• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CKPLUS

ತಮ್ಮನ್ನು ಅಧ್ಯಾತ್ಮದತ್ತ ಪ್ರಭಾವಿತಗೊಳಿಸಿದ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನವೇ ಗುರುವಿನಲ್ಲಿ ಐಕ್ಯರಾದರಾ ಸ್ವಾಮಿ ಹರ್ಷಾನಂದರು

cknewsnow desk by cknewsnow desk
January 12, 2021
in CKPLUS, STATE
Reading Time: 1 min read
0
ತಮ್ಮನ್ನು ಅಧ್ಯಾತ್ಮದತ್ತ ಪ್ರಭಾವಿತಗೊಳಿಸಿದ ಸ್ವಾಮಿ ವಿವೇಕಾನಂದರ 158ನೇ ಜನ್ಮದಿನವೇ ಗುರುವಿನಲ್ಲಿ ಐಕ್ಯರಾದರಾ ಸ್ವಾಮಿ ಹರ್ಷಾನಂದರು
923
VIEWS
FacebookTwitterWhatsuplinkedinEmail

ಬೆಂಗಳೂರು: ಇಡೀ ರಾಜ್ಯವೇ ಸ್ವಾಮಿ ವಿವೇಕಾನಂದರ ಸ್ಮರಣೆಯಲ್ಲಿದ್ದಾಗಲೇ ಮಂಗಳವಾರ ಬರಸಿಡಿಲಿನಂಥ ಸುದ್ದಿಯೊಂದು ಬಂದಿದೆ. ಬಸವನಗುಡಿಯ ಶ್ರೀ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದ ಮಹಾರಾಜ್ ಅವರು ಮಂಗಳವಾರ ಮಧ್ಯಾಹ್ನ 1.05ರ ಹೊತ್ತಿಗೆ ವಿಧಿವಶರಾಗಿದ್ದಾರೆ. ಅವರಿಗೆ 91 ವರ್ಷ ಆಗಿತ್ತು.

ಶ್ರೀ ರಾಮಕೃಷ್ಣ ಮಠದ ವಿದ್ಯಾರ್ಥಿ ಮಂದಿರದಲ್ಲಿ ಇಂದು ಸಂಜೆ 5ರಿಂದ ರಾತ್ರಿ 8 ಗಂಟೆಯವರೆಗೆ ಹಾಗೂ ನಾಳೆ, ಅಂದರೆ ಜನವರಿ 13 ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸ್ವಾಮಿ ಹರ್ಷಾನಂದ ಅವರು ಬೆಂಗಳೂರಿನ ಬಸವನಗುಡಿಯ ರಾಮಕೃಷ್ಣ ಆಶ್ರಮದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರಲ್ಲದೆ, ಬಾಲ್ಯದಿಂದಲೇ ಸ್ವಾಮಿ ವಿವೇಕಾನಂದರ ವಿಚಾರಧಾರೆಗಳ ಪ್ರಭಾವಕ್ಕೆ ಒಳಗಾದವರು. 1948ರಲ್ಲೇ ಅಂದರೆ, ಅವರಿಗೆ 15 ವರ್ಷ ತುಂಬಿದಾಗಲೇ ರಾಮಕೃಷ್ಣಾಶ್ರಮದ ಸಂಪರ್ಕಕ್ಕೆ ಬಂದರು. ಅಂದ ಹಾಗೆ, ಸ್ವಾಮಿ ಹರ್ಷಾನಂದರು ಮೂಲತಃ ಬೆಂಗಳೂರಿನ ಮಲ್ಲೇಶ್ವರದವರು. ಅವರು ಜನಿಸಿದ್ದು 1931ರಲ್ಲಿ.

ಜಿಜ್ಞಾಸೆಗಳಿಂದ ಅರಳಿದ ಅಧ್ಯಾತ್ಮ ಶಿಖರ

ಅಧ್ಯಾತ್ಮ ಜಗತ್ತಿನ ಮೇರು ಸದೃಶವಾಗಿದ್ದ ಸ್ವಾಮಿ ಹರ್ಷಾನಂದರ ಆರಂಭದ ದಿನಗಳಲ್ಲಿ ಧರ್ಮದ ಬಗ್ಗೆ ಸಾಕಷ್ಟು ಗೊಂದಲ ಅವರ ಮನಸ್ಸಿನಲ್ಲಿ ಮನೆ ಮಾಡಿತ್ತು. ಧರ್ಮದ ಎಲ್ಲಾ ಮಜಲುಗಳ ಬಗ್ಗೆ ಅರಿಯುವ ಉದ್ದೇಶ ಅವರಿಗೆ ಉತ್ಕಟವಾಗಿತ್ತು. ಅದೇ ಸಂದರ್ಭದಲ್ಲಿ ಅಲ್ಲಲ್ಲಿ ನಡೆಯುತ್ತಿದ್ದ ಸತ್ಸಂಗಗಳಿಗೆ ತಪ್ಪಿಸದೇ ತೆರಳುತ್ತಿದ್ದ ಅವರು ತಮ್ಮಲ್ಲಿದ್ದ ಧಾರ್ಮಿಕ ಜಿಜ್ಞಾಸೆಗಳಿಗೆ ಉತ್ತರ ಕಂಡುಕೊಳ್ಳುತ್ತಾ ಬಂದರು. ಮುಖ್ಯವಾಗಿ ಹಿಂದೂ ಧರ್ಮದ ಬಗ್ಗೆ ಅವರಿಗಿದ್ದ ಎಲ್ಲ ಜಿಜ್ಞಾಸೆಗಳು ಹೀಗೆ ಪರಿಹಾರವಾಗಿದ್ದವು.

ಇದೆಲ್ಲಾ ಆದ ಮೇಲೆ ಸ್ವಾಮಿ ಹರ್ಷಾನಂದರು 1954ರಲ್ಲಿ ರಾಮಕೃಷ್ಣಾಶ್ರಮಕ್ಕೆ ಸೇರಿದರು. ತಮ್ಮ ಇಡೀ ಬದುಕನ್ನು ಸಮಾಜದ ಸೇವೆಗೆ ಮುಡಿಪಿಟ್ಟರಲ್ಲದೆ, 1962ರಲ್ಲಿ ಸನ್ಯಾಸ ದೀಕ್ಷೆ ಸ್ವೀಕರಿಸಿದರು. ತಮ್ಮ ಸರಳತೆ, ತಾವು ನಂಬಿದ ವಿವೇಕಾನಂದರ ವಿಚಾರಗಳನ್ನು ಅತ್ಯಂತ, ಶ್ರದ್ಧೆ, ಭಕ್ತಿಯಿಂದ ಪ್ರಚಾರ ಮಾಡಿದರು.

ಕೊಲ್ಕತಾದ ಬೇಲೂರ್ ಮಠದಲ್ಲಿ ತರಬೇತಿಗೆಂದು ಸೇರಿಕೊಂಡು ಅಲ್ಲಿಯೇ ಅಧ್ಯಾಪಕರಾಗಿ ಕೆಲಸ ಮಾಡಿದರು. ದೇಶದ ಉದ್ದಗಲಕ್ಕೂ ಅನೇಕ ಸೇವಾ ಕಾರ್ಯಕ್ರಮಗಳಲ್ಲಿ ಅವಿರತವಾಗಿ ಪಾಲ್ಗೊಂಡಿದ್ದ ಹರ್ಷಾನಂದರು, ಆಂಧ್ರ ಪ್ರದೇಶದಲ್ಲಿ ಚಂಡಮಾರುತ ಬಂದಾಗ ಅವರು ಪರಿಹಾರ ಕೇಂದ್ರದಲ್ಲೂ ಹಗಲಿರಳು ಸೇವೆ ಮಾಡಿದ್ದರು. 1989ರಲ್ಲಿ ಬೆಂಗಳೂರಿನ ರಾಮಕೃಷ್ಣ ಆಶ್ರಮಕ್ಕೆ ಬಂದ ಅವರು, ಆಗಿನಿಂದ ತಮ್ಮ ಕೊನೆಕ್ಷಣದವರೆಗೂ ಅಲ್ಲಿಯೇ ಇದ್ದರು.

ಮಹಾನ್ ಜ್ಞಾನಿ

ಸ್ವಾಮಿ ಹರ್ಷಾನಂದರು ಅನೇಕ ಭಾಷೆಗಳಲ್ಲಿ ಅಗಾಧ ಪಾಂಡಿತ್ಯ ಹೊಂದಿದ್ದ ಮಹಾನ್‌ ಜ್ಞಾನಿಯಾಗಿದ್ದರು. ಕನ್ನಡ, ಇಂಗ್ಲೀಷ್‌, ಸಂಸ್ಕೃತ ಸೇರಿದಂತೆ ಇನ್ನು ಹಲವು ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡಬಲ್ಲವರು, ಬರೆಯಬಲ್ಲವರೂ ಆಗಿದ್ದರು. ಅನೇಕ ಕೃತಿಗಳನ್ನು ಅವರು ರಚನೆ ಮಾಡಿದ್ದಾರೆ. ಹಿಂದೂ ಧರ್ಮ ಕುರಿತ ವಿಶ್ವಕೋಶವನ್ನು ಅವರು ಬರೆಯುತ್ತಿದ್ದರು. ಶಾಸ್ತ್ರೀಯ ಸಂಗೀತವನ್ನು ಬಹುವಾಗಿ ಇಷ್ಟಪಡುತ್ತಿದ್ದ ಸ್ವಾಮಿ ಹರ್ಷಾನಂದರು ಭಜನೆಗಳನ್ನು ಹಾಡುತ್ತಿದ್ದರು, ಅದರಲ್ಲೂ ಹಿಂದೂಸ್ತಾನಿ ಸಂಗೀತ ಶೈಲಿಯಲ್ಲಿ ಅಮೋಘವಾಗಿ ಹಾಡಿದ್ದಾರೆ.

ಸ್ವಾಮಿ ಹರ್ಷಾನಂದರ ದಿವ್ಯಜ್ಞಾನದ ಫಲವಾಗಿ ಮೂರು ಸಂಪುಟಗಳ ʼವಿವರಣಾತ್ಮಕ ಹಿಂದೂ ವಿಶ್ವಕೋಶʼ ಈಗಾಗಲೇ ಪ್ರಕಟವಾಗಿದೆ. ಹಿಂದೂ ಧರ್ಮ ಸಮಗ್ರ ವಿಚಾರಗಳನ್ನು ಈ ಮಹಾನ್‌ ಸಂಪುಟಗಳು ಒಳಗೊಂಡಿವೆ. ಪ್ರತಿ ಸಂಪುಟವೂ 700 ಪುಟಗಳಷ್ಟಿದೆ ಎಂದರೆ, ಮಹತ್ಕಾರ್ಯಕ್ಕಾಗಿ ಸ್ವಾಮೀಜಿ ಅವರ ಶ್ರಮ ಯಾವ ಮಟ್ಟದ್ದು ಎಂಬುದು ಅರ್ಥವಾಗುತ್ತದೆ.

ಮಹಾ ಜ್ಞಾನಿ, ಸಂತ ಲೋಕಕ್ಕೆ ತಮ್ಮ ಸರಳತೆ, ಸಜ್ಜನಿಕೆಯಿಂದ ಮುಗಿಲೆತ್ತರದ ಗೌರವ ತಂದುಕೊಟ್ಟಿದ್ದ ಸ್ವಾಮಿ ಹರ್ಷಾನಂದರು ಅಳಿದ ಮೇಲೂ ಉಳಿಯುವ ಸಂತರು.

Tags: ramakrishna muttSwami HarshanandaSwami Harshananda no more
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
#GoodNews ಕೊಟ್ಟ ಉಪ ಮುಖ್ಯಮಂತ್ರಿ: ಸ್ವಾಮಿ ವಿವೇಕಾನಂದರ ಪ್ರೇರಣೆ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ10 ದಶಲಕ್ಷ ಉದ್ಯೋಗ ಸೃಷ್ಟಿಗೆ ಪಣತೊಟ್ಟ ಸರಕಾರ

#GoodNews ಕೊಟ್ಟ ಉಪ ಮುಖ್ಯಮಂತ್ರಿ: ಸ್ವಾಮಿ ವಿವೇಕಾನಂದರ ಪ್ರೇರಣೆ, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ10 ದಶಲಕ್ಷ ಉದ್ಯೋಗ ಸೃಷ್ಟಿಗೆ ಪಣತೊಟ್ಟ ಸರಕಾರ

Leave a Reply Cancel reply

Your email address will not be published. Required fields are marked *

Recommended

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

ಶಿಕ್ಷಣದಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಹೇಗೆ? ಡಾ.ಕಸ್ತೂರಿ ರಂಗನ್‌ ಅವರು ಹೇಳಿದ್ದೇನು?

5 years ago
ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

ಉಳುವವನಿಂದ ಉಳ್ಳವನಿಗೆ ಭೂಮಿ! ಭೂ ಸುಧಾರಣೆ ಕಾಯ್ದೆ ತಿದ್ದುಪಡಿಯಲ್ಲಿ ಏನಿದೆ ಸ್ವಾಮಿ?

6 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ