• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home KOLAR

ಸೈನಿಕನಿಗಿಲ್ಲ ರಾಮನಗರದ ಉಸಾಬರಿ, ಸಿಗಲಿದೆಯಾ ಕೋಲಾರ ಜಿಲ್ಲೆ ಉಸ್ತುವಾರಿ? ಸಿ.ಪಿ.ಯೋಗೀಶ್ವರ್‌ ಅವರನ್ನು ಮೆಲ್ಲಗೆ ರಾಮನಗರದಿಂದ ಹೊರಗಿಡಲಾಗುತ್ತಿದೆಯಾ?

P K Channakrishna by P K Channakrishna
January 27, 2021
in KOLAR, NEWS IN USE, STATE
Reading Time: 1 min read
0
ಕೋಲಾರದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ ಮಾಡಿ ಆದಷ್ಟು ಬೇಗ ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸುವ ಘೋಷಣೆ ಮಾಡಿದ ನೂತನ ಸಚಿವ ಸಿ.ಪಿ.ಯೋಗೇಶ್ವರ್
914
VIEWS
FacebookTwitterWhatsuplinkedinEmail

ಬೆಂಗಳೂರು/ಕೋಲಾರ: ಖಾತೆ ಹಂಚಿಕೆಯ ಬಿಕ್ಕಟ್ಟು ಮುಗಿಯುತ್ತಿದ್ದಂತೆಯೇ ಇದೀಗ ಉಸ್ತುವಾರಿ ಜಿಲ್ಲೆಗಳ ಹಂಚಿಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮುಂದೆ ಬಿಗ್‌ ಅಜೆಂಡಾ ಆಗಿದ್ದು, ಕೋಲಾರ ಜಿಲ್ಲೆಯ ಉಸ್ತುವಾರಿ ಯಾರಿಗೆ ದಕ್ಕಲಿದೆ ಎಂಬ ಪ್ರಶ್ನೆಗೆ ಬಹುತೇಕ ಉತ್ತರ ಸಿಕ್ಕಿದೆ.

ಜನವರಿ ೨೬ರಂದು ಗಣರಾಜ್ಯೋತ್ಸವ ದಿನದಂದು ಆಯಾ ಜಿಲ್ಲೆಗಳಲ್ಲಿ ಆಯಾ ಉಸ್ತುವಾರಿ ಸಚಿವರೇ ಧ್ವಜಾರೋಹಣ ಮಾಡಿದ್ದು, ಸಚಿವರ ಉಸ್ತುವಾರಿ ಇಲ್ಲದ ಜಿಲ್ಲೆಗಳಿಗೆ ಕೆಲ ಸಚಿವರನ್ನು ಮುಖ್ಯಮಂತ್ರಿಗಳು ನಿಯೋಜನೆ ಮಾಡಿದ್ದರು. ಅದರಂತೆ ಕೋಲಾರ ಜಿಲ್ಲೆಯಲ್ಲಿ ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಖಾತೆಗಳ ಸಚಿವ ಸಿ.ಪಿ.ಯೋಗೇಶ್ವರ್ ಧ್ವಜಾರೋಹಣ ಮಾಡಿದ್ದರು.

ಈ ಹಿಂದೆ ಸಚಿವರಾಗಿದ್ದ, ಜಿಲ್ಲೆಯ ಉಸ್ತುವಾರಿಯನ್ನೂ ಹೊಂದಿದ್ದ ಮುಳಬಾಗಿಲು ಶಾಸಕ ನಾಗೇಶ್‌ ಅವರನ್ನು ಸಂಪುಟದಿಂದ ಹೊರಗಿಟ್ಟು ಅಂಬೇಡ್ಕರ್‌ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿದ ನಂತರ ಜಿಲ್ಲೆಗೆ ಕ್ಯಾಬಿನೆಟ್ಟಿನಲ್ಲಿ ಪ್ರಾತಿನಿಧ್ಯ ಇಲ್ಲದಂತಾಗಿದೆ. ಈ ಕಾರಣಕ್ಕೆ ಚನ್ನಪಟ್ಟಣದ ಮಾಜಿ ಶಾಸಕ ಹಾಗೂ ಹಾಲಿ ವಿಧಾನ ಪರಿಷತ್‌ ಸದಸ್ಯರಾಗಿ ಸಚಿವರಾಗಿರುವ ಯೋಗೀಶ್ವರ್‌ಗೆ ಜಿಲ್ಲಾ ಉಸ್ತುವಾರಿ ಕೊಡುವುದು ಖಚಿತವಾಗಿದೆ.

ರಾಮನಗರ ಸಿಗುವುದು ಕಷ್ಟ

ಮೂಲತಃ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಸಿ.ಪಿ.ಯೋಗೀಶ್ವರ್‌ ಸಹಜವಾಗಿಯೇ ತಮ್ಮ ತವರು ಜಿಲ್ಲೆಯ ಉಸ್ತುವಾರಿಯ ಮೇಲೆ ಕಣ್ಣಿಟ್ಟಿದ್ದರು. ಜಿಲ್ಲೆಯಲ್ಲಿ ಪ್ರಬಲರಾಗಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಕಟ್ಟಿಹಾಕಲು ನನಗೆ ರಾಮನಗರ ಉಸ್ತುವಾರಿಯೇ ಬೇಕು ಎಂದು ಮುಖ್ಯಮಂತ್ರಿಗಳನ್ನು ಕೇಳಿದ್ದರು.

ಆದರೆ, ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರಕಾರ ಬರುತ್ತಿದ್ದಂತೆಯೇ ಉಪ ಮುಖ್ಯಮಂತ್ರಿಯಾದ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ರಾಮನಗರ ಜಿಲ್ಲೆ ಉಸ್ತುವಾರಿ ನೀಡಿದ್ದರು. ಮಲ್ಲೇಶ್ವರದ ಶಾಸಕರೂ, ಮೂಲತಃ ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯಾ ಗ್ರಾಮದಲ್ಲಿ ಹುಟ್ಟಿರುವ ಡಿಸಿಎಂ, ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ರಾಮನಗರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ಗೆ ಪರ್ಯಾಯ ರಾಜಕೀಯ ಶಕ್ತಿಯನ್ನಾಗಿ ಹೊರಹೊಮ್ಮಿಸುವಲ್ಲಿ ಯಶಸ್ವಿಯಾಗಿದ್ದರು.

  • ಡಾ.ಸಿ.ಎನ್.ಅಶ್ವತ್ಥನಾರಾಯಣ

ಕೋವಿಡ್‌ ಕಾಲದಲ್ಲಿ ಬೆಂಗಳೂರು ನಗರದ ಕೋವಿಡ್‌ ಉಸ್ತುವಾರಿ ಇದ್ದರೂ ರಾಮನಗರವನ್ನು ಮರೆಯದ ಅಶ್ವತ್ತನಾರಾಯಣ, ಅತ್ಯುತ್ತಮವಾಗಿ ಕೆಲಸ ಮಾಡಿದ್ದರು. ಜಿಲ್ಲೆಯಲ್ಲಿ ಪಕ್ಷದ ಮುಖಂಡರೂ ಕಾರ್ಯಕರ್ತರೆಲ್ಲರನ್ನೂ ಒಳಗೊಳ್ಳುವುದರ ಜತೆಗೆ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕನಕಪುರದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಸ್ಕೋರ್‌ ಮಾಡಿದ ಹಿಂದೆ ಅಶ್ವತ್ಥನಾರಾಯಣ ಅವರ ಶ್ರಮವಿತ್ತು.

“ಬಹುಮುಖ್ಯವಾಗಿ ಅಶ್ವತ್ಥನಾರಾಯಣ ಎಂದರೆ ಬೇಡ ಎನ್ನುವವರೇ ಇಲ್ಲ ನಮ್ಮ ಜಿಲ್ಲೆಯಲ್ಲಿ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಮುಂದೆ ಹೋಗುವ, ವೈಯಕ್ತಿಕವಾಗಿ ಯಾವ ಅಜೆಂಡಾವನ್ನೂ ಹೊಂದಿರದ, ಪಕ್ಷ ಮತ್ತು ಸರಕಾರದ ಕೆಲಸಗಳ ಬಗ್ಗೆ ಕರಾರುವಕ್ಕಾದ ನಿಲವುಳ್ಳ ಅವರು ಡಿ.ಕೆ.ಶಿವಕುಮಾರ್‌, ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಅತ್ಯಂತ ಡಿಗ್ನಿಫೈಡ್‌ ಆಗಿ ಕೆಲಸ ಮಾಡಿದವರು. ಹೀಗಾಗಿ ನಮ್ಮ ಜಿಲ್ಲೆಯ ಉಸ್ತುವಾರಿ ಡಿಸಿಎಂ ಅವರಿದ್ದರೆ ಮಾತ್ರ ಜಿಲ್ಲೆಗೆ ಲಾಭವಿದೆ” ಎನ್ನುತ್ತಾರೆ ರಾಮನಗರ ಜಿಲ್ಲೆಯ ಹಿರಿಯ ಮುಖಂಡರೊಬ್ಬರು.

ವೈಯಕ್ತಿಕ ತಿಕ್ಕಾಟ ಇಲ್ಲ

ಯೋಗೀಶ್ವರ್‌ ಕೇವಲ ರಾಜಕಾರಣದ ಉದ್ದೇಶಕ್ಕಾಗಿ ರಾಮನಗರ ಜಿಲ್ಲಾ ಉಸ್ತುವಾರಿ ಕೇಳುತ್ತಿದ್ದಾರೆಂಬ ಮಾತಿದೆ. ಮುಖ್ಯವಾಗಿ ತಮ್ಮ ರಾಜಕೀಯ ವಿರೋಧಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಡಿ.ಕೆ.ಶಿವಕುಮಾರ್‌ ಅವರೆದುರು ತೊಡೆ ತಟ್ಟಲು ಅವರು ಉಸ್ತುವಾರಿ ಕೇಳುತ್ತಿದ್ದಾರೆ. ಆದರೆ, ಅಶ್ವತ್ಥನಾರಾಯಣ ಈ ರೀತಿಯ ಜಾಯಮಾನದವರಲ್ಲ. ಈಗಾಗಲೇ ಜಿಲ್ಲೆಯಲ್ಲಿ ಬಲಾಢ್ಯರಾಗಿರುವ ಡಿಕೆ ಬ್ರದರ್ಸ್‌ ಅಥವಾ ಎಚ್‌ಡಿಕೆ ಅವರನ್ನು ವೈಯಕ್ತಿಕ ರಾಜಕೀಯದ ನೆಲೆಯಲ್ಲಿ ಎದುರಿಸದೆ ಅಭಿವೃದ್ಧಿ ಮತ್ತು ಕಾರ್ಯನಿರ್ವಹಣೆ ಮೂಲಕ ಎದುರಿಸಿದರು. ಪರಿಣಾಮವಾಗಿಯೇ ಪಂಚಾಯಿತಿ ಚುನಾವಣೆಯಲ್ಲಿ ಚನ್ನಪಟ್ಟಣದಂಥ ತಾಲ್ಲೂಕಿನಲ್ಲಿ ಕಾಂಗ್ರೆಸ್‌ ಮೂರನೇ ಸ್ಥಾನಕ್ಕೆ ಕುಸಿಯಿತು. ಜಿಲ್ಲೆಯಲ್ಲಿ ಸುಮಾರು 234 ಕಡೆಗಳಲ್ಲಿ ಬಿಜೆಪಿ ಗೆದ್ದು, ಕನಕಪುರ ತಾಲ್ಲೂಕಿನಲ್ಲೇ 52 ಕಡೆ ಗೆಲುವು ಸಾಧಿಸಿತ್ತು. ಇದು ಡಿಸಿಎಂ ಅವರಿಗೆ ದೊಡ್ಡ ಪ್ಲಸ್‌ ಆಗಿದೆ.

ಯೋಗೀಶ್ವರ್‌ ಏನ್‌ ಹೇಳ್ತಾರೆ?

ಕೋಲಾರದಲ್ಲಿ ಬುಧವಾರ ಮಾತನಾಡಿದ್ದ ಸಚಿವ ಯೋಗಿಶ್ವರ್‌, ಕೋಲಾರ ಜಿಲ್ಲೆಯ ಉಸ್ತುವಾರಿ ಕೊಟ್ಟರೆ ಮಾಡುವೆ ಎಂದು ಹೇಳಿದ್ದರು.

“ಆ ಜಿಲ್ಲೆ, ಈ ಜಿಲ್ಲೆ ಎಂಬ ಮಾತೇನೂ ಇಲ್ಲ. ಸಚಿವ ಸ್ಥಾನ ಸಿಕ್ಕಿದ್ದಕ್ಕೆ ಸಂತೋಷವಿದೆ. ಇನ್ನು ಯಾವುದೇ ಜಿಲ್ಲೆ ಉಸ್ತುವಾರಿ ನೀಡುದರೂ ಸರಿ, ಕೆಲಸ ಮಾಡುತ್ತೇನೆ. ನನಗೆ ಕೋಲಾರ ಜಿಲ್ಲೆ ಆದರೇನು? ರಾಮನಗರ ಆದರೇನು? ಇವೆರಡೂ ಜಿಲ್ಲೆಗಳು ಕರ್ನಾಟಕದಲ್ಲೇ ಇವೆಯಲ್ಲವೆ? ಒಂದು ವೇಳೆ ಕೋಲಾರ ಜಿಲ್ಲೆಯ ಹೊಣೆಗಾರಿಕೆ ವಹಿಸಿದರೆ ಸಂತೋಷವಾಗಿ ಕೆಲಸ ಮಾಡುತ್ತೇನೆ. ಕೋಲಾರ ಉತ್ತಮ ಜಿಲ್ಲೆ. ಅಭಿವೃದ್ಧಿಗೆ ಸಾಕಷ್ಟು ಅವಕಾಶವಿದೆ. ಅನೇಕ ಪ್ರವಾಸಿ ತಾಣಗಳು ಇಲ್ಲಿವೆ. ಅವುಗಳ ಅಭಿವೃದ್ಧಿಗೆ ಪ್ರಯತ್ನ ಮಾಡುತ್ತೇನೆ” ಎಂದಿದ್ದರು.

ಇನ್ನು ತುಮಕೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ್ದ ಡಿಸಿಎಂ ಅಶ್ವತ್ಥನಾರಾಯಣ; “ಖಾತೆಗಳ ಬಗ್ಗೆ ಏನನ್ನೂ ಹೇಳಲಾರೆ. ಮುಖ್ಯಮಂತ್ರಿಗಳು ವಹಿಸಿದ ಕೆಲಸವನ್ನು ಅಚ್ಚುಕಟ್ಟಾಗಿ ಮಾಡುವುದು ನಮ್ಮ ಕರ್ತವ್ಯ. ಅದೇ ರೀತಿ ರಾಮನಗರ ಜಿಲ್ಲೆ ಉಸ್ತುವಾರಿಯನ್ನು ನಿರ್ವಹಿಸುತ್ತಿದ್ದೇನೆ. ಇದಕ್ಕಿಂತ ಹೆಚ್ಚೇನನ್ನೂ ಹೇಳಲಾರೆ” ಎಂದಿದ್ದರು.

ಸಿಕೆನ್ಯೂಸ್‌ ನೌ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ರಾಮನಗರ ಜಿಲ್ಲಾ ಉಸ್ತುವಾರಿ ಡಿಸಿಎಂ ಅವರಲ್ಲೇ ಇದ್ದು, ಯೋಗೀಶ್ವರ್‌ ಅವರು ಕೋಲಾರಕ್ಕೆ ಬರುವುದು ಪಕ್ಕಾ ಆಗಿದೆ. ಸರಕಾರ ಮತ್ತು ಪಕ್ಷದಲ್ಲಿ ಇದೇ ಮಾತು ಕೇಳಿಬರುತ್ತಿದೆ.

Tags: bjpcp yogeeshwardistrict in chargedr cn ashwath narayanramanagara
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕಾನೂನಿಗೆ ಕಿಮ್ಮತ್ತಿಲ್ಲ, ಜನರ ಬಗ್ಗೆ ಕಾಳಜಿ  ಇಲ್ಲ; ರಾತ್ರಿ ಎಲ್ಲರೂ ಮಲಗಿದ ಮೇಲೆ ಕಲ್ಲು ಕ್ವಾರಿಗಳಲ್ಲಿ ಸ್ಫೋಟ, ಆರೋಗ್ಯ ಸಚಿವರ ಹುಟ್ಟೂರಿಗೆ ಕೂಗಳತೆ ದೂರದಲ್ಲೇ ಕ್ರಷರ್‌ಗಳ ಕರಾಳಲೋಕ‌

ಕಾನೂನಿಗೆ ಕಿಮ್ಮತ್ತಿಲ್ಲ, ಜನರ ಬಗ್ಗೆ ಕಾಳಜಿ ಇಲ್ಲ; ರಾತ್ರಿ ಎಲ್ಲರೂ ಮಲಗಿದ ಮೇಲೆ ಕಲ್ಲು ಕ್ವಾರಿಗಳಲ್ಲಿ ಸ್ಫೋಟ, ಆರೋಗ್ಯ ಸಚಿವರ ಹುಟ್ಟೂರಿಗೆ ಕೂಗಳತೆ ದೂರದಲ್ಲೇ ಕ್ರಷರ್‌ಗಳ ಕರಾಳಲೋಕ‌

Leave a Reply Cancel reply

Your email address will not be published. Required fields are marked *

Recommended

ಕೈಕೊಟ್ಟ ಬಳ್ಳಾರಿ ಟ್ಯಾಂಕರ್!! ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಇಡೀ ರಾತ್ರಿ ಆಪರೇಷನ್‌ ಆಕ್ಸಿಜನ್;‌ ತಪ್ಪಿದ ಭಾರೀ ಅನಾಹುತ, 200 ಕೋವಿಡ್‌  ಸೋಂಕಿತರ ಅಮೂಲ್ಯ ಜೀವಗಳು ಸೇಫ್

ಕೈಕೊಟ್ಟ ಬಳ್ಳಾರಿ ಟ್ಯಾಂಕರ್!! ಬೆಂಗಳೂರಿನ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಇಡೀ ರಾತ್ರಿ ಆಪರೇಷನ್‌ ಆಕ್ಸಿಜನ್;‌ ತಪ್ಪಿದ ಭಾರೀ ಅನಾಹುತ, 200 ಕೋವಿಡ್‌ ಸೋಂಕಿತರ ಅಮೂಲ್ಯ ಜೀವಗಳು ಸೇಫ್

5 years ago
ಬಾಗೇಪಲ್ಲಿ ನಂತರ ಗುಡಿಬಂಡೆಯಲ್ಲಿ ನಾಳೆ ಶಾಸಕರಿಂದ 35,000 ಫುಡ್‌ ಕಿಟ್‌ ವಿತರಣೆ

ತಂತ್ರಜ್ಞಾನ ಬಳಸಿ ಕೃಷಿ ಮಾಡಿ: ರೈತರಿಗೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸಲಹೆ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ