• About
  • Advertise
  • Careers
  • Contact
Friday, May 1, 2026
  • Login
No Result
View All Result
cknewsnow
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS
No Result
View All Result
cknewsnow
Home COVID-19

4 ವಾರಗಳವರೆಗೆ ಚಿತ್ರಮಂದಿರಗಳ ಹೌಸ್‌ಫುಲ್‌ಗೆ ಅವಕಾಶ; ಒಂದು ವೇಳೆ ಪ್ರೇಕ್ಷಕರಲ್ಲಿ ಕೊರೊನ ಸೋಂಕು ಕಂಡುಬಂದರೆ ಈ ನಿರ್ಧಾರ ಬದಲು ಎಂದ ಸಚಿವ ಡಾ.ಕೆ.ಸುಧಾಕರ್

P K Channakrishna by P K Channakrishna
February 3, 2021
in COVID-19, ET CINEMA, STATE
Reading Time: 1 min read
0
4 ವಾರಗಳವರೆಗೆ ಚಿತ್ರಮಂದಿರಗಳ ಹೌಸ್‌ಫುಲ್‌ಗೆ ಅವಕಾಶ; ಒಂದು ವೇಳೆ ಪ್ರೇಕ್ಷಕರಲ್ಲಿ ಕೊರೊನ  ಸೋಂಕು ಕಂಡುಬಂದರೆ ಈ ನಿರ್ಧಾರ ಬದಲು ಎಂದ ಸಚಿವ ಡಾ.ಕೆ.ಸುಧಾಕರ್
914
VIEWS
FacebookTwitterWhatsuplinkedinEmail

ಬೆಂಗಳೂರು: ಚಿತ್ರರಂಗದ ನಿರ್ಮಾಪಕರು, ಕಲಾವಿದರು, ಕಾರ್ಮಿಕರ ಹಿತದೃಷ್ಟಿಯಿಂದ ನಾಲ್ಕು ವಾರಗಳವರೆಗೆ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ಅವಕಾಶ ಮಾಡಿಕೊಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ವಿಧಾನಸೌಧದಲ್ಲಿ ಚಿತ್ರರಂಗದ ಹಿರಿಯ ನಟರು, ಫಿಲಂ ಚೇಂಬರ್ ಅಧ್ಯಕ್ಷರು, ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸೂಚನೆ ಮೇರೆಗೆ ಈ ಸಭೆ ನಡೆದಿದೆ. ತಾಂತ್ರಿಕ ಸಲಹಾ ಸಮಿತಿಯ ಸಲಹೆ ಮೇರೆಗೆ ರಾಜ್ಯದ ಜನರ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆಯು ಕೋವಿಡ್ ನಿಯಂತ್ರಿಸಲು ಚಿತ್ರಮಂದಿರಗಳಲ್ಲಿ ಶೇ.50ರಷ್ಟು ಮಾತ್ರ ಆಸನ ಭರ್ತಿ ಮಾಡಬೇಕು ಎಂದು ಮಾರ್ಗಸೂಚಿ ಹೊರಡಿಸಿತ್ತು. ಕೇಂದ್ರ ಸರಕಾರವು ಶೇ.100ರಷ್ಟು ಭರ್ತಿ ಮಾಡಲು ಅವಕಾಶ ನೀಡಿದ್ದರೂ, ಕೋವಿಡ್ ಹಿನ್ನೆಲೆಯಲ್ಲಿ ಆಯಾ ರಾಜ್ಯ ಸರಕಾರಗಳು ನಿರ್ಧಾರ ಕೈಗೊಳ್ಳಬಹುದು ಎಂದು ತಿಳಿಸಿತ್ತು. ಅದರಂತೆ ಮಾರ್ಗಸೂಚಿ ರೂಪಿಸಲಾಗಿತ್ತು ಎಂದು ವಿವರಿಸಿದರು.

ಆದರೆ ಆರೋಗ್ಯ ಇಲಾಖೆಯ ಈ ಮಾರ್ಗಸೂಚಿಯನ್ನು ಚಿತ್ರರಂಗದವರು ವಿರೋಧಿಸಿದ್ದಾರೆ. ಕಾರ್ಮಿಕರು, ನಿರ್ಮಾಪಕರ ಹಿತದೃಷ್ಟಿಯಿಂದ ಹಾಗೂ ಚಿತ್ರರಂಗದ ಪರಿಸ್ಥಿತಿ ಶೋಚನೀಯ ಆಗಿರುವುದರಿಂದ ನಿರ್ಧಾರ ಬದಲಿಸಬೇಕು ಎಂದು ಹೇಳಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ನಮ್ಮೊಂದಿಗೆ ಇರಬೇಕು ಎಂದು ಕೂಡ ಚಿತ್ರರಂಗದವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ ಎಂದು ಡಾ.ಸುಧಾಕರ್‌ ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವರಾದ ಶ್ರೀ @CCPatilBJP, ಹಿರಿಯ ನಟ ಶ್ರೀ @NimmaShivanna, ಫಿಲ್ಮ್ ಚೇಂಬರ್ ಅಧ್ಯಕ್ಷರಾದ ಶ್ರೀ ಜಯರಾಜ್, ಹಿರಿಯ ನಟಿ ಶ್ರೀಮತಿ ತಾರಾ, ಚಿತ್ರೋದ್ಯಮದ ಇತರೆ ಪ್ರತಿನಿಧಿಗಳು ಹಾಗೂ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು. (4/4) pic.twitter.com/woQE5HUOyN

— Dr Sudhakar K (Modi ka Parivar) (@DrSudhakar_) February 3, 2021

ನಾಳೆಯೇ ಮಾರ್ಗಸೂಚಿ

ಈ ಬಗ್ಗೆ ಚರ್ಚೆ ನಡೆದಿದ್ದು, ಮುಖ್ಯಮಂತ್ರಿಗಳ ಸೂಚನೆಯಂತೆ ನಾಲ್ಕು ವಾರಗಳವರೆಗೆ 100% ಚಿತ್ರಮಂದಿರಗಳಲ್ಲಿ ಆಸನ ಭರ್ತಿ ಮಾಡಲು ಅವಕಾಶ ನೀಡಲಾಗಿದೆ. ಆದರೆ ಇದಕ್ಕೆ ಕಠಿಣವಾದ ಮಾರ್ಗಸೂಚಿ ರೂಪಿಸಲಿದ್ದು, ನಾಳೆಯೇ (ಗುರುವಾರ) ಅದನ್ನೂ ಬಿಡುಗಡೆ ಮಾಡಲಾಗುವುದು. ಇದನ್ನು ಚಿತ್ರಮಂದಿರಗಳ ಮಾಲೀಕರು ಅಳವಡಿಸಿಕೊಳ್ಳಬೇಕು. ಜನರು ಕೂಡ ಯಥಾವತ್ತಾಗಿ ಪಾಲಿಸಬೇಕು. ನಾಲ್ಕು ವಾರಗಳಲ್ಲಿ ಪ್ರೇಕ್ಷಕರಿಗೆ ಸೋಂಕು ತಗುಲುವ ಅಥವಾ ಕೋವಿಡ್ ಸೋಂಕು ಹೆಚ್ಚಿದ ಪ್ರಕರಣ ಕಂಡುಬಂದರೆ, ಮತ್ತೆ ನಿರ್ಧಾರ ಬದಲಿಸಿಕೊಳ್ಳುವ ಅನಿವಾರ್ಯ ಸ್ಥಿತಿ ಬರಲಿದೆ ಎಂದು ಸ್ಪಷ್ಟಪಡಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಚಿವ ಸಿ.ಸಿ.ಪಾಟೀಲ್, ಹಿರಿಯ ನಟ ಡಾ.ಶಿವರಾಜ್ ಕುಮಾರ್, ಚನಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಜೈರಾಜ್‌, ಉಪಾಧ್ಯಕ್ಷ ಉಮೇಶ್‌ ಬಣಕಾರ್‌, ಹಿರಿಯ ನಟಿ ತಾರಾ, ಹಿರಿಯ ನಟ ದೊಡ್ಡಣ್ಣ, ನಿರ್ದೇಶಕ ಪವನ್‌ ಒಡೆಯರ್‌ ಮುಂತಾದವರು ಉಪಸ್ಥಿತರಿದ್ದರು.

We want 100% occupancy for our movie theatres. #KFIDemandsFullOccupancy pic.twitter.com/YTE7IrGZvq

— DrShivaRajkumar (@NimmaShivanna) February 3, 2021

ಬುಧವಾರ ಮಧ್ಯಾಹ್ನ ಟ್ವೀಟ್‌ ಮಾಡಿದ್ದ ಶಿವರಾಜ್‌ ಕುಮಾರ್‌ ಅವರು, ಎಲ್ಲರಿಗೂ ಎಲ್ಲ ಕಡೆ ಶೇ.೧೦೦ರಷ್ಟು ಆಕ್ಯೂಪೆನ್ಸಿ ನೀಡಿರಬೇಕಾದರೆ, ನಮಗೆ ಮಾತ್ರ ಶೇ.50ರಷ್ಟು ಯಾಕೆ? ನಮಗೂ 100% ಆಕ್ಯೂಪೆನ್ಸಿ ಬೇಕೇ ಬೇಕು. ಸರಕಾರದ ನಿರ್ಧಾರ ಬದಲಾಗಲೇಬೇಕು ಎಂದು ಒತ್ತಾಯ ಮಾಡಿದ್ದರು. ಆ ನಂತರ ಮುಖ್ಯಮಂತ್ರಿ ಸೂಚನೆ ಮೇರೆಗೆ ಸುಧಾಕರ್‌ ಅವರು ಚಿತ್ರರಂಗದ ಗಣ್ಯರ ಸಭೆ ನಡೆಸಿದ್ದಾರೆ.

Tags: cinema occupancykannada cinemasandalwood
P K Channakrishna

P K Channakrishna

www.cknewsnow.com ಪ್ರಧಾನ ಸಂಪಾದಕ ಮತ್ತು ಸಂಸ್ಥಾಪಕ. ಪ್ರಿಂಟ್‌ ಮೀಡಿಯಾದಲ್ಲಿ 3 ದಶಕದಷ್ಟು ಸುದೀರ್ಘ ಅನುಭವ. ರಾಜಕೀಯ, ಕೃಷಿ, ಸಿನಿಮಾ, ಸಂಗೀತ, ಫೊಟೋಗ್ರಫಿ, ಪ್ರವಾಸ, ಸೋಶಿಯಲ್‌ ಮೀಡಿಯಾದಲ್ಲಿ ಆಸಕ್ತಿ. ಓದು ಅಚ್ಚುಮೆಚ್ಚು.

Related Posts

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

by cknewsnow desk
June 2, 2025
0

ರಾಜ್ಯದ ಹಿತರಕ್ಷಣೆಗೆ ಕೈ ಜೋಡಿಸುವಂತೆ ಕೇಂದ್ರ ಸಚಿವರು, ಸಂಸದರಿಗೆ ಡಿಸಿಎಂ ಡಿಕೆಶಿ ಮನವಿ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

by cknewsnow desk
May 10, 2025
0

ನಿಖಿಲ್‌ ಮನವಿ ಮೇರೆಗೆ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲು ನೇರವಾದ ಕೇಂದ್ರ ಸಚಿವ HDK; ಕಾಶ್ಮೀರದ ಕೃಷಿ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿದ್ದ ರಾಜ್ಯದ 13 ವಿದ್ಯಾರ್ಥಿಗಳು

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

by cknewsnow desk
May 9, 2025
0

ಪ್ಲೇ ಆಫ್ಸ್‌ ಸೇರಿ 18 ಪಂದ್ಯಗಳು ಬಾಕಿ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

by cknewsnow desk
May 9, 2025
0

ವಿಡಿಯೋ ಸಮೇತ ಮಾಹಿತಿ ಕೊಟ್ಟ BSF

ಲೋಕಸಭೆಗೆ ನಾನು, ನಿಖಿಲ್‌ ಸ್ಪರ್ಧೆ ಇಲ್ಲ; ವದಂತಿಗಳಿಗೆ ತೆರೆ ಎಳೆದ ಕುಮಾರಸ್ವಾಮಿ

ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

by cknewsnow desk
May 8, 2025
0

ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಮುಕ್ತಕಂಠದಿಂದ ಸ್ವಾಗತಿಸಿದ ಮಾಜಿ ಪ್ರಧಾನಿಗಳು

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

ಆಪರೇಷನ್ ಸಿಂಧೂರ: ಪಾಕಿಸ್ತಾನ ತತ್ತರ

by cknewsnow desk
May 7, 2025
0

ಪಹಲ್ಗಾಮ್ ಕೃತ್ಯಕ್ಕೆ ಭಾರತದ ಪ್ರತೀಕಾರ

Next Post
ಸಿದ್ದರಾಮಯ್ಯ v/s ಸರಕಾರ; ಕೋವಿಡ್ ನಡುವೆ ಸಖತ್ ಪಾಲಿಟಿಕ್ಸ್

ಜಗದ್ಗುರು ಶ್ರೀ ಮುರುಘರಾಜೇಂದ್ರ ವಿಶ್ವವಿದ್ಯಾಲಯ ಸೇರಿ ನಾಲ್ಕು ಖಾಸಗಿ ವಿವಿಗಳ ವಿಧೇಯಕಗಳಿಗೆ ಮೇಲ್ಮನೆ ಒಪ್ಪಿಗೆ; ಡಾ.ಬಿ.ಅಂಬೇಡ್ಕರ್‌ ಅರ್ಥಶಾಸ್ತ್ರ ವಿವಿ ಹೆಸರು ಬದಲಿಗೂ ಅಸ್ತು

Leave a Reply Cancel reply

Your email address will not be published. Required fields are marked *

Recommended

ಸರಕಾರಕ್ಕೆ ಸಂಚಕಾರ; ಹೆಚ್.ಡಿ.ಕುಮಾರಸ್ವಾಮಿ, ಯೋಗಿ ಹೇಳಿಕೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ

ಪರಪಕ್ಷಗಳ ಶಾಸಕರ ಮೇಲೆ ಕಣ್ಣು; ಆಪರೇಷನ್ ಕಮಲಕ್ಕೂ ಮುನ್ನವೇ ಆಪರೇಷನ್ ಹಸ್ತ

2 years ago
ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

ಹೆಚ್.ಡಿ.ಕುಮಾರಸ್ವಾಮಿ ರಾಜಕೀಯ ವಿಲನ್

3 years ago

Popular News

  • ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

    ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

    0 shares
    Share 0 Tweet 0
  • ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

    0 shares
    Share 0 Tweet 0
  • ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

    0 shares
    Share 0 Tweet 0
  • ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

    0 shares
    Share 0 Tweet 0
  • ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದ ಹೆಚ್.ಡಿ. ದೇವೇಗೌಡರು

    0 shares
    Share 0 Tweet 0

About WWW.CKNEWSNOW.COM

cknewsnow

CKNEWSNOW.COM ಶುದ್ಧ ಪತ್ರಿಕೋದ್ಯಮದ ಉದ್ದೇಶವುಳ್ಳ ಒಂದು ಸ್ವತಂತ್ರ ಸುದ್ದಿ ಮತ್ತು ಅಭಿಪ್ರಾಯಗಳ ವೆಬ್‌ತಾಣ. Pure Journalism ಎಂಬುದು ನಮ್ಮ ಸುದ್ದಿತಾಣದ ಧ್ಯೇಯವಾಕ್ಯ. ಪರಿಶುದ್ಧ ಮನಸ್ಸು-ಪರಿಶುದ್ಧ ಪತ್ರಿಕೋದ್ಯಮ ಎಂಬುದು ನಮ್ಮ ಆಶಯ. ಸುದ್ದಿಯಲ್ಲಿ ಆತುರತೆ, ವಿಶ್ಲೇಷಣೆಯಲ್ಲಿ ಏಕಪಕ್ಷೀಯತೆ ಇಲ್ಲಿರುವುದಿಲ್ಲ.
-ಹೆಚ್.ಜಿ. ಕವಿತ
ಸಂಸ್ಥಾಪಕರು & ಪ್ರಧಾನ ಸಂಪಾದಕರು
CKNEWSNOW.COM
Contact CKNEWSNOW
Phone: +91 7019250619
Email: [email protected]
[email protected]

ck latest

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ  ತಗಾದೆ; ರಾಜ್ಯಕ್ಕೆ ಆಘಾತ

ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳಕ್ಕೆ ಮಹಾರಾಷ್ಟ್ರ ತಗಾದೆ; ರಾಜ್ಯಕ್ಕೆ ಆಘಾತ

June 2, 2025
ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

ಕಾಶ್ಮೀರದಲ್ಲಿ ಸಿಲುಕಿದ್ದ ರಾಜ್ಯದ 13 ವಿದ್ಯಾರ್ಥಿಗಳು ಸುರಕ್ಷಿತ

May 10, 2025
ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

ಭಾರತ-ಪಾಕ್‌ ಉದ್ವಿಗ್ನತೆ; ಐಪಿಎಲ್ ಟೂರ್ನಿ ಅನಿರ್ದಿಷ್ಟಾವಧಿ ಮುಂದೂಡಿಕೆ

May 9, 2025
ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

ಸಾಂಬಾದಲ್ಲಿ ಜೈಶ್‌ನ 7 ಉಗ್ರರ ಹತ್ಯೆ

May 9, 2025

Covid 19

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

ಕೋವಿಡ್: ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಕೊರತೆ ಆಗಬಾರದು; ಸಿಎಂ ತಾಕೀತು

December 21, 2023
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಎಲ್ಲೆಲ್ಲಿ ಕೊರೊನಾ ತೊಲಗಿದೆ? ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ರಾಜ್ಯದಲ್ಲಿ ಮತ್ತೆ ಕೋವಿಡ್‌; ಒಬ್ಬರು ಸಾವು

December 20, 2023
ಜಿಲ್ಲಾ ಉಸ್ತುವಾರಿ ಸಚಿವರೇ ಭಾಗವಹಿಸಿದ್ದ ಚಿಕ್ಕಬಳ್ಳಾಪುರ ನಗರಸಭೆ ಮೊದಲ ಸಾಮಾನ್ಯ ಸಭೆಯಲ್ಲಿ ಕೋವಿಡ್‌ ಮಾರ್ಗಸೂಚಿಗೆ ಎಳ್ಳುನೀರು ಬಿಟ್ಟ ಸದಸ್ಯರು!!

ಬಸ್ ಗಳಲ್ಲಿ ಮಾಸ್ಕ್ ಕಡ್ಡಾಯ

December 20, 2023
ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

ಹೊಸ ವರ್ಷಾಚರಣೆ ಮೇಲೆ ಕೋವಿಡ್ ರೂಪಾಂತರಿ ಮಾರಿ; 60 ವರ್ಷ ದಾಟಿದವರಿಗೆ ಮಾಸ್ಕ್ ಕಡ್ಡಾಯ

December 19, 2023
  • About
  • Advertise
  • Careers
  • Contact

© 2025 cknewsnow | Website Design  by Karnatakabest Digital Services

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • HOME
  • ELECTION
  • EXCLUSIVE
  • NEWS & VIEWS
    • STATE
    • NATION
    • WORLD
    • NEWS IN USE
  • POLITICS
  • TALK
  • ET CINEMA
  • GUEST COLUMN
  • CK PLUS

© 2025 cknewsnow | Website Design  by Karnatakabest Digital Services

ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ