• About
  • Advertise
  • Careers
  • Contact
Tuesday, June 17, 2025
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಎಲ್ಲ ವಿವಿಗಳಿಗೆ NIRF RANK & NAAC ಮಾನ್ಯತೆ; ಕ್ರಿಯಾ ಯೋಜನೆ ರೂಪಿಸಲು ಕುಲಪತಿಗಳಿಗೆ 15 ದಿನ ಡೆಡ್‌ಲೈನ್‌ ವಿಧಿಸಿದ ಡಿಸಿಎಂ

cknewsnow desk by cknewsnow desk
January 19, 2021
in STATE
Reading Time: 1 min read
0
ಎಲ್ಲ ವಿವಿಗಳಿಗೆ NIRF RANK & NAAC ಮಾನ್ಯತೆ; ಕ್ರಿಯಾ ಯೋಜನೆ ರೂಪಿಸಲು ಕುಲಪತಿಗಳಿಗೆ 15 ದಿನ ಡೆಡ್‌ಲೈನ್‌ ವಿಧಿಸಿದ ಡಿಸಿಎಂ
911
VIEWS
FacebookTwitterWhatsuplinkedinEmail

ಬೆಂಗಳೂರು: ಉನ್ನತ ಶಿಕ್ಷಣ ವಿಭಾಗದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರುವತ್ತ ವೇಗದ ಹೆಜ್ಜೆಗಳನ್ನು ಇಡುತ್ತಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ; ರಾಜ್ಯದ ಎಲ್ಲ ವಿಶ್ವವಿದ್ಯಾಲಯ-ಕಾಲೇಜುಗಳ ನಾಕ್‌ ಮಾನ್ಯತೆ, ಎನ್‌ಐಆರ್‌ಎಫ್‌ ರಾಂಕ್‌ ಪಡೆಯುವ ಸಂಬಂಧ 15 ದಿನಗಳ ಒಳಗಾಗಿ ಕ್ರಿಯಾ ಯೋಜನೆ ಸಲ್ಲಿಸುವಂತೆ ಎಲ್ಲ ಕುಲಪತಿಗಳಿಗೆ ಡೆಡ್‌ಲೈನ್‌ ವಿಧಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಸರ್ಕಾರದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಸಿದರಲ್ಲದೆ, ಸುಮಾರು 3 ಗಂಟೆಗೂ ಹೆಚ್ಚು ಸಮಯ ಸಮಾಲೋಚನೆ ನಡೆಸಿದರು. “ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ನಮ್ಮ ರಾಜ್ಯದ ಶೈಕ್ಷಣಿಕ ಕ್ಷೇತ್ರದಲ್ಲೊಂದು ಬಹುದೊಡ್ಡ ಬದಲಾವಣೆ. ಇದಕ್ಕೆ ಅನುಗುಣವಾಗಿ ನಾವೆಲ್ಲ ಹೆಜ್ಜೆ ಇಡಬೇಕು. ಸ್ಪರ್ಧಾತ್ಮಕವಾಗಿರುವ ಈ ಸಂದರ್ಭದಲ್ಲಿ ಪ್ರತಿ ವಿವಿಯು ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕದ ಚೌಕಟ್ಟಿನ (National Institutional Ranking Framework-NIRF) ರಾಂಕ್ ಹೊಂದಿರಬೇಕು ಹಾಗೂ ಪ್ರತಿ ಕಾಲೇಜ್‌ಗೂ ನಾಕ್‌ ಮಾನ್ಯತೆ (NAAC Accreditation) ಇರಲೇಬೇಕು ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಮೊದಲಿನಂತೆ ನಿಧಾನಗತಿಯಲ್ಲಿ ಕೆಲಸ ಮಾಡಿದರೆ ಸಾಲುವುದಿಲ್ಲ. ಬದಲಾಗುತ್ತಿರುವ ಜಗತ್ತಿಗೆ ಅನುಗುಣವಾಗಿ ಓಡಬೇಕು. ಜಾಗತಿಕ ಶೈಕ್ಷಣಿಕ ಕ್ಷೇತ್ರದಲ್ಲಿ ಏನೇನಾಗುತ್ತಿದೆ ಎಂಬುದನ್ನು ಗಮನಿಸಬೇಕು. ಅದರಂತೆ ನಮ್ಮ ವಿವಿಗಳನ್ನು ವರ್ತಮಾನದ ಅಗತ್ಯಗಳಿಗೆ ಅನುಗುಣವಾಗಿ ಮರುರೂಪಿಸಬೇಕು. ಅದಕ್ಕೆ ಶಿಕ್ಷಣ ನೀತಿಯನ್ನು ಜೋಡಿಸಬೇಕು ಹಾಗೂ ಜಾಗತಿಕವಾಗಿ ಎಲ್ಲರೂ ಒಪ್ಪಿರುವ ಇಂಥ ರಾಂಕ್-ಮಾನ್ಯತೆ ಅತ್ಯಗತ್ಯ ಎಂದು ಕುಲಪತಿಗಳಿಗೆ ಉಪ ಮುಖ್ಯಮಂತ್ರಿ ಸಲಹೆ ನೀಡಿದರು.

ಮುಂದಿನ 3 ವರ್ಷಗಳಲ್ಲಿ ಯಾವ್ಯಾವ ಕಾರ್ಯಕ್ರಮ ಹಾಕಿಕೊಳ್ಳಲಾಗುವುದು, ಎನ್‌ಐಆರ್‌ಎಫ್‌ ರಾಂಕ್, ನಾಕ್‌ ಮಾನ್ಯತೆ ಪಡೆಯಲು ಏನೆಲ್ಲ ಸಿದ್ಧತೆ ನಡೆಸಲಾಗುವುದು ಎಂಬ ವಿವರಗಳನ್ನು ಕ್ರಿಯಾ ಯೋಜನೆಯಲ್ಲಿ ಉಲ್ಲೇಖಿಸಿ ಮುಂದಿನ ಸಭೆಯಲ್ಲಿ ತಿಳಿಸಬೇಕು ಎಂದರು.

ರಾಜ್ಯದ ಎಲ್ಲಾ ಉಪಕುಲಪತಿಗಳೊಂದಿಗೆ ಸಭೆ ನಡೆಸಿದೆ.

NAAC ಗ್ರೇಡಿಂಗ್, NIRF ಶ್ರೇಯಾಂಕ ಸುಧಾರಣೆ, ಶಿಕ್ಷಣದ ಗುಣಮಟ್ಟದ ಉನ್ನತೀಕರಣಕ್ಕೆ ಸಂಬಂಧಪಟ್ಟ ಹಲವು ವಿಚಾರಗಳನ್ನು ಚರ್ಚಿಸಿದೆವು. ಇದಕ್ಕೆ ಅಗತ್ಯ ಕಾರ್ಯತಂತ್ರವನ್ನು ರೂಪಿಸಿ ಮುಂದಿನ ಸಭೆಯಲ್ಲಿ ಪ್ರಸ್ತಾಪಿಸಲು ಉಪಕುಲಪತಿಗಳಿಗೆ ಸೂಚಿಸಿದೆ. pic.twitter.com/vyPj07zyeL

— Dr. C.N. Ashwath Narayan (ಮೋದಿ ಅವರ ಪರಿವಾರ) (@drashwathcn) January 19, 2021

ನಿರ್ಲಕ್ಷ್ಯ ಸಲ್ಲ ಎಂದ ಡಿಸಿಎಂ

ಎನ್‌ಐಆರ್‌ಎಫ್‌ ರಾಂಕಿಂಗ್‌- ನಾಕ್‌ ಮಾನ್ಯತೆಯನ್ನು ಯಾವ ಕಾರಣಕ್ಕೂ ನಿರ್ಲಕ್ಷ್ಯ ಮಾಡುವಂತಿಲ್ಲ. ಜಾಗತಿಕ ಶಿಕ್ಷಣ ಸಂಸ್ಥೆಗಳ ಜತೆ ಒಡಂಬಡಿಕೆ ಮಾಡಿಕೊಳ್ಳಬೇಕಾದರೆ, ಹೆಚ್ಚು ಅನುದಾನ ಪಡೆಯಬೇಕಾದರೆ ಕೂಡ ಇವು ಅತ್ಯಗತ್ಯ. ಉನ್ನತ ಶಿಕ್ಷಣವನ್ನು ತಳಮಟ್ಟದಿಂದಲೇ ಬಲಿಷ್ಠಗೊಳಿಸಬೇಕಾದರೆ ಇವೆಲ್ಲ ಅಂಶಗಳು ಅಗತ್ಯ ಎಂದು ಡಿಸಿಎಂ ಹೇಳಿದರು.

ಸದ್ಯಕ್ಕೆ ರಾಜ್ಯದಲ್ಲಿ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯು ಎನ್‌ಐಆರ್‌ಎಫ್‌ ರಾಂಕಿಂಗ್‌ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಮೈಸೂರು ವಿವಿ-27, ಬೆಂಗಳೂರು ವಿವಿ-68, ಶಿವಮೊಗ್ಗದ ಕುವೆಂಪು ವಿವಿ-73 ಹಾಗೂ ಬೆಳಗಾವಿಯ ವಿಟಿಯು-80ನೇ ಸ್ಥಾನದಲ್ಲಿವೆ. ಮುಂದಿನ ಬಾರಿ ರಾಂಕಿಂಗ್‌ ಪಟ್ಟಿ ಸಿದ್ಧವಾಗುವ ಹೊತ್ತಿಗೆ ಮೈಸೂರು ವಿವಿ 20ರೊಳಗಿನ ಸ್ಥಾನಕ್ಕೆ, ಬೆಂಗಳೂರು ವಿವಿ 50ರೊಳಗಿನ ಸ್ಥಾನಕ್ಕೆ ಬರಬೇಕು. ವಿಟಿಯು ಕೂಡ ಇನ್ನೂ ಉತ್ತಮ ಸ್ಥಾನಕ್ಕೆ ಬರಬೇಕು ಎಂದು ಡಿಸಿಎಂ ಅವರು ಕುಲಪತಿಗಳಿಗೆ ತಾಕೀತು ಮಾಡಿದರಲ್ಲದೆ, ಇದೇ ಪಟ್ಟಿಯಲ್ಲಿ ತುಮಕೂರು ಮತ್ತು ಮಂಗಳೂರು ವಿವಿಗಳು 150ರೊಳಗಿನ ಸ್ಥಾನದಲ್ಲಿವೆ. ಉಳಿದ ಯಾವ ವಿವಿಗಳಿಗೂ ಈ ರಾಂಕ್‌ ಸಿಕ್ಕಿಲ್ಲ. ಕೊನೆಯ ಪಕ್ಷ ಅದರ ಚೌಕಟ್ಟಿನೊಳಕ್ಕೆ ಬಂದಿಲ್ಲ ಎಂದರು.

ಬೋಧನೆ, ಕಲಿಕೆ, ಸಂಪನ್ಮೂಲ ಸಂಗ್ರಹ, ಸಂಶೋಧನೆ ಮತ್ತು ವೃತ್ತಿಪರತೆ, ಫಲಿತಾಂಶ, ಜನರನ್ನು ತಲುಪುವ ರೀತಿ ಹಾಗೂ ಅದೇ ಜನರನ್ನು ಒಳಗೊಳ್ಳುವ ರೀತಿಯೂ ಸೇರಿದಂತೆ ಪ್ರಮುಖ ಐದು ಅಂಶಗಳನ್ನು ಆಧಾರವಾಗಿ ಇಟ್ಟಿಕೊಂಡು ಎನ್‌ಐಆರ್‌ಎಫ್‌ ರಾಂಕಿಂಗ್‌ ನೀಡಲಾಗುತ್ತದೆ ಎಂದು ಡಿಸಿಎಂ ಮಾಹಿತಿ ನೀಡಿದರು.

3 ವಿವಿಗಳಿಗೆ ಅರ್ಹತೆಯೇ ಇಲ್ಲ
ನಮ್ಮ ರಾಜ್ಯದ ಸರಕಾರಿ ಸ್ವಾಮ್ಯದ 19 ವಿವಿಗಳ ಪೈಕಿ ಎನ್‌ಐಆರ್‌ಎಫ್‌ ರಾಂಕಿಂಗ್‌ ಪಟ್ಟಿಯಲ್ಲಿ ಎ-ಅದಕ್ಕಿಂತ ಮೇಲ್ಪಟ್ಟು ಸ್ಥಾನದಲ್ಲಿ 6 ವಿವಿ, ಬಿ-ಎ ಹಂತದಲ್ಲಿ 4 ವಿವಿಗಳಿದ್ದರೆ, ಮಾನ್ಯತೆ ಪಡೆದ 9 ವಿವಿಗಳಿವೆ. ಉಳಿದಂತೆ ಇನ್ನೆರಡು ವಿವಿಗಳು ಅರ್ಜಿ ಹಾಕಿಕೊಂಡಿದ್ದು, ಇನ್ನು 4 ವಿವಿಗಳು ಅರ್ಜಿಯನ್ನೇ ಹಾಕಿಲ್ಲ. 3 ವಿವಿಗಳು ಎನ್‌ಐಆರ್‌ಎಫ್‌ ರಾಂಕಿಂಗ್‌ಗೆ ಅರ್ಹತೆಯನ್ನೇ ಹೊಂದಿಲ್ಲ.

-ಡಾ.ಸಿ.ಎನ್.ಅಶ್ವತ್ಥನಾರಾಯಣ

ನಾಕ್‌ ಮಾನ್ಯತೆ; 50 ಕಾಲೇಜ್‌ಗಳು ಮಾತ್ರ

ರಾಜ್ಯದಲ್ಲಿ ಒಟ್ಟು 430 ಕಾಲೇಜ್‌ಗಳಿದ್ದು, ಕೇವಲ 50 ಕಾಲೇಜುಗಳಿಗೆ ಮಾತ್ರ ನಾಕ್‌ ಮಾನ್ಯತೆ ಸಿಕ್ಕಿದೆ. ಕೊನೆ ಪಕ್ಷ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜ್‌ಗಳನ್ನು ನಾಕ್‌ ವ್ಯಾಪ್ತಿಗೆ ತರಬೇಕೆನ್ನುವ ಗುರಿ ಹಾಕಿಕೊಳ್ಳಲಾಗಿದೆ. ಅಷ್ಟೇ ಅಲ್ಲದೆ, ಪ್ರತಿ ವಿವಿ ವ್ಯಾಪ್ತಿಯಲ್ಲೂ ಇಬ್ಬರು ನಾಕ್‌ ಸಂಯೋಜಕರನ್ನು ನೇಮಕ ಮಾಡಲಾಗಿದ್ದು, ಅವರಿಂದ ಕಾಲೇಜ್‌ಗಳಿಗೆ ಕಾರ್ಯಾಗಾರ ಮಾಡಿಸಲಾಗುತ್ತಿದೆ ಎಂದ ಅವರು; ಎ-ಅದಕ್ಕೂ ಮೇಲ್ಪಟ್ಟು 9 ಕಾಲೇಜ್‌, ಬಿ-ಎ ಮಟ್ಟದಲ್ಲಿ 170 ಕಾಲೇಜ್‌ಗಳಿವೆ. ಇನ್ನು ನಾಕ್‌ ಮಾನ್ಯತೆಯನ್ನೇ ಪಡೆಯದ 246 ಕಾಲೇಜ್‌ಗಳಿದ್ದು, ಇದಕ್ಕೆ ಅರ್ಹತೆಯೇ ಇಲ್ಲದ 26 ಕಾಲೇಜ್‌ಗಳಿವೆ. ಸದ್ಯಕ್ಕೆ 9 ಕಾಲೇಜ್‌ಗಳ ನಾಕ್‌ ಮಾನ್ಯತೆಗೆ ಅರ್ಜಿ ಹಾಕಿಕೊಂಡಿದ್ದರೆ, ಉಳಿದ 167 ಕಾಲೇಜ್‌ಗಳಿಗೆ ಅರ್ಹತೆಯೇ ಇಲ್ಲದ ಸ್ಥಿತಿ ಇದೆ. ಇದೆಲ್ಲವನ್ನು ಸುಧಾರಿಸಿ ಮುಂದಿನ ಮೂರು ವರ್ಷಗಳಲ್ಲಿ 230 ಕಾಲೇಜ್‌ಗಳನ್ನು ನಾಕ್‌ ವ್ಯಾಪ್ತಿಗೆ ತರಬೇಕು ಎಂದು ಹೇಳಿದರು.

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರನಾಯಕ್‌, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌, ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಪರಿಷತ್ತಿನ ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲ ಜೋಶಿ ಮುಂತಾದವರು ಪಾಲ್ಗೊಂಡಿದ್ದರು.

Tags: dr cn ashwath narayankarnataka educationNAACNIRF RANK
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಉನ್ನತ ಶಿಕ್ಷಣ ಡಿಜಿಟಲೀಕರಣ; ಜುಲೈ 15ರಿಂದ ಎಲ್ಲ ಆನ್‌ಲೈನ್

ಅಕ್ಟೋಬರ್‌ 4ರಿಂದ ಪದವಿ, ಸ್ನಾತಕೋತ್ತರ, ಎಂಜಿನಿಯರಿಂಗ್‌ ತರಗತಿಗಳು ಆರಂಭ; 2021-22ನೇ ಶೈಕ್ಷಣಿಕ ಕ್ಯಾಲೆಂಡರ್ ರೆಡಿ

Leave a Reply Cancel reply

Your email address will not be published. Required fields are marked *

Recommended

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿ.ವೈ.ವಿಜಯೇಂದ್ರ

ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾದ ಬಿ.ವೈ.ವಿಜಯೇಂದ್ರ

2 years ago
ಚಿಕ್ಕಬಳ್ಳಾಪುರಕ್ಕೆ ಹೆಮ್ಮೆ: ವಾಣಿಜ್ಯದಲ್ಲಿ ನೇಹಾ ರಾಜ್ಯಕ್ಕೇ ಫಸ್ಟ್

ಚಿಕ್ಕಬಳ್ಳಾಪುರಕ್ಕೆ ಹೆಮ್ಮೆ: ವಾಣಿಜ್ಯದಲ್ಲಿ ನೇಹಾ ರಾಜ್ಯಕ್ಕೇ ಫಸ್ಟ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ