• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS NATION

ಮೋದಿ ಮಿಡ್ಲ್‌ಕ್ಲಾಸ್‌ನಿಂದ ಬಂದವರು, ಅದಕ್ಕೆ ಆ ಜನರ ‌ ಮನಸ್ಸು ಅರಿತು ಕೆಲಸ ಮಾಡುತ್ತಿದ್ದಾರೆ, ಭಾರತವೂ ಬದಲಾಗುತ್ತಿದೆ!

cknewsnow desk by cknewsnow desk
January 23, 2021
in NATION, STATE
Reading Time: 1 min read
0
ಕೋಲಾರದ ವಿಸ್ಟ್ರಾನ್‌ ಐಫೋನ್‌ ಘಟಕದ ಮೇಲೆ ದಾಳಿ; ಪ್ರಧಾನಮಂತ್ರಿ ನರೇಂದ್ರ ಮೋದಿ ಕಳವಳಕ್ಕೆ ಕಾರಣವೇನು?
916
VIEWS
FacebookTwitterWhatsuplinkedinEmail

ಬೆಂಗಳೂರು: ದೇಶದ ಮಧ್ಯಮ ವರ್ಗದ ಜನರ ಕಲ್ಯಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರಷ್ಟು ಶ್ರಮಿಸಿದ ಮತ್ತೊಬ್ಬ ನಾಯಕರಿಲ್ಲ. ಈ ವರ್ಗದ ಸಮಸ್ಯೆಗಳನ್ನು, ಆ ಜನರ ಮನಸ್ಸನ್ನು ಅವರಷ್ಟು ಆಳವಾಗಿ ಅರ್ಥ ಮಾಡಿಕೊಂಡವರು ಮತ್ತೊಬ್ಬರಿಲ್ಲ. ಯಾಕೆಂದರೆ, ಸ್ವತಃ ಮೋದಿ ಅವರೂ ಮಧ್ಯಮ ವರ್ಗದಿಂದಲೇ ಬಂದವರು. ಹೀಗಾಗಿ ಭಾರತ ಬದಲಾವಣೆಯತ್ತ ಸಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅಭಿಪ್ರಾಯಪಟ್ಟರು.

ಬೆಂಗಳೂರಿನಲ್ಲಿ ಶನಿವಾರದಂದು ದಿ ಹಿಂದೂ ಪತ್ರಿಕೆಯ ಡೆಪ್ಯೂಟಿ ಎಡಿಟರ್ ನಾಗೇಶ್‌ ಪ್ರಭು ಅವರು ಬರೆದಿರುವ ʼಮಿಡ್ಲ್‌ಕ್ಲಾಸ್‌, ಮೀಡಿಯಾ ಅಂಡ್‌ ಮೋದಿʼ ಕೃತಿಯನ್ನು ಬಿಡುಗಡೆ ಮಾಡಿ ಮಾತನಾಡಿದ ಡಿಸಿಎಂ ಅವರು, ಭಾರತೀಯ ಮಧ್ಯಮ ವರ್ಗದ ಸಮಸ್ಯೆಗಳು, ಆಕಾಂಕ್ಷೆಗಳು ಮತ್ತು ಮೌಲ್ಯಗಳನ್ನು ಬಹಳ ನಿಕಟವಾಗಿ ಕಂಡು ಅನುಭವಿಸಿದ ಕಾರಣಕ್ಕೆ ಮೋದಿ ಅವರಿಂದು ಈ ವರ್ಗದ ಕಲ್ಯಾಣಕ್ಕೆ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದರು ಎಂದರು.

ಕೃತಿಯ ಲೇಖಕ ನಾಗೇಶ ಪ್ರಭು, ಆರ್ಥಿಕ ತಜ್ಞ ಪ್ರೊ.ಆರ್‌.ಎಸ್.ದೇಶಪಾಂಡೆ, ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಮಣಿಪಾಲ್‌ ಗ್ಲೋಬಲ್‌ ಎಜ್ಯುಕೇಶನ್‌ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನದಾಸ್‌ ಪೈ, ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್‌.

ಮೋದಿ ಅವರ ಕಠಿಣ ಬದ್ಧತೆ

ಗುಜರಾತಿನ ಮುಖ್ಯಮಂತ್ರಿ ಆಗಿದ್ದಾಗಲೇ ಅವರು ಮಧ್ಯಮ ವರ್ಗದ ಜನರ ಸಮಸ್ಯೆಗಳ ನಿವಾರಣೆಗೆ ಸಾಕಷ್ಟು ಕೆಲಸ ಮಾಡಿದ್ದರು. ಪ್ರಧಾನಿಯಾದ ಮೇಲೆ ಈ ಕಾರ್ಯಕ್ರಮಗಳು ಮತ್ತಷ್ಟು ವಿಸ್ತೃತವಾಗಿ ಆರಂಭವಾದವು. ಹಾಗೆ ನೋಡಿದರೆ, ಸ್ವಾತಂತ್ರ್ಯೋತ್ತರ ಭಾರತದಲ್ಲಿ ಈ ವರ್ಗದ ಜನರಿಗಾಗಿ ಕಠಿಣ ಬದ್ಧತೆಯಿಂದ ದುಡಿದ ನಾಯಕರಲ್ಲಿ ಮೋದಿ ಅವರು ಅಗ್ರಗಣ್ಯರು ಎಂಬುದು ನನ್ನ ಅಭಿಪ್ರಾಯ. ಕಳೆದ ಆರೂವರೆ ವರ್ಷಗಳಲ್ಲಿ ದೇಶದ ಮಧ್ಯಮ ವರ್ಗದ ಜೀವನಮಟ್ಟ ಗಣನೀಯವಾಗಿ ಸುಧಾರಿಸಿದೆ ಎಂದರು ಉಪ ಮುಖ್ಯಮಂತ್ರಿ.

2014ರಲ್ಲಿ ಅಧಿಕಾರಕ್ಕೆ ಬರುತ್ತಿದ್ದಂತೆ ಪ್ರಧಾನಿ ಮೋದಿ ಅವರು ಮಧ್ಯಮ ವರ್ಗದ ಆಶಯಗಳನ್ನು ಈಡೇರಿಸುತ್ತಲೇ ಬಂದರು. ಡಿಜಿಟಲ್ ಇಂಡಿಯಾ, ಆಯುಷ್ಮಾನ್ ಭಾರತ್, ಸ್ಕಿಲ್ ಇಂಡಿಯಾ, ಮೇಕ್ ಇನ್ ಇಂಡಿಯಾ, ಜಿಎಸ್ಟಿ, ಸ್ಟಾರ್ಟ್ಅಪ್ ಮುಂತಾದ ಯೋಜನೆಗಳ ಮೂಲಕ ಅವರು ಇಡೀ ವ್ಯವಸ್ಥೆಯನ್ನು ಮಧ್ಯಮ ವರ್ಗದ ಜನರಿಗೆ ಪೂರಕವಾಗಿ ದೇಶವನ್ನು ರೂಪಾಂತರ ಮಾಡಿದರು. ಅದೊಂದು ಅಸಾಮಾನ್ಯ ಸಾಧನೆ .

-ಡಾ.ಅಶ್ವತ್ಥನಾರಾಯಣ

ಜಗತ್ತೇ ಬೆರಗಾಗಿದೆ

2019ರಲ್ಲಿ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುತ್ತಿದ್ದಂತೆ ಕೋವಿಡ್‌ ಮಾರಿ ದೇಶವನ್ನ ಆವರಿಸಿಕೊಂಡಿತು. ಒಂದೆಡೆ ಬಾಹ್ಯ ಒತ್ತಡಗಳು, ಇನ್ನೊಂದೆಡೆ ಆಂತರಿಕವಾಗಿ ಕೋವಿಡ್‌ ಸವಾಲು. ಮೋದಿ ಅವರು ಎಲ್ಲಿಯೂ ಧೃತಿಗೆಡದೇ ತಮ್ಮ ದೂರದೃಷ್ಟಿ, ದಕ್ಷತೆಯ ಮೂಲಕ ಸಮರ್ಥವಾಗಿ ಎದುರಿಸಿದರು. ಬೃಹತ್ ಪ್ಯಾಕೇಜ್‌‌ ಮೂಲಕ ಬಡವರು, ಮಧ್ಯಮ ವರ್ಗದ ಜನರಿಗೆ ಸಮಸ್ಯೆ ಆಗದಂತೆ ನೋಡಿಕೊಂಡರು. ಲಾಕ್‌ಡೌನ್‌ ಕಾಲದಲ್ಲಿ ಅವರು ದೇಶವನ್ನು ಮುನ್ನಡೆಸಿದ ರೀತಿ ಹಾಗೂ ಜನರು ಅವರ ಮೇಲಿಟ್ಟ ವಿಶ್ವಾಸದ ಬಗ್ಗೆ ಇಡೀ ಜಗತ್ತೇ ಚಕಿತವಾಯಿತು ಎಂದು ಡಿಸಿಎಂ ನುಡಿದರು.

ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.30ರಷ್ಟು ಮಧ್ಯಮ ವರ್ಗವೇ. ಯಾವುದೇ ವೇಳೆಯಲ್ಲಿ ಏನೇ ವ್ಯತ್ಯಾಸವಾದರೂ ಮೊದಲು ಪರಿಣಾಮ ಬೀರುವುದು ಈ ವರ್ಗದ ಮೇಲೆಯೇ. ಈ ಅಂಶವನ್ನು ಮನಗಂಡಿರುವ ಮೋದಿ ಅವರು ಆತ್ಮನಿರ್ಭರ ಭಾರತ ಮೂಲಕ ಅವರು ಭವಿಷ್ಯದಲ್ಲಿ ಸವಾಲುಗಳಿಗೆ ಸಿಗದಿರುವಂತೆಯೇ ನೋಡಿಕೊಳ್ಳಲು ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದಾರೆ ಎಂದು ಅವರು ಹೇಳಿದರು.

ಮಧ್ಯಮ ವರ್ಗದ ಜನರಿಗೆ ಭರವಸೆ ಬಂದಿದೆ

ಮಣಿಪಾಲ್‌ ಗ್ಲೋಬಲ್‌ ಎಜ್ಯುಕೇಶನ್‌ ಸಂಸ್ಥೆಯ ಅಧ್ಯಕ್ಷ ಟಿ.ವಿ.ಮೋಹನದಾಸ್‌ ಪೈ ಮಾತನಾಡಿ; ಭಾರತ ಜಾಗತಿಕವಾಗಿ ಬದಲಾಗುತ್ತಿದೆ. ದೇಶದ ಆಂತರಿಕವಾಗಿಯೂ ಬಹಳಷ್ಟು ಮುನ್ನಡೆ ಸಾಧಿಸಿದೆ. ಮಧ್ಯಮ ವರ್ಗದ ಜನರಿಗೆ ಭರವಸೆ ಬಂದಿದೆ. ಇದಕ್ಕೆ ಮೋದಿ ಕಾರಣರು ಎಂಬುದರಲ್ಲಿ ಯಾವ ಅನುಮಾನವೂ ಬೇಡ ಎಂದರು.

, ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್.ಶಂಕರ್‌ ಹಾಗೂ ಆರ್ಥಿಕ ತಜ್ಞ ಪ್ರೊ.ಆರ್‌.ಎಸ್.ದೇಶಪಾಂಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಲೇಖಕ ನಾಗೇಶ ಪ್ರಭು ಪುಸ್ತಕ ಕುರಿತು‌ ಮಾತನಾಡಿದರು.

Tags: indiakarnatakamiddle classnarendra modi
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಅಕ್ರಮ ಕಲ್ಲುಗಣಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; ಅಕ್ರಮ ಇದ್ದರೆ ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

ಅಕ್ರಮ ಕಲ್ಲುಗಣಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕಿ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ; ಅಕ್ರಮ ಇದ್ದರೆ ಸಕ್ರಮ ಮಾಡಿಕೊಳ್ಳಿ ಎಂದ ಸಿಎಂ

Leave a Reply Cancel reply

Your email address will not be published. Required fields are marked *

Recommended

ಸಿದ್ದರಾಮಯ್ಯ ʼಗೊಬೆಲಪ್ಪʼ, ʼಬ್ರೋಕರಪ್ಪʼ ಎಂದ ಮಾಜಿ ಸಿಎಂ

ದೇವೇಗೌಡರ ಮೇಲೆ ಆಣೆ ಮಾಡು ಎನ್ನಲಿಕ್ಕೆ ನೀನು ಯಾವೂರು ದಾಸಯ್ಯ?

4 years ago
ಹಿರೇನಾಗವೇಲಿ ಕಾಡಿನಲ್ಲಿ ಆ ಭೀಕರ ಸ್ಫೋಟ ಸಂಭವಿಸಿದ್ದು ಹೇಗೆ? ವಿವರ ಕೊಟ್ಟರು ನೋಡಿ  ಡಾ.ಕೆ.ಸುಧಾಕರ್!!‌ ಹಾಗಾದರೆ, ಘಟನಾ ಸ್ಥಳದಲ್ಲೇ ಗೃಹ ಸಚಿವ ಬೊಮ್ಮಾಯಿ ಹೇಳಿದ್ದು ಸುಳ್ಳಾ?

ಹೀರೆನಾಗವೇಲಿ ಬ್ಲಾಸ್ಟ್‌ ಸಿಐಡಿ ತನಿಖೆ ಮುಗಿಯುವ ಮುನ್ನವೇ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಲ್ಲಿ ಕ್ವಾರಿ-ಕ್ರಷರ್‌ಗಳ ಪುನಾರಂಭಕ್ಕೆ ಸರಕಾರ ಸಮ್ಮತಿ! ಷರತ್ತುಬದ್ಧ ಅನುಮತಿ ಎಂಬ ನೆಪ!!

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ