• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆ ಯಶಸ್ವಿ ಟೇಕಾಫ್;‌ ಡಿ ಗ್ರೂಪ್‌ ಉದ್ಯೋಗಿ ಚಂದ್ರಕಲಾ ಅವರಿಗೆ ಕೋವಿಡ್‌ನ ಮೊದಲ ಲಸಿಕೆ

cknewsnow desk by cknewsnow desk
January 16, 2021
in CHIKKABALLAPUR, COVID-19
Reading Time: 1 min read
0
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ವ್ಯಾಕ್ಸಿನೇಶನ್‌ ಪ್ರಕ್ರಿಯೆ ಯಶಸ್ವಿ ಟೇಕಾಫ್;‌ ಡಿ ಗ್ರೂಪ್‌ ಉದ್ಯೋಗಿ ಚಂದ್ರಕಲಾ ಅವರಿಗೆ ಕೋವಿಡ್‌ನ ಮೊದಲ ಲಸಿಕೆ
916
VIEWS
FacebookTwitterWhatsuplinkedinEmail
  • ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆಯಲ್ಲಿ `ಡಿ’ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿರುವ ಚಂದ್ರಕಲಾ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ಜಿಲ್ಲಾ ಮಟ್ಟದ ಲಸಿಕಾ ಅಭಿಯಾನಕ್ಕೆ ಜಿಲ್ಲಾಧಿಕಾರಿ ಆರ್.ಲತಾ ಅವರು ಚಾಲನೆ ನೀಡಿದರು.

ಪ್ರಥಮ ಹಂತದಲ್ಲಿ 825 ಮಂದಿಗೆ ಲಸಿಕೆ; 4175 ಜನರಿಗೆ ಗುರುವಾರ ವ್ಯಾಕ್ಸಿನೇಶನ್‌

M Krishnappa Chikkaballapur

ಚಿಕ್ಕಬಳ್ಳಾಪುರ: ಕೊನೆಗೂ ಕೋವಿಡ್‌ ಸಂಜೀವಿನಿಯ ವಿತರಣೆ ಶುರುವಾಗಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರ ತವರು ಜಿಲ್ಲೆ ಚಿಕ್ಕಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಇಲಾಖೆಯಲ್ಲಿ ʼಡಿʼ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿರುವ ಚಂದ್ರಕಲಾ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ಜಿಲ್ಲೆಯಲ್ಲಿ ಲಸಿಕಾ ಅಭಿಯಾನ ಯಶಸ್ವಿಯಾಗಿ ಆರಂಭವಾಯಿತು.

ಜಿಲ್ಲಾಧಿಕಾರಿ ಆರ್.ಲತಾ ಅವರು ಲಸಿಕೆ ಅಭಿಯಾನಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಶನಿವಾರ ಚಾಲನೆ ನೀಡಿದರಲ್ಲದೆ, ಸುರಕ್ಷಿತ ಲಸಿಕೆ ವಿತರಣೆಗೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಲ್ಲಿಯೂ ಸಣ್ಣ ಲೋಪದೋಷವೂ ಉಂಟಾಗಿಲ್ಲ ಎಂದರು.

ರಾಷ್ಟ್ರಮಟ್ಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗ್ಗೆ 11 ಗಂಟೆಗೆ ಲಸಿಕೆ ವಿತರಣೆಗೆ ಚಾಲನೆ ನೀಡುತ್ತಿದ್ದಂತೆ ಇತ್ತ ಜಿಲ್ಲಾ ಮಟ್ಟದಲ್ಲಿಆರೋಗ್ಯ ಇಲಾಖೆಯಲ್ಲಿ ʼಡಿʼ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿರುವ ಚಂದ್ರಕಲಾ ಅವರಿಗೆ ಮೊದಲ ಲಸಿಕೆ ಹಾಕುವ ಮೂಲಕ ಜಿಲ್ಲಾ ಮಟ್ಟದ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ ಅವರು, ಚಿಕ್ಕಬಳ್ಳಾಪುರ ನಗರದ ಸರಕಾರಿ ಜಿಲ್ಲಾ ಆಸ್ಪತ್ರೆ, ಸಿಎಸ್‍ಐ ಆಸ್ಪತ್ರೆ, ನಗರ ಆರೋಗ್ಯ ಕೇಂದ್ರ, ಪೆರೇಸಂದ್ರದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗುಡಿಬಂಡೆ, ಬಾಗೇಪಲ್ಲಿ, ಗೌರಿಬಿದನೂರು, ಶಿಡ್ಲಘಟ್ಟ ಹಾಗೂ ಚಿಂತಾಮಣಿ ತಾಲೂಕು ಆಸ್ಪತ್ರೆಗಳಲ್ಲಿ ಲಸಿಕೆ ಹಾಕುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಈಗಾಗಲೇ ನಿಗಧಿಪಡಿಸಿದ ಆರೋಗ್ಯ ಇಲಾಖೆ ವಾರಿಯರ್ಸ್‍ಗೆ ಮಾತ್ರವೇ ಮೊದಲ ಹಂತದ ಲಸಿಕೆಯನ್ನು ಹಾಕಲಾಗುತ್ತಿದ್ದು, ಡ್ರೈ ರನ್ ಕಾರ್ಯಕ್ರಮದ ಮೂಲಕ ತರಬೇತಿ ನೀಡಿದ ವ್ಯಾಕ್ಸಿನೇಟರ್‍ಗಳಿಂದ ಲಸಿಕೆ ಹಾಕಲಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲೂ ಕೂಡ ಯಾವುದೇ ಲೋಪ ದೋಷಗಳಿಲ್ಲದೆ ಲಸಿಕೆ ಕಾರ್ಯ ಯಶಸ್ವಿಯಾಗಿ ಮುಂದುವರೆದಿದೆ ಎಂದು ಹೇಳಿದರು.

8928 ಆರೋಗ್ಯ ಕಾರ್ಯಕರ್ತರ ನೋಂದಣಿ

ಮೊದಲ ಹಂತದ ಲಸಿಕೆಗಾಗಿ ಜಿಲ್ಲೆಯಲ್ಲಿ ಒಟ್ಟು 8928 ಜನ ಆರೋಗ್ಯ ಕಾರ್ಯಕರ್ತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಜಿಲ್ಲೆಗೆ ಪ್ರಸ್ತುತ 500 ಡೋಸ್ ಲಸಿಕೆ ಬಂದಿದ್ದು, ಇದನ್ನು 5,000 ಮಂದಿಗೆ ಕೊಡಬಹುದು. ಈ ಪೈಕಿ ಲಸಿಕೆ ಆರಂಭದ ಮೊದಲ ದಿನ ಶನಿವಾರ ಒಟ್ಟು 825 ಮಂದಿಗೆ ಲಸಿಕೆ ಹಾಕುವ ಗುರಿ ಇಟ್ಟು ಕೊಳ್ಳಲಾಗಿತ್ತು. ಉಳಿದಂತೆ 4175 ಜನರಿಗೆ ಗುರುವಾರ ಲಸಿಕೆ ಕೊಡಲು ಚಿಂತನೆ ಮಾಡಲಾಗಿದ್ದು, ಅದರಂತೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದರು ಜಿಲ್ಲಾಧಿಕಾರಿ.

ಮೊದಲ ಹಂತದಲ್ಲಿ ಈಗ ಆರೋಗ್ಯ ಇಲಾಖೆಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುತ್ತಿದ್ದು, ಮುಂದಿನ ಹಂತಗಳಲ್ಲಿ ಪೊಲೀಸ್ ಇಲಾಖೆ, ನಗರಸಭೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ವಾರಿಯರ್ಸ್ʼಗಳಿಗೆ ನೀಡಲಾಗುತ್ತದೆ.
–ಆರ್.ಲತಾ, ಜಿಲ್ಲಾಧಿಕಾರಿ

ಪೆರೇಸಂದ್ರದಲ್ಲಿ ಪರಿಶೀಲಿಸಿದ ಜಿಲ್ಲಾಧಿಕಾರಿ

ಜಿಲ್ಲಾಧಿಕಾರಿ ಅವರು ಜಿಲ್ಲಾಸ್ಪತ್ರೆಯಲ್ಲಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ನಗರದ ಇತರೆ ಲಸಿಕಾ ಕೇಂದ್ರಗಳಾದ ಸಿಎಸ್‍ಐ ಆಸ್ಪತ್ರೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ, ಲಸಿಕಾ ಪ್ರಕ್ರಿಯೆಯನ್ನು ಪರಿಶೀಲಿಸಿದರು. ನಂತರ ತಾಲೂಕಿನ ಪೆರೇಸಂದ್ರದ ಸರಕಾರಿ ಪ್ರಾಥಮಿಕ ಆರೋಗ್ಯಕ್ಕೆ ಭೇಟಿ ನೀಡಿ, ಅಲ್ಲಿ ಮೊದಲ ಲಸಿಕೆ ಪಡೆದ ಆರೋಗ್ಯ ಸಿಬ್ಬಂದಿಯ ಆರೋಗ್ಯ ವಿಚಾರಿಸಿದರು.

ನಂತರ ಬಾಗೇಪಲ್ಲಿಯ ಸರಕಾರಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಅವರು, ಲಸಿಕೆ ವಿತರಣೆ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಪರಿಶೀಲಿಸಿ ಪ್ರಶಂಸೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‍ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಇಂದಿರಾ ಆರ್.ಕಬಾಡೆ, ಯಲ್ಲಾ ರಮೇಶ್ ಬಾಬು, ಆರ್.ಸಿ.ಎಚ್ ಅಧಿಕಾರಿ ಚೆನ್ನಕೇಶವರೆಡ್ಡಿ, ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪಿ.ವಿ. ರಮೇಶ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags: chikkaballapurcovid vaccine indiacovid19vaccination
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರಕ್ಕೆ ಬಜೆಟ್’ನಲ್ಲಿ ವಿಶೇಷ ಪ್ರಾಧಾನ್ಯತೆ ನೀಡಲು ಶ್ರಮಿಸಿದ ಸಂಸದ ಡಾ.ಕೆ.ಸುಧಾಕರ್

by cknewsnow desk
July 23, 2024
0

ಸಂಸದರಿಗೆ ಅಭಿನಂದನೆ ಸಲ್ಲಿಸಿದ ಆರ್.ಮಿಥುನ್ ರೆಡ್ಡಿ; ಹೈದರಾಬಾದ್‌-ಬೆಂಗಳೂರು ಕೈಗಾರಿಕಾ ಕಾರಿಡಾರ್‌ ನಿಂದ ಬಾಗೇಪಲ್ಲಿಗೆ ಹೆಚ್ಚು ಅನುಕೂಲ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

ಬಾಗೇಪಲ್ಲಿಯಲ್ಲಿ ಗುರುಪೂರ್ಣಿಮೆ

by cknewsnow desk
July 23, 2024
0

ಶ್ರೀ ಯೋಗಿನಾರೇಯಣ ಬಲಿಜ ಟ್ರಸ್ಟ್ ವತಿಯಿಂದ ಆಚರಣೆ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

ಡಾ.ಕೆ.ಸುಧಾಕರ್ ಅವರಿಗೆ ಬೆಂಬಲ ಘೋಷಿಸಿದ ಮಿಥುನ್ ರೆಡ್ಡಿ

by cknewsnow desk
April 14, 2024
0

ಎನ್'ಡಿಎ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲ್ಲಿಸುವುದೇ ನಮ್ಮ ಗುರಿ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ; ಗುಡಿಬಂಡೆ ಕಾಲೇಜ್ ಉತ್ತಮ ಸಾಧನೆ

by cknewsnow desk
April 10, 2024
0

ವಿಜ್ಞಾನ ವಿಭಾಗದಲ್ಲಿ ಶೇ.79 ಫಲಿತಾಂಶ

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

ದೇಶಕ್ಕೆ ಭಷ್ಟಾಚಾರಕ್ಕಿಂತ ವಾತಾವರಣ ಬದಲಾವಣೆಯಿಂದ ಭಾರೀ ನಷ್ಟವಾಗುತ್ತಿದೆ: ಪ್ರೊ.ಸುರೇಶ್

by cknewsnow desk
April 9, 2024
0

ರಣಬಿಸಿಲನ್ನು ತಡೆಯುವ ಶಕ್ತಿ ಕೇವಲ ಮರಗಿಡಗಳಿಗೆ ಮಾತ್ರ ಇದೆ

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

ಗುಡಿಬಂಡೆ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ, ಕಾನೂನು ಬಾಹಿರ ಬ್ಲಾಸ್ಟಿಂಗ್

by cknewsnow desk
March 6, 2024
0

ಸ್ಥಳಕ್ಕೆ ದಿಢೀರ್ ಭೇಟಿ ನೀಡಿದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

Next Post
ರಾಜ್ಯದಲ್ಲಿ ಮೊದಲ ಲಸಿಕೆ ಪಡೆದ ಬಿಡದಿಯ ನಾಗರತ್ನ; ಇದು ಐತಿಹಾಸಿಕ ಕ್ಷಣ ಎಂದ ಹೆಲ್ತ್‌ ಮಿನಿಸ್ಟರ್‌, ಅಡ್ಡ ಪರಿಣಾಮವಿಲ್ಲ-ಅಪಪ್ರಚಾರವೂ ಸಲ್ಲ ಎಂದು ಮನವಿ ಮಾಡಿದ ಡಾಕ್ಟರ್

ರಾಜ್ಯದಲ್ಲಿ ಮೊದಲ ಲಸಿಕೆ ಪಡೆದ ಬಿಡದಿಯ ನಾಗರತ್ನ; ಇದು ಐತಿಹಾಸಿಕ ಕ್ಷಣ ಎಂದ ಹೆಲ್ತ್‌ ಮಿನಿಸ್ಟರ್‌, ಅಡ್ಡ ಪರಿಣಾಮವಿಲ್ಲ-ಅಪಪ್ರಚಾರವೂ ಸಲ್ಲ ಎಂದು ಮನವಿ ಮಾಡಿದ ಡಾಕ್ಟರ್

Leave a Reply Cancel reply

Your email address will not be published. Required fields are marked *

Recommended

ಚಿಕ್ಕಬಳ್ಳಾಪುರದಲ್ಲಿ ಚುನಾವಣೆಗೆ ನಿಂತು ಘಟಾನುಘಟಿಗಳನ್ನೇ ನಡುಗಿಸಿದ್ದರು ಜಯಂತಿ

ಚಿಕ್ಕಬಳ್ಳಾಪುರದಲ್ಲಿ ಚುನಾವಣೆಗೆ ನಿಂತು ಘಟಾನುಘಟಿಗಳನ್ನೇ ನಡುಗಿಸಿದ್ದರು ಜಯಂತಿ

5 years ago
ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?; ಸೋಮವಾರ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ

ಮಂಡ್ಯ ಲೋಕಸಭೆ ಅಭ್ಯರ್ಥಿ ಯಾರು?; ಸೋಮವಾರ ಸಂಜೆಯೊಳಗೆ ಹೆಚ್.ಡಿ.ಕುಮಾರಸ್ವಾಮಿ ನಿರ್ಧಾರ

2 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ