• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ಚಿಕ್ಕಬಳ್ಳಾಪುರ, ಕೋಲಾರ ಸೇರಿ ರಾಜ್ಯದ 243 ಕಡೆ ಶನಿವಾರ ಕೊರೊನಾ ಲಸಿಕೆ ವಿತರಣೆ; ವದಂತಿಗಳನ್ನು ನಂಬಬೇಡಿ ಪ್ಲೀಸ್‌ ಎಂದ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
January 15, 2021
in COVID-19, STATE
Reading Time: 1 min read
0
ನಮ್ಮ ದೇಶದಲ್ಲೇ ತಯಾರಾದ ಕೊರೊನಾ ಲಸಿಕೆ ಕುರಿತು ಅಗೌರವ ಬೇಡ; ಭಾರತ್ ಬಯೋಟೆಕ್ ನಂಬಿಕೆಗೆ ಅರ್ಹವಾದ ಕಂಪನಿ ಎಂದ ಡಾ.ಕೆ.ಸುಧಾಕರ್
914
VIEWS
FacebookTwitterWhatsuplinkedinEmail

237 ಕಡೆ ಕೋವಿಶೀಲ್ಡ್, 6 ಕಡೆ ಕೋವ್ಯಾಕ್ಸಿನ್; ಬೆಂಗಳೂರಿನಲ್ಲಿ ಲಸಿಕೆ ವಿತರಣೆಗೆ ಪ್ರಧಾನಿ ಚಾಲನೆ, 8,14,500 ಡೋಸ್ ಲಭ್ಯ

ಬೆಂಗಳೂರು: ಚಿಕ್ಕಬಳ್ಳಾಪುರ, ಕೋಲಾರ ಸೇರಿ ರಾಜ್ಯದ 243 ಕಡೆಗಳಲ್ಲಿ ಶನಿವಾರ (ಜನವರಿ 16) ಕೊರೊನಾ ಲಸಿಕೆ ನೀಡಲಾಗುತ್ತಿದ್ದು, ಬೆಂಗಳೂರಿನಲ್ಲಿ ಮೆಡಿಕಲ್ ಕಾಲೇಜು ಸೇರಿ 10 ಕಡೆಗಳಲ್ಲಿ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರು ಲಸಿಕೆ ವಿತರಣೆಗೆ ಚಾಲನೆ ನೀಡಲಿದ್ದಾರೆ. ಬೆಂಗಳೂರು ಒಂದರಲ್ಲೇ 10 ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುವುದು. ಸೇಂಟ್ ಜಾನ್ಸ್ ಮೆಡಿಕಲ್ ಕಾಲೇಜು ಸೇರಿದಂತೆ ಖಾಸಗಿ ಆಸ್ಪತ್ರೆಗಳಲ್ಲೂ ನೀಡಲಾಗುವುದು. ಕೋವಿಶೀಲ್ಡ್ ಲಸಿಕೆಯನ್ನು ರಾಜ್ಯದ 237 ಕೇಂದ್ರ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಬಳ್ಳಾರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ ಕೇಂದ್ರಗಳಲ್ಲಿ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಲಸಿಕೆ ನೀಡಲು ಮೊದಲಿಗೆ ಜನಪ್ರತಿನಿಧಿಗಳನ್ನೇ ಆರಿಸಬಹುದಿತ್ತು. ಆದರೆ ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವವರಿಗೆ ಮೊದಲ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುತ್ತಿದೆ. ಬಳಿಕ ಇತರೆ ರೋಗಗಳಿಂದ ಬಳಲುವವರಿಗೆ ಲಸಿಕೆ ನೀಡಲಾಗುವುದು ಎಂದರು.

7,17,439 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಮೊದಲ ದಿನ 24,300 ಮಂದಿಗೆ ನೀಡುವ ಗುರಿ ಇದೆ. ನಮ್ಮಲ್ಲಿ ಒಟ್ಟು 8,14,500 ಡೋಸ್ ಲಸಿಕೆ ಲಭ್ಯವಿದ್ದು, ಒಂದು ವಾರದೊಳಗೆ ಮೊದಲ ಹಂತದ ವಿತರಣೆ ಪ್ರಕ್ರಿಯೆ ಮುಗಿಯುವ ಸಾಧ್ಯತೆ ಇದೆ ಎಂದರು.

ನಾಳೆಯಿಂದ ರಾಜ್ಯಾದ್ಯಂತ ಕೊರೊನಾ ಲಸಿಕೆ ವಿತರಣೆ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದು ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಲಾಯಿತು.(1/2)#LargestVaccineDrive pic.twitter.com/d55G4ZfkgX

— Dr Sudhakar K (Modi ka Parivar) (@DrSudhakar_) January 15, 2021

ಸರಕಾರಿ ಮಾಹಿತಿ ಮಾತ್ರ ನಂಬಿ

ಲಸಿಕೆಯಿಂದ ಅಡ್ಡ ಪರಿಣಾಮ ಉಂಟಾದರೆ, ಸ್ಥಳದಲ್ಲೇ ತುರ್ತು ಚಿಕಿತ್ಸೆ ವ್ಯವಸ್ಥೆ ಇದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಿ ಜನಸಾಮಾನ್ಯರನ್ನು ತಪ್ಪು ದಾರಿಗೆ ಎಳೆಯಲಾಗುತ್ತಿದೆ. ಸರಕಾರದ ಸಾಮಾಜಿಕ ಜಾಲತಾಣಗಳಿಂದ ಬಿಡುಗಡೆ ಮಾಡುವ ಮಾಹಿತಿ ಮಾತ್ರ ಅಧಿಕೃತ ಹಾಗೂ ಸತ್ಯ ಎಂದು ಸ್ಪಷ್ಟಪಡಿಸಿದರು ಸಚಿವರು.

ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿ, ಪೊಲೀಸರು, ಪೌರಕಾರ್ಮಿಕರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಲಸಿಕೆ ಸಂಪೂರ್ಣ ಸುರಕ್ಷಿತ. ಮೊದಲ ಡೋಸ್ ಪಡೆದ 28 ದಿನಗಳ ನಂತರ 2ನೇ ಡೋಸ್ ನೀಡಲಾಗುತ್ತದೆ. ಜನರು ಯಾವುದೇ ಆತಂಕವಿಲ್ಲದೆ ವಿಶ್ವಾಸದಿಂದ ಲಸಿಕೆ ಪಡೆಯಬಹುದು ಎಂದು ಡಾ.ಸುಧಾಕರ್‌ ತಿಳಿಸಿದರು.

ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3,210 ಐಎಲ್ ಆರ್, 3,312 ಕೋಲ್ಡ್ ಬಾಕ್ಸ್, 46,591 ಲಸಿಕೆ ಕ್ಯಾರಿಯರ್, 2,25,749 ಐಸ್ ಪ್ಯಾಕ್ ಇದೆ ಎಂದು ಅವರು ಮಾಹಿತಿ ನೀಡಿದರು.

Tags: covid vaccinecovid19covid19 karnatakadr k sudhakar
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 9 ಕೇಂದ್ರಗಳಲ್ಲಿ 853 ಜನರಿಗೆ ಕೋವಿಡ್‌ ವ್ಯಾಕ್ಸಿನೇಷನ್; ಲೋಪದೋಷ ಇರಬಾರದು ಎಂದು  ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 9 ಕೇಂದ್ರಗಳಲ್ಲಿ 853 ಜನರಿಗೆ ಕೋವಿಡ್‌ ವ್ಯಾಕ್ಸಿನೇಷನ್; ಲೋಪದೋಷ ಇರಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ ಜಿಲ್ಲಾಧಿಕಾರಿ

Leave a Reply Cancel reply

Your email address will not be published. Required fields are marked *

Recommended

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಕರ್ನಾಟಕ ಭಾರತದ ಬಯೋಟೆಕ್ನಾಲಜಿ ರಾಜಧಾನಿ ಎಂದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

5 years ago
ದಿನ 2: ಸಿಇಟಿ ಪರೀಕ್ಷೆ ಸುಖಾಂತ್ಯ

ಸಿಇಟಿ ಕೌನ್ಸೆಲಿಂಗ್: ಜನವರಿ 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಲಿಗೆ ಪತ್ರ ಬರೆದ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ