• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

ರಾಜ್ಯದಲ್ಲಿ ಮೊದಲ ಲಸಿಕೆ ಪಡೆದ ಬಿಡದಿಯ ನಾಗರತ್ನ; ಇದು ಐತಿಹಾಸಿಕ ಕ್ಷಣ ಎಂದ ಹೆಲ್ತ್‌ ಮಿನಿಸ್ಟರ್‌, ಅಡ್ಡ ಪರಿಣಾಮವಿಲ್ಲ-ಅಪಪ್ರಚಾರವೂ ಸಲ್ಲ ಎಂದು ಮನವಿ ಮಾಡಿದ ಡಾಕ್ಟರ್

cknewsnow desk by cknewsnow desk
January 16, 2021
in COVID-19, STATE
Reading Time: 1 min read
0
ರಾಜ್ಯದಲ್ಲಿ ಮೊದಲ ಲಸಿಕೆ ಪಡೆದ ಬಿಡದಿಯ ನಾಗರತ್ನ; ಇದು ಐತಿಹಾಸಿಕ ಕ್ಷಣ ಎಂದ ಹೆಲ್ತ್‌ ಮಿನಿಸ್ಟರ್‌, ಅಡ್ಡ ಪರಿಣಾಮವಿಲ್ಲ-ಅಪಪ್ರಚಾರವೂ ಸಲ್ಲ ಎಂದು ಮನವಿ ಮಾಡಿದ ಡಾಕ್ಟರ್
911
VIEWS
FacebookTwitterWhatsuplinkedinEmail

243 ಸ್ಥಳಗಳಲ್ಲಿ ಲಸಿಕೆ, 24,300 ಆರೋಗ್ಯ ಸಿಬ್ಬಂದಿಗೆ ಮೊದಲ ದಿನ ಲಸಿಕೆ ನೀಡುವ ಗುರಿ

ಬೆಂಗಳೂರು: ಟೀಕೆ ಟಿಪ್ಪಣಿಗಳ ನಡುವೆಯೇ ಕೋವಿಡ್‌ ವ್ಯಾಸಿನೇಶನ್‌ ಮೊದಲ ಹಂತದ ಪ್ರಕ್ರಿಯೆ ನಿರ್ವಿಘ್ನವಾಗಿ ಮುಗಿದಿದ್ದು, ರಾಜ್ಯ ಸರಕಾರ ನೆಮ್ಮದಿಯ ನಿಟ್ಟುಸಿರು ಬಿಟ್ಟಿದೆ.

ಅಡ್ಡ ಪರಿಣಾಮ ಬೀರುತ್ತದೆ, ಡಿ ಗ್ರೂಪ್‌ ನೌಕಕರಿಗೆ ಮೊದಲು ಚಿಕಿತ್ಸೆ ನೀಡ ಸರಕಾರ ಆಟವಾಡುತ್ತಿದೆಯಾ ಎಂಬೆಲ್ಲ ಟೀಕೆಗಳ ನಡುವೆ ಆರೋಗ್ಯ ಇಲಾಖೆಯ ಕೋವಿಡ್‌ ವಾರಿಯರ್‌ಗಳಿಗೆ ಮೊದಲ ದಿನವೇ ವ್ಯಾಕ್ಸಿನ್‌ ನೀಡಲಾಗಿದೆ.

ಈ ನಡುವೆ ಬೆಂಗಳೂರಿನಲ್ಲಿ ಲಸಿಕೆ ನೀಡಿದ ಕ್ಷಣವನ್ನು ಐತಿಹಾಸಿಕ ಎಂದು ಬಣ್ಣಿಸಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಈ ಅಭಿಯಾನ ಇಡೀ ಜಗತ್ತಿನಲ್ಲೇ ದೊಡ್ಡ ದಾಖಲೆ ಎಂದಿದ್ದಾರೆ.

ಬೆಂಗಳೂರು ವೈದ್ಯಕೀಯ ಕಾಲೇಜಿನ ಪಿಎಂಎಸ್ ಎಸ್‍ವೈ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ, ಬಿಡದಿಯ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡಲಾಯಿತು.

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಇಂದು ಮುಖ್ಯಮಂತ್ರಿ @BSYBJP ರವರು ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ಕೆ ಚಾಲನೆ ನೀಡಿದರು. ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ಶ್ರೀಮತಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ರಾಜ್ಯಾದ್ಯಂತ ಲಸಿಕೆ ವಿತರಣೆ ಅಧಿಕೃತವಾಗಿ ಚಾಲನೆ ನೀಡಲಾಯಿತು. (1/2)#LargestVaccinationDrive pic.twitter.com/JJMiuou9c2

— CM of Karnataka (@CMofKarnataka) January 16, 2021

ನಂತರ ಮಾತನಾಡಿದ ಸಚಿವರು, ಇದು ಐತಿಹಾಸಿಕ ದಿನವಾಗಿದ್ದು, ದಾಖಲೆಯಂತಿದೆ. ಬೇರೆ ರೋಗಗಳಿಗೆ ಲಸಿಕೆ ಪಡೆಯಲು ವರ್ಷಗಳು ತಗುಲಿದೆ. ಆದರೆ ಹತ್ತೇ ತಿಂಗಳಲ್ಲಿ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಲಾಗಿದೆ. ಮೊದಲು ಸಂಶೋಧಕರಿಗೆ, ಸಂಸ್ಥೆಗಳಿಗೆ ಭಾರತೀಯರು ಆಭಾರಿಯಾಗಿದ್ದಾರೆ. ಇವರಿಗೆ ಸಲಹೆ ನೀಡಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಾಗೂ ರಾಜ್ಯದಲ್ಲಿ ಮಾರ್ಗದರ್ಶನ ನೀಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಧನ್ಯವಾದಗಳು ಎಂದರು.

ರಾಜ್ಯದ 243 ಸ್ಥಳಗಳಲ್ಲಿ ಕೊರೊನಾ ಲಸಿಕೆ ವಿತರಣೆಗೆ ವ್ಯವಸ್ಥೆ ಮಾಡಿದ್ದು, ಇವತ್ತು ಒಂದೇ ದಿನ 24,300 ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುವುದು. ಸ್ವಚ್ಛತಾ ಸಿಬ್ಬಂದಿ ನಾಗರತ್ನ, ತಾಂತ್ರಿಕ ಸಲಹಾ ಸಮಿತಿಯ 70 ವರ್ಷದ ವೈದ್ಯರು, ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಡಾ.ಸುದರ್ಶನ್ ಬಲ್ಲಾಳ್ ಲಸಿಕೆ ಪಡೆದಿದ್ದಾರೆ. ಖ್ಯಾತ ವೈದ್ಯರು ಲಸಿಕೆ ಪಡೆಯುವ ಮೂಲಕ ಸಾರ್ವಜನಿಕರಲ್ಲಿರುವ ಅಂಜಿಕೆ ನಿವಾರಿಸಲಾಗುತ್ತಿದೆ. ಈ ಲಸಿಕೆ ಅತ್ಯಂತ ಸಮರ್ಪಕವಾಗಿರುವುದಕ್ಕೆ ವೈದ್ಯರು ಲಸಿಕೆ ಪಡೆದಿದ್ದಾರೆ ಎಂಬುದನ್ನು ಜನರು ತಿಳಿಯಬೇಕು ಎಂದರು.

ಸರ್ಕಾರಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವ ಮಾಹಿತಿ ಮಾತ್ರ ಅಧಿಕೃತವಾಗಿದೆ. ಬೇರೆ ಕಡೆ ಪ್ರಕಟಿಸುವ ತಪ್ಪು ಮಾಹಿತಿಯನ್ನು ಜನರು ನಂಬಬಾರದು. ಅಡ್ಡ ಪರಿಣಾಮ ಉಂಟಾದರೆ ತಕ್ಷಣ ಸೂಕ್ತ ಚಿಕಿತ್ಸೆ ಲಭ್ಯವಿದೆ. ಕ್ಲಿನಿಕಲ್ ಟ್ರಯಲ್ ನಲ್ಲೇ 20-30 ಸಾವಿರ ಜನರ ಮೇಲೆ ಪ್ರಯೋಗ ಮಾಡಲಾಗಿದೆ. ಆದ್ದರಿಂದ ಆತಂಕ ಬೇಕಿಲ್ಲ. ವಿದೇಶಗಳಲ್ಲೂ ಈ ಲಸಿಕೆಗೆ ಬೇಡಿಕೆಯಿದ್ದು, ಅತ್ಯಂತ ಕಡಿಮೆ ದರದ ಲಸಿಕೆಯಾಗಿದೆ. ಕೇವಲ 210 ರೂ. ನಲ್ಲಿ ಲಸಿಕೆ ಹಾಕಿಸಿಕೊಳ್ಳಬಹುದು. ವಿದೇಶಗಳಲ್ಲಿ 2-3 ಸಾವಿರ ರೂ. ದರವಿದೆ ಎಂದರು.

ಮೊದಲ ಹಂತದಲ್ಲಿ ಆರೋಗ್ಯ ಸಿಬ್ಬಂದಿಗೆ, ಎರಡನೇ ಹಂತದಲ್ಲಿ ಕೋಮಾರ್ಬಿಡಿಟಿ ಇರುವವರಿಗೆ ಲಸಿಕೆ ನೀಡಲಾಗುವುದು ಎಂದರು.

ರಾಜಕೀಯ ಬೇಡವೆಂದು ಮನವಿ

ವಿರೋಧ ಪಕ್ಷಗಳು ಲಸಿಕೆ ವಿಚಾರವನ್ನು ರಾಜಕೀಯ ವಿಚಾರ ಮಾಡಿರುವುದಕ್ಕೆ ವಿಷಾದವಾಗಿದೆ. ಪ್ರತಿಪಕ್ಷಗಳು ಇಷ್ಟೊಂದು ಕೆಳಮಟ್ಟಕ್ಕೆ ಇಳಿಯಬಾರದು. ಈ ಲಸಿಕೆ ಪಡೆಯುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿದರು. ಈಗ ಲಸಿಕೆ ಪಡೆದವರಿಗೆ ಯಾವುದೇ ಅಡ್ಡ ಪರಿಣಾಮ ಆಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದರು.

ಜಯನಗರ ಸಾರ್ವಜನಿಕ ಆಸ್ಪತ್ರೆ, ಸೇಂಟ್ ಜಾನ್ಸ್ , ಕೆ.ಆರ್.ಪುರ ಜನರಲ್ ಆಸ್ಪತ್ರೆಗಳಲ್ಲಿ ಸಚಿವರು ಲಸಿಕೆ ವಿತರಣೆ ಪ್ರಕ್ರಿಯೆಯ ಪರಿಶೀಲನೆ ನಡೆಸಿದರು.

ಲಸಿಕೆಯನ್ನು ಮೊದಲಿಗೆ ನಾನು ಕೂಡ ಪಡೆಯಬೇಕೆಂದಿದ್ದೆ. ಆದರೆ ಮೊದಲ ಹಂತದಲ್ಲಿ ಕೊರೊನಾ ಯೋಧರಿಗೆ ನೀಡಬೇಕೆಂದು ಪ್ರಧಾನಿಗಳು ಸೂಚಿಸಿದ್ದಾರೆ. ಲಸಿಕೆ ವಿತರಣೆಗೆ ಇನ್ನಷ್ಟು ವ್ಯವಸ್ಥೆ ಮಾಡಲಾಗುವುದು. ಒಂದು ವಾರದಲ್ಲೇ ಆರೋಗ್ಯ ಸಿಬ್ಬಂದಿಗೆ ಲಸಿಕೆ ವಿತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದಿರುವ ಸಚಿವರು, ಕಾಂಗ್ರೆಸ್ ನವರು ವಿಐಪಿ ಸಂಸ್ಕೃತಿಯಿಂದ ಹೊರಬರುವುದಿಲ್ಲ. ಅವರಿಗೆ ಇನ್ನೂ ಬುದ್ಧಿ ಬಂದಿಲ್ಲ. ಲಸಿಕೆಯಿಂದ ಯಾವುದೇ ಅಡ್ಡ ಪರಿಣಾಮವಾಗಿಲ್ಲ. ಜನರು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮನವಿ ಮಾಡಿದ್ದಾರೆ.

Tags: covid19covid19 vaccinationkarnataka
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋಲಾರ ಜಿಲ್ಲೆಯಲ್ಲಿ 375 ಕೋವಿಡ್‌ ಯೋಧರಿಗೆ ಲಸಿಕೆ; ಅಡ್ಡ ಪರಿಣಾಮ ಇಲ್ಲ

ಕೋಲಾರ ಜಿಲ್ಲೆಯಲ್ಲಿ 375 ಕೋವಿಡ್‌ ಯೋಧರಿಗೆ ಲಸಿಕೆ; ಅಡ್ಡ ಪರಿಣಾಮ ಇಲ್ಲ

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ