ ಡೋಸ್ ಸಾಮರ್ಥ್ಯದ ಎರಡು ವಾಕ್-ಇನ್ ಕೂಲರ್: ವಿಮಾನ ಪ್ರಯಾಣಿಕರ ಮೇಲೆ ತೀವ್ರ ನಿಗಾ

cknewsnow desk by cknewsnow desk
January 10, 2021
in COVID-19, STATE
Reading Time: 1 min read
0
ರಾಜ್ಯದಲ್ಲಿ ಕೊರೊನಾ ಲಸಿಕೆ‌ ಸಂಗ್ರಹಕ್ಕೆ ಸಿದ್ಧತೆ ಪೂರ್ಣ; ತಲಾ 45 ಲಕ್ಷ ಡೋಸ್ ಸಾಮರ್ಥ್ಯದ ಎರಡು ವಾಕ್-ಇನ್ ಕೂಲರ್: ವಿಮಾನ ಪ್ರಯಾಣಿಕರ ಮೇಲೆ ತೀವ್ರ ನಿಗಾ
919
VIEWS
FacebookTwitterWhatsuplinkedinEmail

ಕೇಂದ್ರದಿಂದ ಒಂದು ವಾಕ್-ಇನ್ ಫ್ರೀಜರ್: ಲಸಿಕೆ ಸಂಗ್ರಹ ವ್ಯವಸ್ಥೆ ಪರಿಶೀಲಿಸಿದ ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ ಸಂಗ್ರಹಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದು, ವಿತರಣೆಗೂ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ ರಾಜ್ಯಕ್ಕೆ 13.90 ಲಕ್ಷ ಡೋಸ್ ಲಸಿಕೆ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಲಸಿಕೆ ಸಂಗ್ರಹ ವ್ಯವಸ್ಥೆಯನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಸೋಮವಾರ ಸಂಜೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಈಗಾಗಲೇ ಪ್ರಧಾನಿಗಳು ಜನವರಿ 16 ರಿಂದ ಕೊರೊನಾ ಲಸಿಕೆ ನೀಡುವ ಬಗ್ಗೆ ತಿಳಿಸಿದ್ದಾರೆ. ಆರೋಗ್ಯ ಕ್ಷೇತ್ರದ ಸಿಬ್ಬಂದಿಗೆ 3 ಕೋಟಿ ಲಸಿಕೆ ನೀಡಲಾಗುವುದು ಎಂದು ಅವರು ಹೇಳಿದ್ದಾರೆ. ಇದಕ್ಕೆ ಪೂರ್ವಭಾವಿಯಾಗಿ ಸಂಗ್ರಹ ವ್ಯವಸ್ಥೆಯನ್ನು ಪರಿಶೀಲಿಸಲಾಗಿದೆ ಎಂದರು.

ರಾಜ್ಯದಲ್ಲಿ ಪ್ರಮುಖವಾಗಿ ಬೆಂಗಳೂರು ಹಾಗೂ ಬೆಳಗಾವಿಯಲ್ಲಿ 2 ಲಸಿಕೆ ಸಂಗ್ರಹ ವ್ಯವಸ್ಥೆಗಳಿವೆ. ಇದಲ್ಲದೆ, ಚಿತ್ರದುರ್ಗ, ಕಲಬುರಗಿ, ದಕ್ಷಿಣ ಕನ್ನಡ, ಮೈಸೂರು ಮತ್ತು ಬಾಗಲಕೋಟೆಯಲ್ಲಿ 5 ಪ್ರಾದೇಶಿಕ ಸಂಗ್ರಹ ವ್ಯವಸ್ಥೆ ಇದೆ. ಪ್ರತಿ ಜಿಲ್ಲೆಯಲ್ಲೂ ಒಂದು ಕಾರ್ಪೊರೇಷನ್ ಲಸಿಕೆ ಸಂಗ್ರಹ ವ್ಯವಸ್ಥೆ ಇದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 50 ಬ್ಲಾಕ್ ಇದೆ. ಒಟ್ಟು 2,767 ಕೋಲ್ಡ್ ಚೇನ್ ಪಾಯಿಂಟ್ ಗಳು ಇವೆ. ಇವೆಲ್ಲ ಮೂಲಸೌಕರ್ಯದೊಂದಿಗೆ ಲಸಿಕೆ ವಿತರಣೆ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿ 900 ಲಸಿಕೆ ಕ್ಯಾರಿಯರ್ ಗಳಿವೆ. ಲಸಿಕೆಯನ್ನು ಮೊದಲಿಗೆ ಪ್ರಾದೇಶಿಕ ಸಂಗ್ರಹ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ನಂತರ ಅಲ್ಲಿಂದ ಜಿಲ್ಲಾ ಮಟ್ಟಕ್ಕೆ ಕಳುಹಿಸಲಾಗುತ್ತದೆ. ಬೆಂಗಳೂರಿನಲ್ಲಿ ಎರಡು ವಾಕ್ – ಇನ್ ಕೂಲರ್ ಇದೆ. ಒಂದರಲ್ಲಿ 45 ಲಕ್ಷ ಡೋಸ್ ಸಂಗ್ರಹಿಸಲು ಅವಕಾಶವಿದೆ. ಇದೇ ರೀತಿ ಒಂದು ವಾಕ್- ಇನ್ ಫ್ರೀಜರ್ ಇದೆ. ಅದರಲ್ಲಿ 40 ಲಕ್ಷ ಡೋಸ್ ಸಂಗ್ರಹ ಸಾಮರ್ಥ್ಯವಿದೆ. ಕೇಂದ್ರ ಸರ್ಕಾರ ಇನ್ನೂ ಒಂದು ವಾಕ್- ಇನ್ ಫ್ರೀಜರ್ ನೀಡಲಿದೆ ಎಂದರು.

ರಾಜ್ಯದಲ್ಲಿ ಎಲ್ಲ ಬಗೆಯ ಸಿದ್ಧತೆ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ 13.90 ಲಕ್ಷ ಕೊರೊನಾ ಲಸಿಕೆ ಬರಲಿದೆ. 24 ಲಕ್ಷ ಸಿರಿಂಜ್ ಗಳು ಕೇಂದ್ರದಿಂದ ಈಗಾಗಲೇ ಬಂದಿವೆ. ರಾಜ್ಯಕ್ಕೆ ಒಟ್ಟು 24 ಲಕ್ಷ ಡೋಸ್ ಬರಲಿದೆ ಎಂದು ವಿವರಿಸಿದರು. ಮೊದಲಿಗೆ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಸಾರ್ವಜನಿಕರಿಗೆ ಲಸಿಕೆ ನೀಡಲು ಎರಡು ತಿಂಗಳು ಬೇಕಾಗಬಹುದು. ಪ್ರತಿಯೊಬ್ಬರಿಗೂ ಲಸಿಕೆ ಬೇಕೆ ಬೇಡವೇ ಎಂಬುದನ್ನು ತಜ್ಞರ ಸಲಹೆ ಮೇರೆಗೆ ಸರ್ಕಾರ ತೀರ್ಮಾನಿಸಲಿದೆ. ಸಾರ್ವಜನಿಕರಿಗೆ ಲಸಿಕೆ ನೀಡುವುದಾದರೂ ಮೊದಲಿಗೆ ವೃದ್ಧರು, ಅಶಕ್ತರಿಗೆ ನೀಡಲಾಗುವುದು ಎಂದರು.

ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿಯಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹಳೇ ಕಟ್ಟಡದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಅವತ್ಯವಿರುವ ಸಿರಿಂಜುಗಳು ಮುಂತಾದ ಉಪಕರಣಗಳ ದಾಸ್ತಾನು ಮತ್ತು ಶೇಖರಣೆಗೆ ಮಾಡಲಾಗಿರುವ ವ್ಯವಸ್ಥೆಗಳನ್ನು ಪರಿಶೀಲಿಸಲಾಯಿತು.@BSYBJP @DHFWKA pic.twitter.com/VZYLAIAgW5

— Dr Sudhakar K (Modi ka Parivar) (@DrSudhakar_) January 10, 2021

ವಿಮಾನ ಪ್ರಯಾಣಿಕರ ಮೇಲೆ ನಿಗಾ

ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರ ಮಾಹಿತಿಯನ್ನು ಸಮರ್ಪಕವಾಗಿ ಕಲೆಹಾಕಿ ಆರೋಗ್ಯದ ಮೇಲೆ ನಿಗಾ ಇರಿಸಲಾಗುತ್ತಿದೆ. ಬ್ರಿಟನ್‌ನಿಂದ ಬಂದ ವಿಮಾನದಲ್ಲಿ ಒಟ್ಟು 289 ಮಂದಿ ಇದ್ದರು. ಎಲ್ಲರ ಮಾದರಿ ಪಡೆದು ಪರೀಕ್ಷೆ ಮಾಡಿದ್ದು, ನಾಲ್ಕು ಮಂದಿಯ ಒಂದು ಪೂಲ್ʼನಲ್ಲಿ ಕೊರೊನಾ ಸೋಂಕು ಬಂದಿದೆ. ಯಾರು ರೋಗಿ ಎಂದು ನಿಖರವಾಗಿ ಪತ್ತೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಡಾ.ಸುಧಾಕರ್‌ ಹೇಳಿದರು.

Tags: covid vaccinecovid19dr k sudhakarkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

by cknewsnow desk
October 29, 2026
0

ರಾಹುಲ್ ಗಾಂಧಿ ಪಡೆಗೆ ಟಾಂಗ್ ಕೊಟ್ಟ ಪ್ರಧಾನಿ ನರೇಂದ್ರ ಮೋದಿ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

by cknewsnow desk
October 28, 2026
0

ಬೆಂಗಳೂರಿನಲ್ಲಿ 43.13% ಮತದಾರರ ಪ್ರಮಾಣ ಕುಸಿತ

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

by cknewsnow desk
October 25, 2026
0

ಹಾಲಿ ಮುಖ್ಯಮಂತ್ರಿ ವಿರುದ್ಧ ಕೇಂದ್ರ ಸಚಿವರ ಗಂಭೀರ ಆರೋಪ; ಈಗಿನ ಮಹಾನ್ ಮುಖ್ಯಮಂತ್ರಿಗಳೇ ಸ್ಟಿಂಗ್ ಮೂಲಪುರುಷ

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

by cknewsnow desk
October 25, 2026
0

ಸ್ಟಿಂಗ್ ಆಪರೇಶನ್ ಪ್ರಕರಣದಲ್ಲಿ ರಾಜ್ಯ ಸರ್ಕಾರದ್ದು ಇಬ್ಬಗೆ ನೀತಿ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ

ಸ್ಟಿಂಗ್ ವಿರುದ್ಧ ಕೋರ್ಟ್ ಮೊರೆ ಹೋದ ಸಿದ್ದರಾಮಯ್ಯ! ಇಂದು ಆದೇಶ ನಿರೀಕ್ಷೆ

ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

by cknewsnow desk
October 25, 2026
0

ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ; #kpsc ಹಗರಣದ ದಿಕ್ಕು ತಪ್ಪಿಸಲು ಪ್ರಿಯಾಂಕ್ ಖರ್ಗೆ ಒದ್ದಾಟ

ಬೆಂಗಳೂರು ಸುತ್ತಲಿನ ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು

10 ತಿಂಗಳಾದರೂ ಸಿಗದ ಭೂಮಿ; ರಾಜ್ಯದ ಕೈತಪ್ಪಲಿದೆಯಾ ಎಲೆಕ್ಟ್ರಿಕ್ ವಾಹನ ಪರೀಕ್ಷಾ ಕೇಂದ್ರ

by cknewsnow desk
October 22, 2026
0

ಬೇಸತ್ತು ಮುಖ್ಯಮಂತ್ರಿ ಡಿಕೆಶಿಗೆ ಪತ್ರ ಬರೆದ ಕೇಂದ್ರ ಸಚಿವ #HDK

Next Post
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಿಕ್ಷಣದ ಅವಧಿ 15 ವರ್ಷ; ಮಗುವಿನ 3ನೇ ವರ್ಷಕ್ಕೇ ಶಾಲೆಗೆ ದಾಖಲು

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ರಾಜ್ಯದಲ್ಲಿ ಸರಕಾರಿ ಪ್ರಾಥಮಿಕ ಶಿಕ್ಷಣದ ಅವಧಿ 15 ವರ್ಷ; ಮಗುವಿನ 3ನೇ ವರ್ಷಕ್ಕೇ ಶಾಲೆಗೆ ದಾಖಲು

Leave a Reply Cancel reply

Your email address will not be published. Required fields are marked *

Recommended

ಧೂಳಿನಿಂದ ಮೇಲೆದ್ದು ಬರುವೆ ಎಂದು ಗುಡುಗಿದ್ದರು ದೇವೇಗೌಡರು

ಧೂಳಿನಿಂದ ಮೇಲೆದ್ದು ಬರುವೆ ಎಂದು ಗುಡುಗಿದ್ದರು ದೇವೇಗೌಡರು

2 years ago
CEN ಪೊಲೀಸರ ಭರ್ಜರಿ ಭೇಟೆ; ಚಿಕ್ಕಬಳ್ಳಾಪುರ, ಕೋಲಾರ ಕಡೆಯ ಮುಗ್ಧ ಯುವತಿಯರನ್ನು ಯಾಮಾರಿಸಿ ದಿಲ್ಲಿಯಲ್ಲಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಬಂಗಾರಪೇಟೆ  ಖತರ್ನಾಕ್‌ ಮಹಿಳೆ ಕೊನೆಗೂ ಅಂದರ್‌

CEN ಪೊಲೀಸರ ಭರ್ಜರಿ ಭೇಟೆ; ಚಿಕ್ಕಬಳ್ಳಾಪುರ, ಕೋಲಾರ ಕಡೆಯ ಮುಗ್ಧ ಯುವತಿಯರನ್ನು ಯಾಮಾರಿಸಿ ದಿಲ್ಲಿಯಲ್ಲಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಬಂಗಾರಪೇಟೆ ಖತರ್ನಾಕ್‌ ಮಹಿಳೆ ಕೊನೆಗೂ ಅಂದರ್‌

6 years ago

Popular News

  • ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

    0 shares
    Share 0 Tweet 0
  • #SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

    0 shares
    Share 0 Tweet 0
  • ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

    0 shares
    Share 0 Tweet 0
  • ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

    0 shares
    Share 0 Tweet 0
  • ನನ್ನ ತಲೆಗೆ ಸ್ಟಿಂಗ್ ಕಟ್ಟಲು ಡಿಕೆಶಿ, ಪ್ರಿಯಾಂಕ್ ಖರ್ಗೆ ಸಂಚು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

ಕರ್ನಾಟಕದಲ್ಲಿ ಸೊನ್ನೆ ಸಂಪಾದನೆ; ಬ್ಯಾಲೆಟ್ ಪೇಪರ್‌ ಬೇಕೆಂದು ಹಠ ಹಿಡಿದ ಕಾಂಗ್ರೆಸ್ mlc ಚುನಾವಣೆಯಲ್ಲಿ ಗೆದ್ದ ಸೀಟುಗಳೆಷ್ಟು?

October 29, 2026
#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

#SIR ರಾಜ್ಯದಲ್ಲಿ 99.32 ಲಕ್ಷ ಮತದಾರರ ಹೆಸರಿಲ್ಲ

October 28, 2026
ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

ದೇವೇಗೌಡರ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ₹600 ಕೋಟಿಗೆ ಡೀಲ್ ಕೊಟ್ಟರಾ ಡಿಕೆಶಿ!!

October 25, 2026
ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

ಸ್ಟಿಂಗ್ ಮಾಡಿದವರಿಗೆ ನೋಟಿಸ್, ಅನ್ಯಪಕ್ಷದವರ ಅರೆಸ್ಟ್!

October 25, 2026

Covid 19

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

ಸತ್ಯಸಾಯಿ ಗ್ರಾಮದಲ್ಲಿ ನವರಾತ್ರಿ ಪೂಜೆಯಲ್ಲಿ ಪಾಲ್ಗೊಂಡ HDK

October 16, 2026
ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ