• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home NEWS & VIEWS STATE

ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯ ಸೇರಿ ನಾಲ್ಕು ಖಾಸಗಿ ವಿವಿಗಳ ವಿಧೇಯಕಗಳಿಗೆ ಮೇಲ್ಮನೆ ಒಪ್ಪಿಗೆ; ಡಾ.ಬಿ.ಅಂಬೇಡ್ಕರ್‌ ಅರ್ಥಶಾಸ್ತ್ರ ವಿವಿ ಹೆಸರು ಬದಲಿಗೂ ಅಸ್ತು

cknewsnow desk by cknewsnow desk
February 3, 2021
in STATE
Reading Time: 2 mins read
0
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

Photo from @ckphotographi

922
VIEWS
FacebookTwitterWhatsuplinkedinEmail

Lead photo by @ckphotographi

3 ತಿಂಗಳಲ್ಲಿ ಏಕೀಕೃತ ವಿಶ್ವವಿದ್ಯಾಲಯ ಹಾಗೂ ಕಾಲೇಜು ನಿರ್ವಹಣಾ ವ್ಯವಸ್ಥೆ ಜಾರಿ

ಬೆಂಗಳೂರು: ಚಿತ್ರದುರ್ಗದಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯವೂ ಸೇರಿ ನಾಲ್ಕು ಖಾಸಗಿ ವಿಶ್ವವಿದ್ಯಾಲಯಗಳಿಗೆ ಮಂಜೂರಾತಿ ನೀಡುವ ಖಾಸಗಿ ವಿಶ್ವವಿದ್ಯಾಲಯಗಳ ವಿಧೇಯಕ-2021ಕ್ಕೆ ವಿಧಾನ ಪರಿಷತ್ತಿನಲ್ಲಿ ಬುಧವಾರ ಅಂಗೀಕಾರ ನೀಡಲಾಯಿತು.

ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಂಡಿಸಿದ ಎಲ್ಲ ವಿವಿಗಳ ಪ್ರತ್ಯೇಕ ವಿಧೇಯಕಗಳಿಗೆ ಸುದೀರ್ಘ ಚರ್ಚೆ ನಡೆದು ಅಂತಿಮವಾಗಿ ಡಿಸಿಎಂ ಅವರು ಸದಸ್ಯರ ಎಲ್ಲ ಅನುಮಾನಗಳನ್ನು ನಿವಾರಿಸಿದ ನಂತರ ಒಪ್ಪಿಗೆ ದೊರೆಯಿತು. ಇದಕ್ಕೂ ಮೊದಲೇ ವಿಧಾನಸಭೆಯಲ್ಲಿ ಈ ಎಲ್ಲ ವಿಧೇಯಕಗಳಿಗೆ ಅಂಗೀಕಾರ ಸಿಕ್ಕಿದೆ.

ಯಾವುವು ಆ ವಿವಿಗಳು?

ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯ, ನ್ಯೂ ಹಾರಜೋನ್‌ ವಿಶ್ವವಿದ್ಯಾಲಯ, ವಿದ್ಯಾಶಿಲ್ಪ ವಿಶ್ವವಿದ್ಯಾಲಯ ಹಾಗೂ ಏಟ್ರಿಯಾ ವಿಶ್ವವಿದ್ಯಾಲಯಗಳ ವಿಧೇಯಕಗಳಿಗೆ ಮೇಲ್ಮನೆ ಒಪ್ಪಿಗೆ ನೀಡಿದೆ. ಆದರೆ, ಕೆಲ ತಾಂತ್ರಿಕ ಕಾರಣಗಳಿಂದ ಸಂತ ಜೋಸೆಫ್‌ ವಿಶ್ವವಿದ್ಯಾಲಯದ ಮಸೂದೆಯನ್ನು ಗುರುವಾರ ಮಂಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಸದನಕ್ಕೆ ತಿಳಿಸಿದರು.

ರೂಸಾ ಅಡಿಯಲ್ಲಿ ಸಂತ ಜೋಸೆಫ್‌ ಶಿಕ್ಷಣ ಸಂಸ್ಥೆ ಆರ್ಥಿಕ ನೆರವು ಪಡೆಯುತ್ತಿದ್ದು, ಈ ಕಾರಣಕ್ಕೆ ರಾಜ್ಯಪಾಲರ ಅನುಮತಿ ಪಡೆದು ಈ ವಿವಿಯ ವಿಧೇಯಕವನ್ನು ಮಂಡಿಸಬೇಕಾಗಿದೆ ಎಂದು ಅವರು ಸದಸ್ಯರಿಗೆ ಮಾಹಿತಿ ನೀಡಿದರು.

ವಿವಿಗಳು ಖಾಸಗಿಯಾದರೂ ಸರಕಾರದ ನಿಯಂತ್ರಣ

ಖಾಸಗಿ ವಿವಿಗಳ ವಿಧೇಯಕಗಳನ್ನು ಮಂಡಿಸಿ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ, ಸರಕಾರಿ ಸ್ವಾಮ್ಯದ ವಿವಿಗಳಿಗೆ ರಾಜ್ಯಪಾಲರೇ ಕುಲಾಧಿಪತಿ ಆಗಿರುತ್ತಾರೆ. ಅದೇ ರೀತಿ ಖಾಸಗಿ ವಿವಿಗಳ ಮೇಲೂ ಅವರಿಗೆ ಪೂರ್ಣ ನಿಯಂತ್ರಣ ಇರುತ್ತದೆ. ಆದರೆ, ಅಲ್ಲಿ ಕುಲಾಧಿಪತಿ ಹೆಸರಿನ ಬದಲಿಗೆ ʼವಿಸಿಟರ್‌ʼ ಎಂದು ಕರೆಯಲಾಗುತ್ತದೆ. ಅದೇ ರೀತಿ ಉನ್ನತ ಶಿಕ್ಷಣ ಇಲಾಖೆಯ ಉನ್ನತ ಶಿಕ್ಷಣ ಪರಿಷತ್‌ ಈ ವಿವಿಗಳನ್ನು ಪರಿವೇಕ್ಷಣೆ ಮಾಡುತ್ತದೆ ಎಂದರು.

ವೃತ್ತಿಪರ ಶಿಕ್ಷಣ ಕೋರ್ಸುಗಳಲ್ಲಿ ಸೀಟುಗಳಲ್ಲಿ ಸರಕಾರಕ್ಕೆ ಶೇ.40, ಖಾಸಗಿ ವಿವಿಗೆ ಶೇ.60 ಹಂಚಿಕೆಯಾಗುತ್ತದೆ. ನಮ್ಮ ವಿದ್ಯಾರ್ಥಿಗಳಿಗೆ ಸರಕಾರವೇ ಶುಲ್ಕ ನಿಗದಿ ಮಾಡುತ್ತದೆ. ಆದರೆ, ವಿವಿಗಳಿಗೆ ಆ ಅವಕಾಶ ಇರುವುದಿಲ್ಲ. ಬದಲಿಗೆ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಗಳು ನೇಮಕ ಮಾಡುವ ಹೈಕೋರ್ಟ್‌ನ ವಿಶ್ರಾಂತ ನ್ಯಾಯಮೂರ್ತಿಗಳೊಬ್ಬರ ನೇತೃತ್ವದ ಸಮಿತಿ ಶೇ.60ರಷ್ಟು ವಿದ್ಯಾರ್ಥಿಗಳಿಗೆ ಶುಲ್ಕ ನಿಗದಿ ಮಾಡುತ್ತದೆ ಎಂಬ ಅಂಶವನ್ನು ಉಪ ಮುಖ್ಯಮಂತ್ರಿ ಸದನದ ಗಮನಕ್ಕೆ ತಂದರು.

ನಿಯಮಗಳು ಬಿಗಿಯಾಗಿರುತ್ತವೆ

ಖಾಸಗಿ ವಿವಿಗಳಿಗೆ ಸ್ವಾಯತ್ತತೆ ನೀಡಿದ ಮಾತ್ರಕ್ಕೆ ಸರಕಾರದ ನಿಯಂತ್ರಣ ಇರುವುದಿಲ್ಲ ಎಂದರ್ಥವಲ್ಲ. ರಾಜ್ಯಪಾಲರ ಜತೆಗೆ ಉನ್ನತ ಶಿಕ್ಷಣ ಮಂತ್ರಾಲಯದ ಉಸ್ತುವಾರಿ ಇದ್ದೇ ಇರುತ್ತದೆ. ಪ್ರತಿ ವರ್ಷದ ಲೆಕ್ಕಪರಿಶೋಧನಾ ವರದಿಯನ್ನು ಆಯಾ ವರ್ಷದ ನವೆಂಬರ್‌ ತಿಂಗಳೊಳಗೆ ಸಲ್ಲಿಸಬೇಕಾಗುತ್ತದೆ. ವಿವಿಧ ಸೆಕ್ಷನ್‌ಗಳ ಮೂಲಕ ಹೊಸ ಕೋರ್ಸು, ಹೊಸ ಕ್ಯಾಂಪಸ್‌ ಆರಂಭಕ್ಕೆ ಸರಕಾರದ ಒಪ್ಪಿಗೆ ಅಗತ್ಯವಾಗಿರುತ್ತದೆ. ಕೆಲ ವಿಷಯಗಳಲ್ಲಿ ಮಾತ್ರ ಖಾಸಗಿಯವರಿಗೆ ಅವಕಾಶ ನೀಡಲಾಗಿರುತ್ತದೆ ಎಂದು ಡಾ.ಅಶ್ವತ್ಥನಾರಾಯಣ ಅವರು ಸದನಕ್ಕೆ ತಿಳಿಸಿದರು.

ಯಾವ ಭಾಗದಲ್ಲಿ ವಿವಿ ಸ್ಥಾಪನೆ ಮಾಡಿದರೆ ಎಷ್ಟು ಎಕರೆ ಭೂಮಿ ಹೊಂದಿರಬೇಕು, ಎಷ್ಟು ಕೋಟಿ ರೂಪಾಯಿ ದತ್ತಿನಿಧಿ ಹೊಂದಿರಬೇಕು, ಬೋಧನೆ-ಕಲಿಕೆಯ ಗುಣಮಟ್ಟ ಹೇಗಿರಬೇಕು? ಎಂದೆಲ್ಲ ಸ್ಪಷ್ಟವಾದ ಷರತ್ತುಗಳಿವೆ ಎಂದು ಡಿಸಿಎಂ ಮಾಹಿತಿ ನೀಡಿದರು.

ಈ ವಿಧೇಯಕದ ಬಗ್ಗೆ ಪ್ರತಿಪಕ್ಷ ನಾಯಕ ಎಸ್.ಆರ್.‌ ಪಾಟೀಲ್‌, ಸದಸ್ಯರಾದ ಶ್ರೀಕಂಠೇಗೌಡ, ಸಿ.ಎಂ.ಇಬ್ರಾಹಿಂ, ಬಿ.ಕೆ.ಹರಿಪ್ರಸಾದ್‌, ಮರಿತಿಬ್ಬೇಗೌಡ, ಪುಟ್ಟಣ್ಣ, ವೈ.ಎ.ನಾರಾಯಣಸ್ವಾಮಿ ಮುಂತಾದವರು ಮಾತನಾಡಿ, ಖಾಸಗಿ ವಿವಿಗಳ ನಿಯಂತ್ರಣಕ್ಕೆ ಕೆಲ ಸಲಹೆಗಳನ್ನು ನೀಡಿದರು. ವಿಧೇಯಕ ಅಂಗೀಕಾರಕ್ಕೆ ಮುನ್ನ ಮಾತನಾಡಿದ ಉಪ ಮುಖ್ಯಮಂತ್ರಿಗಳು; ಸದಸ್ಯರ ಎಲ್ಲ ಆಕ್ಷೇಪ ಮತ್ತು ಸಲಹೆಗಳನ್ನು ಗಣನೆಗೆ ತೆಗೆದುಕೊಳ್ಳಲಾಗುವುದು. ಕಾಯ್ದೆ ಜಾರಿಗೊಳಿಸುವ ಮುನ್ನ ಎಲ್ಲವನ್ನೂ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದರು.

ಗುಣಮಟ್ಟದ ಶಿಕ್ಷಣ ಮತ್ತು ಜಾಗತಿಕ ಸ್ಪರ್ಧೆ

ಜಾಗತಿಕವಾಗಿ ಕಲಿಕೆ ಮತ್ತು ಬೋಧನೆಯಲ್ಲಿ ನಾವು ಸ್ಪರ್ಧಾತ್ಮಕತೆಯ ಮಟ್ಟಕ್ಕೇರಬೇಕಾದರೆ ಗುಣಮಟ್ಟದ ಶಿಕ್ಷಣ ನೀಡುವುದು ಅತ್ಯಗತ್ಯ. ಸಾಮಾಜಿಕ, ಆರ್ಥಿಕವಾಗಿ ಎಲ್ಲ ವಿದ್ಯಾರ್ಥಿಗಳು ಉತ್ಕೃಷ್ಟ ಶಿಕ್ಷಣ ಪಡೆಯಬೇಕಾದರೆ ಖಾಸಗಿ ವಿವಿಗಳಿಗೆ ಅನುಮತಿ ನೀಡಬೇಕಾಗಿದೆ. ಇದರ ಜತೆಯಲ್ಲೇ ಸರಕಾರಿ ಸ್ವಾಮ್ಯದ ವಿವಿಗಳನ್ನು ಜಾಗತಿಕ ಗುಣಮಟ್ಟಕ್ಕೇರಿಸುವ ಎಲ್ಲ ಕ್ರಮಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳಲಾಗಿದೆ ಎಂದರು.

2015ರಲ್ಲಿ ಕೇಂದ್ರ ಸರಕಾರದಲ್ಲಿ ಜ್ಞಾನ ಆಯೋಗದ ಅಧ್ಯಕ್ಷರಾಗಿ ಸ್ಯಾಮ್‌ ಪಿತ್ರೋಡ ಅವರು ದೇಶದ ಶಿಕ್ಷಣವನ್ನು ಸುಧಾರಿಸುವ ನಿಟ್ಟಿನಲ್ಲಿ ಇನ್ನೂ 15,000 ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಬೇಕು ಎಂದು ಸರಕಾರಕ್ಕೆ ಸಲಹೆ ಮಾಡಿದ್ದರು. ಏಕೆಂದರೆ ಇಷ್ಟು ಪ್ರಮಾಣದ ವಿವಿಗಳನ್ನು ಸರಕಾರ ಸ್ಥಾಪನೆ ಮಾಡಲು ಸಾಧ್ಯವಿಲ್ಲ, ಅದಕ್ಕೆ ಖಾಸಗಿ ಸಹಭಾಗಿತ್ವ ಅಗತ್ಯ ಎಂಬ ಅರಿವು ಅವರಿಗಿತ್ತು.

-ಡಾ.ಸಿ.ಎನ್.ಅಶ್ವತ್ಥನಾರಾಯಣ

ಮೂರು ತಿಂಗಳಲ್ಲಿ ಏಕೀಕೃತ ವಿವಿ ವ್ಯವಸ್ಥೆ

ಸರಕಾರಿ ಸ್ವಾಮ್ಯದ ವಿಶ್ವವಿದ್ಯಾಲಯಗಳಿಗೆ ಪರಿಣಾಮಕಾರಿ ಕಾಯಕಲ್ಪ ನೀಡುವ ಏಕೀಕೃತ ವಿಶ್ವವಿದ್ಯಾಯ ಹಾಗೂ ಕಾಲೇಜು ನಿರ್ವಹಣಾ ವ್ಯವಸ್ಥೆಯನ್ನು ಮೂರು ತಿಂಗಳಲ್ಲಿ ಜಾರಿಗೆ ತರಲಾಗವುದು. ಈ ವ್ಯವಸ್ಥೆ ಜಾರಿಗೆ ಬಂದ ಮೇಲೆ ಖಾಸಗಿ ವಿವಿಗಳಿಗೆ ಸಡ್ಡು ಹೊಡೆಯುವಂತೆ ಸರಕಾರಿ ವಿವಿಗಳಲ್ಲಿ ಬದಲಾವಣೆ ಆಗಲಿದೆ ಎಂದು ಡಿಸಿಎಂ ಅವರು ಸದನದಲ್ಲಿ ಘೋಷಿಸಿದರು.

ಅಂಬೇಡ್ಕರ್‌ ವಿವಿ ಹೆಸರು ಬದಲಿಗೆ ಅಸ್ತು

ಬೆಂಗಳೂರಿನಲ್ಲಿರುವ ಪ್ರತಿಷ್ಠಿತ “ಬೆಂಗಳೂರು ಡಾ.ಬಿ.ಅಂಬೇಡ್ಕರ್‌ ಅರ್ಥಶಾಸ್ತ್ರ ವಿಶ್ವವಿದ್ಯಾಲಯ”ದ ಹೆಸರನ್ನು “ಡಾ.ಬಿ.ಅಂಬೇಡ್ಕರ್‌ ಅರ್ಥಶಾಸ್ತ್ರ ವಿಶ್ವವಿದ್ಯಾಲಯ-ಬೆಂಗಳೂರು” ಎಂದು ಬದಲಿಸುವ ವಿಧೇಯಕಕ್ಕೆ ವಿಧಾನಪರಿಷತ್‌ ಧ್ವನಿಮತದಿಂದ ಒಪ್ಪಿಗೆ ನೀಡಿತು. ಈ ವಿವಿ ಹೆಸರು ಅಂಬೇಡ್ಕರ್‌ ಅವರ ಹೆಸರಿನಿಂದಲೇ ಶುರುವಾಗಲಿ ಎಂಬ ಉದೇಶದಿಂದ ವಿಧೇಯಕವನ್ನು ಮಂಡಿಸಲಾಯಿತು. ಈಗಾಗಲೇ ಈ ವಿಧೇಕಕ್ಕೆ ವಿಧಾನಸಭೆ ಒಪ್ಪಿಗೆ ನೀಡಿದೆ.

Tags: dr cn ashwath narayankarnatakakarnataka legislative councilprivate university bill
cknewsnow desk

cknewsnow desk

ಸಿಕೆನ್ಯೂಸ್ ನೌ.ಕಾಂ ಪರಿಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್’ತಾಣ. ’ಪ್ಯೂರ್ ಜರ್ನಲಿಸಂ’ (pure journalism) ಎಂಬುದು ನಮ್ಮ ಸುದ್ದಿ-ವಿಶ್ಲೇಷಣೆಯ ತಾಣದ ಸ್ಲೋಗನ್. ’ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ’ ಎಂಬುದು ಸಿಕೆನ್ಯೂಸ್ ನೌ.ಕಾಂ ಹೊಂದಿರುವ ಆಶಯ.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಕ್ಷಮಿಸಿ! ಕಾಮ್ರೇಡ್ ಜಿ.ವಿ. ಶ್ರೀರಾಮ ರೆಡ್ಡಿ ಅವರನ್ನು ಪಕ್ಷ ಹೊರಹಾಕಿದೆ!!

Budget 2021: ಉದ್ಯೋಗ ರಹಿತ ಆರ್ಥಿಕ ವ್ಯವಸ್ಥೆ ಮತ್ತು ಸರಕು ರಹಿತ ಕೈಗಾರಿಕಾ ವ್ಯವಸ್ಥೆಗಳು ಯಾವುದೇ ದೇಶವನ್ನು ಹೆಚ್ಚು ಕಾಲ ಸುಭದ್ರವಾಗಿ ಉಳಿಸುವುದಿಲ್ಲ: ಜಿ.ವಿ.ಶ್ರೀರಾಮರೆಡ್ಡಿ

Leave a Reply Cancel reply

Your email address will not be published. Required fields are marked *

Recommended

ತಾಯಿಗೆ ತಕ್ಕ ಮಗ

ತಾಯಿಗೆ ತಕ್ಕ ಮಗ

5 years ago
ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

ಜನರ ತೀವ್ರ ವಿರೋಧದ ಹಿನ್ನೆಲೆಯಲ್ಲಿ ಕೊನೆಗೂ ನೈಟ್‌ ಕರ್ಫ್ಯೂ ವಾಪಸ್‌; ಆ ವೈಕುಂಠಾಧಿಪತಿಗೆ ಮಣಿಯಿತಾ ಯಡಿಯೂರಪ್ಪ ಸರಕಾರ

5 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ