• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home CHIKKABALLAPUR

ಕೇಂದ್ರ & ರಾಜ್ಯ ಸರಕಾರಗಳು ರೈತರಿಗೆ ಎಲ್ಲವನ್ನೂ ಒಳ್ಳೆಯದೆ ಮಾಡುತ್ತಿವೆ, ಪ್ರತಿಭಟನೆ-ಟ್ರ್ಯಾಕ್ಟರ್ ಚಳವಳಿಗೆ ಅರ್ಥವೇ ಇಲ್ಲ ಎಂದ ಸಚಿವ ಡಾ.ಕೆ.ಸುಧಾಕರ್

cknewsnow desk by cknewsnow desk
January 26, 2021
in CHIKKABALLAPUR, STATE
Reading Time: 2 mins read
0
ಕೇಂದ್ರ & ರಾಜ್ಯ ಸರಕಾರಗಳು ರೈತರಿಗೆ ಎಲ್ಲವನ್ನೂ ಒಳ್ಳೆಯದೆ ಮಾಡುತ್ತಿವೆ, ಪ್ರತಿಭಟನೆ-ಟ್ರ್ಯಾಕ್ಟರ್ ಚಳವಳಿಗೆ ಅರ್ಥವೇ ಇಲ್ಲ ಎಂದ ಸಚಿವ ಡಾ.ಕೆ.ಸುಧಾಕರ್
915
VIEWS
FacebookTwitterWhatsuplinkedinEmail

ಚಿಕ್ಕಬಳ್ಳಾಪುರದಲ್ಲಿ 72ನೇ ಗಣರಾಜ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ, ಕೋವಿಡ್‌ ಕಾರಣಕ್ಕೆ ಸೊರಗಿದ ಸಂಭ್ರಮ

M Krishnappa Chikkaballapur

ಚಿಕ್ಕಬಳ್ಳಾಪುರ: ರಾಷ್ಟ್ರ ಹಾಗೂ ರಾಜ್ಯದ ಮಟ್ಟದಲ್ಲಿ ರೈತರು ನಡೆಸುತ್ತಿರುವ ಹೋರಾಟ, ಪ್ರತಿಭಟನೆ ಅನಗತ್ಯ. ಇವತ್ತು ರೈತ ನಾಯಕರು ಕರೆ ನೀಡಿರುವ ಟ್ರ್ಯಾಕ್ಟರ್ ಚಳವಳಿಯೂ ಅರ್ಥಹೀನ. ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರಿಗೆ ಎಲ್ಲವನ್ನೂ ಒಳ್ಳೆಯದೆ ಮಾಡುತ್ತಿವೆ ಎಂದು ಆರೋಗ್ಯ-ವೈದ್ಯಕೀಯ ಶಿಕ್ಷಣ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟರು.

ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೊಗದಲ್ಲಿ ಏರ್ಪಡಿಸಲಾಗಿದ್ದ 72ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ರೈತರ ಸೋಗಿನಲ್ಲಿ ದಲ್ಲಾಳಿಗಳು ತಮ್ಮ ಬೇಳೆ ಬೇಯಿಸಿಕೊಳ್ಳಲು ನಿಜವಾದ ರೈತರನ್ನು ತಪ್ಪುದಾರಿಗೆ ಎಳೆಯುತಿದ್ದಾರೆ. ಸರಕಾರ ಇಂಥವರ ಬೆದರಿಕೆಗಳಿಗೆ ಮಣಿಯುವುದಿಲ್ಲ ಎಂದರು.

ಒಂದು ರೈತ ಕುಟುಂಬಕ್ಕೆ 10,000 ರೂ.

ಮುಖ್ಯಮಂತ್ರಿ ಯಡಿಯೂರಪ್ಪ ರೈತ ನಾಯಕರು. ರೈತರ ಕಷ್ಟ-ಸುಖಗಳಿಗೆ ಅವರೂ ಸ್ಪಂದಿಸುತ್ತಿದ್ದಾರೆ. ಹೀಗಾಗಿ ಕೇಂದ್ರ ಸರಕಾರ ರಾಜ್ಯದ ರೈತರಿಗೆ ನೀಡುವ 6,000 ರೂ. ಪರಿಹಾರದ ಜತೆಗೆ ರಾಜ್ಯ ಸರಕಾರವೂ 4,000 ರೂ.ಗಳನ್ನು ಒಟ್ಟುಗೂಡಿಸಿ ಒಂದು ರೈತ ಕುಟುಂಬಕ್ಕೆ 10,000 ರೂ. ನೆರವು ನೀಡಲಾಗುತ್ತಿದೆ ಎಂದರು ಸಚಿವರು.

ನಮ್ಮದು ಶ್ರೇಷ್ಠ ಸಂವಿಧಾನ

ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ಭಾರತ ಹೊಂದಿದೆ. ಜ್ಯಾತ್ಯತೀತ ತತ್ತ್ವದ ತಳಹದಿಯ ಮೇಲೆ ರೂಪುಗೊಂಡಿರುವ ನಮ್ಮ ಸಂವಿಧಾನವು ಎಲ್ಲರಿಗೂ ಸಮಬಾಳು ಮತ್ತು ಸಮಪಾಲನ್ನು ನೀಡಿದೆ. ಬ್ರಿಟೀಷರು ಭಾರತಕ್ಕೆ ಸ್ವಾತಂತ್ರ್ಯ ನೀಡಿದ ನಂತರ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನವನ್ನು ದೇಶಕ್ಕೆ ನೀಡಿದರು. ಅತ್ಯಂತ ಹೆಮ್ಮೆ ಸಂಗತಿ ಎಂದರೆ, ಕರ್ನಾಟಕದ ಬೆನಗಲ್ ನರಸಿಂಗರಾಯರು ಸಹ ಸಂವಿಧಾನ ರಚನೆಗೆ ತಮ್ಮ ಅಪೂರ್ವ ಸೇವೆ ಸಲ್ಲಿಸಿದ್ದಾರೆ ಎಂದು ಅವರು ನುಡಿದರು.

ಕೊರೊನ ಕಂಟ್ರೋಲ್‌ನಲ್ಲಿದೆ

ರಾಜ್ಯದಲ್ಲಿ ಕೈಗೊಂಡ ತ್ವರಿತ ಕ್ರಮಗಳಿಂದ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಅತಿ ಶೀಘ್ರದಲ್ಲಿ ಕೊರೊನಾ ಲಸಿಕೆ ದೊರೆತಿದ್ದು, ಬೇರೆ ದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಬ್ರೆಜಿಲ್ ದೇಶದ ಅಧ್ಯಕ್ಷರು ಲಸಿಕೆ ನೀಡಿರುವುದಕ್ಕೆ ಭಾರತಕ್ಕೆ ಧನ್ಯವಾದ ಹೇಳಿದ್ದಾರೆ. ಈ ರೀತಿ ಬೇರೆ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವ ಕಾರ್ಯವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಜಗತ್ತಿನ ಮುಂದೆ ತಲೆಎತ್ತಿ ನಡೆಯುವಂತೆ ಭಾರತ ಬೆಳೆದಿದೆ ಎಂದರು ಸಚಿವರು.

ಭಾರತದಲ್ಲಿ ಅತಿ ಹೆಚ್ಚು ಯುವಜನರಿದ್ದಾರೆ. ದೇಶದಲ್ಲಿ ಉತ್ತಮ ಮಾನವ ಸಂಪನ್ಮೂಲವಿದ್ದು, ಇದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಮೂಲಭೂತ ಹಕ್ಕುಗಳಂತೆ, ಮೂಲಭೂತ ಕರ್ತವ್ಯಗಳಿವೆ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ನಾಗರಿಕರಾಗಿ ದೇಶವನ್ನು ಉನ್ನತಿಗೆ ಕೊಂಡೊಯ್ಯಲು ಕರ್ತವ್ಯ ಪಾಲಿಸಬೇಕು ಎಂದರು ಅವರು.

ಜೈ ಇನ್ಸಾನ್

ರೈತರು, ಯೋಧರನ್ನು ಸ್ಮರಿಸಲು ಜೈ ಜವಾನ್ ಜೈ ಕಿಸಾನ್ ಎಂದು ಲಾಲ್ ಬಹಾದ್ದೂರ್ ಶಾಸ್ತ್ರಿ ಹೇಳಿದ್ದರು. ವಿಜ್ಞಾನಿಗಳನ್ನು ಸ್ಮರಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಜೈ ವಿಜ್ಞಾನ್ ಎಂದು ಹೇಳಿದ್ದರು. ಅದೇ ರೀತಿ ಕವಿ ಕುವೆಂಪು ವಿಶ್ವಮಾನವ ಸಂದೇಶ ಸಾರಲು ಜೈ ಇನ್ಸಾನ್ ಎಂಬ ಸಂದೇಶ ಸಾರಬೇಕಿದೆ ಎಂದು ಡಾ.ಸುಧಾಕರ್‌ ಹೇಳಿದರು.

ಈ ಸಂದರ್ಭದಲ್ಲಿ ಜಿ.ಪಂ.ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಮಾವು ಅಭಿವೃದ್ಧಿ ಹಾಗೂ ಮಾರುಕಟ್ಟೆ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜ್, ನಗರಸಭೆ ಅದ್ಯಕ್ಷ ಡಿ.ಎಸ್.ಆನಂದರೆಡ್ಡಿ ಬಾಬು, ಜಿಲ್ಲಾಧಿಕಾರಿ ಆರ್.ಲತಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಶಿವಶಂಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿ.ಪಂ.ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.

ಸೊರಗಿದ ಸಂಭ್ರಮ

ಗಣರಾಜ್ಯೋತ್ಸವ ಸಮಾರಂಭಕ್ಕೆ ಕೊರೊನ ಕರಿನೆರಳು ಕಾಡಿತು. ವೈರಸ್‌ ಕಾರಣದಿಂದ ಶಾಲಾ ವಿದ್ಯಾರ್ಥಿಗಳ ಮನರಂಜನೆ ಕಾಣದಾಗಿತ್ತು. ಮಕ್ಕಳ ಮನರಂಜನಾತ್ಮಕ ಚಟುವಟಿಕೆಗಳು ಇಲ್ಲದೆ ಇಡೀ ಕ್ರೀಡಾಂಗಣ‌ ಬಿಕೋ ಎನ್ನುತ್ತಿತ್ತು. ನಾಗರೀಕರೂ ಸಹ ಅತ್ತ ಸುಳಿಯದ ಹಿನ್ನಲೆಯಲ್ಲಿ ಕೇವಲ ಪರೇಡ್‌ಗೆ ಬಂದಿದ್ದ ಪೊಲೀಸ್, ಗೃಹರಕ್ಷಕ, ಎನ್.ಎಸ್.ಎಸ್., ಎನ್.ಸಿ.ಸಿ. ಸೇರಿದಂತೆ ಇನ್ನಿತರೆ ಸೀಮಿತ ತುಕಡಿಗಳು ಮಾತ್ರ ಕ್ರೀಡಾಂಗಣದಲ್ಲಿ ಧ್ವಜ ವಂದನೆಗೆ ಆಗಮಿಸಿದ್ದವರು ಮಾತ್ರ ಕಂಡುಬಂದರು. ಸಾರ್ವಜನಿಕರಿಗಾಗಿ ಮೀಸಲಿರಿಸಿದ್ದ ಆಸನಗಳು ಖಾಲಿ ಬಿದ್ದಿದ್ದವು. ಜಿಲ್ಲಾಡಳಿತ ಸಹ ಕಾರ್ಯಕ್ರಮಕ್ಕೆ ಸಾರ್ವಜನಿಕರನ್ನು ಆಕರ್ಷಿಸುವಲ್ಲಿ ಯಾವುದೇ ರೀತಿಯ ಕಾರ್ಯಯೊಜನೆ ರೂಪಿಸಿರಲಿಲ್ಲ. ಕೇವಲ ಸರಕಾರಿ ಸಾಧನೆಯನ್ನು ಗಣರಾಜ್ಯೋತ್ಸವ ಭಾಷಣದಲ್ಲಿ ಪ್ರಸ್ತಾಪಿಸುವುದಕ್ಕಷ್ಟೆ ಸಚಿವರ ಭಾಷಣ ಸೀಮಿತವಾಯಿತು.

ಹಲವೆಡೆ ಗಣರಾಜ್ಯೋತ್ಸವ

ನಗರಸಭೆಯಲ್ಲಿ ನೂತನವಾಗಿ ಅಧ್ಯಕ್ಷರಾಗಿ ಚುನಾಯಿತರಾದ ಡಿ.ಎಸ್.ಆನಂದರೆಡ್ಡಿ ಬಾಬು ಪ್ರಪ್ರಥಮ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಲ್ಲಾಧಿಕಾರಿ ಆರ್.ಲತಾ ಧ್ವಜಾರೋಹಣ ನೆರವೇರಿಸಿದರು. ನಗರದ ಹೊರ ಹೊಲಯದ ಕೆ.ವಿ.ಕ್ಯಾಂಪಸ್‌ನಲ್ಲಿ ಕೆ.ವಿ.ಮತ್ತು ಪಂಚಗಿರಿ ಶಿಕ್ಷಣ ಸಂಸ್ಥೆಗಳ  ಅಧ್ಯಕ್ಷ ಕೆ.ವಿ.ನವೀನ್ ಕಿರಣ್ ಧ್ವಜಾರೋಹಣ ಮಾಡಿದರು. ಮಾದರಿ ಸರಕಾರಿ ಹೊಸ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ಪತ್ರಕರ್ತ ಎಂ.ಕೃಷ್ಣಪ್ಪ ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಶಿಕ್ಷಕ ಮರಿಯಪ್ಪ ಇನ್ನಿತರೆ ಶಿಕ್ಷಕರು ಹಾಜರಿದ್ದರು.

ಜಿಲ್ಲಾ ಕೇಂದ್ರವೂ ಸೇರಿ ವಿವಿಧೆಡೆ ಕೊರೊನ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಿ ಗಣರಾಜ್ಯೋತ್ಸವ ಕಾರ್ಯಕ್ರಮಗಳು ನಡೆದವು.

Tags: chikkaballapurdr k sudhakarjanuary 26republic day 2021
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್

Leave a Reply Cancel reply

Your email address will not be published. Required fields are marked *

Recommended

ವಿಶ್ವ ಆರೋಗ್ಯ ದಿನದಂದು ನೇತ್ರದಾನ ಮಾಡುವ ಸಂಕಲ್ಪ ಮಾಡಿದ ಚಿಕ್ಕಬಳ್ಳಾಪುರ ಉಸ್ತುವಾರಿ  ಸಚಿವ ಡಾ.ಕೆ.ಸುಧಾಕರ್‌

ವಿಶ್ವ ಆರೋಗ್ಯ ದಿನದಂದು ನೇತ್ರದಾನ ಮಾಡುವ ಸಂಕಲ್ಪ ಮಾಡಿದ ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌

5 years ago
ಪೀಠಕ್ಕಾಗಿ ದೊಡ್ಡವರ ಮಹಾಯುದ್ಧ; ಉಪ ಸಭಾಪತಿಯನ್ನೇ ಹೊತ್ತೊಯ್ದ ಕಾಂಗ್ರೆಸ್‌, ಸಭಾಪತಿ ಬರುವ ಬಾಗಿಲನ್ನೇ ಬಂದ್‌ ಮಾಡಿದ ಬಿಜೆಪಿ, ಆಡಳಿತ ಪಕ್ಷದ ಪರ ವಾಲಿದ ಜೆಡಿಎಸ್

ಪೀಠಕ್ಕಾಗಿ ದೊಡ್ಡವರ ಮಹಾಯುದ್ಧ; ಉಪ ಸಭಾಪತಿಯನ್ನೇ ಹೊತ್ತೊಯ್ದ ಕಾಂಗ್ರೆಸ್‌, ಸಭಾಪತಿ ಬರುವ ಬಾಗಿಲನ್ನೇ ಬಂದ್‌ ಮಾಡಿದ ಬಿಜೆಪಿ, ಆಡಳಿತ ಪಕ್ಷದ ಪರ ವಾಲಿದ ಜೆಡಿಎಸ್

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ