• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಅಕ್ರಮ ಕಲ್ಲುಗಣಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; ಅಕ್ರಮ ಇದ್ದರೆ ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

cknewsnow desk by cknewsnow desk
January 23, 2021
in STATE
Reading Time: 1 min read
0
ಅಕ್ರಮ ಕಲ್ಲುಗಣಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; ಅಕ್ರಮ ಇದ್ದರೆ ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

ಚಿಂತಾಮಣಿ ತಾಲ್ಲೂಕಿನ ನರಸಾಪುರ ಸಮೀಪದ ಕ್ರಷರ್‌ನ ಒಂದು ದೃಶ್ಯ.

916
VIEWS
FacebookTwitterWhatsuplinkedinEmail

ಹುಬ್ಬಳ್ಳಿ/ಮೈಸೂರು: ಯಾರು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುತ್ತಾರೋ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಿಮಿನಲ್‌ ಹಾಕಬೇಕು ಎಂದು ಕೇಂದ್ರ ಗಣಿ ಮತ್ತು ಭೂ ವಿಜ್ಞಾನ ಖಾತೆ ಸಚಿವ ಪ್ರಹ್ಲಾದ್ ಜೋಶಿ ರಾಜ್ಯ ಸರಕಾರಕ್ಕೆ ಸಲಹೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು; ಅಕ್ರಮ ಗಣಿಗಾರಿಕೆ ಮತ್ತು ಅಧಿಕಾರಿಗಳ ನಡುವೆ ಅಕ್ರಮ ಸಂಬಂಧ ನಡೆದಿದೆ. ಹೀಗಾಗಿಯೇ ಇಂಥ ದುರ್ಘಟನೆಗಳು ಪದೇಪದೆ ಸಂಭವಿಸುತ್ತಿವೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಅಕ್ರಮ ನಡೆಯುತ್ತಿದೆ. ಕೇವಲ ಅಲ್ಲಿರುವ ಅಧಿಕಾರಿಗಳ ಮೇಲೆ ಮಾತ್ರವಲ್ಲ, ರಾಜ್ಯದಲ್ಲಿ ಎಲ್ಲೆಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದೆಯೋ ಅವರ ಮೇಲೆ ಯಾವ ಮುಲಾಜು ಇಲ್ಲದೆ ಕ್ರಿಮಿನಲ್ ಕೇಸ್ ಹಾಕಬೇಕು ಎಂದು ಕೇಂದ್ರ ಸಚಿವರು ಹೇಳಿದರು.

ಶಿವಮೊಗ್ಗದಲ್ಲಿ ನಡೆದ ಜಿಲೆಟಿನ್ ಸ್ಫೋಟ ಪ್ರಕರಣದ ಬಗ್ಗೆ ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಿದೆ. ರಾಜ್ಯಾದ್ಯಂತ ಎಲ್ಲೆಲ್ಲಿ ಗಣಿಗಾರಿಕೆ ನಡೆಯುತ್ತಿದೆ ಎಂಬುದನ್ನು ಪತ್ತೆ ಹಚ್ಚಿ ಅದರ ವಿರುದ್ಧ ಗಂಭೀರ ತನಿಖೆಯನ್ನು ರಾಜ್ಯ ಸರಕಾರವೇ ಮಾಡಬೇಕು ಎಂದೂ ಅವರು ಸಲಹೆ ಮಾಡಿದರು.

ಶಿವಮೊಗ್ಗ ಘಟನೆ ಅತ್ಯಂತ ಘೋರವಾದದ್ದು, ಅಷ್ಟೊಂದು ಪ್ರಮಾಣದ ಸ್ಫೋಟಕ ವಸ್ತುಗಳನ್ನು ಶೇಖರಣೆ ಮಾಡಿದ್ದು ಯಾಕೆ? ಅದಕ್ಕೆಲ್ಲ ಪರವಾನಗಿ ಇತ್ತಾ? ಇದೆಲ್ಲದರ ಬಗ್ಗೆ ತನಿಖೆ ಮಾಡಲು ಗಣಿ ಸಚಿವರಿಗೆ ಸೂಚಿಸಿದ್ದೇನೆ. ಸಚಿವ ಮುರಗೇಶ ನಿರಾಣಿ ಜತೆ ಕೂಡ ಮಾತನಾಡಿದ್ದೇನೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಸಚಿವರು, ಕಲ್ಲು ಗಣಿಗಾರಿಕೆಯು ಕೇಂದ್ರ ಸರಕಾರದ ವ್ಯಾಪ್ತಿಗೆ ಬರುವುದಿಲ್ಲ. ನಮಗೆ ಮೇಜರ್ ಮಿನರಲ್ಸ್ ಬರುತ್ತದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಕೂಡ ಈ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಜೆಲಿಟಿನ್ ಕಡ್ಡಿಗಳನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗ ಘಟನೆ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ. ಇಷ್ಟು ದಿನ ಅವರೆಲ್ಲ ಏನು ಮಾಡುತ್ತಿದ್ದರು ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಅಕ್ರಮ ಗಣಿಗಾರಿಕೆ ಸಕ್ರಮ ಎಂದ ಮುಖ್ಯಮಂತ್ರಿ

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ; ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿರುವವರು ಅರ್ಜಿ ಹಾಕಿಕೊಂಡು ಅದನ್ನು ಸಕ್ರಮ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ.

ಅರ್ಜಿ ಹಾಕಿ ಗಣಿಗಾರಿಕೆ ಸಕ್ರಮ ಮಾಡಿಕೊಳ್ಳಲಿಲ್ಲ ಅಂದರೆ ಸ್ಥಳ ತನಿಖೆ ಮಾಡಿ ಜಿಲ್ಲಾಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳುತ್ತಾರೆ. ಎಂದು ಸಿಎಂ ಎಚ್ಚರಿಕೆ ನೀಡಿದರು.

ಈ ಬಾರಿಯ ಬಜೆಟ್ ಗಾತ್ರ ತಗ್ಗಿಸುತ್ತೇನೆ. ಸಂಪನ್ಮೂಲ ಕೊರತೆ ಕಾರಣ ಕಳೆದ ಬಾರಿಗಿಂತ ಈ ಬಾರಿ ಬಜೆಟ್ ಗಾತ್ರ ತಗ್ಗಿಸುವುದು ಅನಿವಾರ್ಯವಾಗಿದೆ ಎಂದು ಅವರು ತಿಳಿಸಿದರು.

ಮುಖ್ಯಮಂತ್ರಿ @BSYBJP ರವರು ಇದೇ ಗುರುವಾರ ರಾತ್ರಿ ದುರ್ಘಟನೆ ಸಂಭವಿಸಿದ ಹುಣಸೋಡು ಕಲ್ಲು ಕ್ವಾರೆ ಪ್ರದೇಶಕ್ಕೆ ಭೇಟಿ ನೀಡಿ ಇಂದು ಪರಿಶೀಲನೆ ನಡೆಸಿದರು.

ಲೋಕಸಭಾ ಸದಸ್ಯ @BYRBJP, ಶಾಸಕರಾದ ಅಶೋಕ್ ನಾಯ್ಕ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/OAt2loDDXF

— CM of Karnataka (@CMofKarnataka) January 23, 2021

Tags: illegal stone crusherkarnatakashivamogga blast
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಮತ್ತೊಮ್ಮೆ ಭೂಗತ ಲೋಕದತ್ತ ಹೊರಳಿದ ನಿರ್ದೇಶಕ ರಾಮ್​ಗೋಪಾಲ್ ವರ್ಮ; ಐದು ಭಾಷೆಗಳಲ್ಲಿ ತಯಾರಾಗುತ್ತಿದೆ  D COMPANY

ಮತ್ತೊಮ್ಮೆ ಭೂಗತ ಲೋಕದತ್ತ ಹೊರಳಿದ ನಿರ್ದೇಶಕ ರಾಮ್​ಗೋಪಾಲ್ ವರ್ಮ; ಐದು ಭಾಷೆಗಳಲ್ಲಿ ತಯಾರಾಗುತ್ತಿದೆ D COMPANY

Leave a Reply Cancel reply

Your email address will not be published. Required fields are marked *

Recommended

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

ನಂದಿ ಗಿರಿಧಾಮ ಅಂತಾರಾಷ್ಟ್ರೀಯ ಪ್ರವಾಸಿ ತಾಣವಾಗಿ ಅಭಿವೃದ್ಧಿ, 10 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ, ರೋಪ್ ವೇ ಕನಸು ನನಸಾಗಲಿದೆ ಎಂದ ಸಚಿವ ಡಾ.ಕೆ.ಸುಧಾಕರ್

5 years ago
ಮೋದಿ ಸಂಪುಟದ ಸಂಭಾವ್ಯ ಸಚಿವರ ಪಟ್ಟಿ

ಪರೀಕ್ಷಾ ಪೇ ಚರ್ಚಾದ 5ನೇ ಆವೃತ್ತಿಯಲ್ಲಿ ಮೋದಿ

4 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ